ಬೆಳಗಾವಿ: ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ. ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು. ಸ್ಮಶಾನದಲ್ಲಿ ಸಾಲು ಸಾಲಾಗಿ ಸೋಂಕಿತರ ಶವ ಇಟ್ಟು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೃತರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಸದಾಶಿವ ನಗರದ ಸ್ಮಶಾನದಲ್ಲಿ ಮಧ್ಯಾಹ್ನ 2ರವರೆಗೆ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಸಮಯ ಮೀಸಲಿಡಲಾಗಿದೆ. ಮಧ್ಯಾಹ್ನ 2 ಗಂಟೆ ಬಳಿಕ ಸಹಜವಾಗಿ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ …
Read More »ಶಾಸಕ ತಿಪ್ಪಾರೆಡ್ಡಿ ಹಿರಿಯರು ನಾನು ಅವರು ಇಬ್ಬರು ಮಂತ್ರಿ ಆಗುವ ಕಾಲ ಬಹಳ ದೂರವಿಲ್ಲ. ನಾವು ಇಬ್ಬರು ಸಹ ಮಂತ್ರಿ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಹಿಂದೆ ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ಕೊನೆಗಳಿಗೆಯಲ್ಲಿ ಉಮೇಶ್ ಕತ್ತಿಯಾವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಆದ್ರೆ, ಈ ಬಾರಿ ಅವರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಇನ್ನು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಶಾಸಕರಿಗೆ ಸಮಾಧಾನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿಗಮ ಮಂಡಳಿಗಳನ್ನ ನೀಡಿದ್ದರು. ಹಲವರು ನಯವಾಗೆ ನಿರಾಕರಿಸಿದರೆ ಶಾಸಕ ತಿಪ್ಪಾರೆಡ್ಡಿ ಮಾತ್ರ ನನಗೆ ಅವಮಾನ ಮಾಡಲಾಗಿದೆ. ನನಗೆ ಸಚಿವ ಸ್ಥಾನ ಬೇಕು ಎಂದು ಬಹಿರಂಗವಾಗೆ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಈಗ ಉಮೇಶ್ ಕತ್ತಿ ಸಹ ನನಗೆ ಮಂತ್ರಿ ಸ್ಥಾನ ಬೇಕು ಎಂದಿದ್ದಾರೆ.
ಬೆಳಗಾವಿ: ನಿಗಮ ಮಂಡಳಿ ನೇಮಕ ಬೆನ್ನಲ್ಲೇ ಇದೀಗ ಸಂಪುಟ ವಿಸ್ತರಣೆ ಸದ್ದು ಜೋರಾಗಿದ್ದು, ಆಗಸ್ಟ್ ಮೊದಲ ವಾರದಲ್ಲೇ ಬಿಎಸ್‌ವೈ ಕೆಲವರನ್ನ ಸಂಪುಟದಿಂದ ಕೈಬಿಟ್ಟು ಬೇರೆಯವರಿಗೆ ಚಾನ್ಸ್ ಕೊಡಲು ಚಿಂತನೆ ನಡೆಸಿದ್ದಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಈ ಸಲ ಮಂತ್ರಿಯಾಗುವುದು ಫಿಕ್ಸ್ ಎನ್ನುವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಚಿಕ್ಕೋಡಿಯಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿರುವ ಉಮೇಶ್ ಕತ್ತಿ, ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆದಿರುವ …
Read More »ಬೆಳಗಾವಿ | 228 ಜನರಿಗೆ ಸೋಂಕು ದೃಢ, 6 ಮಂದಿ ಸಾವು
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 228 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ನೀಡಿರುವ ಮಾಹಿತಿ ಪ್ರಕಾರ, ಆಸ್ಪತ್ರೆಗೆ ದಾಖಲಾಗಿದ್ದ 6 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅಥಣಿ ತಾಲ್ಲೂಕಿನ 58 ವರ್ಷದ ವ್ಯಕ್ತಿ, ಬೈಲಹೊಂಗಲದ 44 ವರ್ಷದ ಪುರುಷ, ಸವದತ್ತಿಯ 65 ವರ್ಷದ ಮಹಿಳೆ, ರಾಯಬಾಗ ತಾಲ್ಲೂಕಿನ ಕುಡಚಿಯ 55 ವರ್ಷದ ಮಹಿಳೆ ಹಾಗೂ 46 ವರ್ಷದ ಪುರುಷ ಹಾಗೂ ಬೆಳಗಾವಿ ತಾಲ್ಲೂಕಿನ 54 ವರ್ಷದ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ
ಬೆಳಗಾವಿ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ …
Read More »ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್ ಕಿಟ್ ವಿತರಣೆ
ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್.ಎಸ್. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದ್ದ ಶಾಸಕರು ಈಗ …
Read More »ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು
ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …
Read More »ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ
ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು. ಕಾಂಗ್ರೆಸ್ ಕಚೇರಿ ನವೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಾಟಾಂಬಳೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ್ ಹಣುಮನ್ನವರ್, ಮಹೇಶ್ ಕಡಪಟ್ಟಿ, ಮಲಗೌಡಾ ಪಾಟೀಲ್ ಮುಂತಾದವರು ಇದ್ದರು.
Read More »ಲಕ್ಷ್ಮಣ ಸವದಿ ಮುಂದಿನ ಸಿಎಂ’ – ಡಿಸಿಎಂ ಬೆಂಬಲಿಗರಿಂದ ಪೋಸ್ಟ್
ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಯಾನ ನಡೆಸುತ್ತಿದ್ದಾರೆ. ಈಗ ಈ ಪೋಸ್ಟ್ ಎಲ್ಲ ಕಡೆ ವೈರಲ್ ಆಗಿದ್ದು, ಈಗ ಬಿಜೆಪಿಯಲ್ಲಿ ಒಳಾಂಗಣ ರಾಜಕೀಯ ನಡೆಯುತ್ತಿದೆಯಾ ಎಂಬ ಅನುಮಾನಗಳು ಮೂಡಿವೆ. ಲಕ್ಷ್ಮಣ ಸವದಿಯವರು ದೆಹಲಿಗೆ ಹೋಗಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ನಂತರ ಈ ಪೋಸ್ಟ್ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಲವಾರು ಅನುಮಾನಗಳು ಮೂಡಿವೆ. ಈಗ …
Read More »ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ
ಬೆಳಗಾವಿ: ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ. ಆದ್ದರಿಂದ ಮೂರು ದಿನಗಳಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇಯ ಸಭಾಂಗಣದಲ್ಲಿ ಮಂಗಳವಾರ (ಜುಲೈ 28) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಆರಂಭಗೊಂಡಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ …
Read More »ಬೆಳಗಾವಿ ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ.
ಬೆಳಗಾವಿ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ. ಅವರನ್ನು ನೇಮಕಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ದರ್ಶನ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಳಗಾವಿ ಜಿಪಂ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ …
Read More »