ಬೆಳಗಾವಿ : ಈ ಬಾರಿ ರಾಜ್ಯದಲ್ಲಿಕಂಡು ಕೇಳರಿಯದ ಬರಗಾಲದಿಂದ ಅಕ್ಷರಶಃ ರೈತರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಮುಂಗಾರು ಬೆಳೆ ಹಾನಿ ಅನುಭವಿಸಿದ್ದ ರೈತರು, ಇದೀಗ ಹಿಂಗಾರು ಬೆಳೆಗಳ ಹಾನಿ ಭೀತಿ ಎದುರಿಸುತ್ತಿದ್ದಾರೆ. ಅಲ್ಲದೇ ಜಾನುವಾರುಗಳ ಮೇವಿಗೂ ತಾತ್ವಾರ ಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತವು, ಡಿಸೆಂಬರ್ 4ರಿಂದ ಚಳಿಗಾಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಸ್ವಚ್ಛತೆ ಹೆಸರಿನಲ್ಲಿ ಸುವರ್ಣ ವಿಧಾನಸೌಧ ಸುತ್ತಲೂ 10 ಏಕರೆಗೂ ಹೆಚ್ಚು ಪ್ರದೇಶದಲ್ಲಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ತೋಕರಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ಕ್ಯಾಪ್ಸಿಕಂ ಬೆಳೆ ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ. ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ.
ಚಿಕ್ಕೋಡಿ : ಭೀಕರ ಬರಗಾಲದ ನಡುವೆ ಬೆಳೆಗಳಿಗೆ ಟ್ಯಾಂಕರ್ ಮುಖಾಂತರ ನೀರು ಹಾಯಿಸಿ ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸಿ ಇತರ ರೈತರಿಗೆ ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಮಾಣಿಕ ಅವಳೆಕರ ಎಂಬ ರೈತ ನೀರಿನ ಅಭಾವದ ನಡುವೆ ಕುಗ್ಗದೇ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಸಿ, ಐದು ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಬಳಸಿ, ಕ್ಯಾಪ್ಸಿಕಂ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ್ದಾರೆ. ಈ …
Read More »ಇಂದು ಕಿತ್ತೂರು ರಾಣಿ ಚೆನ್ನಮ್ಮನ ಜನ್ಮದಿನ; ಸರ್ಕಾರದಿಂದ ಜಯಂತಿ ಆಚರಿಸಲು ಆಗ್ರಹ
ಬೆಳಗಾವಿ : ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ ರುಚಿ ತೋರಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತಿ ಆಚರಣೆಗೆ ಸರ್ಕಾರಗಳು ನಿರ್ಲಕ್ಷ್ಯ ವಹಿಸಿರುವುದು ಮತ್ತು ಚೆನ್ನಮ್ಮನ ಜನ್ಮದಿನಾಂಕ ಗೊಂದಲಕ್ಕೆ ಇತಿಶ್ರೀ ಹಾಡದಿರುವುದು ಈ ಭಾಗದ ಸಾಹಿತಿಗಳು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. 1778 ನವೆಂಬರ್ 14 ಕನ್ನಡ ನಾಡಿನಲ್ಲಿ ಕೆಚ್ಚೆದೆಯ ಕಿತ್ತೂರು ರಾಣಿ ಚೆನ್ನಮ್ಮ ಜನಿಸಿದ ದಿನ. ಚೆನ್ನಮ್ಮನ ಜನ್ಮ ದಿನಾಂಕದ …
Read More »ಯುವಕನ ಬರ್ಬರ ಕೊಲೆ ಪ್ರಕರಣ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ: ಭಾನುವಾರ ರಾತ್ರಿ ಗೋಕಾಕ್ ಪಟ್ಟಣದಲ್ಲಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಜನ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಕಾಕ್ ಪಟ್ಟಣದ ಆದಿಜಾಂಬವ ನಗರದ ಶಾನೂರ (ಸಂತೋಷ) ಪೂಜೇರಿ 26 ವರ್ಷ ಕೊಲೆಯಾದ ಯುವಕ. ಮೃತ ಶಾನೂರ ಸ್ಥಳೀಯ ಪೆಟ್ರೋಲ್ ಪಂಪ್ನಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ಪೆಟ್ರೋಲ್ ಪಂಪ್ನಲ್ಲಿ ಪೂಜೆ ಮುಗಿಸಿಕೊಂಡು ಮರಳಿ ಮನೆಗೆ ಹೋಗುವ …
