Breaking News

ಬೆಳಗಾವಿ

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾ

ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ. ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ಏಕಕಾಲಕ್ಕೆ 52 ಟನ್ ಕಬ್ಬು ತಂದ ರೈತರು ; ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ಏಕಕಾಲಕ್ಕೆ 52 ಟನ್ ಕಬ್ಬು ತಂದ ರೈತರು ; ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ. ಗೋಕಾಕ : ರೈತರೊಬ್ಬರು ಏಕಕಾಲಕ್ಕೆ 52.070 ಟನ್ ಕಬ್ಬು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ತಂದಿದ್ದು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ವಾಹನಕ್ಕೆ ಚಾಲನೆ ನೀಡಿ, ಹರ್ಷ ವ್ಯಕ್ತಪಡಿಸಿದರು. ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ರೈತರೊಬ್ಬರು ಏಕಕಾಲಕ್ಕೆ 52 ಟನ್ ಕಬ್ಬು ತಂದಿದ್ದು ಖುಷಿ …

Read More »

ಹೆತ್ತ ಮಗುವನ್ನು ಬಿಟ್ಟು ತಾಯಿಪರಾರಿ

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬೆಚ್ಚಿಬಿಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೆತ್ತ ಮಗುವನ್ನು ಬಿಟ್ಟು ತಾಯಿಯೊಬ್ಬಳು ಪರಾರಿಯಾಗಿದ್ದಳು. ಸದ್ಯ ಮಗು ಸಾವನ್ನಪ್ಪಿದ್ದು, ಪಾಪಿ ತಾಯಿಯನ್ನ ಅರೆಸ್ಟ್ ಮಾಡಲಾಗಿದೆ. ಹೌದು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಡಿಸೆಂಬರ್ 8ರಂದು ಬೈಲಹೊಂಗಲ್ ಮೂಲದ ಬೀಬಿಜಾನ್ ಎಂಬ ಮಹಿಳೆ ತುರ್ತು ಪರಿಸ್ಥಿತಿಯಲ್ಲಿ ಪ್ರಸೂತಿಗೆಂದು ದಾಖಲಾಗಿದ್ದಳು. ಮಹಿಳೆಯ ಬಳಿ ಯಾವುದೇ ಗುರುತಿನ ಚೀಟಿಯಾಗಲಿ ದಾಖಲೆಯಾಗಲಿ ಇರಲಿಲ್ಲ. ತಾನು 6 ತಿಂಗಳ ಗರ್ಭಿಣಿಯಾಗಿದ್ದು,ಕಾಲು ಜಾರಿ ಬಿದ್ದಿದ್ದೇನೆ. ಹೊಟ್ಟೆ ನೋಯುತ್ತಿದೆ ಎಂದಾಗ ಮಾನವೀಯತೆಯ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸುಲಧಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ

ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ಬಯಲು. ಈತ ಖಾನಾಪುರದ ಬಿಜೆಪಿ ಮುಖಂಡ ಹಾಗೂ ಶಾಸಕರ ಆಪ್ತ ಆಕಾಶ ಅಥಣಿಕರ್. ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ ಪತ್ರಗಳನ್ನು ತಯಾರಿಸಿ ಕೊಟ್ಟು ಜನರನ್ನು ಯಾಮಾರಿಸುವುದೇ ಈ ಮಹಾನುಭಾವನ ಕಾಯಕ. ಖಾನಾಪುರ ತಾಲ್ಲೂಕಿನ ಶ್ರೀಮತಿ ಶೀತಲ ಪಾಟೀಲ ಎಂಬ ಮಹಿಳೆಗೆ ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿಸುವುದಾಗಿ ನಂಬಿಸಿ ಆಕೆಯಿಂದ 30000/- ಹಣ ಪಡೆದುಕೊಂಡು ಖೊಟ್ಟಿ ಆದೇಶ ಪ್ರತಿಯನ್ನು …

Read More »

ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ಆರ್‌ಎಸ್‌ಎಸ್​​ನವರು: ಕಾಶಪ್ಪನವರ್​ ಹೊಸ ಬಾಂಬ್

