Breaking News
Home / ಜಿಲ್ಲೆ / ಬೆಳಗಾವಿ (page 49)

ಬೆಳಗಾವಿ

ಕಣಬರ್ಗಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ

ಕನಿಷ್ಠ ನಾಗರಿಕ ಸೌಲಭ್ಯಗಳನ್ನು ಒದಗಿಸದಿರುವುದನ್ನು ವಿರೋಧಿಸಿ ಕಣಬರ್ಗಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದಾರೆ. ಬೆಳಗಾವಿಯ ಕಣಬರ್ಗಿಯಲ್ಲಿರುವ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ನೈರ್ಮಲ್ಯ, ಬೀದಿದೀಪ, ಸಮರ್ಪಕ ನೀರು ಪೂರೈಕೆ ಹಾಗೂ ಉತ್ತಮ ರಸ್ತೆಗಾಗಿ ಕಳೆದ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಮಹಾನಗರಸಭೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಕೊನೆಯ ಅಸ್ತ್ರವಾಗಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಮತದಾನ ಬಹಿಷ್ಕರಿಸುವ …

Read More »

ಅಕ್ರಮವಾಗಿ ಗಾಂಜಾ ಮಾರಾಟರೂ.35,500/- ಮೌಲ್ಯದ 474 ಗ್ರಾಂ ಗಾಂಜಾ ವಶ.

ಗಣೇಶಪುರ ಜ್ಯೋತಿ ನಗರ ಹತ್ತಿರ  ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಂತೆ . ನಚಿಕೇತ ಎಸ್ ಜನಗೌಡ, ಪಿಐ ಕ್ಯಾಂಪ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂದಿಯವರ ತಂಡ ಆರೋಪಿತರಾದ 1) ನದೀಮ್ ಅಲ್ಲಾವುದ್ದಿನ್‌ ನದಾಫ್ (23) ಸಾ: ಜಯನಗರ ಮಚ್ಚೆ ಬೆಳಗಾವಿ, 2) ಮನೀಶ ಮಾರುತಿ ಹುಂದ್ರೆ (23) ಸಾ: ಕಶ್ವರ ನಗರ ಹಿಂಡಲಗಾ ಬೆಳಗಾವಿ. ಇವರನ್ನು ವಶಕ್ಕೆ ಪಡೆದು, ವಿಚಾರಣಿ ಕೈಕೊಂಡು, …

Read More »

ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ?

ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ ಎಂದು ಜನ ಎದುರು ನೋಡುತ್ತಿದ್ದಾರೆ, ಉತ್ತರ ಕರ್ನಾಟಕದ ಬಲಿಷ್ಟ ನಾಯಕ ಉಮೇಶ್ ಕತ್ತಿ ನಿಧನದಿಂದ ಹುಕ್ಕೇರಿ ಕ್ಷೇತ್ರದಲ್ಲಿ ಚುನಾವಣೆ ಈ ಬಾರಿ ಕುತುಹಲ ಕೇರಳಿಸಿದೆ. ಹುಕ್ಕೇರಿ ಮತಕ್ಷೇತ್ರದಲ್ಲಿ ಯಾವದೇ ಪಕ್ಷದ ಮೇಲಿನ ಚುನಾವಣೆ ಜರುಗಿದ ಉದಾಹರಣೆಗಳಿಲ್ಲಾ, ಉಮೇಶ್ ಕತ್ತಿ ಯಾವಪಕ್ಷದಿಂದ ಸ್ಪರ್ಧೆ ಮಾಡುತ್ತಾರೋ ಅದೆ ಗೆಲವು ಪಡೆಯುತ್ತಿತ್ತು ಆದರೆ ಉಮೇಶ್ ಕತ್ತಿ ನಿಧನದಿಂದ ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ಚಟುವಟುಕೆಗಳು ಗದಿಗೇರಿವೆ ಈಗಾಗಲೇ …

Read More »

ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ:ಶರೀಫಾ ನದಾಫ್

ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆ ಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಜೆ ಡಿ ಎಸ್ ಮುಖಂಡೆ ಶರೀಫಾ ನದಾಫ್ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಆಡಳಿತದಿಂದ ಕ್ಷೇತ್ರದ ದಲ್ಲಿ ಯಾವದೇ ಅಭಿವೃದ್ಧಿ ಕಾರ್ಯ ಜರುಗಿಲ್ಕಾ ವಿಷೇಶವಾಗಿ ಮಹಿಳೆಯರ ಸಮಸ್ಯೆ,ಯುವಕರಿಗೆ ಉದ್ಯೋಗ ಮತ್ತು ಅಭಿವೃದ್ಧಿ ಗಳು ವಂಚಿತರಾಗಿದ್ದಾರೆ ಕಾರಣ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು …

Read More »

ಅಂತಿಮಗೊಳ್ಳದ Congress ತೃತೀಯ ಪಟ್ಟಿ

ಬೆಂಗಳೂರು: ಕಾಂಗ್ರೆಸ್‌ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್‌ ಘೋಷಿಸಲಾಗುತ್ತದೆ.   ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ …

Read More »

ಕರಡಿಗುದ್ದಿ, ಡಾ.ದೀಕ್ಷಿತ್‌ಗೆ ‘ಸಿರಿಗನ್ನಡ ಗೌರವ’

