Breaking News

ಬೆಳಗಾವಿ

ಹಿಡಕಲ್ ಜಲಾಶಯಿಂದ 40 ಸಾವಿರ ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಬಿಡುಗಡೆ- ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗೋಕಾಕ ತಹಶಿಲ್ದಾರ ಸೂಚನೆ.

ಬೆಳಗಾವಿ: ಪಶ್ಚಿಮ ಗಟ್ಟದಲ್ಲಿ ಧಾರಾಕಾರು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ‌ ಒಳ ಹರಿಯುವ ಹೆಚ್ಚಾಗಿದ್ದು ಜಲಾಶಯದಿಂದ ಇಂದು 40000 ಕ್ಯೂಸೆಕ್ಸ ನೀರು ಹೊರ ಬಿಡಲಾಗಿದೆ . ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಒಳಹರಿಯುವ 18052 ಕ್ಯೂಸೆಕ್ಸ ಇದ್ದು ಈ ಒಳ ಹರಿವಿನ ಪ್ರಮಾಣವನ್ನು‌ ದೃಷ್ಟಿಯಲ್ಲಿಟ್ಟುಕೊಂಡು‌ ಜಲಾಶಯದ ಕ್ರಷ್ಟ ಗೇಟುಗಳು ಮೂಲಕ  ಘಟಪ್ರಭಾ ನದಿಗೆ ನೀರು ಹರಿದು ಬಿಡಲಾಗಿದೆ. ಬಾನುವಾರ ಸಂಜೆ 5:30 ಕ್ಕೆ 40 ಸಾವಿರ ಕ್ಯೂಸೆಕ್ಸ ನೀರು ನದಿಗೆ …

Read More »

ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಗೋಕಾಕ: ಭಾರತದ ಇತಿಹಾಸದಲ್ಲಿ ಮೈಲುಗಲ್ಲನ್ನು ಸೃಷ್ಟಿಸಿದ ದಿನ ಮತು ಭಾರತ ದೇಶದ ಎಲ್ಲ ಪ್ರಜೆಗಳು ಸಂಭ್ರಮ ಪಡುವ ದಿನ ಅದುವೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸುದಿನ ಅಗಸ್ಟ 15. ದಿನಾಂಕ 15.08.2020 ರಂದು ಬೆಳಿಗ್ಗೆ 7.45ಕ್ಕೆ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ  ರೈತರುಗಳಾದ ಯಲ್ಲಪ್ಪಾ ರಂಗಪ್ಪಾ ಮಳಲಿ ಸಾ.ಮಲ್ಲಾಪೂರ ,ಈರಪ್ಪಾ ಸಿದ್ದಪ್ಪಾ ಕಿತ್ತೂರ ಇವರಿಂದ 74 ನೇಯ ಸ್ವಾತಂತ್ರ್ಯ …

Read More »

ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ರವಿವಾರದಂದು 61 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ನಗರದಲ್ಲಿ 43, ಅಂಕಲಗಿ ಗ್ರಾಮದಲ್ಲಿ 4 , ದೂಪಧಾಳ 3, ಮಲ್ಲಾಪೂರ ಪಿ.ಜಿ2 , ಶಿಂಧಿಕೂರಬೇಟ, ಮದವಾಲ,ಮಲ್ಲಾಪೂರ, ಅವರಾಧಿ, ಕೌಜಲಗಿ, ತುಕ್ಕಾನಟ್ಟಿ, ಗಣೇಶವಾಡಿ, ಗೋಕಾಕ ಫಾಲ್ಸ, ಪಂಚನಾಯಕನಹಟ್ಟಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.

Read More »

ಕೊಯ್ನಾ, ನವಿಲುತೀರ್ಥ ಡ್ಯಾಂಗಳಿಂದ ನೀರು ಬಿಡುಗಡೆ: ನದಿ ತೀರದ ಜನರಿಗೆ ಎಚ್ಚರಿಕೆ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೊಯ್ನಾ ಜಲಾಶಯ ಭರ್ತಿಯಾಗಿದ್ದು ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಒಟ್ಟು 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 86.93 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಯ್ನಾ ಜಲಾಶಯದ 6 ಗೇಟ್​​​ಗಳ ಮೂಲಕ 9,360 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಾಗೂ ವಿದ್ಯುತ್ ಉತ್ಪಾದನೆಗೆ 1050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ನೀರಿನಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ …

Read More »

ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ

ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್‌ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …

Read More »

ಮನೆಯ ಮೇಲೆ ಕುಸಿದ ಗೋಡೆ- ನಾಲ್ವರ ರಕ್ಷಣೆ

ಬೆಳಗಾವಿ: ಮನೆಯ ಮೇಲೆ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನು ರಕ್ಷಣೆ ಮಾಡಿರುವ ಘಟನೆ ಬೆಳಗಾವಿಯ ಗೋಂದಳಿ ಗಲ್ಲಿಯಲ್ಲಿ ನಡೆದಿದೆ.ಡಾಕ್ಟರ್ ಕೋಟೂರು ಎಂಬವರಿಗೆ ಸೇರಿದ ಹಳೆಯ ಮನೆ ನಿರಂತರ ಮಳೆಯಿಂದಾಗಿ ಮತ್ತಷ್ಟು ಶಿಥಿಲಾವಸ್ಥೆಗೊಂಡಿತ್ತು. ಶನಿವಾರ ಬೆಳಗ್ಗೆಯಿಂದ ಸುರಿದ ನಿರಂತರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದಿದ್ದರಿಂದ ಮನೆಯಲ್ಲಿಯೇ ನಾಲ್ಕಕ್ಕೂ ಹೆಚ್ಚು ಜನರು ಸಿಲುಕಿದ್ದರು.   ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್‍ಡಿಆರ್‍ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮನೆಯಲ್ಲಿದ್ದ ಎಲ್ಲರನ್ನೂ ರಕ್ಷಿಸಿದ್ದಾರೆ. ಅದೃಷ್ಟವಶಾತ್ …

Read More »

‘ಲಾಕ್‌ಡೌನ್‌ನಿಂದ ಜನರ ಪ್ರಾಣ ರಕ್ಷಣೆ’

ಸವದತ್ತಿ: ‘ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಜನರ ಜೀವ ರಕ್ಷಿಸಲು ಸಾಧ್ಯವಾಯಿತು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ತಾಲ್ಲೂಕು ಆಡಳಿತದಿಂದ ಇಲ್ಲಿನ ಎಸ್‌ಕೆ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಲಾಕ್‌ಡೌನ್‌ದಿಂದ ಜನಸಾಮಾನ್ಯರು ಸೇರಿದಂತೆ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ತೊಂದರೆಯಾಗಿದೆ. ಆದರೂ ಸರ್ಕಾರಗಳು ಎದೆಗುಂದಿಲ್ಲ. ನಿರಂತರ ಸಭೆ ನಡೆಸಿ ಕೋವಿಡ್ ಹತೋಟಿಯಲ್ಲಿಡಲಾಗಿತ್ತು. ದುರ್ದೈವದಿಂದ ಸಮುದಾಯಕ್ಕೆ ಹರಡಿದ್ದು …

Read More »

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಲಕ್ಕ್ಷ್ಮಣ ನಿಂಬರಗಿ ಕೋವೀಡ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಕೋವೀಡ್ ಟೆಸ್ಟ್ ಮಾಡಿಸಿಕೊಂಡಿದ್ದು ಅವರ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಸ್ವತಹ ಅವರೇ ಮಾಹಿತಿ ಹಂಚಿಕಡಿದ್ದಾರೆ. ಬೆಳಗಾವಿ ಪೋಲೀಸ್ ಆ್ಯಂಡ್ ಮೀಡಿಯಾ ವ್ಯಾಟ್ಸಪ್ ಗ್ರೂಪ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ನನ್ನ ರಿಪೋರ್ಟ್ ಪಾಸಿಟಿವ್ ಬಂದಿದೆ ನನ್ನ ಸಂಪರ್ಕಕ್ಕೆ ಬಂದವರು ಕೇರ್ ತೆಗೆದುಕೊಳ್ಳಿ ಎಂದು ಎಸ್ ಪಿ ನಿಂಬರಗಿ ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದಾರೆ. Superintendent …

Read More »

ಕೊಯ್ನಾ ಜಲಾನಯನ ಪ್ರದೇಶದಲ್ಲಿ ಭೂಕಂಪನ- ಕೃಷ್ಣಾ ನದಿ ತೀರದಲ್ಲಿ ಆತಂಕ

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.22 ಕ್ಕೆ ಭೂ ಕಂಪನವಾಗಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ.     ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣವು ಕೊಯ್ನಾ-136 ಮಿ.ಮೀ , ನವಜಾ-82 ಮಿ.ಮೀ, ಮಹಾಬಳೇಶ್ವರ-156ಮಿ.ಮೀ, …

Read More »

ರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು  ಕಂಡಂತಹ ಕನಸನ್ನು ನನಸು ಮಾಡುವ  ನಿಟ್ಟಿನಲ್ಲಿ ನಾವು  ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು  ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ …

Read More »