ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ಅಧ್ಯಯನ ತಂಡಕ್ಕೆ ಸ್ಥಳೀಯರು ಘೇರಾವ್ ಹಾಕಿದ ಘಟನೆ ಗೋಕಾಕ ತಾಲ್ಲೂಕಿನ ಲೋಳಸೂರ ಸೇತುವೆ ಬಳಿ ಮಂಗಳವಾರ ನಡೆಯಿತು. ಅಧ್ಯಯನ ತಂಡದ ಅಧಿಕಾರಿಗಳ ಎದುರು ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದ ಕೊಪ್ಪದ ಹಾಗೂ ಮುಖಂಡರಿಗೆ ಅವಕಾಶ ದೊರೆಯಲಿಲ್ಲ. ಅವರೊಂದಿಗೆ ಮಾತನಾಡಲು ತಂಡದ ಅಧಿಕಾರಿಗಳು ನಿರಾಕರಿಸಿದರು. ಕಾರಿನಲ್ಲಿ ಹೋಗಿ ಕುಳಿತರು. ಇದರಿಂದಾಗಿ ಸಿಟ್ಟಾದ ಮುಖಂಡರು ಕಾರಿಗೆ ಘೇರಾವ್ ಹಾಕಿ …
Read More »ಬೆಳಗಾವಿಯಲ್ಲಿ ಕಬ್ಬಿನ ಬಾಕಿ ಹಣಕ್ಕಾಗಿ ಆಗ್ರಹಿಸಿ ರೈತರ ಧರಣಿ
ಬೆಳಗಾವಿ – ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರು ಮತ್ತೆ ಬೀದಿಗೆ ಇಳಿದು ಧರಣಿ ನಡೆಸಿದ್ದಾರೆ. ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಎರಡು ವರ್ಷದಿಂದ ಬಾಕಿ ಹಣ ಉಳಿಸಿಕೊಂಡಿದ್ದು, ರೈತರಿಗೆ ಪಾವತಿ ಮಾಡಿಲ್ಲ. ಲಾಕ್ಡೌನ್ನಂತಹ ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಹಣ ನೀಡದೆ ಸತಾಯಿಸುತ್ತಿದೆ. ಹೀಗಾಗಿ ಸೋಮವಾರ ರೈತ ಸಂಘದ ನೇತೃತ್ವದಲ್ಲಿ ಬೃತಹ್ ಧರಣಿ ನಡೆಸಿ, ತಕ್ಷಣ ಬಾಕಿ ಹಣ ಪಾವತಿ ಮಾಡಬೇಕು ಎಂದು ಆಗ್ರಹಿಸಿಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಎಂ ಕೆ …
Read More »ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ
ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು. ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ್ ಹೇಳಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಮಣ್ಣಿಕೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರು, ಶಾಲಾ ಅಭಿವೃದ್ದಿ ಪದಾಧಿಕಾರಿಗಳು ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಯುವಕ, …
Read More »ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರ ಭರ್ಜರಿ ದಾಳಿ ; 144 ಕೆ.ಜಿ ಗಾಂಜಾ ವಶ
ಬೆಳಗಾವಿ : ಇತ್ತಿಚೀನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಡ್ರಗ್ ಮಾಫಿಯಾ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳು ಚಿತ್ರರಂಗದ ದೊಡ್ಡ ದೊಡ್ಡ ನಟ, ನಟಿಯರು ಡ್ರಗ್ ಮಾಫಿಯಾ ದಲ್ಲಿ ಸಿಲುಕಿಕೊಂಡಿದ್ದಾರೆ. ಒಂದೆಡೆ ಡ್ರಗ್ ಮಾಫಿಯಾ ಸದ್ದು ಮಾಡುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಗಾಂಜಾ ನಶೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅವ್ಯಾಹತವಾಗಿ ಗಾಂಜಾ ಬೆಳೆದು ರಾಜ್ಯದ ಜೊತೆಗೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಮಾರಾಟ …
Read More »ಮದುವೆಗಳಲ್ಲಿ ಬ್ಯಾಂಡ್ಗೆ ಅನುಮತಿ: ಅಗ್ರಹ
ಬೆಳಗಾವಿ: ಮದುವೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಮಂಗಳವಾದ್ಯ ಮತ್ತು ಬ್ರಾಸ್ ಬ್ಯಾಂಡ್ಗಳನ್ನು ನುಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಮಂಗಳವಾದ್ಯ ಹಾಗೂ ಬ್ಯಾಂಡ್ ಕಲಾವಿದರ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ‘ಈ ವೃತ್ತಿಯನ್ನು ಸಾವಿರಾರು ಮಂದಿ ಅವಲಂಬಿಸಿದ್ದೇವೆ. ಕೋವಿಡ್-19 ಲಾಕ್ಡೌನ್ನಿಂದಾಗಿ ಸಭೆ, ಸಮಾರಂಭ, ಮದುವೆ, ಜಯಂತಿ, ಜಾತ್ರೆ ಮೊದಲಾದ ಕಾರ್ಯಕ್ರಮಗಳಿಗೆ ಹಲವು ತಿಂಗಳವರೆಗೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದಾಗಿ ದುಡಿಮೆ ಇಲ್ಲದೆ, ಗಳಿಕೆಯೂ ಇಲ್ಲದೆ ನಾವು …
Read More »ಬಸ್ ಕಡೆ ಜನರ ಒಲವು: ಸಾರಿಗೆ ಆದಾಯ ಚೇತರಿಕೆ
ಚಿಕ್ಕೋಡಿ: ಕಳೆದ ಆರು ತಿಂಗಳಿಂದ ಕೋವಿಡ್ ಹೊಡೆತಕ್ಕೆ ನಷ್ಟ ಅನುಭವಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗವು ಈಗ ಹಂತ ಹಂತವಾಗಿ ಆದಾಯದಲ್ಲಿ ಚೇತರಿಸಿಕೊಳ್ಳುತ್ತಿದೆ. ಲಾಕ್ಡೌನ್ ತೆರವುಗೊಂಡಿರುವ ಪರಿಣಾಮ ದಿನದಿಂದ ದಿನಕ್ಕೆ ಪ್ರಯಾಣಿಕರು ಬಸ್ ಕಡೆ ವಾಲುತ್ತಿದ್ದಾರೆ. ಕಳೆದ ಮಾರ್ಚ್ ಮೂರನೇ ವಾರದಿಂದ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರಕಾರ ಲಾಕ್ಡೌನ್ ಜಾರಿ ಮಾಡಿ ಬಸ್ ಸಂಚಾರ ನಿಷೇಧಿಸಿತ್ತು. ಹೀಗಾಗಿ ನಾಲ್ಕು ತಿಂಗಳು ಬಸ್ …
Read More »ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ
ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ. ‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ …
Read More »ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರ ಅಡ್ಡಿ
ಖಾನಾಪುರ: ತಾಲ್ಲೂಕಿನಲ್ಲಿ ಸಂಸದ ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರು ಅಡ್ಡಿ ಪಡೆಸಿದ್ದು, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಾಸಕಿ ಅಂಜಲಿ ನಿಂಬಾಳಕರ ಕೊರೊನಾದಿಂದ ಕ್ವಾರಂಟೈನ್ ನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಭೂಮಿ ಪೂಜೆಯನ್ನು ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಭೂಮಿ ಪೂಜೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ …
Read More »ಒಂದೇ ವಾರದಲ್ಲಿ 145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನುಬಂಧಿಸಲಾಗಿದೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಗಾಂಜಾ ಮಾರಾಟ ಹಾಗೂ ಸೇವೆನೆ ಎಗ್ಗಿಲ್ಲದೆ ನಡೆಯುತ್ತಿದ್ದು, ಒಂದೇ ವಾರದಲ್ಲಿ 145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನು ಬಂಧಿಸಿದ್ಧಾರೆ. 2 ಲಕ್ಷ 25 ಸಾವಿರ ಬೆಲೆಯ 145 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ದೂರು ದಾಖಲಾಗಿದ್ದು, 14 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಕಾರ್ಯಾಚರಣೆ …
Read More »
Laxmi News 24×7