Breaking News

ಬೆಳಗಾವಿ

ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರ

ಬೆಳಗಾವಿ : ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರವಾಗಿದೆ. ಸೇವಾ ಭದ್ರತೆ ಈ ಬಾರಿಯೂ ಸಿಗದಿದ್ದರೆ ನಾವು ಆತ್ಮಹತ್ಯೆಯ ದಾರಿ ತುಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ರಾಜ್ಯದ 430ಕ್ಕೂ ಅಧಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅನೇಕ ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಸಾವಿರಾರು …

Read More »

ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ

ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ಶರ ನವರಾತ್ರಿ ಹಬ್ಬದ ಅಂಗವಾಗಿ ಘಟಸ್ಥಾಪನೆ ಮಾಡಲಾಯಿತು. ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ ,ಅಭಿಷೇಕ ನೆರವೆರಿಸುವ ಮೂಲಕ ಘಟಸ್ಥಾಪನೆ ಮಾಡಲಾಯಿತು. ಸವದತ್ತಿ ಎಲ್ಲಮ್ಮಾ ದೇವಸ್ಥಾನಕ್ಕೆ ಆಗಮಿಸಿ ದೀಪಕ್ಕೆ ಎಣ್ಣೆ ಹಾಕಿದ ನಂತರ ಭಕ್ತರು ತಮ್ಮ ಮನೆಗಳಲ್ಲಿ ಘಟಸ್ಥಾಪನೆ ಮಾಡುವ ಪ್ರತೀತಿ ಇರುವದರಿಂದ ಇಂದು ಬೆಳಗಿನ ಜಾವ ಸಾವಿರಾರು ಜನ ದೇವಿ ದರ್ಶನ ಮಾಡಿ …

Read More »

K.P.C.C. ಕಾರ್ಯಾಧ್ಯಕ್ಷ ಸ್ಥಾನಕ್ಕೆ ಅಂಜಲಿ ನಿಂಬಾಳ್ಕರ್ ಹೆಸರು

ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ಕೋಟಾದಡಿ ಅವರ ಹೆಸರು ಶಿಫಾರಸು ಮಾಡಲಾಗಿದೆ ಎಂದು ಖಚಿತ ಮಾಹಿತಿ ತಿಳಿದು ಬಂದಿದೆ. ಇದರ ಮೊದಲು ಮಾಜಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕೆಪಿಸಿಸಿ ಸದಸ್ಯರಾಗಿ, ಕೆಪಿಸಿಸಿ ವಕ್ತಾರೆಯಾಗಿ ಕಾರ್ಯ ನಿರ್ವಹಿಸಿದ್ದಾರೆ.ಪಕ್ಷ ನೀಡಿದ ಜವಾಬ್ದಾರಿಯನ್ನು ಅತ್ಯಂತ ದಕ್ಷತೆಯಿಂದ ನಿಭಾಯಿಸಿರುವ ಅನುಭವ ಹೊಂದಿರುವ ಕಾರಣ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ಕೋಟಾದಡಿ ಶಿಫಾರಸು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.     ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ಬೆಳಗಾವಿ: ಚಿನ್ನದಂಗಡಿ ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದ ಐಟಿ ಅಧಿಕಾರಿ ಪೊಲೀಸ್ ಬಲೆಗೆ

ಬೆಳಗಾವಿ : ಚಿನ್ನದ ವ್ಯಾಪಾರಿಯೊಬ್ಬರ ಬಳಿ ಲಂಚ ಸ್ವೀಕರಿಸುತ್ತಿದ್ದ ಆದಾಯ ತೆರಿಗೆ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಗಾವಿಯಲ್ಲಿ ಇಂದು ನಡೆದಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ ಬಂಕಾಪುರ ಎಂಬ ಚಿನ್ನಾಭರಣ ಅಂಗಡಿ ಮಾಲೀಕನಿಗೆ ಹಣ ನೀಡುವಂತೆ ಐಟಿ ಅಧಿಕಾರಿ ಅವಿನಾಶ ಟೊನಪೆ ಕಿರುಕುಳ ನೀಡಿದ್ದರು. ಇದರಿಂದ ಚಿಂತಾಕ್ರಾಂತರಾದ ಚಿನ್ನಾಭರಣ ವ್ಯಾಪಾರಿ, ಎಸಿಪಿ ನಾರಾಯಣ ಭರಮನಿ ಅವರಿಗೆ ವಿಷಯ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಲಂಚಬಾಕ ಐಟಿ …

Read More »

ಬೆಳಗಾವಿಯ ಸುವರ್ಣಸೌಧಕ್ಕೆ 12 ವರ್ಷ ತುಂಬಿದರೂ ಕೂಡ ಇನ್ನೂ ಸೌಧಕ್ಕೆ ಸುವರ್ಣ ಕಾಲವೇ ಕೂಡಿ ಬಂದಿಲ್ಲ.

