ರಾಯಬಾಗ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತಿವೆ. 107 ಘಟಕಗಳಲ್ಲಿ ಸುಮಾರು 25 ಘಟಕಗಳು ವರ್ಷದ ಹಿಂದಿನಿಂದಲೂ ಬಂದ್ ಆಗಿವೆ. ಮತ್ತೆ ಕೆಲವು ನಿರ್ವಹಣೆ ಇಲ್ಲದೇ ಸೊರಗಿವೆ. ಇದರಿಂದ ತಾಲ್ಲೂಕಿನ ಜನರಿಗೆ ಶುದ್ಧ ನೀರು ಇನ್ನೂ ಕನಸಾಗಿದೆ. ಈ ಘಟಕಗಳನ್ನು ಏಜೆನ್ಸಿಗಳ ಅಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಮೋಟರ್ ದುರಸ್ತಿ, ಫಿಲ್ಟರ್ ಸಮಸ್ಯೆ, ವಿದ್ಯುತ್ ಸಮಸ್ಯೆ, ಪೈಪ್‌ಲೈನ್‌ಗಳಲ್ಲಿ ದೋಷ ಮುಂತಾದ ಕಾರಣಗಳಿಂದ ಸ್ಥಗಿತಗೊಂಡಿವೆ. ಒಮ್ಮೆ …
Read More »ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ. ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಸಿದ್ದರಾಮಯ್ಯ ನೈತಿಕತೆ ಈಗ ಎಲ್ಲಿಗೆ ಹೋಗಿದೆ?: ಶಾಸಕ ಅಭಯ ಪಾಟೀಲ
ಬೆಳಗಾವಿ: ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …
Read More »ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಕಾಂಬಳೆ
ಚಿಕ್ಕೋಡಿ: ‘ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …
Read More »ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …
Read More »ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ.
ಮೂಡಲಗಿ- ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಅದು ಯಾವುದೇ ಕೆಲಸವಿರಲಿ. ಶುಭ ಕೆಲಸವಿದ್ದಾಗ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ- ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆಯು ಈಗಲೂ ನಮ್ಮ ಪೂರ್ವಜರಲ್ಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಏಕದಂತ ಉತ್ಸವ ಸಮೀತಿಯಿಂದ ಜರುಗಿದ ಮೂಡಲಗಿ ಮಹಾರಾಜ ಗಣೇಶನ …
Read More »3 ವರ್ಷದ ಬಾಲಕಿಯ ಅಪಹರಣ,ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ
ಬೆಳಗಾವಿ ಜಿಲ್ಲೆಯ ಹಾರೂಗೇರಿಯಲ್ಲಿ 7 ವರ್ಷಗಳ ಹಿಂದೆ ನಡೆದಿದ್ದ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ತನಿಖಾ ಅಂತಿಮ ಹಂತ ತಲುಪಿದ್ದು, ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. 2017ರ ಸೆಪ್ಟೆಂಬರ್ 21ರಂದು, ಕುರುಬಗೋಡಿ ಹಾರೂಗೇರಿಯ ನಿವಾಸಿ ಸುಧಾ ಅಪ್ಪಾಸಾಬ ಸಣ್ಣಕ್ಕಿ ಅವರು ತಮ್ಮ 3 ವರ್ಷದ ಮಗಳ ನಾಪತ್ತೆ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ …
Read More »ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಏನಂದ್ರು?
ಬೆಳಗಾವಿ, ಸೆಪ್ಟೆಂಬರ್ 28: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ …
Read More »ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ
ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇವೆ ಎಂಬುದು ಸುಳ್ಳು. ಈಶ್ವರಪ್ಪ ಅವರನ್ನು ಪಕ್ಷದಿಂದ ಹೊರಹಾಕಿದ್ದು ರಾಷ್ಟ್ರೀಯ ನಾಯಕರು. ಸೇರಿಸಿಕೊಳ್ಳಬೇಕಾದವರೂ ಅವರೇ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ‘ಈಶ್ವರಪ್ಪ ಅವರ ಬೆಂಗಳೂರು ನಿವಾಸದಲ್ಲಿ ನಾವೆಲ್ಲ ಸೇರಿದ್ದು ನಿಜ. ಆದರೆ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿಯ ಬೇಡಿಕೆ ಕುರಿತು …
Read More »ಸೈಬರ್ ಅಪರಾಧ ತಡೆಗೆ ಯುವಕರ ತಂಡ; ಜನರಿಗೂ ಡಿಜಿಟಲ್ ಸಾಕ್ಷರತೆ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲೆಯಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಜನರನ್ನು ಜಾಗೃತಗೊಳಿಸಲು ಯುವಕರ ತಂಡವೊಂದು ನಾಲ್ಕು ವರ್ಷಗಳಿಂದ ಸದ್ದಿಲ್ಲದೇ ಕೆಲಸ ಮಾಡುತ್ತಿದೆ. ‘ಸೈಬರ್ ಕ್ರೈಂ ಅವೇರ್‌ನೆಸ್ ಟೀಮ್ ಚಿಕ್ಕೋಡಿ’ ಎಂಬ ಹೆಸರಿನಲ್ಲಿ ಎಂಟು ಯುವಕರು ತಂಡ ಉಚಿತವಾಗಿ ಡಿಜಿಟಲ್ ಸಾಕ್ಷರತೆ ನಡೆಸಿದೆ. 2020ರಲ್ಲಿ ರಚನೆಯಾದ ತಂಡವು ಈವರೆಗೆ 3,700ಕ್ಕೂ ಹೆಚ್ಚು ಸೈಬರ್ ವಂಚನೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಗೆ ನೆರವಾಗಿದೆ. 2,500 ‘ಲೋನ್ ಆಯಪ್’ ವಂಚನೆ ಪ್ರಕರಣ, 1,000 ವಿಡಿಯೊ …
Read More »