ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ. ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ …
Read More »ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ
ಚಿಕ್ಕೋಡಿ: ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ ಬೆಳಗಾವಿಯ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸದಾಶಿವ ಹಿರಟ್ಟಿ (55) ಅನಾರೋಗ್ಯದಿಂದ ಗುರುವಾರ ರಾತ್ರಿ ಸಾವನ್ನಪ್ಪಿದ್ದರು. ಅನಾರೋಗ್ಯದಿಂದ ಬಳಲಿ ತೀರಿಹೋದ ಪತಿಯ ಅಂತ್ಯ ಸಂಸ್ಕಾರಕ್ಕೆ ಕೊರೊನಾ ಭಯದಿಂದ ಯಾರು ಬರದ ಕಾರಣ ಪತ್ನಿಯೇ ತಳ್ಳೋ ಗಾಡಿಯಲ್ಲಿ ಪರಿಚಯಸ್ಥರೊಬ್ಬರ ಸಹಾಯದಿಂದ ಶವ ಸಾಗಿಸಿದ್ದಾರೆ. ಅಥಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂದೆ ಚಪ್ಪಲಿ ಹೊಲಿದುಕೊಂಡಿದ್ದ ಸದಾಶಿವ ನಿನ್ನೆ ತಡರಾತ್ರಿ ಮನೆಗೆ …
Read More »ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ
ಖಾನಾಪುರ – : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …
Read More »ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.
ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್‍ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್‍ಡೌನ್ ಘೋಷಿಸಲಾಗಿತ್ತು. …
Read More »ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು.
ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು. ನಗರಸಭೆ ಕಂದಾಯ ಅಧಿಕಾರಿ ಎಸ್. ಕೆ. ಹಳ್ಳೂರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು ನಗರದ ಪ್ರತಿಯೊಂದು ವಾರ್ಡ್ ಗೆ ಸದಸ್ಯರೊಂದಿಗೆ ಭೇಟಿ ನೀಡಿ ಜನರಿಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಜತೆಗೆ ಕಡ್ಡಾಯವಾಗಿ …
Read More »ನಮಾಜ್‍ಗೆ ಅವಕಾಶ ಕೇಳಿದ ಮುಸ್ಲಿಂ ಮುಖಂಡರ ವಿರುದ್ಧ ಉಮೇಶ್ ಕತ್ತಿ ಗರಂ………..
ಚಿಕ್ಕೋಡಿ(ಬೆಳಗಾವಿ): ನಮಾಜ್ ಮಾಡಲು ಅವಕಾಶ ಕೇಳಿದ ಮುಸ್ಲಿಂ ಮುಖಂಡರ ಮೇಲೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಗರಂ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಅಭಿಪ್ರಾಯ ಸಂಗ್ರಹಿಸಿ ಒಂದು ವಾರ ಹುಕ್ಕೇರಿ ತಾಲೂಕು ಲಾಕ್‍ಡೌನ್ ಮಾಡಲು ತೀರ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ …
Read More »ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿ……….
ಬೆಳಗಾವಿ: ಮಹಾಮಾರಿ ಕೊರೊನಾನಿಂದಾಗಿ ಬೆಡ್, ಅಂಬುಲೆನ್ಸ್, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಅನೇಕರು ಸಾವನ್ನಪ್ಪುತ್ತಿರುವ ಅಮಾನವೀಯ ಘಟನೆ ಪ್ರತಿದಿನ ಬೆಳಕಿಗೆ ಬರುತ್ತಿವೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿಯಾಗಿದ್ದಾರೆ. ಕೋವಿಡ್ ಕೇರ್ ಸೆಂಟರಿನಲ್ಲಿ ಕೊರೊನಾ ಸೋಂಕಿತ ವೃದ್ಧ ಬೆತ್ತಲೆಯಾಗಿ ನೆಲದ ಮೇಲೆ ಒದ್ದಾಡಿ ಸಾವನ್ನಪ್ಪಿದ್ದಾರೆ. ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ 65 ವರ್ಷದ ಸೋಂಕಿತ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ವೃದ್ಧ …
Read More »ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನುಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ.
ಬೆಳಗಾವಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ಮಚ್ಚೆ ಮಾರುತಿ ಗಲ್ಲಿ ನಿವಾಸಿ ಅಕ್ಷಯ ಶಂಕರ ಚೌಗಲೆ, ಬಸವನಕುಡಚಿ ನಿವಾಸಿಗಳಾದ ಮಹೇಶ ಭಾವುಕನ್ನಾ ಅನಗೋಳಕರ, ಆಕಾಶ ಭಾವುಕನ್ನಾ ಅನಗೋಳಕರ ಬಂಧಿತರು. ವಾಘವಾಡೆ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಠಾಣೆಗೆ ಕರೆದಂತು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 6,50,000 ಮೌಲ್ಯದ 18 ದ್ವಿಚಕ್ರ …
Read More »ಬೆಳಗಾವಿಯಲ್ಲೂ ಲಾಕ್ ಡೌನ್ :ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹ…..
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತಲಿದ್ದು, ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡುವಂತೆ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹಿಸಿದೆ. ಈ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹೀರೇಮಠ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಮನವಿ ಸಲ್ಲಿಸಿದೆ. ಬೆಳಗಾವಿ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬೆಳಗಾವಿಯಲ್ಲಿಯೂ ಲಾಕ್ ಡೌನ್ …
Read More »ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 9 2ಜನರಿಗೆ ಕೊರೋನಾ ಸೋಂಕು
ಬೆಳಗಾವಿ – ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡುವ ಮುನ್ನವೇ ಬೆಳಗಾವಿ ಜಿಲ್ಲೆಯ ಕೊರೋನಾ ಸೋಂಕಿತರ ವಿವರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ಪ್ರಕಾರ ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 92ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನು ಹೊಸಕಿ ಹಾಕಿದ್ದು, ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಟ್ಟಿಯಲ್ಲಿ ಸೋಂಕಿತರ ಹೆಸರು, ವಿಳಾಸ, ಸಂಪರ್ಕ ಸಂಖೆಯ ಎಲ್ಲವೂ ನಮೂದಾಗಿದ್ದು, ಎಲ್ಲ ನಿಯಮಗಳನ್ನು ಮೀರಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದೆ. …
Read More »
Laxmi News 24×7