ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 …
Read More »ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಧಗ ಧಗ ಹೊತ್ತಿ ಉರಿದ ಟ್ರ್ಯಾಕ್ಟರ್
ಬಾಗಲಕೋಟೆ: ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು (ರವದಿ) ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು ಹೋಗಿದೆ. ಬೆಂಕಿ ಆರಿಸಲು ಸ್ಥಳೀಯರು ಹರಸಾಹಸ ಪಟ್ಟರೂ ನಿಯಂತ್ರಣ ಮಾಡಲು ಸಾಧ್ಯವಾಗದೇ ನೋಡ ನೋಡುತ್ತಿದ್ದಂತೆ ಸುಟ್ಟುಹೋಗಿದೆ. ಟಕ್ಕಳಕಿಯಿಂದ ಸಾವಳಗಿ ಕಡೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಎಂಜಿನ್ ಟ್ರೇಲರ್ ಹಾಗೂ ಸೊಪ್ಪು ಸೇರಿ …
Read More »ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳಿಂದ ಡಾ. ಪ್ರಭಾಕರ್ ಕೋರೆ ಅವರಿಗೆ ಅಭಿನಂದನಾ ಸನ್ಮಾನ
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ‘ಪದ್ಮಶ್ರೀ’ ಪುರಸ್ಕಾರ ಲಭಿಸಿದ ಹಿನ್ನೆಲೆಯಲ್ಲಿ, ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಅವರಿಗೆ ಆತ್ಮೀಯ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಮುಖಂಡರು ಕೋರೆ ಅವರ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸಿದರು. ಸಾಹಿತ್ಯ, ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಸಾಧನೆ ಮಾಡಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ, ಯಳ್ಳೂರ …
Read More »ಸಾವಿನಲ್ಲೂ ಒಂದಾದ ಅಮರ ಪ್ರೇಮಿಗಳು
ರಾಮದುರ್ಗ: ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನಕಲಕುವ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಹರಿಯುವ ಮಲಪ್ರಭಾ ನದಿಗೆ ಹಾರಿ ಯುವ ಜೋಡಿಯೊಂದು ತಮ್ಮ ಜೀವನದ ಪಯಣವನ್ನು ಅಂತ್ಯಗೊಳಿಸಿದೆ. ಮೃತರನ್ನು ಜಗದೀಶ ಕವಳೇಕರ ಹಾಗೂ ಗಂಗಮ್ಮಾ ತ್ಯಾಪಿ ಎಂದು ಗುರುತಿಸಲಾಗಿದೆ. ಇಬ್ಬರೂ ಮಲ್ಲಾಪೂರ ಗ್ರಾಮದ ನಿವಾಸಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗಿನ ಜಾವ ನದಿಯ ದಡದಲ್ಲಿ ಇಬ್ಬರ ಶವಗಳು ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …
Read More »ಬೆಳಗಾವಿಯಲ್ಲಿ ಅಕ್ಷರ ಚಿಂತನೆಯ ಸಾಹಿತ್ಯ ಸಂಭ್ರಮ: ವಿಮರ್ಶಾ ಕಮ್ಮಟಕ್ಕೆ ಚಾಲನೆ
ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ವಿಮರ್ಶಾತ್ಮಕ ಚಿಂತನೆಗಳ ಹೊಸ ಮನ್ವಂತರ ತೆರೆದುಕೊಂಡಿತು. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಒಂದು ದಿನದ ವಿಮರ್ಶಾ ಕಮ್ಮಟವು ಸಾಹಿತ್ಯಾಸಕ್ತರ ಗಮನ ಸೆಳೆಯಿತು. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಕರ್ನಾಟಕ ಲೇಖಕಿಯರ ಸಂಘ, ಬೆಳಗಾವಿ ಜಿಲ್ಲಾ ಘಟಕ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ಥ ಮಂಡಳಿಯ ಸಹಯೋಗದೊಂದಿಗೆ ‘ಒಂದು ದಿನದ ವಿಮರ್ಶಾ ಕಮ್ಮಟ’ವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು …
Read More »ಬೆಳಗಾವಿಯ ಪ್ರಮುಖ ಹದಿನೈದಕ್ಕೂ ಹೆಚ್ಚು ಯೋಜನೆಗಳಿಗೆ ಒಂದೇ ಬಾರಿ ಚಾಲನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಹದಿನೈದಕ್ಕೂ ಹೆಚ್ಚು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಒಂದೇ ಬಾರಿಗೆ ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳು ಘೋಷಿಸಿ ಒಂದು ಕಳೆದರೂ ಚಾಲನೆ ದೊರೆಯುತ್ತಿಲ್ಲ ಎಂಬ …
Read More »ಅಪರಾದ ತಗ್ಗಿಸಲು ಶ್ವಾನಗಳಿಗೆ ಹೆಚ್ಚಿನ ತರಬೇತಿ ಅವಶ್ಯ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ನಿಷ್ಕಲ್ಮಶ, ಪ್ರೀತಿ, ನಿಷ್ಠೆಗೆ ಶ್ವಾನಗಳಿಗೆ ಶ್ವಾನಗಳೇ ಸರಿಸಾಟಿ, ಶ್ವಾನವನ್ನು ಪ್ರೀತಿಯಿಂದ ಬೆಳೆಸಿದಾಗ ಮಾತ್ರ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತವೆ. ಅವುಗಳನ್ನು ಸ್ನೇಹಮಯವಾಗಿ ಬೆಳೆಸಬೇಕು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಸರ್ದಾರ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ ಬೆಳಗಾವಿ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಪ್ರಾಣಿ ಹಿಂಸೆ ವಿರುದ್ಧ …
Read More »ಪ್ರಯತ್ನ ಸಂಘಟನೆಯಿಂದ ನಿರ್ಗತಿಕರಿಗೆ ರಗ್ಗು – ಕಂಬಳಿ ವಿತರಣೆ
ಬೆಳಗಾವಿ : ಬೆಳಗಾವಿಯ ಪ್ರಯತ್ನ ಸಂಘಟನೆಯ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ನಿರ್ಗತಿಕರಿಗೆ ರಗ್ಗು ಹಾಗೂ ಕಂಬಳಿಗಳನ್ನು ವಿತರಣೆ ಮಾಡಲಾಯಿತು. ರಾತ್ರಿ ವೇಳೆ ನಗರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಚಳಿಯಲ್ಲಿ ನಡುಗುತ್ತ ಮಲಗಿದ್ದ ಸುಮಾರು 20 ನಿರ್ಗತಿಕರಿಗೆ ಕಂಬಳಿಗಳನ್ನು ವಿತರಿಸಲಾಯಿತು. ವೃದ್ಧಾಶ್ರಮ, ಅನಾಥಾಶ್ರಮ, ಅಂಧ ಮಕ್ಕಳ ಶಾಲೆಗಳಿಗೆ ದೇಣಿಗೆ ಹಾಗೂ ಬಡ ಮಕ್ಕಳ ಶಾಲಾ ಶುಲ್ಕ ಭರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿರುವ ಪ್ರಯತ್ನ ಸಂಘಟನೆ ಈ …
Read More »ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ
ಬೆಳಗಾವಿ : ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸುಳೇಬಾವಿಯ ಮಹಾಲಕ್ಷ್ಮೀ ಮೈದಾನದಲ್ಲಿ ಭಾನುವಾರ ಆರಂಭವಾಗಿದ್ದು, 8 ತಂಡಗಳು ಭಾಗವಹಿಸಿವೆ. ಪ್ರಥಮ ಬಹುಮಾನ 50 ಸಾವಿರ ರೂ. ಇದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾಯೋಜಕತ್ವವಹಿಸಿದ್ದಾರೆ. ದ್ವಿತೀಯ ಬಹುಮಾನ 30 ಸಾವಿರ ರೂ. ಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತೃತೀಯ ಬಹುಮಾನ 25 ಸಾವಿರ ರೂ.ಗಳನ್ನು ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಪ್ರಾಯೋಜಿಸಿದ್ದಾರೆ. ಪ್ರಥಮ ಹಾಗೂ ತೃತೀಯ ಟ್ರೋಫಿಯನ್ನು ಹನುಮಂತ …
Read More »ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – ಚಲಾವಣೆ ಇಲ್ಲದ 400 ಕೋಟಿ ದರೋಡೆ
ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣ ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದ್ದಾರೆ. ದರೋಡೆ ನಡೆದಿದ್ದು ಯಾವಾಗ? ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ …
Read More »
Laxmi News 24×7