Breaking News
Home / ಜಿಲ್ಲೆ / ಬೆಳಗಾವಿ (page 52)

ಬೆಳಗಾವಿ

ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಡಾ.ಅಂಜಲಿ ನಿಂಬಾಳಕರ್

ಖಾನಾಪುರ: ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳಕರ ಗುರುವಾರ ಪಟ್ಟಣದ ಚೌರಾಶಿದೇವಿ ಮತ್ತು ತಾಲೂಕಿನ ಕಕ್ಕೇರಿ ಗ್ರಾಮದ ಬಿಷ್ಠಾದೇವಿ ದೇವಾಲಯಗಳಲ್ಲಿ ಉಭಯ ಶಕ್ತಿದೇವಿಯರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂಬರುವ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಕಕ್ಕೇರಿ ಗ್ರಾಮದ ಬಿಷ್ಠಾದೇವಿ ಆಲಯದ ಮುಂಭಾಗದಲ್ಲಿ ತಮ್ಮ ಬೆಂಬಲಿಗರು ಮತ್ತು ಕಾಂಗ್ರೆಸ್ ಮುಖಂಡರೊಂದಿಗೆ ಪಕ್ಷದ ಪ್ರಚಾರ ವಾಹನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, “ತಾಲೂಕಿನ ವಿವಿಧ ಭಾಗಗಳಲ್ಲಿ ಕಳೆದ 5 ವರ್ಷಗಳಿಂದ ಹಲವು …

Read More »

ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ರಂಗಭೂಮಿಯ ಪಾತ್ರ ಬಹು ಮುಖ್ಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹೆಚ್ಚು ಜನ ಅನಕ್ಷರಸ್ಥರಿದ್ದರು. ಜನರಲ್ಲಿ ದೇಶಾಭಿಮಾನ ಮೂಡಿಸುವುದು, ದೇಶದ ಸ್ವಾತಂತ್ರ್ಯದ ಅವಶ್ಯಕತೆ ಕುರಿತು ತಿಳಿಸಿಕೊಡುವುದು ಅಷ್ಟೇ ಅಲ್ಲದೆ, ಎಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವುದು ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಕೆಲಸವನ್ನು ಮಾಡುವಲ್ಲಿ ನಾಟಕ ಪ್ರಮುಖ ಪಾತ್ರ ವಹಿಸಿತು ಎಂದು ಬೆಳಗಾವಿಯ ಭಾರತೀಯ ಜೀವ ವಿಮಾ ನಿಗಮದ ಹಿರಿಯ ವಿಭಾಗಾಧಿಕಾರಿ ಅಜಿತ ವಾರಕರಿ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ …

Read More »

ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಗೋಕಾಕ : ಕೆಎಂಎಫ್ ರೈತರ ಬೃಹತ್ ಸಂಸ್ಥೆಯಾಗಿದ್ದು ರೈತರ ಶ್ರೇಯೋಭಿವೃದ್ಧಿಗೆ ಮತ್ತು ಅವರ ಆರ್ಥಿಕ ಬಲವರ್ಧನೆಗಾಗಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ಇಲ್ಲಿನ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಒಟ್ಟು ೮.೬೦ ಲಕ್ಷ ರೂ.ಗಳ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ರೈತರು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಹಾಲು ಉತ್ಪಾದಕರ ಸಂಘಗಳು …

Read More »

ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …

Read More »

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶ

ಬೆಳಗಾವಿ : ಚುನಾವಣಾ ಆಯೋಗವು ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶವಿದ್ದು, ಏಪ್ರಿಲ್ 10 ರವರೆಗೂ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಮತದಾರರ ಹೆಸರನ್ನು ಮತದಾರರ …

Read More »

ಬಿಜೆಪಿ ಸರ್ಕಾರ ಕಿತ್ತೆಸೆಯಿರಿ, ಬ್ರಾಂಡ್ ಕರ್ನಾಟಕ ನಿರ್ಮಿಸೋಣ: ಸುರ್ಜೆವಾಲ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ‘ಶಾಂತಿ ಮತ್ತು ಸಮೃದ್ಧಿಯ ಹೊಸ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ’ ಎಂದು ಕರೆ ನೀಡಿದ್ದಾರೆ.   …

Read More »

ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನಮಾಡಲು ಅವಕಾಶ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ …

Read More »

