ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »ಈಜಾಡಿ ವಿದ್ಯುತ್ ಕಂಬ ಬಳಿ ತೆರಳಿ ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡಿದ್ದಾರೆ.
ಬೆಳಗಾವಿ: ಕಳೆದ ವರ್ಷವಷ್ಟೇ ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಪಶ್ಚಿಮಘಟ್ಟ ಹಾಗೂ ಖಾನಾಪುರ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಬಳಿಯ ನವಿಲುತೀರ್ಥ ಜಲಾಶಯ ಭರ್ತಿಯಾಗಿ 11 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಮುನವಳ್ಳಿ ಪಟ್ಟಣದ ಯಲಿಗಾರ್ ಓಣಿಗೆ ನೀರು ನುಗ್ಗಿದೆ. ಯಲಿಗಾರ್ ಓಣಿಯಲ್ಲಿದ್ದ ವಿದ್ಯುತ್ ಕಂಬಗಳು ಸಹ ಮುಳುಗಡೆಯಾಗಿದ್ದು ವಿದ್ಯುತ್ ದುರಸ್ತಿಗೆ ಲೈನ್ ಮ್ಯಾನ್‍ಗಳು ಪರದಾಡುತ್ತಿದ್ದಾರೆ. ಈ …
Read More »ಸತೀಶಜಾರಕಿಹೊಳಿ ಪೌಂಡೇಶನ್ ಕೃತಕ ಆಮ್ಲಜನಕ ಪೂರೈಸುವ ಕೆಲಸ ಮಾಡುತ್ತಿದೆ.
ಗೋಕಾಕ: ಕೊರೊನಾ ಸೋಂಕಿನಿಂದ ಉಸಿರಾಟ ತೊಂದರೆ ಅನುಭವಿಸುತ್ತಿವವರಿಗೆ ಉಚಿತ ಆಕ್ಸಿಜನ್ ಸಿಲಿಂಡರ್ ವಿತರಿಸುವ ಮೂಲಕ ಸತೀಶ ಜಾರಕಿಹೊಳಿ ಫೌಂಡೇಶನ್ ಗಮನ ಸೆಳೆಯುತ್ತಿದೆ. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಪುತ್ರ ರಾಹುಲ್, ಹಾಗೂ ಪುತ್ರಿ ಪ್ರಿಯಾಂಕಾ ಆಕ್ಸಿಜನ್ ಸಿಲಿಂಡರ್ ವಿತರಿಸಿದರು. ಕೋವಿಡ್ 19 ನಿಂದ ಬಳಲುತ್ತಿರುವ, ಕೆಲವರು ಹಣವಿಲ್ಲದೇ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವವರಿಗೆ ಗಿ ಸತೀಶ ಜಾರಕಿಹೊಳಿ ಪೌಂಡೇಶನ್ ಕೃತಕ …
Read More »ಗಣೇಶ ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು
ಬೆಳಗಾವಿ: ಗಣೇಶ ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರವಾಗಿ ಎಂಎಲ್ ಸಿ ವಿವೇಕರಾವ್ ಪಾಟೀಲ್, ಹಾಗೂ ಹಾಲುಮತದ ಹಲವು ನಾಯಕರು ಇಂದು ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಕರಣ ಇತ್ಯರ್ಥ ಪಡೆಸಿ ಜಿಲ್ಲಾಡಳಿತ ವತಿಯಿಂದಲೇ ಮೂರ್ತಿ ಸ್ಥಾಪನೆ ಮಾಡುವಂತೆ ಒತ್ತಡ …
Read More »ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …
Read More »ಕಿತ್ತೂರು ಕ್ಷೇತ್ರದಲ್ಲಿ ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪಿಸಿ
ಬೈಲಹೊಂಗಲ: ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪನೆ ತೀರ ಅಗತ್ಯವಾಗಿದ್ದು, ತಮ್ಮ ಕಿತ್ತೂರು ಮತಕ್ಷೇತ್ರದಲ್ಲಿ ಇದನ್ನು ತೆರೆಯುವಂತೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ರಫ್ತು ಪ್ರಮೋಷನ್ ಸಮಿತಿ ಸಭೆಯ ನಂತರ ಶಾಸಕರ ಕಾರ್ಯಾಲಯದಿಂದ ಈ ಕುರಿತು ಹೇಳಿಕೆ ನೀಡಿರುವ ಶಾಸಕರು ತಮ್ಮ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಪ್ರದೇಶದಲ್ಲಿ ಕೈಗಾರಿಕಾ ರಫ್ತು ವಲಯ …
Read More »ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಬೆಳಗಾವಿ ಜಿಲ್ಲೆಯ ನಾಲ್ಕು ಸಚಿವರಿಗೆ ಇಲ್ಲ ಕಾಳಜಿ…!
ಬೆಳಗಾವಿ : ಮಹಾರಾಷ್ಟ್ರ ಪಶ್ಚಿಮ ಘಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಸಂಕಷ್ಟ ಎದುರಾಗಿದೆ. ಕಷ್ಟು ಪಟ್ಟ ಬೆಳೆದ ಬೆಳೆ ಹಾನಿಯಾಗಿದ್ದು, ಇನ್ನೂ ಅನೇಕರು ಮನೆಯಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಜಿಲ್ಲೆಯ ನಾಲ್ವರು ಸಚಿವರ ಪೈಕಿ ಒಬ್ಬರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎನ್ನವುದು ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ರಾಜ್ಯದಲ್ಲಿಯೇ ಬೆಳಗಾವಿ ರಾಜಕಾರಣ ಅತ್ಯಂತ ಪ್ರಖ್ಯಾತಿಯನ್ನು ಗಳಿಸಿದೆ. ಸರ್ಕಾರವನ್ನು ಬಿಳಿಸುವ ಶಕ್ತಿಯನ್ನು …
Read More »ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ
ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …
Read More »ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.
ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …
Read More »ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…
ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, …
Read More »
Laxmi News 24×7