ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಪದಮಂಡಿ ಗ್ರಾಮದ ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು. …
Read More »9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?
ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಡಿ. 9ರಿಂದ 20ರ ವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಸಚಿವ ಸಂಪುಟದಲ್ಲಿ ಅಂತಿಮ ದಿನಾಂಕ ಪ್ರಕಟವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ ಘೋಷಿಸಲಿದ್ದಾರೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಚಳಿಗಾಲ ಅಧಿ ವೇಶನ ಹಿನ್ನೆಲೆಯಲ್ಲಿ ಶುಕ್ರವಾರ ಸುವರ್ಣ ವಿಧಾನಸೌಧ ಪರಿಶೀಲನೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು ದಿನಾಂಕದಂತೆ ಅಧಿಕಾರಿಗಳು …
Read More »ಉದ್ಯೋಗ ಖಾತರಿ ರಥಕ್ಕೆ ಚಾಲನೆ
ಹುಕ್ಕೇರಿ: ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲು ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ತಾಲ್ಲೂಕು ಪಂಚಾಯ್ತಿ ಇಒ ಟಿ.ಆರ್. ಮಲ್ಲಾಡದ ಚಾಲನೆ ನೀಡಿದರು. ಮಂಗಳವಾರ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನರೇಗಾ ಯೋಜನೆಯಡಿಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳನ್ನು ಬೆಳಯಲು ಈ ಯೋಜನಯಡಿಯಲ್ಲಿ ಅವಕಾಶವಿದೆ. ಗ್ರಾಮ ಪಂಚಾಯ್ತಿಗಳಿಂದ ವೈಯಕ್ತಿಕ ಕಾಮಗಾರಿ ಕೈಕೊಳ್ಳಲು …
Read More »ಕೂಲಿ ಕಾರ್ಮಿಕರ ಜಗಳ: ಒಬ್ಬರ ಕೊಲೆಯಲ್ಲಿ ಅಂತ್ಯ
ಬೈಲಹೊಂಗಲ: ಉಪಹಾರದ ಕೈಚೀಲಕ್ಕಾಗಿ ಕೂಲಿ ಕಾರ್ಮಿಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಕಾರ್ಮಿಕನೊಬ್ಬನನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬುಡರಕಟ್ಟಿ ಗ್ರಾಮದ ರುದ್ರಪ್ಪ ಶಿವಬಸಪ್ಪ ಪಾಗಾದ(64) ಕೊಲೆಯಾದವರು. ಮಲ್ಲಪ್ಪ ಶಿವಶಂಕರ ಯರಗೊಪ್ಪ(42) ಕೊಲೆ ಆರೋಪಿ. ಮೃತ ರುದ್ರಪ್ಪ ತನ್ನ ಉಪಹಾರವಿದ್ದ ಕೈಚೀಲವನ್ನು ಗ್ರಾಮ ಪಂಚಾಯಿತಿ ಕಟ್ಟೆ ಮೇಲೆ ಇಟ್ಟು, ಇನ್ನೊಬ್ಬ ಕೂಲಿ ಕಾರ್ಮಿಕನನ್ನು ಕರೆತರಲು ಹೋಗಿದ್ದರು. ರುದ್ರಪ್ಪನ ಉಪಹಾರದ ಕೈಚೀಲವ ಆರೋಪಿ …
Read More »ಚಿಕ್ಕೋಡಿ: ನೀರಾವರಿ ಕಾಲುವೆಯಲ್ಲಿ ಹೂಳು ಭರ್ತಿ
ಚಿಕ್ಕೋಡಿ: ತಾಲ್ಲೂಕು ವ್ಯಾಪ್ತಿಯ ಕೊಟಬಾಗಿ ಏತ ನೀರಾವರಿಯ ಘಟಪ್ರಭಾ ಬಲದಂಡೆಯ 2ನೇ ಹಂತದ ವಿತರಣಾ ಕಾಲುವೆ, ಉಪ ಕಾಲುವೆಗಳಲ್ಲಿ ಹೂಳು ಭರ್ತಿಯಾಗಿ, ಗಿಡಗಂಟಿಗಳು ಬೆಳೆದಿವೆ. ಕೆಲವೊಂದು ಕಡೆಗೆ ಕಾಲುವೆಗೆ ಹಾಕಿದ ಸಿಮೆಂಟ್ ಕಿತ್ತು ಹೋಗಿದೆ. ಇನ್ನು ಕೆಲವು ಕಡೆಗೆ 10 ಅಡಿಯಷ್ಟು ಆಳದ ಕಾಲುವೆಯಲ್ಲಿ 8 ಅಡಿಯಷ್ಟು ಹೂಳು ತುಂಬಿದ್ದು, ನೀರಾವರಿ ಇಲಾಖೆಯ ನಿರ್ಲಕ್ಷ್ಯ ಹಿಡಿದ ಕೈಗನ್ನಡಿಯಾಗಿದೆ. ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ನಿರ್ವಹಣೆ ಆಗಬೇಕಿರುವ 17 ಕಿ.ಮೀ …
