Breaking News

ಬೆಳಗಾವಿ

“ರಾಜ್ಯದಲ್ಲಿ ಮದ್ಯ ಸಂಪೂರ್ಣನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ:ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಬೇಕು. ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. …

Read More »

18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ

ಬೆಳಗಾವಿ: ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಒಟ್ಟು 18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊರೊನಾ ಮೊದಲು ಮೂರು ಬಳಿಕ ನಾಲ್ಕು ಒಟ್ಟು ಏಳು ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಗಂಟಲು ದ್ರವ ಸಂಗ್ರಹಿಸಲಾಗಿದೆ. ಜತೆಗೆ ಇಂದು ಸಹ ಕೆಲವರ ಗಂಟಲು ದ್ರವ ಸಂಗ್ರಹ …

Read More »

ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ :ಬಿ.ಸಿ.‌ಪಾಟೀಲ್‌

ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ರೈತರ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಸಚಿವ ಬಿ.ಸಿ.‌ಪಾಟೀಲ್‌ ಹೇಳಿದ್ರು. ನಗರದ ಪ್ರವಾಸಿ‌ ಮಂದಿರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯದ ಕೊಂಡಿಯಾಗಿರುವ ಗಡಿ‌ ಜಿಲ್ಲೆಯಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು.‌ ರೈತರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಸಮಸ್ಯೆ ಬಂದರು …

Read More »

ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೇಶನೂರು ಗ್ರಾಮದಲ್ಲಿನ ಯುವಕ ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ. ಇಲ್ಲಿನ ಮೀರಸಾಬ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಕದಡುವಂತಹ ವಿಡಿಯೋವಂದನ್ನು ಮಾಡುವ ಮೂಲಕ ಹರಿಬಿಟ್ಟಿದ್ದನು. ಆದ ಕಾರಣ ಗ್ರಾಮಸ್ಥರು, ಮುಖಂಡರು, ತಾಲ್ಲೂಕ ಪಂಚಾಯಿತಿ ಕಚೇರಿಯಲ್ಲಿ ಕೂಡಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕ ಪಾಟೀಲ್, ಗ್ರಾಮದ ಮುಖಂಡರು ಯುವಕನನ್ನು ಕರೆದೊಯ್ದು ಥಳಿಸಿದ್ದಾರೆ. …

Read More »

ಪ್ರಧಾನಿ ಮೋದಿ ಅವರೇ ತಮ್ಮ ಮಾತುಗಳನ್ನು ಪಾಲನೆ ಮಾಡುತ್ತಿಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುವ ಪ್ರಧಾನಿ ಮೋದಿ ಅವರೇ ತಮ್ಮ ಮಾತುಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪ ಹಚ್ಚುವುದರಿಂದ‌ ಕೊರೊನಾ ಸೋಂಕು ಹೋಗುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತಾರೆ. ಜನರನ್ನು ಒಂದೆಡೆ ಸೇರಿಸುವಂತಹ ಟಾಸ್ಕ್ ಗಳನ್ನು‌ ನೀಡುತ್ತಾರೆ.‌ ಮುಂದೆ ಯಾವ ಟಾಸ್ಕ್ ನೀಡುತ್ತಾರೆ ಗೊತ್ತಿಲ್ಲ ಎಂದು ಟೀಕಿಸಿದರು. ಕೊರೊನಾ ಸೋಂಕು …

Read More »

ರಾಯಬಾಗ:ಒಂದೇ ಪಟ್ಟಣದಲ್ಲಿ 4 ಜನರಿಗೆ ಕೊರೊನಾ ಪಾಸಿಟಿವ್ – ಹೈ ಅಲರ್ಟ್

ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕುಡಚಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಣೆಯಾಗಿದ್ದು, ಕುಡಚಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್‍ಡೌನ್ ಆದಗಿನಿಂದ ಜನರು ಹೊರ ಬರದೆ ಮನೆಯಲ್ಲಿಯೇ ಇದ್ದಾರೆ. ಆದರೂ ಕುಡಚಿ ಪಟ್ಟಣದ ಮೂವರು ಮಹಿಳೆಯರಿಗೆ ಹಾಗೂ ಓರ್ವ ಪುರುಷನಿಗೆ ಕೊರೊನಾ ಧೃಡವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಸೋಂಕಿತರಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ …

Read More »

ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ – 22 ಮಂದಿ ಬಂಧನ

ಚಿಕ್ಕೋಡಿ: ನಿನ್ನೆ ರಾತ್ರಿ ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರೂ ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ ಮಾಡಿದ ಘಟನೆ ಯಮಕನಮರಡಿ ಹಾಗೂ ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಲೈಟ್ ಆನ್ ಇದೆ ಎಂದು ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 9 ಜನರ ಗುಂಪನ್ನ ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿ ಮಸೀದಿಯಲ್ಲಿ …

Read More »

ನೀವು ನಾನಿದ್ದಲ್ಲಿ ಬರುವುದು ಬೇಡ, ನಾನೇ ನೀವಿದ್ದಲ್ಲಿಗೆ ಬರುತ್ತೇನೆ -ಕ್ಷೇತ್ರದ ಜವರಿಗೆ ಭರವಸೆ

ಬೆಳಗಾವಿ – ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಸಾಮಾಜಿಕ ಕಳಕಳಿ ತೋರಿಸಿದ್ದಾರೆ. ಪ್ರತಿ ನಿತ್ಯ ಶಾಸಕರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಅವರ ಗೃಹ ಕಚೇರಿಗೆ ಜನರು ಬುರುವುದು ವಾಡಿಕೆ. ದಿನವೂ ನೂರಾರು ಜನರು ಅಹವಾಲು ಸಲ್ಲಿಸಲು ಬರುತ್ತಿರುತ್ತಾರೆ. ಅವರೆಲ್ಲರ ಅಹವಾಲು ಆಲಿಸಿ, ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸವನ್ನು ಲಕ್ಷ್ಮಿ ಹೆಬ್ಬಾಳಕರ್ ಮಾಡುತ್ತ ಬಂದಿದ್ದಾರೆ. …

Read More »

ಯಾರ ಹೆಗಲಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ? ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ

ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಹುಬ್ಬಳ್ಳಿಯ ಜಗದೀಶ ಶೆಟ್ಟರ್ಅವರು ಬೆಳಗಾವಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ   ಬೆಳಗಾವಿ – ಇನ್ನು ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿರುವುದರಿಂದ ರಾಜ್ಯ ರಾಜಕೀಯ ಮತ್ತೆ ಕುತೂಹಲ ಮೂಡಿಸಿದೆ. ಕೊರೋನಾ ಗದ್ದಲದಿಂದಾಗಿ ಕಳೆದ ಕೆಲವು …

Read More »

ದೀಪ‌ ಬೆಳಗಿಸಿ ಪ್ರಧಾನಿ‌ ಮೋದಿ ಹೋರಾಟಕ್ಕೆ ಬೆಂಬಲ‌ ವ್ಯಕ್ತಪಡಿಸಿದ ರಮೇಶ ,ಬಾಲಚಂದ್ರಜಾರಕಿಹೊಳಿ

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೀಪ‌ ಬೆಳಗಿಸಿ ಪ್ರಧಾನಿ‌ ಮೋದಿ ಅವರ ಕೊರೋನಾ ವಿರುದ್ದದ ಹೋರಾಟಕ್ಕೆ ಬೆಂಬಲ‌ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ‌ ಮೇಣದ ಬತ್ತಿ ಹಚ್ಚುವ ಮೂಲಕ‌ ಕೋರೊನಾ ವಿರುದ್ದ ಹೋರಾಟಕ್ಕೆ ಬೆಂಬಲ‌‌ ಸೂಚಿಸಿ ನಾಳಿನ ಭರವಸೆಯ ಬೆಳಕಿಗಾಗಿ ಇಂದು ದೀಪ ಹಚ್ಚಬೇಕು ಎಂದು ತಿಳಿಸಿದ್ದಾರೆ ಗೋಕಾಕ: ಮಾರಣಾಂತಿಕ‌ ರೋಗ ಕೊರೋನಾದಿಂದಾಗಿ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ದೇಶದ ಎಲ್ಲಾ ನಾಗರಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ …

Read More »