Breaking News

ಬೆಳಗಾವಿ

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ

ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್​ ಜೊಲ್ಲೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ …

Read More »

ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಡಿಸಿಎಂ ಕಾರಜೋಳ

ಚಿಕ್ಕೋಡಿ: ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶನಿವಾರ ಲಾಕ್‍ಡೌನ್ ಮಾಡುವ ವಿಚಾರ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ಹಾಗೂ ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸುರಕ್ಷತೆಗಾಗಿ ಶನಿವಾರ ಹಾಗೂ ಭಾನುವಾರ ಲಾಕ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ ಕೊರೊನಾ ಪ್ರಕರಣ ಬಂದ ಕಾರಣ …

Read More »

KSRTC ಸಿಬ್ಬಂದಿಗೆ ವೇತನವನ್ನು ನೀಡುತ್ತೇವೆ: ಸಾರಿಗೆ ಸಚಿವ ಸವದಿ

ಚಿಕ್ಕೋಡಿ: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.ಪ್ರತಿ ತಿಂಗಳು …

Read More »

ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,

ಬೆಳಗಾವಿ-ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಜಿಲ್ಲೆಯ ಜನತೆಗೆ ಕಾಡುತ್ತಿರುವ ಕೊರೋನಾ ಮಹಾಮಾರಿಯ ಕಾಟ ಈಗ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,OPD ಯಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ 23 ವರ್ಷದ ಡಾಕ್ಟರ್ ಗೂ ಸೊಂಕು ತಗಲಿರುವ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಯ OPD ವಿಭಾಗವನ್ನೇ ಸೀಲ್ ಡೌನ್ ಮಾಡಲಾಗಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು …

Read More »

ಬಸವ ಭೀಮ ಸೇನೆಯಿಂದ ಶನಿವಾರ ಗೌರವ…………

ಬೆಳಗಾವಿ: ಛಲವಾದಿ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ದುರ್ಗೇಶ್ ಮೇತ್ರಿ ಅವರ ಮಾತೋಶ್ರೀ ದಶಕಗಳ ಕಾಲ ಕಾರ್ಮಿಕರ ಸಮಸ್ಯೆಗಳ ವಿರುದ್ಧ ಹೋರಾಡಿದ ಅವ್ವಕ್ಕ ಮೇತ್ರಿ ಅವರಿಗೆ ಬಸವ ಭೀಮ ಸೇನೆಯಿಂದ ಶನಿವಾರ ಗೌರವಿಸಿದರು.  ಬಸವ ಭೀಮ ಸೇನೆಯಿಂದ ಜುಲೈ 26ರವರೆಗೆ ಬಸವ ಪಂಚಮಿ ಅಂಗವಾಗಿ   ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನ ಹಮ್ಮಿಕೊಂಡಿದ್ದೆವೆ.  ಶೋಷಿತ ಸಮುದಾಯಗಳಿಗೆ ಬಸವಣ್ಣನವರೇ ಸತ್ವ. ಅಂಬೇಡ್ಕರರೇ ಶಕ್ತಿ. ಸತ್ವ ಮತ್ತು ಶಕ್ತಿಗಳನ್ನು …

Read More »

ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆ

ಬೆಳಗಾವಿ: ಬಡವರ ಜೀವ ಹಿಂಡುತ್ತಿರುವ ಮೌಢ್ಯಗಳ ವಿರುದ್ಧದ ಹೋರಾಟದಲ್ಲಿ ಸದಾ ಮಂಚೂಣಿಯಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದ್ದಾರೆ. ಬುದ್ಧ, ಬಸವ ಅಂಬೇಡ್ಕರ್ ಅವರ ಸಿದ್ದಾಂತಗಳ ಮೇಲೆ ನಡೆಯುತ್ತಿರುವ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಸತೀಶ ಜಾರಕಿಹೊಳಿ ತಮ್ಮ ಸ್ವಂತ ಬಳಕೆಗಾಗಿ ನೂತನವಾಗಿ ಖರೀದಿಸಿರುವ ವಾಹನದ ಉದ್ಘಾಟನಾ ಮತ್ತು ಚಾಲನಾ ಸಮಾರಂಭವನ್ನು ಸ್ಮಶಾನದಲ್ಲಿ ನಡೆಸುವ ಮೂಲಕ ಮತ್ತೊಮ್ಮೆ ಮನೆ ಮಾತಾಗಿದ್ದಾರೆ. ಭಾರತದ …

Read More »

ಬೆಳಗಾವಿ ಜಿಲ್ಲೆಯ ಕಡೆಯಿಂದಲೂ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.

ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು. ‌

Read More »

ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ: ಈರಣ್ಣಾ ಕಡಾಡಿ

ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.  ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …

Read More »

ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ.

ಚಿಕ್ಕೋಡಿ : ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆ ಕಠಿಣ ಕಾನೂನು ರೂಪಿಸುವ ಮುಖಾಂತರ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ತಾಲೂಕಾ ಘಟಕದಿಂದ ಶುಕ್ರವಾರ ತಹಸೀಲ್ದಾರ ಎಸ್.ಎಸ್.ಸಂಪಗಾಂವಿ ಅವರಿಗೆ ಮನವಿ ಸಲ್ಲಿಸಿದರು. ಸರ್ವೇ ಕಾರ್ಯದಲ್ಲಿ ನಿರತರಾಗಿದ್ದಾಗ ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ. ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ …

Read More »