ಬೆಳಗಾವಿ : ಉತ್ತರ ಕರ್ನಾಟದ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ನೀಡಬೇಕು. ಈ ಭಾಗದ ಜನರಿಗೆ ಶಕ್ತಿ ತುಂಬಬೇಕು ಎಂಬ ಸದುದ್ದೇಶದಿಂದ ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿರುವ ಹಲಗಾ-ಬಸ್ತವಾಡ ಗ್ರಾಮಗಳ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸುವರ್ಣ ವಿಧಾನಸೌಧವನ್ನು ಸರ್ಕಾರ ನಿರ್ಮಾಣ ಮಾಡಿತ್ತು. ಈ ಸುವರ್ಣಸೌಧಕ್ಕೆ ಇಂದು 12 ವರ್ಷಗಳ ಸಂಭ್ರಮಾಚರಣೆ. 2012ರ ಅಕ್ಟೋಬರ್‌ 11 ರಂದು 438 ಕೋಟಿ ರೂ. ವೆಚ್ಚದಲ್ಲಿ ಸರ್ಕಾರ ಯಾವೆಲ್ಲಾ ಉದ್ದೇಶಗಳನ್ನಿಟ್ಟುಕೊಂಡು ಸುವರ್ಣಸೌಧವನ್ನು ನಿರ್ಮಾಣ ಮಾಡಿತ್ತೋ, ಆ ಉದ್ದೇಶಗಳನ್ನು …

Read More »

ಡಿಎಚ್​ಒ ಕಚೇರಿ ಸಿಬ್ಬಂದಿಯಿಂದ ಕಚೇರಿ ಹಿಂಭಾಗದಲ್ಲಿ ಎಣ್ಣೆ ಪಾರ್ಟಿ

ಬೆಳಗಾವಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ(ಡಿಹೆಚ್‌ಒ)ಯಲ್ಲಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಸಿಬ್ಬಂದಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ನಗರದ ಟಿಳಕವಾಡಿಯಲ್ಲಿರುವ ಡಿಹೆಚ್​​ಒ ಕಚೇರಿ ಹಿಂಭಾಗದಲ್ಲಿರುವ ಕೊಠಡಿಯಲ್ಲಿನ ಗಾಂಧಿಜೀ ಫೋಟೋ ಎದುರಿಗೆಯೇ ಸಿಬ್ಬಂದಿ ಮದ್ಯಪಾನ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಈ ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ಸರಿಯಾದ …

Read More »

ಕೇಂದ್ರ ಸರ್ಕಾರದಿಂದ ಬರುವ ವಿದ್ಯುತ್ತನ್ನು ನಿಲ್ಲಿಸಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ : ಸಚಿವ ಸತೀಶ್​ ಜಾರಕಿಹೊಳಿ

ಚಿಕ್ಕೋಡಿ : ಕೇಂದ್ರದಿಂದ ಬರುವ ವಿದ್ಯುತ್ ಹಠಾತ್ತನೆ ನಿಲ್ಲಿಸಿದ ಪರಿಣಾಮವಾಗಿ ರಾಜ್ಯದಲ್ಲಿ ತೊಂದರೆ ಉಂಟಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.   ಸೋಮವಾರ ಸಂಜೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರದಿಂದ ಬರುವ ವಿದ್ಯುತ್ ನಿಲ್ಲಿಸಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಅಭಾವ ಕಂಡುಬಂದಿದೆ. ನೀರಿನ ಅಭಾವದಿಂದ ಕೆಲವು ಕಡೆ ವಿದ್ಯುತ್ ತಯಾರಿಕೆ ಆಗುತ್ತಿಲ್ಲ. …

Read More »

ಸರ್ಕಾರ ಪತನವಾಗದಿದ್ದರೆ ರಾಜೀನಾಮೆ ಕೊಡ್ತಾರಾ..? ವಿಪಕ್ಷಗಳಿಗೆ ಶಿವಾನಂದ ಪಾಟೀಲ ಟಾಂಗ್

ಬೆಳಗಾವಿ : ಸರ್ಕಾರ ಪತನವಾಗುತ್ತದೆ ಎಂದು ಹೇಳುವವರನ್ನೇ ಕೇಳಿ. ಸರ್ಕಾರ ಪತನವಾಗದಿದ್ದರೆ ರಾಜೀನಾಮೆ ಕೊಡ್ತಾರಾ..? ಎಂದು ಸಕ್ಕರೆ, ಸಹಕಾರ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಪಕ್ಷಗಳಿಗೆ ಟಾಂಗ್​ ಕೊಟ್ಟರು.   ಬೆಳಗಾವಿಯ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮಗಳ ಜೊತೆಗೆ ಸಂಕ್ರಾಂತಿ ನಂತರ ಸರ್ಕಾರ ಪತನವಾಗುತ್ತದೆ ಎಂಬ ವಿಪಕ್ಷಗಳ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾರು ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಾರೆ ಅವರಿಗೆ ಕೇಳಿ ಎಂದರು. ಕಬ್ಬಿನ ತೂಕದಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »