Breaking News

ಬೆಳಗಾವಿ

ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್​ ವ್ಯವಸ್ಥೆ: ಬೆಳಗಾವಿ ಡಿ.ಸಿ

ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್​ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್​​​ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್​​​ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …

Read More »

20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …

Read More »

ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ

: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …

Read More »

ಬೆಳಗಾವಿ : ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ.

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು ನೀರು ಬಿಡುಗಡೆಯ ಕಾರಣ ಜಿಲ್ಲೆಯಲ್ಲಿ ಕೃಷ್ಣ ನದಿ ಮತ್ತು ಅದರ ಉಪನದಿಗಳು ಜಿಲ್ಲೆಯಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕೃಷ್ಣಾನದಿಗೆ ಒಳಹರಿವಿನ ಪ್ರಮಾಣ 1,62,139 ಕ್ಯೂಸೆಕ್‌ಗಳಿಗೆ ಏರಿಕೆಯಾಗಿದೆ. ಇದರಿಂದ ಅನೇಕ ಜಿಲ್ಲೆಯ ಅನೇಕ ಸೇತುವೆಗಳು ರಸ್ತೆಗಳು ನೀರಿನಲ್ಲಿ ಮುಳುಗಿದೆ. ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನಿರಿನಲ್ಲಿ ಮುಳುಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು …

Read More »

ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!

ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …

Read More »

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ವಿಜಯಪುರ‌ದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ನಗರದ ಕೆ‌ಎಲ್‌ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ. ಆ. 8ರಂದು ಹುಬ್ಬಳ್ಳಿಯಲ್ಲಿ …

Read More »

ಪ್ರವಾಹದೊಂದಿಗೆ ಬಂದ ಬೃಹತ್ ಮೀನು; ಅಚ್ಚರಿಗೊಂಡ ಬೆಳಗಾವಿ ಜನ

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಭೂಮಿ ಮೇಲೆ ಇರುವ ಪ್ರಾಣಿಗಳಿಗೆ ಮಾತ್ರ ಸಂಕಷ್ಟಕ್ಕೆ ಒಳಗಾಗಿಲ್ಲ, ಜಲಚರ ಜೀವಿಗಳೂ ಆಘಾತಕ್ಕೆ ಒಳಗಾಗಿವೆ. ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದ ಜೊತೆ ದೊಡ್ಡದಾದ ಮೀನು ಒಂದು ಈಜಿಕೊಂಡು ಬಂದಿದೆ. ಸ್ಧಳೀಯರು ಈ ಮೀನಿನ ಫೋಟೋವನ್ನು ಮೊಬೈಲ್​ನಲ್ಲಿ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ಹಾಕಿದ್ದಾರೆ. ಆ ವೀಡಿಯೋ ಸಖತ್ ವೈರಲ್ ಆಗಿದೆ.

Read More »

ನೋಟುಗಳಂತೆ ಕಾಣುವ ಬಂಡಲ್ ತಯಾರಿಕೆ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಖೋಟಾ ನೋಟಿನ ಬಂಡಲ್‌ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್‌ ಬಂಡಲ್‌ಗಳು, ತಲಾ 2 ಕಾರ್‌ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು …

Read More »

ಬೆಳಗಾವಿ: ಮತ್ತೆ 392 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 392 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,498ಕ್ಕೆ ಏರಿದೆ. ಇಲ್ಲಿನ ವಿವಿಧ ಬಡಾವಣೆಗಳು ಮತ್ತು ತಾಲ್ಲೂಕಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ನಗರದ ಗುರುಪ್ರಸಾದ ಕಾಲೊನಿ, ವಿಶ್ವಕರ್ಮ ಕಾಲೊನಿ, ತಾಲ್ಲೂಕಿನ ಕೆಎಸ್‌ಆರ್‌ಪಿ ಮಚ್ಚೆ, ಸಾಂಬ್ರಾದ ಏರ್‌ಮನ್‌ ತರಬೇತಿ ಶಾಲೆ, ರಾಮದುರ್ಗ, ಗೋಕಾಕ, ಅಥಣಿ, ರಾಯಬಾಗ, ಖಾನಾಪುರ, ಸವದತ್ತಿ, ಬೈಲಹೊಂಗಲ ತಾಲ್ಲೂಕುಗಳಲ್ಲಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ. ಅಂಕಲಗಿ ಪೊಲೀಸ್ ಠಾಣೆಯ ಮೂವರಿಗೆ ದೃಢ‍ಪಟ್ಟಿದೆ. …

Read More »