ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ. ಬೆಳಗಾವಿ: ಕೊರೋನಾ ಟೆಸ್ಟ್ ಮಾಡಿಸದೇ ಪಾಸಿಟಿವ್ ಇದೆ ಎಂದಿದ್ದ ಜಿಲ್ಲಾಡಳಿತ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ …
Read More »ಕಸ ತುಂಬಿದ ಲಾರಿ ಡಿವೈಡರ್ ಗೆ ಡಿಕ್ಕಿ ವಾಹನ ಚಾಲಕನ ಸಾವು
ಬೆಳಗಾವಿ- ಬೆಳಗಾವಿಯ ಗಲ್ಲಿಗಲ್ಲಿ ಗಳಲ್ಲಿ ಕಸ ತುಂಬಿಕೊಂಡು ತುರಮರಿ ಕಚರಾ ಡಿಪೋಗೆ ಹೊರಟಿದ್ದ ಟಿಪ್ಪರ್ ಗಾಂಧೀ ನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗಿನ ಜಾವ ಟಿಪ್ಪರ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ವಾಹನ ಚಾಲಕ ಟಿಪ್ಪರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಜ್ಯೋತಿ ನಗರದ ನಿವಾಸಿ 35 ವರ್ಷದ ಜಿತೇಂದ್ರ ಬಾಬು ಢಾವಾಳೆ ಮತ ಪಟ್ಟ ದುರ್ದೈವಿಯಾಗಿದ್ದಾನೆ ಲಾಕ್ …
Read More »ಬೆಳಗಾವಿ:ಬಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ, ಕೋವಿಡ್-19 ರೋಗಿಗಳ ಪರಿಸ್ಥಿತಿ ಕರುಣಾಜನಕ!
ಬೆಳಗಾವಿ :ಕೋವಿಡ್-19 ರೋಗಿಗಳು ತಮಗೆ ತಾವೇ ಅಟೆಂಡರ್ ಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ವಾರ ಒಬ್ಬ ಕೋವಿಡ್ ರೋಗಿ ಇಲ್ಲಿಗೆ ದಾಖಲಾಗಿದ್ದರು. ಕೋವಿಡ್ ಅಲ್ಲದ ಅವರ ಪತ್ನಿಯೇ ಅವರ ಸಹಾಯಕರಾಗಿ ಆಸ್ಪತ್ರೆಯಲ್ಲಿ ನಿಲ್ಲಬೇಕಾಯಿತು. ನಂತರ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು. ಇದೀಗ ಪತ್ನಿಯ ಕೋವಿಡ್-19 ಪರೀಕ್ಷೆ ಮಾಡಿಸಿದ್ದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ತೀರಿಹೋದ ತಮ್ಮ ಪತಿಯ ಪರಿಸ್ಥಿತಿ ಕೊನೆಯವರೆಗೂ ಚಿಂತಾಜನಕವಾಗಿತ್ತು ಎನ್ನುತ್ತಾರೆ ಮಹಿಳೆ. ನಿನ್ನೆ ಅಥಣಿಯ …
Read More »ಮೂಡಲಗಿ ತಾಲೂಕಿನಲ್ಲಿ ಮೊದಲ ಬಲಿ ಪಡೆದ ಕೊರೋನಾ
ಮೂಡಲಗಿ : ನಿನ್ನೆ ತಾನೇ ಮೂಡಲಗಿಗೆ ಪ್ರವೇಶಿಸಿದ ಕೊರೋನಾ ಇಂದು ಮೊದಲ ಬಲಿ ಪಡೆದು ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಹೌದು ನಿನ್ನೆ ತಾನೆ ಮೊದಲಿಗೆ ಪಟ್ಟಣದ ತಳವಾರ ಓಣಿಯಲ್ಲಿ 38 ವರ್ಷದ ಮಹಿಳೆಗೆ ಕೊರೋನಾ ದೃಢವಾಗಿತ್ತು. ಇಂದು ಆ ಮಹಿಳೆ ಮೃತಪಟ್ಟಿದ್ದು, ಮೂಡಲಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಡಿ ಜಿ ಮಹಾತ್, ಪೊಲೀಸ್ ಇಲಾಖೆಯ ಸಿಪಿಐ ವೆಂಕಟೇಶ್ ಮುರನಾಳ, ಪಿಎಸ್ಐ …
Read More »ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.
ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. ಲಕ್ಷ್ಮಿ ನಗರ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಗೆ ಸೋಂಕು ಅಂಟಿದ್ದು, ಆರೋಗ್ಯ ಇಲಾಖೆಯ ಈ ಬಗ್ಗೆ ಇಂದು ಸಂಜೆ ಅಧಿಕೃತ ಪ್ರಕಟಣೆ ನೀಡಬೇಕಿದೆ. ಸೋಂಕಿತೆ ವಾಸವಿದ್ದ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಅಧಿಕಾರಿಗಳು ಹಾಗೂ ಆರೋಗ್ಯ ಕಾರ್ಯಕರ್ತರು ಪರಿಶ್ರಮಪಟ್ಟು ಕೊರೊನಾ ಸೋಂಕು …
Read More »ಕರದಂಟು ನಾಡಿನಲ್ಲಿ ಕೊರೋನಾದ ಕಹಿ
ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ. ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ …
Read More »ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ
ಚಿಕ್ಕೋಡಿ: ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ ಬೆಳಗಾವಿಯ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸದಾಶಿವ ಹಿರಟ್ಟಿ (55) ಅನಾರೋಗ್ಯದಿಂದ ಗುರುವಾರ ರಾತ್ರಿ ಸಾವನ್ನಪ್ಪಿದ್ದರು. ಅನಾರೋಗ್ಯದಿಂದ ಬಳಲಿ ತೀರಿಹೋದ ಪತಿಯ ಅಂತ್ಯ ಸಂಸ್ಕಾರಕ್ಕೆ ಕೊರೊನಾ ಭಯದಿಂದ ಯಾರು ಬರದ ಕಾರಣ ಪತ್ನಿಯೇ ತಳ್ಳೋ ಗಾಡಿಯಲ್ಲಿ ಪರಿಚಯಸ್ಥರೊಬ್ಬರ ಸಹಾಯದಿಂದ ಶವ ಸಾಗಿಸಿದ್ದಾರೆ. ಅಥಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂದೆ ಚಪ್ಪಲಿ ಹೊಲಿದುಕೊಂಡಿದ್ದ ಸದಾಶಿವ ನಿನ್ನೆ ತಡರಾತ್ರಿ ಮನೆಗೆ …
Read More »ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ
ಖಾನಾಪುರ – : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …
Read More »ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.
ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್‍ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್‍ಡೌನ್ ಘೋಷಿಸಲಾಗಿತ್ತು. …
Read More »ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು.
ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು. ನಗರಸಭೆ ಕಂದಾಯ ಅಧಿಕಾರಿ ಎಸ್. ಕೆ. ಹಳ್ಳೂರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು ನಗರದ ಪ್ರತಿಯೊಂದು ವಾರ್ಡ್ ಗೆ ಸದಸ್ಯರೊಂದಿಗೆ ಭೇಟಿ ನೀಡಿ ಜನರಿಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಜತೆಗೆ ಕಡ್ಡಾಯವಾಗಿ …
Read More »