Breaking News

ಬೆಳಗಾವಿ

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯಿತಿ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಮಗದುಮ್ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ಇಲ್ಲಿನ ಶಾಸಕರ ಗೃಹ ಕಚೇರಿಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿದ ಮಹಾಂತೇಶ ಮಗದುಮ್ ಶಾಸಕರಿಗೆ ಕೃತಜ್ಞೆಗಳನ್ನು ಸಲ್ಲಿಸಿದರು. ಹೆಬ್ಬಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭಿವೃದ್ಧಿಗೆ …

Read More »

ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ. ಶುಭಂ ಗಜಾನನ ಹನ್ನೂರಕರ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಸೂರ್ತೆ ಗ್ರಾಮದವನಾಗಿರುವ ಶುಭಂ ತನ್ನ ತಂದೆಗೆ ಹೊಸ ಜಾಕೆಟ್ ಕೊಡುವಂತೆ ಹೇಳಿದ್ದಾನೆ. ಇದಕ್ಕೆ ತಂದೆ ಗಜಾನನ ನಾನು ಬೆಳಗಾವಿಯಲ್ಲಿ ಖರೀದಿ ಮಾಡಿಕೊಂಡು ಬರುತ್ತೇನೆ. ಆನ್‍ಲೈನಲ್ಲಿ ಖರೀದಿಸಬೇಡ ಎಂದು ತಿಳಿಸಿದ್ದಾ ಎಂದಿನಂತೆ ಬೆಳಗ್ಗೆ ತಂದೆ ಗಜಾನನ ಉದ್ಯಮಬಾಗದ ಕಾರ್ಖಾನೆಗೆ ಕೆಲಸಕ್ಕೆ ಎಂದು …

Read More »

ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್‍ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು …

Read More »

ಸಂಭವನೀಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲೆಕ್ಕಾಚಾರ

ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಿಗೆ ಉಸ್ತುವಾರಿ ವಹಿಸಿಕೊಳ್ಳಲು ಆಡಳಿತಾರೂಢ ಬಿಜೆಪಿಯಲ್ಲಿ ಪೈಪೋಟಿಯೇ ಆರಂಭವಾಗಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ಬಿಕ್ಕಟ್ಟು ತರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ನಿರೀಕ್ಷಿತ ಖಾತೆಗಳು ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದ ಕೆಲವು ಸಚಿವರ …

Read More »

ಮಂತ್ರಿ ಸ್ಥಾನ ನೀಡದ ಹೈಕಮಾಂಡ್ ಮುಂದೆ ಉಮೇಶ್ ಕತ್ತಿ ಹೊಸ ಬೇಡಿಕೆ

ನವದೆಹಲಿ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದ ಶಾಸಕ ಉಮೇಶ್ ಕತ್ತಿ ಹೊಸ ದಾಳ ಉರುಳಿಸಿದ್ದಾರೆ. ಮಂತ್ರಿ ಮಾಡಿ ಇಲ್ಲ ರಾಜ್ಯಸಭೆಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿರುವ ಉಮೇಶ್ ಕತ್ತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಜೂನ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಈ ಪೈಕಿ ಎರಡು …

Read More »

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಚೇರಿ ಹೊರಗಡೆ ಜನ ಕಿಕ್ಕಿರಿದು ತುಂಬಿರುವುದನ್ನ ಗಮನಿಸದೇ ಕಸ್ತೂರಿ ಮುಳವಾಡ ಎಂಬ ಹಿರಿಯ ಉಪ ನೋಂದಣಾಧಿಕಾರಿ ಮೊಬೈಲ್ ಚಾಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಕೆಲಸಕ್ಕಾಗಿ ಹತ್ತಾರು ಮಂದಿ ಕಚೇರಿಯ ಹೊರಗಡೆ ಕಾಯುತ್ತಿದ್ದರೂ ಅಧಿಕಾರಿಗಳು ಅದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ ಎನ್ನಲಾಗಿದೆ.

Read More »

ಮುದ್ದು ಅಳಿಯನನ್ನು ನೊಡಲು ಬಂದ ಪ್ರಿಯಾಂಕಾ ಸತೀಶ ಜಾರಕಿಹೊಳಿ..!!

