ಚಿಕ್ಕೋಡಿ: ಮಾಜಿ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಕಂಠಪೂರ್ತಿ ಕುಡಿದು ಹೌದೋ ಹುಲಿಯಾ ಎಂದು ಕೂಗಿ ಖ್ಯಾತಿ ಗಳಿಸಿದ್ದ ಪೀರಪ್ಪ ಕಟ್ಟಿಮನಿ ಇದೀಗ ಲಾಕ್‌ಡೌನ್ ಹಿನ್ನೆಲೆ ತಾನೂ ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ. ಕುಡಿದು ಬಂದ್ರೆ ಕುಟುಂಬದಲ್ಲಿ ಜಗಳವಾಗುತ್ತೆ, ಬಡತನ ಬರುತ್ತೆ, ನಾನು ಬಿಟ್ಟಿದ್ದೀನಿ.. ನೀವೂ ಬಿಡಿ ಅಂತ ಪೀರಪ್ಪ ಹೇಳುತ್ತಿದ್ದಾರಂತೆ. ಅಲ್ಲದೇ, ಸೆಲ್ಫಿ ತೆಗೆದುಕೊಳ್ಳುವವರು ನನಗೆ ಹಣ ನೀಡುತ್ತಿದ್ದರು, ಅದಕ್ಕೆ ನಾನು ಕುಡಿಯುತ್ತಿದ್ದೆ ಅಂತ ಬೆಳಗಾವಿ ಜಿಲ್ಲೆ …
Read More »ಶಿವಪೂರ ಹ ಗ್ರಾಮದ ಒಂದು ಕುಟುಂಬದ ವ್ಯಕ್ತಿಗೆ ಕೊರೊನಾ ಸೋಂಕು ಬಂದಿದೆ ಎಂಬ ಸುಳ್ಳು ಸುದ್ದಿ
ಮೂಡಲಗಿ ನಗರ ಸಮೀಪದ ಶಿವಪೂರ ಹ ಗ್ರಾಮದ ಒಂದು ಕುಟುಂಬದ ವ್ಯಕ್ತಿಗೆ ಕೊರೊನಾ ಸೋಂಕು ಬಂದಿದೆ ಎಂಬ ಸುಳ್ಳು ಸುದ್ದಿ ಹರಡಿದ ನಿಮಿತ್ಯ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು ಗ್ರಾಮದ ಹಿರಿಯರು ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಗ್ರಾಮಸ್ಥರಿಗೆ ಧೈರ್ಯ ತುಂಬುವುದರ ಮುಖಾಂತರ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹಿರಿಯರನ್ನು ಹಾಗೂ ಮಕ್ಕಳನ್ನು ಹೊರ ಬರದಂತೆ ನೋಡಿಕೊಳ್ಳಬೇಕು. ಹಾಗೂ ಗ್ರಾಮದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ತಿರುಗಾಡುವುದು ನಮ್ಮೆಲ್ಲರಿಗೂ ಕಂಟಕವಾಗುತ್ತೆ ಗ್ರಾಮ ಮತ್ತು …
Read More »ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿ ವಶ…..
ಚಿಕ್ಕೋಡಿ (ಬೆಳಗಾವಿ): ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿಯನ್ನು ಹುಕ್ಕೇರಿ ತಾಲೂಕಿನ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊರೊನಾ ವೈರಸ್ ಹರಡದಂತೆ ತಡೆದಲು ಕೇಂದ್ರ ಸರ್ಕಾರವು ದೇಶಾದ್ಯಂತ ಮೇ 3ರವರೆಗೂ ಲಾಕ್‍ಡೌನ್ ಘೋಷಿಸಿದೆ. ಇದರಿಂದಾಗಿ ಮದ್ಯ ಮಾರಾಟ ಬಂದ್ ಆಗಿದ್ದು, ಎಣ್ಣೆ ಪ್ರಿಯರು ಪರದಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆಕೋರರು ಮತ್ತೆ ಹೆಡೆ ಬಿಚ್ಚುತ್ತಿದ್ದು, ದಿನದಿಂದ ದಿನಕ್ಕೆ ಕಳ್ಳಭಟ್ಟಿ ತಯಾರಿಕೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ಹುಕ್ಕೇರಿ ತಾಲೂಕಿನ ಅಬಕಾರಿ …
Read More »ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ಕೈಕೊಟ್ಟಿದೆ.ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ
ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು …
Read More »ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ:ರಮೇಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕೊರೊನಾ ನಿಯಂತ್ರಣ ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ ಯಲ್ಲಿ ಮಾತನಾಡಿದರು. ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ …
Read More »ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ
ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಅಂತಿಮ ನಮನ ಬೆಳಗಾವಿ, ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶ್ರದ್ಧಾಂಜಲಿ …
Read More »ಕೋವಿಡ್-೧೯ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್,ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು:
ಕೋವಿಡ್-೧೯ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಏ.೧೮(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಗ್ರಾಮದ ೭೦ ವರ್ಷದ ವ್ಯಕ್ತಿ(ಪಿ-೧೨೬)ಯನ್ನು ಶನಿವಾರ (ಏ.೧೮) ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 42 ಜನರಲ್ಲಿ ಸೋಂಕು ಪತ್ತೆಯಾಗಿದೆ. …
Read More »ಕೋವಿಡ್ – 19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ ಈಗಾಗಲೇ ಅನುಮತಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯವರು ಭೇಟಿ
ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಹೊಸದಾಗಿ ಕೋವಿಡ್ – 19 ಲ್ಯಾಬ್ ಮಂಜೂರುಯಾಗಿದ್ದು, ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯ ಆವರಣಕ್ಕೆ ಜಲಸಂಪನ್ಮೂಲ ಸಚಿವ ರ ಭೇಟಿ, ಪರಿಶೀಲನೆ ನಡೆಸಿದರು. ಬೆಳಗಾವಿಯ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ & ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್ – 19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ …
Read More »ಬೆಳಗಾವಿ:ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್
ಬೆಳಗಾವಿ: ಜಿಲ್ಲೆಯಲ್ಲಿ ಪ್ರಾರಂಭದಲ್ಲಿ ಮೂವರು ಕೊರೊನಾ ಸೋಂಕಿತರಲ್ಲಿ 70 ವರ್ಷದ ವೃದ್ಧ ಸಂಪೂರ್ಣ ಗುಣಮುಖನಾಗಿದ್ದಾನೆ. ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಇಂದು ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿ ತಿಳಿಸಿದರು. ಬೆಳಗಾವಿಯಲ್ಲಿ ಮೊದಲು ಮೂರು ಕೊರೊನಾ ಸೋಂಕಿತರಲ್ಲಿ ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಶೀಘ್ರವೇ ಡಿಶ್ಚಾರ್ಜ್ ಮಾಡಲಾಗುತ್ತದೆ ಎಂದು ತಿಳಿಸಿದರು. ಸೋಂಕಿತರ …
Read More »ಬೆಳ್ಳಂ ಬೆಳಿಗ್ಗೆ ಅಪಘಾತದಲ್ಲಿ ಪಿಎಸ್ ಐ ಸಾವನ್ನಪ್ಪಿದ ಬೆನ್ನಲ್ಲೆ ಕರ್ತವ್ಯನಿರತ ಮತ್ತೊಬ್ಬ ಪೇದೆಯೊಬ್ಬರು ನಿಧನ
ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಅಪಘಾತದಲ್ಲಿ ಪಿಎಸ್ ಐ ಸಾವನ್ನಪ್ಪಿದ ಬೆನ್ನಲ್ಲೆ ಕರ್ತವ್ಯನಿರತ ಮತ್ತೊಬ್ಬ ಪೇದೆಯೊಬ್ಬರು ನಿಧನರಾಗಿದ್ದಾರೆ. ಬೆಳಗಾವಿ ನಗರದ ಕ್ಯಾಂಪ್ ಠಾಣೆಯ ಮುಖ್ಯ ಪೇದೆ ಕೆ ಕಲ್ಲಪ್ಪ (40) ಅವರು ಅನಾರೋಗ್ಯದಿಂದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಬೆಳಗಾವಿಯಲ್ಲಿ ಪಿಎಸ್ಐ ಒಬ್ಬರು ನಿಧನರಾಗಿದ್ದರು, ಈಗ ಅದೇ ಇಲಾಖೆಯ ಕಲ್ಲಪ್ಪ ಅವರು ನಿಧನರಾಗಿದ್ದಾರೆ.
Read More »
Laxmi News 24×7