ಬೆಳಗಾವಿ, ಡಿಸೆಂಬರ್​ 12: 2ಎ ಮೀಸಲಾತಿಗಾಗಿ (Panchamasali reservation) ಹೋರಾಟ ಮಾಡುತ್ತಿದ್ದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಅದೇ ಸಮುದಾಯದ ಶಾಸಕ ವಿಜಯಾನಂದ ಕಾಶಪ್ಪನವರ್,​ ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್​ನವರು ಎಂದು ಹೊಸ ಬಾಂಬ್​ ಹಾಕಿದ್ದಾರೆ. ಕಲ್ಲು ತೂರಲು …

Read More »

ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆ

ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. ಡಿ.10ರಂದು ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾಕಾರರು ಇಂದು ಹಳ್ಳಿ ಹಳ್ಳಿಗಳ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇರುವುದು ಕಂಡು ಒಂದು …

Read More »

4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!

ಚಿಕ್ಕಮಗಳೂರು: 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸ.. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು. ಮನೆಯಿಂದ ಹೋಗುವಾಗ ಮನೆಯಲ್ಲಿ ರೇಷನ್ ಎಲ್ಲಾ ಖಾಲಿ-ಖಾಲಿ. 3-4 ದಿನ ನೀರು ಕುಡಿದುಕೊಂಡೇ ಇರಬೇಕು. ಅದೂ ನೀರಿನ ಸಂಪರ್ಕ ಕಟ್ ಮಾಡಿರದಿದ್ರೆ. ಮನೆ ಕೆಲಸವೆಲ್ಲಾ ಮಾಡಬೇಕು. ಅಡುಗೆ-ಊಟ ಮಾಡುವಂತಿಲ್ಲ. ಒಂದೇ ಚೇರ್. ಅಲ್ಲೇ ಕೂರಬೇಕು. ಮಹಡಿ ಮೇಲೆ ಮಲಗಬೇಕು. ಇದು …

Read More »

30 ಗುಂಟೆಯಲ್ಲಿ ಬದನೆಕಾಯಿ ಬೆಳೆದು 15 ಲಕ್ಷ ರೂಪಾಯಿ ಲಾಭಗಳಿಸಿದ ಹಜಾರೆ ಸಹೋದರರ

  ಚಿಕ್ಕೋಡಿ: ಭೂಮಿ ತಾಯಿಯನ್ನು ನಂಬಿದ ರೈತನಿಗೆ ಎಂದಿಗೂ ಮೋಸವಾಗಿಲ್ಲ ಎಂಬುದು ಹಿರಿಯರ ಮಾತಿನಂತೆ ಇಲ್ಲೋಬ್ಬ ಯುವ ರೈತ 30 ಗುಂಟೆಯಲ್ಲಿ ಕೇವಲ ಆರು ತಿಂಗಳಲ್ಲಿಯೇ ಬದನೆಕಾಯಿ ಬೆಳೆದು 15 ಲಕ್ಷ ರೂ ಬಂಪರ ಬೆಳೆ ತೆಗೆದು ಇತರ ರೈತನಿಗೆ ಮಾದರಿಯಾಗಿದ್ದಾನೆ. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದ ಯುವ ರೈತರಾದ ಅನಿಲ ಹಜಾರೆ ಮತ್ತು ಸುನೀಲ ಹಜಾರೆ ಅವರು ತಮ್ಮ ಅರ್ಧ ಎಕರೆಯಲ್ಲಿ 1093 ತಳಿಯ ಬದನೆಕಾಯಿ ಬೆಳೆ ನಾಟಿ …

Read More »

ಸುವರ್ಣ ಸೌಧ, ಎಲ್ಲೆಡೆ ಪೊಲೀಸ್ ಸರ್ಪಗಾವಲು

ಬೆಳಗಾವಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಉಗ್ರರೂಪ ಪಡೆದುಕೊಂಡಿದೆ ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರಿಂದ ಹಲವಾರು ಜನರಿಗೆ ರಕ್ತದ ಗಾಯಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೆಚ್ಚು ಉದ್ರಿಕ್ತರಾಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಪೊಲೀಸ್ ಬಲ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಇಲ್ಲಿಂದ ಕೇವಲ ಒಂದು ಕಿಮೀ ದೂರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ …

Read More »