Breaking News

ಬೆಳಗಾವಿ

536 ಮಂದಿ ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 276 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. 536 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

Read More »

11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ 11 ಏತ ನೀರಾವರಿ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ 9.91 ಟಿಎಂಸಿ ನೀರನ್ನು ಹಂಚಿಕೆ‌ ಮಾಡಲು ಸಹಾ  …

Read More »

ಕೋವಿಡ್  ನಿಯಂತ್ರಣ ಗೊಳಿಸುವಲ್ಲಿ ಸರ್ಕಾರ  ಸಂಪೂರ್ಣ ವಿಫಲ,ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ:ಸತೀಶ್ ಜಾರಕಿಹೊಳಿ

ಬೆಳಗಾವಿ: ಪ್ರಧಾನಿ ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ ಎಂದೇ ಅರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕುಟುಕಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ 1 ವಾರ ಸಮಯ ಕೊಡಬೇಕಿತ್ತು. ಜನರು ತಮ್ಮ ಊರುಗಳಿಗೆ ಸೇರುತ್ತಿದ್ದರು. ಆ ಬಳಿಕ ಲಾಕ್ ಡೌನ್ ಮಾಡಬೇಕಿತ್ತು. ಆದರೆ ಒಮ್ಮೆಲೆ  ಲಾಕ್ ಡೌನ್ ಮಾಡಿದ್ದರಿಂದ ಜನರು ಸಮಸ್ಯೆ ಅನುಭವಿಸುವಂತಾಗಿಯಿತು ಎಂದರು. ಕೋವಿಡ್  ನಿಯಂತ್ರಣ …

Read More »

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು‌ ಛತ್ರಪತಿ ಶಿವಾಜಿ ಇಬ್ಬರೂ ದೇಶದ …

Read More »

ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ಸಚಿವರ ದಂಡೇ ಪೀರನವಾಡಿಗೆ ಭೇಟಿ

ಬೆಳಗಾವಿ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ಸಚಿವರ ದಂಡೇ ಪೀರನವಾಡಿಗೆ ಭೇಟಿ ನೀಡುತ್ತಿದೆ. ಶನಿವಾರ ಬೆಳಗ್ಗೆ ಸಚಿವರಾದ ರಮೇಶ ಜಾರಕಿಹೊಳಿ  ಮತ್ತು ಕೆ.ಎಸ್. ಈಶ್ವರಪ್ಪ ಹಾಗೂ ಎನ್ ನಾಗೇಶ್  ಅವರು ಸ್ಥಳಕ್ಕೆ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಕಳೆದೊಂದು ವಾರದಿಂದ ರಾಜ್ಯದ ಗಮನ ಸೆಳೆದಿತ್ತು.  ಬೆಂಗಳೂರು ಸೇರಿ ರಾಜ್ಯದ ಎಲ್ಲಡೆಯಿಂದ ರಾಯಣ್ಣ …

Read More »

ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ.

ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ. ಇಬ್ಬರು ಮಹಾನ್ ನಾಯಕರಿಗೆ ಅಗೌರವ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಿನ್ನೆಯ ಮೂರ್ತಿ ಪ್ರತಿಷ್ಠಾಪನೆ ‌ಹಾಗೂ ಲಾಠಿ ಚಾರ್ಜ್ ಕುರಿತು ದಾಖಲಾಗಿರುವ ಪ್ರಕರಣಗಳನ್ನ ವಾಪಸ್ ಪಡೆಯುವ ಕುರಿತು ಸಿಎಂ ಜತೆಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು‌ ಎಂದ್ರು. ಕನ್ನಡ ಪರ ಹೋರಾಟಗಾರರ ಮೇಲೆ ಕೇಸ್ ವಿಚಾರ ಹಿಂಪಡೆಯಬೇಕೆಂಬ ಒತ್ತಡಗಳ …

Read More »

ಬಿಜೆಪಿ ಶಾಸಕ ಅಭಯ ಪಾಟೀಲಗೆ ಕೋವಿಡ್-19 ದೃಢ

ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದೆ. ‘ಅವರು ಹೋಂ ಐಸೊಲೇಷ‌ನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ಸಹೋದರ ಸಂತೋಷ ಪಾಟೀಲ ‘ಪ್ರಜಾವಾಣಿ’ಗೆ ಖಚಿತಪಡಿಸಿದರು. ಶಾಸಕರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.  

Read More »

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪರಿಗೆ ಮತ್ತೆ ಎದುರಾಗಿದೆ ಕೊರೊನಾ ಭೀತಿ..!

ಬೆಳಗಾವಿ: ಶಾಸಕ ಅಭಯ ಪಾಟೀಲ ಅವರಿಗೆ ನಿನ್ನೆಯಷ್ಟೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದ್ರೆ, ಮೂಲಗಳು ಹೇಳುವ ಪ್ರಕಾರ ಶಾಸಕರು ಆಸ್ಪತ್ರೆಗೆ ದಾಖಲಾಗಿಲ್ಲ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಭೀತಿ ಶುರುವಾಗಿದೆ. ಹೌದು, ಇತ್ತಿಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೂಡ ಪಾಲ್ಗೊಂಡಿದ್ದರು ಎನ್ನುವುದು …

Read More »

ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ

ಗೋಕಾ: ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ. ‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ …

Read More »

ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ. ‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ‍ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು. …

Read More »