Read More »ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ
ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್ ಮಾಲೀಕರಾದ, ರಾಮತೀರ್ಥನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯಿರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ …
Read More »ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅನಾರೋಗ್ಯದಿಂದ ಲಿಂಗೈಕ್ಯ
ಬೆಳಗಾವಿ: ಗಡಿ ಭಾಗದಲ್ಲಿ ಕನ್ನಡದ ಮಠ ಎಂದೇ ಪ್ರಖ್ಯಾತಿ ಪಡೆದಿರುವ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳಿಂದ ಗಡಿಯಲ್ಲಿ ಕನ್ನಡ ಕಟ್ಟುವ ಕೈಂಕರ್ಯ ತೊಟ್ಟಿದ್ದ ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಕನ್ನಡಪರ ಕಾರ್ಯಕ್ರಮಗಳ ಮೂಲಕ ನಾಡಿನ ಮನೆ ಮಾತಾಗಿದ್ದರು. ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ಹಲವು ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ …
Read More »ಕುಂದಾನಗರಿಯಲ್ಲಿ ಬೆಳಕಿನ ಹಬ್ಬದ ಸಂಭ್ರಮ ಹಸಿರು ಪಟಾಕಿ ಬಳಸುವಂತೆ ಡಿಸಿ ಮನವಿ
ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯನ್ನು ರಾಜ್ಯಾಧ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ದೀಪಾವಳಿ ವಿಶೇಷ ಎಂದರೆ ದೀಪ ಬೆಳಗಿಸುವುದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಪಡುವ ಹಬ್ಬ. ಆದರೆ ಈ ಸಡಗರ ಮಧ್ಯೆ ಪಟಾಕಿ ಸಿಡಿಸಲು ಹೋಗಿ ಅದೆಷ್ಟೋ ಅವಘಡಗಳು ಸಂಭವಿಸಿ ಯುವಕರು, ಮಕ್ಕಳು ಕಣ್ಣು ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಪ್ರತಿವರ್ಷವೂ ನಡೆಯುತ್ತಲೇ ಇವೆ. ಜತೆಗೆ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಮನಗಂಡ ಬೆಳಗಾವಿ ಜಿಲ್ಲಾಡಳಿತ ಪರಿಸರಕ್ಕೆ ಮಾರಕವಾಗಿರುವ ಪಟಾಕಿಗಳನ್ನು ಬ್ಯಾನ್ ಮಾಡಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಬುದ್ನಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ಚಿಕ್ಕೋಡಿ ತಾಲೂಕಿನಲ್ಲಿ ಸರಣಿ ಎಟಿಎಂ ಕಳ್ಳತನದಿಂದ ಸಾರ್ವಜನಿಕರ ಆತಂಕ
ಚಿಕ್ಕೋಡಿ (ಬೆಳಗಾವಿ) : ತಡರಾತ್ರಿ ಚಿಕ್ಕೋಡಿ ತಾಲೂಕಿನ ಪ್ರತ್ಯೇಕ ಕಡೆ ಎರಡು ಎಟಿಎಂಗಳಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಎಸ್‌ಬಿಐ ಎಟಿಎಂ ಬುಧವಾರ ತಡರಾತ್ರಿ ಕಳ್ಳರು ಗ್ಯಾಸ್ ಕಟರ್ ಬಳಸಿಕೊಂಡು ಸರಿಸುಮಾರು 10 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದಾರೆ. ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಎಟಿಎಂನಲ್ಲಿ ನಿಖರವಾಗಿ ಎಷ್ಟು ಹಣ …
Read More »