ಬೆಳಗಾವಿ : ಸಧ್ಯ ರಾಜ್ಯದಲ್ಲಿ ಹುಲಿ ಉಗುರು ವಿವಾದ ಜೋರಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊರಳಲ್ಲೂ ಹುಲಿ ಉಗುರು ಹೋಲುವ ಚೈನ್ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೇಸ್ಬುಕ್ ಖಾತೆಯಲ್ಲಿ ಹಾಕಿಕೊಂಡ …
Read More »ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ; ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ
ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು. ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ …
Read More »ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ.
ಬೆಳಗಾವಿ: ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ. ಕಲರ್ಫುಲ್ ಲೈಟಿಂಗ್ಸ್‌ನಿಂದ ಕಂಗೊಳಿಸುತ್ತಿದ್ದ ಕೋಟೆಯಲ್ಲಿ ಜನರು ಸೆಲ್ಫಿ ಫೋಟೋ ತೆಗೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಉತ್ಸವಕ್ಕೆ ಬಂದವರು ಕೋಟೆ ಅಭಿವೃದ್ಧಿಯಾಗಿ, ಪ್ರಸಿದ್ಧ ಪ್ರವಾಸಿ ತಾಣವಾಗಬೇಕು, ದಸರಾ ಮಾದರಿಯಲ್ಲಿ ಕಿತ್ತೂರು ಉತ್ಸವ ಜರುಗಬೇಕು ಎಂದು ಆಶಿಸಿದರು. ವೀರರಾಣಿ ಚನ್ನಮ್ಮಾಜಿ ಆಳಿದ ಕೋಟೆಯಲ್ಲಿ ಯುವಕ, ಯುವತಿಯರು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬಸ್ಥರು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಸ್ತು ಪ್ರದರ್ಶನದಲ್ಲಿ ಮಾರಾಟಕ್ಕೆ ಇಟ್ಟಿರುವ ವಿವಿಧ ವಸ್ತುಗಳ …
Read More »ಶಾಸಕ ಅಭಯ್ ಪಾಟೀಲ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ.
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚೆಗೆ ಆಸ್ತಿ ತೆರಿಗೆ ಹೆಚ್ಚಳ ನಿರ್ಣಯದ ದಿನಾಂಕ ತಿದ್ದಿದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬುಧವಾರ ಬಿಜೆಪಿ ಶಾಸಕ ಅಭಯ್ ಪಾಟೀಲ್ ದಲಿತ ಅಧಿಕಾರಿಗಳ ಮೇಲೆ ವೈಯಕ್ತಿಕ ಹಗೆತನ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಗತಿಪರ ಸಂಘಟನೆಗಳು, ಕಾಂಗ್ರೆಸ್ ನಗರಸಭೆ ಸದಸ್ಯರು, ವಿವಿಧ ದಲಿತ ಸಂಘಟನೆಗಳು ಹಾಗೂ ಸಚಿವ ಸತೀಶ್ …
Read More »ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ
ಹುಕ್ಕೇರಿ ನಗರದಲ್ಲಿ ಕಳೆದ 9 ದಿನಗಳಿಂದ ಜರಗುತ್ತಿರುವ ನವರಾತ್ರಿ ಉತ್ಸವಕ್ಕೆ ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ ಎಳೆಯಲಾಯಿತು. ನವರಾತ್ರಿ ಅಂಗವಾಗಿ ಹುಕ್ಕೇರಿ ನಗರದ ಹಿರೇಮಠದಲ್ಲಿ ಒಂಬತ್ತು ದಿನಗಳ ಕಾಲ ಗುರುಶಾಂತೇಶ್ವರನಿಗೆ ಅಭಿಷೇಕ,ಮಹಾ ಚಂಡಿಕಾಹೋಮ, ಅದ್ಯಾತ್ಮೀಕ ಪ್ರವಚನ ದೊಂದಿಗೆ ಭಾವೈಕ್ಯ ದಸರಾ, ಕೃಷಿ ದಸರಾ, ಮಹಿಳಾ ದಸರಾ, ಜಾನಪದ ದಸರಾ, ಮಕ್ಕಳ ದಸರಾ, ಯುವ ದಸರಾ ಕಾರ್ಯಕ್ರಮಗಳಲ್ಲಿ ನಾಡಿನ ವಿವಿಧ ಮಠಾಧೀಶರು, …
Read More »ಒಂದೇ ಜಾತಿಗೆ ರಾಣಿ ಚನ್ನಮ್ಮಳನ್ನು ಸೀಮಿತಗೊಳಿಸಬೇಡಿ: ಸಂಶೋಧಕ ಸಂತೋಷ ಹಾನಗಲ್
ಬೆಳಗಾವಿ: “ವೀರರಾಣಿ ಕಿತ್ತೂರು ಚನ್ನಮ್ಮಾಜಿಯನ್ನು ಒಂದೇ ಜಾತಿ ಮತ್ತು ಸಮುದಾಯಕ್ಕೆ ಸೀಮಿತಗೊಳಿತ್ತಿರುವ ವಿಚಾರ ಕಳೆದ ಐದು ವರ್ಷಗಳಿಂದ ಶುರುವಾಗಿದೆ. ಮೊಳಕೆಯೊಡೆಯುವ ಮೊದಲೇ ಚಿವುಟಿ ಹಾಕುವ ಅವಶ್ಯಕತೆಯಿದೆ” ಎಂದು ಸಂಶೋಧಕ ಸಂತೋಷ ಹಾನಗಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಿತ್ತೂರು ಉತ್ಸವದ ಅಂಗವಾಗಿ ಮಂಗಳವಾರ ನಡೆದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಣಿ ಚನ್ನಮ್ಮಾಜಿ ಜತೆ ಸೇರಿಕೊಂಡು ಎಲ್ಲ ಸಮುದಾಯದ ವೀರರು ಸಂಸ್ಥಾನದ ಉಳಿವಿಗಾಗಿ ಹೋರಾಡಿದ್ದಾರೆ. ಅವರೆಲ್ಲ ಇಡೀ ದೇಶಕ್ಕೆ ಸೇರಿದ ಮಹಾಪುರುಷರು. ಅಂತಹವರನ್ನು ಒಂದೇ ಜಾತಿ, …
Read More »ಕಿತ್ತೂರು ಉತ್ಸವದಲ್ಲಿ ತೋಟಗಾರಿಕಾ ಇಲಾಖೆ, ಬೆಳಗಾವಿ ಜಿ.ಪಂ. ಸಹಯೋಗದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿದ್ದು, ಗಮನ ಸೆಳೆಯುತ್ತಿದೆ.
ಬೆಳಗಾವಿ: ಸಿರಿಧಾನ್ಯಗಳಲ್ಲಿ ತಯಾರಿಸಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಅಶ್ವಾರೂಢ ಮೂರ್ತಿ ಕಿತ್ತೂರು ಉತ್ಸವದ ಫಲಪುಷ್ಪ ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿದೆ. ತರಕಾರಿ, ಹೂವುಗಳಿಂದ ತಯಾರಿಸಿದ ನಾನಾ ರೀತಿಯ ಕಲಾಕೃತಿಗಳು ಜನರ ಕುತೂಹಲ ಕೆರಳಿಸಿವೆ. ಸಿರಿಧಾನ್ಯಗಳಾದ ಜೋಳ, ಸಜ್ಜೆ, ನವನೆ, ರಾಗಿ, ಚನ್ನಂಗಿ ಬೇಳೆಗಳನ್ನು ಬಳಸಿ ತಯಾರಿಸಿರುವ 6.5 ಅಡಿ ಎತ್ತರದ ಚನ್ನಮ್ಮಾಜಿ ವಿಗ್ರಹವನ್ನು ಕಲಾವಿದ ಶಿವಲಿಂಗಪ್ಪ ಬಡಿಗೇರ ರಚಿಸಿದ್ದಾರೆ. ಕಲ್ಲಂಗಡಿಯಲ್ಲಿ ಮಹನೀಯರ ಚಿತ್ರಗಳು: ಕಲ್ಲಂಗಡಿ ಹಣ್ಣಿನಲ್ಲಿ ಅರಳಿರುವ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, …
Read More »ಚನ್ನಮ್ಮನ ಕಿತ್ತೂರು ಉತ್ಸವ, ರಾಷ್ಟ್ರೀಯ ಉತ್ಸವ ಆಗಲಿ
ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮಾಜಿ ಬ್ರಿಟಿಷರ ವಿರುದ್ಧ ಮೊದಲ ದಿಗ್ವಿಜಯ ಸಾಧಿಸಿದ್ದಕ್ಕೆ ಮುಂದಿನ ವರ್ಷ 200 ವರ್ಷ ತುಂಬಲಿದೆ. ಆ ವೇಳೆ, ಕಿತ್ತೂರು ಉತ್ಸವ ರಾಷ್ಟ್ರಮಟ್ಟದ ಉತ್ಸವ ಆಗಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಕಿತ್ತೂರು ಉತ್ಸವದಲ್ಲಿ ಆಗ್ರಹಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯಲಿರುವ ಕಿತ್ತೂರು ಉತ್ಸವ ರಾಷ್ಟ್ರೀಯ ಉತ್ಸವವಾಗಿ ಘೋಷಿಸಬೇಕು. ಪಾರ್ಲಿಮೆಂಟ್ ಮುಂದೆ ಚನ್ನಮ್ಮ ಮತ್ತು …
Read More »ಜಗದೀಶ್ ಶೆಟ್ಟರ್ ನಮ್ಮ ಪ್ರೀತಿಯ ಮನುಷ್ಯ,ನಾನು ಸತತವಾಗಿ 06 ನೇ ಸಲ ಭೇಟಿಯಾಗಿದ್ದೇನೆ.
ರಮೇಶ್ ಜಾರಕಿಹೊಳಿ-ಜಗದೀಶ್ ಶೆಟ್ಟರನ್ನು ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ನಮ್ಮ ಪ್ರೀತಿಯ ಮನುಷ್ಯ. ಅವರು ಎಲ್ಲಿದ್ದರೂ ನಮ್ಮ ಹಿರಿಯರು. ಅವರನ್ನು ನಾನು ಸತತವಾಗಿ 06 ನೇ ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿ ವಿಚಾರ ಲೀಕ್ ಆಗಿದೆ. ನಾನು ಅವರನ್ನು ತುಂಬಾ ಸಲ ಮೀಟ್ ಆಗಿದ್ದೇನೆ. ಶೆಟ್ಟರ್ ಅವರು ಒಳ್ಳೆಯವರು. ನಮ್ಮ ಪಕ್ಷ ಬಿಡಬಾರದಾಗಿತ್ತು. ದುರ್ದೈವ ನೋಡೊಣ. ಮುಂದಿನ ದಿನಮಾನದಲ್ಲಿ ಏನಾಗುತ್ತೆಂದು. ರಾಜಕೀಯ ಚರ್ಚೆ ಏನೂ ನಡೆದಿಲ್ಲ. …
Read More »ಸಿದ್ದರಾಮಯ್ಯನವರ ಕ್ಯಾಬಿನೆಟ್ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ.: ರಮೇಶ್ ಜಾರಕಿಹೊಳಿ ಕಳವಳ
ಚಿಕ್ಕೋಡಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಯಾಬಿನೆಟ್ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯನವರು ಇದ್ದಾಗಲೇ ಸತೀಶ್ಗೆ ಈ ರೀತಿ ಪರಿಸ್ಥಿತಿ ಬಂದಿದೆ. ಬೇರೆ ಯಾರಾದ್ರೂ ಸಿಎಂ ಇದ್ರೆ ಸತೀಶ್ ಪರಿಸ್ಥಿತಿ ಏನು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದ್ದಾರೆ. ಸೋಮವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದಗಾಂವ್ ಗ್ರಾಮದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಸಿಎಂ ಸಿದ್ದರಾಮಯ್ಯನವರ ಕಾಲದಲ್ಲಿ ಸತೀಶ್ ಅವರಿಗೆ …
Read More »