Breaking News

ಬೆಳಗಾವಿ

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಚಿಂಚಲಿ ಮಾಯಕ್ಕನ ದರ್ಶನಕ್ಕೆ ಹೊರಟ ಭಕ್ತರಿದ್ದ ಟ್ರ್ಯಾಕ್ಟರ್ ಪಲ್ಟಿ, ಮಹಿಳೆ ಸಾವು

ಚಿಕ್ಕೋಡಿ : ಶ್ರಾವಣ ಮಾಸದ ನಿಮಿತ್ತ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಶಕ್ತಿದೇವತೆ ಮಾಯಕ್ಕ ದೇವಿಯ ದರ್ಶನಕ್ಕೆ ಹೊರಟ ಭಕ್ತಾದಿಗಳ ಟ್ರ್ಯಾಕ್ಟರ್ ಪಲ್ಟಿಯಾಗಿ, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ್ ಬ್ಯಾರೇಜ್ ಮೇಲೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಮೃತರನ್ನು ಅಥಣಿ ತಾಲೂಕಿನ ಕಕಮರಿ ಗ್ರಾಮದ ಅಕ್ಷತಾ ಕನಮಡಿ (20) ಎಂದು ಗುರುತಿಸಲಾಗಿದೆ. ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ …

Read More »

ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.   ಬೆಳಗಾವಿ ಪಾಲಿಕೆಯ ವ್ಯಾಪ್ತಿಯಲ್ಲಿ ಸಾಕಷ್ಟು ಪೌರ ಕಾರ್ಮಿಕರು ಇದ್ದಾರೆ. ಕೆಲ‌ ಬಿಜೆಪಿ‌ ಸದಸ್ಯರ ಕುಮ್ಮಕ್ಕಿನಿಂದ ಮಹಾರಾಷ್ಟ್ರ ಮೂಲದ ಪೌರಕಾರ್ಮಿಕರ ನೇಮಕ ಮಾಡಿಕೊಂಡಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ”ಪಾಲಿಕೆಯಲ್ಲಿ ಮಹಾರಾಷ್ಟ್ರದ ಕೋವಾಡದ ಪೌರ …

Read More »

ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ: ಸಚಿವ ಶಿವಾನಂದ ಪಾಟೀಲ್

ಹಾವೇರಿ: “ನಗರದ ಸಮೀಪದ ಆಲದಕಟ್ಟಿ ಗ್ರಾಮದಲ್ಲಿ ನಡೆದ ಪಟಾಕಿ ದುರಂತಕ್ಕೆ ಹಲವು ವೈಫಲ್ಯಗಳು ಕಾರಣ” ಎಂದು ಜವಳಿ ಮತ್ತು ಸಕ್ಕರೆ ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಇಂದು ಆಲದಕಟ್ಟಿಯ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಘಟನೆ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ದುರಂತ ನಡೆದಿರುವುದು ದುರಾದೃಷ್ಟಕರ, ಆಗಬಾರದಾಗಿತ್ತು ಆಗಿದೆ. …

Read More »

ಸೆ.3 ರಿಂದ ಲಿಂಗಾಯತ ಪಂಚಮಸಾಲಿ ಮೀಸಲಾತಿಗೆ ಹೋರಾಟ ಮತ್ತೆ ಪ್ರಾರಂಭ: ಜಯಮೃತ್ಯುಂಜಯ ಸ್ವಾಮೀಜಿ

ಚಿಕ್ಕೋಡಿ (ಬೆಳಗಾವಿ) : ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸೆ.3 ರಂದು ನಿಪ್ಪಾಣಿಯ ರೈತ ಹುತಾತ್ಮ ವೃತ್ತದಲ್ಲಿ ಲಿಂಗ ಪೂಜೆ ಸಲ್ಲಿಸುವ ಮುಖಾಂತರ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಹೋರಾಟದ …

Read More »

ದಶಕದಿಂದ ಪಡತರವಾಡಿ ಗ್ರಾಮಕ್ಕಿಲ್ಲ ಬಸ್​ ಸಂಪರ್ಕ.. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ, ಗ್ರಾಮಸ್ಥರಿಗೂ ತೊಂದರೆ

