ಬೆಳಗಾವಿ : ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಭುವನೇಶ್ವರಿ ದೇವಿ ಮೂರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪೂಜೆ ಸಲ್ಲಿಸಿದರು. ಬಳಿಕ ಹಳದಿ-ಕೆಂಪು ಬಣ್ಣದ ಬಲೂನ್ಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು ವಿವಿಧ ಧರ್ಮ ಮತ್ತು ಸಂಸ್ಕೃತಿಗಳ ಸಂಗಮವಾಗಿದೆ. ಪ್ರಾಚೀನ ಕಾಲದಿಂದಲೂ ತನ್ನದೇ ಆದ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಸಾಮರಸ್ಯವೇ ಕನ್ನಡ ಸಂಸ್ಕೃತಿಯ ಜೀವಾಳ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು …
Read More »ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ವಾಪಸ್ ಕಳುಹಿಸಿದ ಬೆಳಗಾವಿ ಪೊಲೀಸರು
ಚಿಕ್ಕೋಡಿ: ರಾಜ್ಯಾದ್ಯಂತ ಇಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕುಂದಾನಗರಿ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ಕಾಣುತ್ತಿದೆ. ಇದರ ನಡುವೆ ಶಿವಸೇನೆಯ ಕೆಲವು ಕಾರ್ಯಕರ್ತರು ಗಡಿ ಮೂಲಕ ಬೆಳಗಾವಿಗೆ ನುಗ್ಗಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿದ ಕೂಡಲೇ ಎಚ್ಚೆತ್ತುಕೊಂಡ ಕರ್ನಾಟಕ ಪೊಲೀಸರು, ಅವರನ್ನು ಮರಳಿ ಮಹಾರಾಷ್ಟ್ರಕ್ಕೆ ಕಳುಹಿಸಿದ್ದಾರೆ. ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ ದೇವಣೆ, ಬೆಳಗಾವಿಗೆ ಆಗಮಿಸಿ ಕರಾಳ ದಿನ ಆಚರಣೆ ಮಾಡಲು ನಿನ್ನೆ (ಮಂಗಳವಾರ) ಕೊಲ್ಲಾಪುರದಲ್ಲಿ ಕರೆ ನೀಡಿದ್ದರು. ಇಂದು (ಬುಧವಾರ) ನಿಪ್ಪಾಣಿ …
Read More »ರಾಜ್ಯೋತ್ಸವಕ್ಕೆ ರಜೆ ಹಾಕಿ ಬೆಂಗಳೂರಿನಿಂದ ಬಂದ ಪೊಲೀಸ್
ಬೆಳಗಾವಿ : ನವೆಂಬರ್ 1 ರಂದು ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತದೆ. ಇಲ್ಲಿನ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ಜಿಲ್ಲೆ ಸೇರಿ ರಾಜ್ಯದ ನಾನಾ ಮೂಲೆಗಳಿಂದ ಕನ್ನಡಿಗರು ಬರುತ್ತಿದ್ದಾರೆ. ಅದರಂತೆ ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಬೆಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ರಜೆ ಹಾಕಿ ಬಂದಿರುವುದು ವಿಶೇಷವಾಗಿದೆ. ಕಳೆದ 10 ವರ್ಷಗಳಿಂದ ತಪ್ಪದೇ ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಈ ವಿಶೇಷ ಕನ್ನಡ ಅಭಿಮಾನಿ ಅಮಿತ್ ರಾಮಚಂದ್ರ ಮಿರಜಕರ್ ಎಂಬುವವರು …
Read More »ಕೊರತೆಯಿಂದ ಗೋವಿನ ಜೋಳ ಫಸಲಿನ ನೀಡುವ ಹಂತದಲ್ಲಿ ಒಣಗುತ್ತಿದೆ. ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಚಿಕ್ಕೋಡಿ: ಉತ್ತರ ಕರ್ನಾಟಕ ಭಾಗದಲ್ಲಿ ಹೇರಳವಾಗಿ ಮೆಕ್ಕೆಜೋಳ ಬೆಳೆಯುವುದು ವಾಡಿಕೆ. ಸದ್ಯ ಈ ಭಾಗದಲ್ಲಿ ಗಣನೀಯ ಪ್ರಮಾಣದಲ್ಲಿ ಮಳೆ ಕೊರತೆಯಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆಗಳು ರೈತನ ಕಣ್ಣ ಮುಂದೆಯೇ ಒಣಗುತ್ತಿವೆ. ಅನ್ನದಾತ ವಿಲಿವಿಲಿ ಒದ್ದಾಡುವಂತಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಈ ವರ್ಷ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿದ್ದು ಲಕ್ಷಾಂತರ ಹೆಕ್ಟೇರ್ನಲ್ಲಿ ಬೆಳೆದ ಗೋವಿನ ಜೋಳ ಫಸಲಿನ ಅಂಚಿಗೆ ಬಂದು ಒಣಗುತ್ತಿದ್ದು, ರೈತನನ್ನು ಸಂಕಷ್ಟದಲ್ಲಿ ಸಿಲುಕಿಸಿದೆ. ಅಲ್ಪ ಮಳೆಯಲ್ಲಿ ಕಷ್ಟಪಟ್ಟು …
Read More »ಮಹಾರಾಷ್ಟ್ರದ ಜತ್ತ ಪಟ್ಟಣದ ಸಮೀಪ ಕೆಲವು ದುಷ್ಕರ್ಮಿಗಳು ಕೆಎಸ್ಆರ್ಟಿಸಿ ಬಸ್‌ಗೆ ಕಲ್ಲು ತೂರಿದ್ದಾರೆ.
ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಮತ್ತೊಂದೆಡೆ, ಮಹಾರಾಷ್ಟ್ರದ ಜತ್ತ ಪಟ್ಟಣದ ಸಮೀಪ ಕೆಲ ದುಷ್ಕರ್ಮಿಗಳು ಕೆಎಸ್ಆರ್ಟಿಸಿ ಬಸ್‌ಗೆ ಕಲ್ಲು ತೂರಿರುವ ಘಟನೆ ನಡೆದಿದೆ. ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಜಯಪುರ ತಾಲೂಕಿನ ಇಂಡಿ ಘಟಕಕ್ಕೆ ಸೇರಿದ ಬಸ್ ಇದಾಗಿದ್ದು, ಜತ್ತ ಪಟ್ಟಣದಿಂದ ವಿಜಯಪುರಕ್ಕೆ ತೆರಳುತ್ತಿತ್ತು. ದುಷ್ಕರ್ಮಿಗಳು ಬಸ್ ಅಡ್ಡಗಟ್ಟಿ ಕಲ್ಲು ತೂರಿದ್ದಾರೆ. ಬಸ್ನ ಹಿಂಬದಿಯ ಗಾಜು ಪುಡಿಯಾಗಿದೆ. ಗಾಜಿನ ಚೂರುಗಳು …
Read More »ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ
ಸಿದ್ದರಾಮಯ್ಯ ನೇತೃತ್ವದಲ್ಲಿ ಐದು 5 ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ …
Read More »ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ ಬೀಳ್ಕೊಟ್ಟು ಶುಭ ಕೋರಿದ ಅವರು, ಈ ಮೂಲಕ ನಮ್ಮ ಹೆಮ್ಮೆಯ ವೀರ ಯೋಧರಿಗೆ …
Read More »ಕನ್ನಡ ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನೆಡುವಾಗ ವಿದ್ಯುತ್ ಶಾಕ್: ಬೆಳಗಾವಿ ಜಿಲ್ಲೆಯ ಯುವಕ ದುರ್ಮರಣ
ಬೆಳಗಾವಿ: ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜಸ್ತಂಭ ನೆಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಒಕ್ಕುಂದ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪ್ರಜ್ವಲ್ ಚನಗೌಡ ಮುನೇಪ್ಪನವರ(18) ಮೃತ ಯುವಕ. ಕನ್ನಡ ರಾಜ್ಯೋತ್ಸವ ಆಚರಣೆಗಾಗಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿರ್ಮಿಸಿ ನವೆಂಬರ್ 1ರಂದು ಧ್ವಜಾರೋಹಣಕ್ಕೆ ಗ್ರಾಮದ ಯುವಕರು ಸಿದ್ಧತೆ ನಡೆಸಿದ್ದರು. ಶನಿವಾರ ಸಂಜೆ ಧ್ವಜಸ್ತಂಭ ನೆಡುವಾಗ ಅಲ್ಲಿಯೇ ಹಾದು ಹೋಗಿದ್ದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಿರೇನಂದಿ ಗ್ರಾಮದ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಲಕ್ಷ್ಮಣ್ ಸವದಿ ನಿವಾಸದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಶೋಧ; ಹುಲಿ ಉಗುರು ಮಾದರಿಯ ಪೆಂಡೆಂಟ್ ವಶಕ್ಕೆ
ಚಿಕ್ಕೋಡಿ: ಮಾಜಿ ಡಿಸಿಎಂ, ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿ ಪುತ್ರ ಸುಮಿತ್ ಸವದಿ ಕೊರಳಲ್ಲಿ ಹುಲಿ ಉಗುರು ಹೋಲುವಂತಹ ಪೆಂಡೆಂಟ್ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಥಣಿ ಅರಣ್ಯ ಇಲಾಖೆ ಅಧಿಕಾರಿಗಳು ಸರ್ಚ್ ವಾರಂಟ್‌ನೊಂದಿಗೆ ಇಂದು ಅಥಣಿಯಲ್ಲಿರುವ ಸವದಿ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ ಗಾಣಿಗೇರ ನೇತೃತ್ವದಲ್ಲಿ ಹತ್ತು ಮಂದಿ ಸಿಬ್ಬಂದಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚಿದಾನಂದ ಸವದಿ ಅವರಿಂದ ಮಾಹಿತಿ ಪಡೆದುಕೊಂಡರು. ಇದೇ ವೇಳೆ, …
Read More »