Breaking News

ಬೆಳಗಾವಿ

ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ

ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ ಬೆಳಗಾವಿ, ಏ.೨೩(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ತಾನ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಭೇಟಿ ಮಾಡಿದರು. ವಿವಿಧ ರಾಜ್ಯಗಳ ವಲಸೆ ಕಾರ್ಮಿಕರನ್ನು ಇರಿಸಲಾಗಿರುವ ಆಶ್ರಯ ಕೇಂದ್ರಕ್ಕೆ ಗುರುವಾರ …

Read More »

ಮನೆ ಮನೆಗೆ ತೆರಳಿ ಆರೋಗ್ಯ ಮಾಡುವ ಆಶಾ ಕಾರ್ಯಕರ್ತರಿಗೆ ಕೊರೋನಾ ಸೈನಿಕರ ಸಾಥ್

ಗೋಕಾಕ :ಮಹಾಮಾರಿ ಕೊರೋನಾ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಗುರವಾರದಂದು ನಗರದ ಎಲ್ಲಾ ವಾರ್ಡ್ಗಳಲ್ಲಿಯೂ  ಸೈನಿಕರು ಸಾಥ್ ನೀಡಿದರು.

Read More »

ಸಂಬಂಧಗಳ ಕೊಂಡಿ ಕಳಚಿದ ಕೊರೋನಾ : ಮಗಳ ಆಗಮನಕ್ಕೆ ಕಾದು ಕುಳಿತ ಮಲ್ಲಪ್ಪ

ಗೋಕಾಕ :ಭಾರತೀಯರಲ್ಲಿ ಸಂಬಂಧಗಳ ಕೊಂಡಿ ಅತ್ಯಂತ ಬಲಿಷ್ಠವಾಗಿತ್ತು. ಆದರೆ ಕೊರೋನಾ ವೈರಸ್ ದೇಶದ ಜನಜೀವನದ ಪ್ರಮುಖವಾಗಿದ್ದ ಸಂಬಂಧವನ್ನೇ ಅಸ್ತವ್ಯಸ್ತಗೊಳಿಸಿದೆ. ಅಷ್ಟೇಅಲ್ಲ, ಸಂಬಂಧಗಳ ಬಣ್ಣವನ್ನೂ ಬಯಲು ಮಾಡಿದೆ. ಹೇಗೆ ಅಂತ ನೀವು ಪ್ರಶ್ನಿಸುವಿರಾ ಹಾಗಾದರೆ ಇಲ್ಲಿನೋಡಿ ಎರಡು ಮಕ್ಕಳ ಇದ್ದರೂ ಓರ್ವನ ಬಾಳು ಹೇಗೆ ಬೀದಿಗೆ ಬಂದಿದೆ ಎಂದು ತಿಳಿಯಿರಿ. ಮಲ್ಲಪ್ಪ ಅಕ್ಕಿವಾಟ ಎಂಬವನು ಪಕ್ಕದ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದವನು. ಸದ್ಯ ಗೋಕಾಕದ ಬಸವೇಶ್ವರ ವೃತ್ತದಲ್ಲಿನ ಅಂಗಡಿಯೊಂದರ ಮುಂಭಾಗದಲ್ಲಿ ಒಲೆ …

Read More »

ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ಸತೀಶ್ ಜಾರಕಿಹೊಳಿ ಅಭಿಮಾನಿಗಳುದ

ಗೋಕಾಕ: ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ರವರ ಪ್ರೋತ್ಸಾಹದಿಂದ  ಪ್ರತಿವರ್ಷದಂತೆ ಈ ವರ್ಷವು ಕೂಡ ಕರ್ನಾಟಕ ವಿಶ್ವನಿರ್ಮಾಣ ಸೇನೆ ಪದಾಧಿಕಾರಿಗಳು ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಪಕ್ಷಿ ಪ್ರೇಮಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾರಕ ಕೊರೊನಾ ಆರ್ಭಟಕ್ಕೆ ದೇಶದ ಜನರು ಕಂಗಾಲಾಗಿದ್ದಾರೆ. ಜತೆಗೆ ಲಾಕ್ ಡೌನ್ ದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ಪದಾಧಿಕಾರಿಗಳು ಸಹಾಯ ಹಸ್ತ …

Read More »

ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನ

ಬೆಳಗಾವಿ –  – ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಈ ವಿಷಯ ತಿಳಿಸಿದ್ದಾರೆ. ಮಹಾರಾಷ್ಟ್ರ ಸಿಪಿಐ ಶಾಸಕನಿಂದ ಈ ದುಷ್ಕೃತ್ಯ ನಡೆದಿದ್ದು, ಆತನನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿರುವ ಅವರು, ಶ್ರೀರಾಮ ಸೇನೆಯ ಕಾರ್ಯಕರ್ತರು ರಾಜ್ಯದ್ಯಂತ ಮನೆಯಲ್ಲೇಯ ಸಾಧು ಸಂತರ ಫೋಟೋ ಇಟ್ಟು ಪ್ರತಿಭಟನೆ ನಡೆಸಿ, ಪ್ರಧಾನಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ …

Read More »

ಸಂಪರ್ಕಿತರ ಮೇಲೆ ನಿಗಾ ಇಡಲು ತಂತ್ರಜ್ಞಾನ ಬಳಸಿಕೊಳ್ಳಲು ಕರೆ:ಜಗದೀಶ್ ಶೆಟ್ಟರ್

ಬೆಳಗಾವಿ : ಕೋವಿಡ್-೧೯ ಪತ್ತೆ ಮತ್ತು ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗಾಗಿ ಸ್ಥಾಪಿಸಲಾಗಿರುವ ಕೋವಿಡ್-೧೯ ವಾರ್ ರೂಮ್ ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಕೋವಿಡ್-೧೯ ವಾರ್ ರೂಮ್ ಆರಂಭಿಸಲಾಗಿರುತ್ತದೆ. ವಾರ್ ರೂಮ್ ಕಾರ್ಯಸ್ವರೂಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ …

Read More »

ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಬಸ್…..

ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ (ಏ.೨೩) ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ ಗಳನ್ನು ಅವರು ಹಸ್ತಾಂತರಿಸಿದರು. ಕೋವಿಡ್-೧೯ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ ಗಳನ್ನು ಬಳಸಲಾಗುವುದು ಎಂದು …

Read More »

ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಚಾಲನೆ

ಬೆಳಗಾವಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು.   ಇಲ್ಲಿನ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿರುತ್ತದೆ. ಸದ್ಯಕ್ಕೆ …

Read More »

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರು – ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ. ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ …

Read More »

ಇಂದು ಉದ್ಘಾಟನೆಯಾಗಲಿದೆ ವಾರ್ ರೂಂ

Enಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಲ್ಲಿ ಆರಂಭಿಸಲಾಗಿರುವ ಕೋವಿಡ್ -19 (ಕೊರೋನಾ) ವಾರ್ ರೂಂ ಇಂದು ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಧ್ಯಾಹ್ನ 12.30ಕ್ಕೆ ವಾರ್ ರೂಂ ಉದ್ಘಾಟಿಸುವರು. ಕೊರೋನಾಕ್ಕೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳು, ವಿವರಗಳು ಈ ವಾರ್ ರೂಂ ನಲ್ಲಿ ಲಭ್ಯವಾಗಲಿದೆ. ಇಡೀ ನಗರದ ಪರಿಸ್ಥಿತಿಯ ಮೇಲೆ ಇಲ್ಲಿಂದ ನಿಗಾ ಇಡಲಾಗುತ್ತದೆ. ಇದಕ್ಕಾಗಿ …

Read More »