ಮುದ್ದು ಅಳಿಯನನ್ನು ನೊಡಲು ಬಂದ ಪ್ರಿಯಾಂಕಾ ಸತೀಶ ಜಾರಕಿಹೊಳಿ..!! 2020 ರ ಹೊಸ ವರ್ಷ ಜಾರಕಿಹೊಳಿ ಕುಟುಂಬದಲ್ಲಿ ಸಂಭ್ರಮ ಸೃಷ್ಟಿ ಮಾಡುತ್ತ ಪ್ರಾರಂಭವಾಗಿದೆ.ಜನೇವರಿ ಮೊದಲನೇ ವಾರದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರ ಸುಪುತ್ರ ಸಂತೋಷ ಜಾರಕಹೊಳಿ ತಮ್ಮ ಮೊದಲನೇ ಮಗುವಿಗೆ ತಂದೆ ಆಗಿದ್ದರಿಂದ ಜಾರಕಿಹೊಳಿ ಸಹೋದರರ ಕುಟುಂದ ಸದಸ್ಯರ ಮನದಲ್ಲಿ ಸಂತೋಷ ಮನೆ ಮಾಡಿತ್ತು.ಈ ಶುಭ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲರೂ ಆಸ್ಪತ್ರೆಗೆ ತೆರಳಿ ಜಾರಕಿಹೊಳಿ ಕುಟುಂಬದ ಕುಡಿಯನ್ನು ನೊಡಿ ಸಂಭ್ರಮಿಸಿದ್ದರು. …

Read More »

ಡಬಲ್ ಖುಷಿಯಲ್ಲಿ ಗೋಕಾಕ ಸಾಹುಕಾರ್, ಸಚಿವರಾಗಿ ಮೊಮ್ಮಗನನ್ನು ನೊಡಲು ಸ್ವ-ಕ್ಷೇತ್ರಕ್ಕೆ ಬಂದ ಲಕ್ಷ್ಮೀ ಪುತ್ರ.

ಡಬಲ್ ಖುಷಿಯಲ್ಲಿ ಗೋಕಾಕ ಸಾಹುಕಾರ್, ಸಚಿವರಾಗಿ ಮೊಮ್ಮಗನನ್ನು ನೊಡಲು ಸ್ವ-ಕ್ಷೇತ್ರಕ್ಕೆ ಬಂದ ಲಕ್ಷ್ಮೀ ಪುತ್ರ..!! ರಾಜ್ಯ ರಾಜಕಾರಣದಲ್ಲಿ ಹೆಸರು ಮಾಡಿದ ಗೋಕಾಕ ಕ್ಷೇತ್ರದ ಶಾಸಕರು ಹಾಗೂ ನೂತನ ಸಚಿವರು ಆದ ರಮೇಶ ಜಾರಕಿಹೊಳಿ ಅವರು ಡಬಲ್ ಖುಷಿಯಲ್ಲಿ ತೆಲಾಡುತ್ತಿದ್ದಾರೆ.ಅವರು ಅಂದು ಕೊಂಡಂತೆ ಜಲಸಂಪನ್ಮೂಲ ಖಾತೆ ಪಡೆದು ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದು ಒಂದು ಖುಷಿ ಆದರೆ ಅವರ ಹಿರಿಯ ಸುಪುತ್ರನಿಗೆ ಗಂಡು ಮಗು ಆಗಿದ್ದರಿಂದ ಅವರು ತಾತನಾಗಿರುವ ಖುಷಿ ಮತ್ತೊಂದು …

Read More »

ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ

ಅಥಣಿ ಶಾಸಕ ಮಹೇಶ್ ಕುಮಟೊಳ್ಳಿ MSIL ಅಧ್ಯಕ್ಷ ಬೆಳಗಾವಿ- ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ MSIL ನಿಗಮದ ಅಧ್ಯಕ್ಷ ಸ್ಥಾನ ಸಂಪುಟ ದರ್ಜೆಯ ಸ್ಥಾನ ಹೊಂದಿದ್ದು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಸ್ಥಾನ ನೀಡಲಾಗಿದೆ ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹೇಶ್ ಕುಮಟೊಳ್ಳಿ, ಎರಡು ದಿನದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ …

Read More »

ಇಂದು ಜಂತುಹುಳು ನಿವಾರಣಾ ದಿನ

ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಗೋಕಾಕ ತಾಲೂಕಿನ ನ್ಯೂ ಇಂಗ್ಲಿಷ್ ಶಾಲೆಯಲ್ಲಿತಾಲೂಕಾ ಆರೋಗ್ಯಅಧಿಕಾರಿಗಳಾದ ಡಾ :ಆರ್. ಆರ್. ಅಂಟಿನ, ಕ್ಷೇತ್ರ ಶಿಕ್ಷಣ ಅಧಿಕಾರಿ ಜಿ. ಬಿ. ಬಳಿಗಾರ . ಅಕ್ಷರ ದಾಸೋಹ ಅಧಿಕಾರಿ ಶ್ರೀಯುತ ಕುಲಕರ್ಣಿ ತಾಲೂಕಾ ನೋಡಲ್ ಅಧಿಕಾರಿ ಶಿವಾಜಿ ಮಲಗೇನವರ್, ಸಿಡಿಪಿಒ ಅನೀಲ ಕಾಂಬಳೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ :ಜ್ಯೋತಿ. ಅಂಗಡಿ ಮೇಡಂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಶಾಲಾ …

Read More »