Read More »ಮಂಡ್ಯ ಸಾಹಿತ್ಯ ಸಮ್ಮೇಳನ: ‘ದಕ್ಷಿಣ’ದ ಸಮ್ಮೇಳನಕ್ಕೆ ‘ಉತ್ತರ’ದವರ ಕೂಗು
ಬೆಳಗಾವಿ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಉತ್ತರ ಕರ್ನಾಟಕದವರನ್ನೇ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಬೇಕೆಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದೆ. ಈ ಭಾಗದ ಸಾಹಿತಿಗಳು, ಕವಿಗಳು, ಲೇಖಕರು ಜಾಲತಾಣಗಳಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದು, ‘ಉತ್ತರ ಕರ್ನಾಟಕದವರಿಗೆ ಅವಕಾಶ ನೀಡಬೇಕು’ ಎಂದು ಗಟ್ಟಿಯಾಗಿ ಧ್ವನಿ ಎತ್ತಿದ್ದಾರೆ. ಕೆಲವರು ಇಂಥವರನ್ನೇ ಆಯ್ಕೆ ಮಾಡಬೇಕೆಂದು ತಿಳಿಸಿದ್ದಾರೆ. ಈ ಕುರಿತಾಗಿ ನಡೆಯುತ್ತಿರುವ ಚರ್ಚೆಯೂ ಕಾವೇರುತ್ತಿದೆ. ‘ಈವರೆಗೆ ನಡೆದಿರುವ ಅಖಿಲ ಭಾರತ …
Read More »ಅತ್ಯಾಚಾರ ಕೇಸ್ : ಸಂತ್ರಸ್ತೆ ಮಹಿಳೆಯ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ಆಪ್ತನಿಂದ ದೂರು ದಾಖಲು!
ಹುಬ್ಬಳ್ಳಿ : ಮಹಿಳಾ ರೈತ ಮುಖಂಡೆಯ ಮೇಲೆ ಶಾಸಕ ವಿನಯ ಕುಲಕರ್ಣಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ಮಹಿಳೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು.ಇದೀಗ ವಿನಯ್ ಕುಲಕರ್ಣಿ ಅವರ ಆಪ್ತ ಸಂತ್ರಸ್ತೆ ಮಹಿಳೆಯ ವಿರುದ್ಧವೇ ಪ್ರತಿ ದೂರು ದಾಖಲಿಸಿದ್ದಾರೆ. ಹೌದು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಆಪ್ತ ಅರ್ಜುನ್ ಗುಡ್ಡದ …
Read More »ಹೆಸರಿಗಷ್ಟೇ ಹೆದ್ದಾರಿ: ಸವಾರರಿಗೆ ಕಿರಿಕಿರಿ
ಕಾಗವಾಡ: ಇಲ್ಲಿಂದ ಅಥಣಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮುರಗುಂಡಿಯವರೆಗಿನ 40 ಕಿ.ಮೀ. ರಸ್ತೆ ಸಂಪೂರ್ಣ ಹದಗಟ್ಟಿದೆ. ರಾಷ್ಟ್ರೀಯ ಹೆದ್ದಾರಿಯಾಗಿ ಇದು ಮೇಲ್ದರ್ಜೆಗೆ ಏರಿದ್ದರೂ, ಕಿರಿದಾಗಿರುವ ಕಾರಣ ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಸಂಚರಿಸುವಂತಾಗಿದೆ. ವಿಜಯಪುರದಿಂದ ಬೆಳಗಾವಿ, ಮಹಾರಾಷ್ಟ್ರದ ಮೀರಜ್, ಸಾಂಗ್ಲಿ, ಕೊಲ್ಹಾಪುರಕ್ಕೆ ಜನರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ವಿಶೇಷವಾಗಿ ಆಸ್ಪತ್ರೆಗೆ ತೆರಳಲು ಮತ್ತು ವ್ಯಾಪಾರಕ್ಕೆ ಹೋಗಲು ಈ ರಸ್ತೆಯೇ ಆಸರೆ. ಆದರೆ, ಹಾಳಾದ ರಸ್ತೆ ಸುಧಾರಣೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು …
Read More »‘2ಎ’ ಮೀಸಲಾತಿ ಅ.18ರಂದು ಬೆಂಗಳೂರಿನಲ್ಲಿ ಧರಣಿ
ಬೆಳಗಾವಿ: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ನಮ್ಮ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡುವ ವಿಚಾರವಾಗಿ ಯಾವ ಪ್ರಗತಿಯಾಗಲಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮುದಾಯದ ಎಲ್ಲ ಪದಾಧಿಕಾರಿಗಳು ಅ.18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ …
Read More »