ಬೆಳಗಾವಿ: ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು 2022ನೇ ಸಾಲಿನ ‘ಸಿರಿಗನ್ನಡ ಗೌರವ’ ಮತ್ತು 2021ನೇ ಸಾಲಿನ ‘ಸಿರಿಗನ್ನಡ ಪುಸ್ತಕ ಪ್ರಶಸ್ತಿ’ ಪ್ರಕಟಿಸಿದೆ. ಸಿರಿಗನ್ನಡ ಗೌರವ ಪ್ರಶಸ್ತಿಗೆ ಪ್ರೊ.ರಾಜಶೇಖರ ಎಂ. ಕರಡಿಗುದ್ದಿ ಮತ್ತು ಡಾ.ಮಾಧವ ದೀಕ್ಷಿತ ಭಾಜನರಾಗಿದ್ದಾರೆ. ಸಿರಿಗನ್ನಡ ಪುಸ್ತಕ ಪ್ರಶಸ್ತಿಗೆ ಈರಯ್ಯ ಕಿಲ್ಲೇದಾರ ಅವರ ವೈಚಾರಿಕ ಲೇಖನ ಸಂಗ್ರಹ ‘ಉರಿಯ ಪೇಟೆಯಲ್ಲಿ’ ಕೃತಿ ಮತ್ತು ಚಂದ್ರಶೇಖರ ಪೂಜಾರ ಅವರ ಗಜಲ್ ಸಂಕಲನ ‘ಬೆಳಕ ನಿಚ್ಚಣಿಕೆ’ ಕೃತಿ ಆಯ್ಕೆಯಾಗಿವೆ. ಜೀವನಮಾನ ಸಾಧನೆ ಪ್ರಶಸ್ತಿಗಳು: …

Read More »

ಬೆಳಗಾವಿ ಜಿಲ್ಲೆಯ ವಿವಿಧೆಡೆ ತಪಾಸಣೆ ನಡೆಸಿ ಅಪಾರ ಪ್ರಮಾಣದಲ್ಲಿ ಹಣ ಹಾಗೂ ಮದ್ಯ ವಶ

ಬೆಳಗಾವಿ: ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ಬೆಳಗಾವಿ ಜಿಲ್ಲೆಯ ವಿವಿಧೆಡೆ ತಪಾಸಣೆ ನಡೆಸಿ ಅಪಾರ ಪ್ರಮಾಣದಲ್ಲಿ ಹಣ ಹಾಗೂ ಮದ್ಯ ವಶಪಡಿಸಿಕೊಂಡಿದ್ದಾರೆ. ಘಟಪ್ರಭಾದ ಹುಣಶ್ಯಾಳ ಗ್ರಾಮದಲ್ಲಿ ಅಬಕಾರಿ ದಾಳಿ ಮಾಡಿ 34 ಬಾಕ್ಸ್, 3264 ಪೌಚ್ ಗಳನ್ನು ಜಪ್ತು ಮಾಡಲಾಗಿದೆ. ಒಟ್ಟು 301 ಲೀಟರ್ ಮಧ್ಯ (Original choice ), ಅಂದಾಜು 1,18,000 ರೂಪಾಯಿಗಳು. ಹಿಟ್ನಿ ಚೆಕ್ ಪೋಸ್ಟ್ ನಲ್ಲಿ 1 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಮಿರಜ್ ನ …

Read More »

ಥೈರಾಯ್ಡ್ ನಿಂದ ಬಳಲುತ್ತಿದ್ದ 49 ವರ್ಷದ ಮಹಿಳೆಗೆ ಯಶಸ್ವಿಯಾಗಿ ಚಿಕಿತ್ಸೆ

ಬೆಳಗಾವಿ: ಗಂಟಲು ನೋವು, ಊತ, ನುಂಗಲು ತೊಂದರೆಯ ಸಮಸ್ಯೆಯೊಂದಿಗೆ ಉಲ್ಬಣಗೊಂಡಿದ್ದ ಥೈರಾಯ್ಡ್ ನಿಂದ ಬಳಲುತ್ತಿದ್ದ 49 ವರ್ಷದ ಮಹಿಳೆಗೆ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಹೆಮಿಥೈರೊಡಕ್ಟಮಿ (ಎಡಗಡೆಯ) ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಮೂಲತಃ ಖಾನಾಪುರ ತಾಲೂಕಿನ ರಹವಾಸಿಯಾದ ಮಹಿಳೆಗೆ ಕಳೆದ 20 ವರ್ಷಗಳಿಂದ ಗಂಟಲಿನ ಸಮೀಪ ಒಂದು ಸಣ್ಣಗಂಟಿನಾಕಾರದಲ್ಲಿದ್ದ ಥೈರಾಯ್ಡ ಸಮಸ್ಯೆಯು ಕಳೆದ 2ರಿಂದ 3 ವರ್ಷಗಳಲ್ಲಿ ಉಲ್ಭಣಗೊಂಡು ರೋಗಿಯು ನುಂಗಲು, ಮಾತನಾಡಲು ಸಮಸ್ಯೆಯನ್ನು ಎದುರಿಸಬೇಕಾಯಿತು. …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ …

Read More »

ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ

ಬೆಳಗಾವಿ; ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕಿತ್ತೂರಿನ ನಾವಲಗಟ್ಟಿ ಗ್ರಾಮದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಯಲ್ಲಪ್ಪ ಉಪ್ಪಾರಟ್ಟಿ, ಭೀಮಮೂಡಲಗಿ, ರಾಜು ಕಲ್ಲೂರ, ಸಂತೋಷ ಕಲ್ಲೂರ ಸೇರಿದಂತೆ ಎಲ್ಲರನ್ನೂ ಕಾಂಗ್ರೆಸ್ ಮುಖಂದ ನಾನಾಸಾಹೇಬ್ ಪಾಟೀಲ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

Read More »