ಗೋಕಾಕ : ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ …
Read More »ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ ಪರಗೌಡ ನಿಧನರಾದರು. ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ, ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿಸಿ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸದಲಗಾ ಸಿಪಿಐ, ಪಿಎಸ್ಐ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.
ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ …
Read More »ಗೋಕಾಕ: ಇಲ್ಲಿನ ಪರಿಹಾರ ಕೇಂದ್ರದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡ ಮಹಿಳೆಯರು.
ಗೋಕಾಕ: ಇಲ್ಲಿನ ಪರಿಹಾರ ಕೇಂದ್ರದಲ್ಲಿ ಮಹಿಳೆಯರಿಬ್ಬರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡಿದ್ದಾರೆ. ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ನದಿತೀರದ ಗ್ರಾಮಗಳ ಜನರನ್ನು ಜಿಲ್ಲಾಡಳಿತ ಮುನ್ನೆಚ್ಚೆರಿಕೆ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ. ಆದ್ರೆ ಕಸ ಗುಡಿಸುವ ವಿಚಾರವಾಗಿ ಉಪ್ಪಾರಗಲ್ಲಿ – ಕುಂಬಾರಗಲ್ಲಿ ಮಹಿಳೆಯರ ಮಧ್ಯೆ ಗಲಾಟೆ ನಡೆದಿದೆ. ವಿಕೋಪಕ್ಕೆ ತಿರುಗಿ ಬಳಿಕ ಇಬ್ಬರು ಕೈಕೈ ಮಿಲಾಯಿಸುವಷ್ಟರ ಮಟ್ಟಿಗೆ ಜಗಳಾಡಿದ್ದಾರೆ. ಸ್ಥಳದಲ್ಲಿದ್ದ ಕಾಳಜಿ ಕೇಂದ್ರದ ನೋಡಲ್ ಅಧಿಕಾರಿ ಇಬ್ಬರನ್ನು ಸಮಾಧಾನಪಡಿಸಲು ಹರಸಾಹಸಪಟ್ಟಿದ್ದಾರೆ
Read More »ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ 13 ಜನರ ವಿರುದ್ಧ ಚಾರ್ಜ್ ಶೀಟ್
ಬೆಳಗಾವಿ: ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ಸುದೀರ್ಘ ತನಿಖೆ ನಡೆಸಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆನಂದ ಅಪ್ಪುಗೋಳ ಸೇರಿ ಆಡಳಿತ ಮಂಡಳಿಯ 13 ಜನ ನಿರ್ದೇಶಕರು ಗ್ರಾಹಕರ ಠೇವಣಿಯನ್ನು …
Read More »ಕೊರೊನಾ ಕೂಡ. ಇದನ್ನು ನಾವು ಮನೆಯಲ್ಲಿ ಎದುರಿಸಬೇಕಾಗುತ್ತದೆ. ಇದರ ಬಗ್ಗೆ ತೆಲೆಕೆಡಿಸಿಕೊಂಡರೆ ಆರ್ಥಿಕತೆ ದಿವಾಳಿತನ ಆಗುತ್ತೆ
ಬೆಳಗಾವಿ: ಮಾಸ್ಕ್ ಹಾಕಿಕೊಂಡವರನ್ನು ನೋಡಿದರೆ ರಾಮಾಯಣ ನೆನಪಾಗುತ್ತದೆ ಎಂದು ಹೇಳುವ ಮೂಲಕ ಕೇಂದ್ರದ ಮಾಜಿ ಸಚಿವ ಮತ್ತು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಕೊರೊನಾ ಕುರಿತು ಭಾಷಣ ಮಾಡುವಾಗ ಮಾತನಾಡಿದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಮಗೆ ಸುಮ್ಮನೆ ಹೆದರಿಸಿದ್ದಾರೆ. ಈ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ
ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. …
Read More »ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ: ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ ಕುಟುಂಬಗಳಿಗೆ ಗಂಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ. ಅಡಿಬಟ್ಟಿ, ಮೆಳವಂಕಿ, ಉದಗಟ್ಟಿ, ಬಳೋಬಾಳ, ಬೀರನಗಡ್ಡಿ, ಮಸಗುಪ್ಪಿ, ವಡೇರಹಟ್ಟಿ, ಹುಣಶ್ಯಾಳ ಪಿಜಿ, …
Read More »ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.
ಬೆಳಗಾವಿ : ಗಣೇಶ ಹಬ್ಬಕ್ಕೆ ಕೊರೊನಾ ಕರಿನೆರಳು ಬಿದ್ದಿದ್ದು, ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ವಿಘ್ನಗಳ ವಿನಾಶಕನೇ ಗಣೇಶ ಎಂಬ ಕಾರಣ ಪ್ರತಿಯೊಂದು ಸಮಾರಂಭದಲ್ಲಿ ಗಜಾನನ ಪೂಜೆ ನಡೆಸಲಾಗುತ್ತದೆ. ಆದ್ರೆ ಈ ಬಾರಿ ಗಣೇಶ ಹಬ್ಬಕ್ಕೆ ಮೂರ್ತಿ ತಯಾರಿಕ ಕುಟುಂಬಕ್ಕೆ ಈ ಮಾತು ಅಕ್ಷರಶಃ ಸುಳ್ಳಾಗಿದೆ. ಅಥಣಿ ಪಟ್ಟನದಲ್ಲಿವಂಶ ಪಾರಂಪರಿಕವಾಗಿ ಗಣೇಶ ಮೂರ್ತಿ ತಯಾರಿಕೆ ಕಾಯಕದಲ್ಲಿ ತೊಡಗಿಕೊಂಡಿರುವ 15ಕ್ಕೂ ಹೆಚ್ಚು ಕುಟುಂಬಗಳು ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. …
Read More »ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.
ಚಿಕ್ಕೋಡಿ: ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಕಲ್ಲಪ್ಪ ಪರಗೌಡರ (70 ) ಮೃತ ದುರ್ದೈವಿ. ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮನೆ ಗೋಡೆಗಳು ಮಳೆ ನೀರಿನಿಂದ ಶಿಥೀಲಗೊಂಡಿದ್ದವು. ನಿನ್ನೆಯೂ ಭಾರೀ ಮಳೆಯಾದ ಹಿನ್ನೆಲೆ ಗೋಡೆ ಕುಸಿದು, ನಿದ್ದೆಯಲ್ಲಿದ್ದ ಕಲ್ಲಪ್ಪ ಪರಗೌಡರ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Read More »ಘಟಪ್ರಭಾ ನದಿ ಗೋಕಾಕ್ನ ಬಡಾವಣೆಗಳು ಜಲಾವೃತ
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿವೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಹಳೆ ದನಗಳಪೇಟೆ, ಉಪ್ಪಾರ ಓಣಿಗೆ ನೀರು ನುಗ್ಗಿ ಹಾನಿಯಾಗಿದೆ. ಗೋಕಾಕ್ ಪ್ರವಾಹದ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, 1.95 ಲಕ್ಷ ಕ್ಯೂಸೆಕ್‌ಗೂ ಅಧಿಕ ಒಳಹರಿವು ಇದೆ. ಇದರಿಂದ ಕೃಷ್ಙಾ ನದಿ ತೀರದ ಜನರಲ್ಲಿ ಪ್ರವಾಹದ …
Read More »