ಹಾರೂಗೇರಿ ಕ್ರಾಸ್ ನಲ್ಲಿ ಅಪಾರ ಪ್ರಮಾಣದ ನಗದು, ಹೊಲಿಗೆ ಮಷಿನ್, ಕೂಲರ್ ವಶ

ಬೆಳಗಾವಿ: ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಕೆಲ ಅಭ್ಯರ್ಥಿಗಳು ಅಕ್ರಮದ ಹಾದಿ ಹಿಡಿದಿದ್ದರೆ ಇತ್ತ ಜಿಲ್ಲೆಯ ಪೊಲೀಸ್ ವ್ಯವಸ್ಥೆ ಕೂಡ ಚುರುಕಾಗಿದ್ದು ಇದಕ್ಕೆ ಬ್ರೇಕ್ ಹಾಕುವ ಕಾರ್ಯದಲ್ಲಿ ತೊಡಗಿದೆ.                     ಜಿಲ್ಲೆಯಲ್ಲಿ ಬುಧವಾರ ಲಕ್ಷಾಂತರ ರೂ. ಅಕ್ರಮ ಹಣವನ್ನು ಚೆಕ್ ಪೋಸ್ಟ್ ಕರ್ತವ್ಯದಲ್ಲಿರುವ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾರೂಗೇರಿ ಕ್ರಾಸ್ ನಲ್ಲಿರುವ ಚೆಕ್ ಪೋಸ್ಟ್ …

Read More »

ಚುನಾವಣೆಗೆ ಸ್ಪರ್ಧಿಸಲೇಬೇಕೆಂದು ಲಕ್ಷ್ಮಣ ಸವದಿ ನಿರ್ಧರಿಸಿದರೆ ಜಿಲ್ಲೆಯಷ್ಟೇ ಅಲ್ಲ, ರಾಜ್ಯ ರಾಜಕಾರಣದಲ್ಲೂ ಬಿಜೆಪಿಯಲ್ಲಿ ದೊಡ್ಡ ಗೊಂದಲ ಸೃಷ್ಟಿ

ಬೆಳಗಾವಿ : ಬಿಜೆಪಿಯ ಟಿಕೆಟ್ ಘೋಷಣೆ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ನನ್ನ ನಿರ್ಧಾರ ತೆಗೆದುಕೊಳ್ಳುವ ದಿನವನ್ನು ಮುಂದೂಡಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮಾರ್ಚ್ 27ರೊಳಗೆ ಎಲ್ಲ ಸಮುದಾಯದ ನಾಯಕರ ಜೊತೆ ಚರ್ಚಿಸಿ, 27ರಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಲಕ್ಷ್ಮಣ ಸವದಿ ಈ ಮೊದಲು ತಿಳಿಸಿದ್ದರು. ಆದರೆ ಬಿಜೆಪಿಯ ಟಿಕೆಟ್ ಘೋಷಣೆ ಸಮಯ ಮುಂದಕ್ಕೆ ಹೋಗಿದೆ. ಹಾಗಾಗಿ ನಾನು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು …

Read More »

ಗೋಕಾಕ ನಗರದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ C.M. ಬೊಮ್ಮಾಯಿ:

ಬೆಳಗಾವಿ :  ಗೋಕಾಕ ನಗರ ಹಾಗೂ ಲೋಳಸೂರ ಗ್ರಾಮವನ್ನು ಪ್ರವಾಹದಿಂದ ತಡೆಗಟ್ಟುವ ಸಲುವಾಗಿ ಘಟಪ್ರಭ ನದಿಗೆ ತಡೆಗೋಡೆ ನಿರ್ಮಿಸುವ ಯೋಜನೆ ಹಾಗೂ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಿಸುವುದು, ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ಗೋಕಾಕ, ಅಥಣಿ, ಅರಭಾವಿ ಕ್ಷೇತ್ರದ ವಿವಿಧ ಕಾಮಗಾರಿಗಳ ಶಿಲಾನ್ಯಾಸಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಗೋಕಾಕ ನಗರದ ಚಿಕ್ಕೊಳ್ಳಿ ಸೇತುವೆ ಬಳಿ ಮಂಗಳವಾರ (ಮಾ.28) ವಿವಿಧ ಕಾಮಗಾರಿಗಳ ಪೂಮಿ ಪೂಜೆ ಹಾಗೂ ಶಿಲಾನ್ಯಾಸಗಳನ್ನು ಅವರು …

Read More »