ಚಿಕ್ಕೋಡಿ: ಅಥಣಿ ತಾಲೂಕಿನ ಪಡತರವಾಡಿ ಗ್ರಾಮಕ್ಕೆ ಸರಿಯಾದ ಬಸ್​ ಸಂಪರ್ಕವಿಲ್ಲದೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಮತ್ತು ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಈ ಗ್ರಾಮಕ್ಕೆ ಕಳೆದ 15 ವರ್ಷಗಳಿಂದ ಬಸ್​ ಸಂಚಾರ ಸ್ಥಗಿತಗೊಂಡಿದ್ದು ಗ್ರಾಮದ ಜನರು, ವಿದ್ಯಾರ್ಥಿಗಳು, ವಯೋವೃದ್ಧರು, ಮಹಿಳೆಯರಿಗೆ ತೊಂದರೆಯಾಗಿದೆ. ಒಂದೂವರೆ ಕಿಲೋಮೀಟರ್ ದೂರದ ಐಗಳಿ-ತೆಲಸಂಗ್ ರಸ್ತೆಗೆ ಸಂಚಾರ ಮಾಡಿ ಬಳಿಕ ಅಲ್ಲಿಂದ ಬೇರೊಂದು ಬಸ್ ಮೂಲಕ ಊರುಗಳಿಗೆ ಸಂಚರಿಸಬೇಕಾಗಿದೆ​. ಮಳೆಗಾಲ ಹಾಗೂ ರಾತ್ರಿ ಸಮಯದಲ್ಲಿ …

Read More »

ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರ ವಾಂತಿ ಭೇದಿಯಿಂದ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಅವರನ್ನು ವಿವಿಧ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಗ್ರಾಮದಲ್ಲಿ ಸೋಮವಾರ ಪಟೇಲ್ ಬಂಧುಗಳ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಊಟ ಮಾಡಿ ಮನೆಗೆ ವಾಪಸ್​​ ಆಗುತ್ತಿದ್ದಂತೆ ಹಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಇಡೀ ರಾತ್ರಿ ಪರದಾಟ ನಡೆಸಿದ ಬಳಿಕ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 10ಕ್ಕೂ ಹೆಚ್ಚು ವಿವಿಧ ಖಾಸಗಿ ಆಸ್ಪತ್ರೆಗೆ …

Read More »

ಮೊದಲು ಎತ್ತುಗಳು ರೈತನ ಜೀವನಾಡಿ ಆಗಿದ್ದವು. ಆದರೆ, ಕಾಲ ಬದಲಾದಂತೆ ಈಗ ಬೈಕ್ ರೈತನ ಜೀವನಾಡಿಯಾಗಿದೆ

ಬೆಳಗಾವಿ: ಮೊದಲು ಎತ್ತುಗಳು ರೈತನ ಜೀವನಾಡಿ ಆಗಿದ್ದವು. ಆದರೆ, ಕಾಲ ಬದಲಾದಂತೆ ಈಗ ಬೈಕ್ ರೈತನ ಜೀವನಾಡಿಯಾಗಿದೆ. ಹೌದು ಎತ್ತುಗಳ ಕೊರತೆಯಿಂದಾಗಿ ಬೈಕ್ ಮೂಲಕ ತಮ್ಮ ಹೊಲದಲ್ಲಿ ಎಡೆಕುಂಟೆ ಹೊಡೆಯುವ ಮೂಲಕ ಇಲ್ಲೊಬ್ಬ ರೈತ ಮಾದರಿಯಾಗಿದ್ದಾರೆ. ಹೌದು ಸವದತ್ತಿ ತಾಲೂಕಿನ ಚಚಡಿ ಗ್ರಾಮದ ರೈತ ಮಹಾಂತೇಶ ಮಹಾದೇವಪ್ಪ ಮತ್ತಿಕೊಪ್ಪ ಎಂಬುವವರೇ ಈ ರೀತಿಯ ವಿನೂತನ ಪ್ರಯತ್ನಕ್ಕೆ ಮುಂದಾದವರು. ತಮ್ಮ ಮೂರು ಎಕರೆ ಹೊಲದಲ್ಲಿ ಗೋವಿನಜೋಳ ಬೆಳೆದಿರುವ ರೈತ ಮಹಾಂತೇಶ, ಬೈಕಿನ ಹಿಂದೆ …

Read More »

ಹೆತ್ತ ಅಮ್ಮನನ್ನೇ ಕೊಂದನಾ ಕುಡುಕ ಮಗ?

ಶಿವಮೊಗ್ಗ: ತಾಯಿಯನ್ನು ಕಣ್ಣಿಗೆ ಕಾಣುವ ದೇವರು ಎಂದು ಕರೆಯುತ್ತಾರೆ. ಆದರೆ, ಇಂತಹ ದೇವರನ್ನೇ ಹೆತ್ತ ಮಗನೊಬ್ಬ ಕೊಂದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಭದ್ರಾವತಿ ಪಟ್ಟಣದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾವಿನಕೆರೆ ಕಾಲೋನಿ ‌ನಿವಾಸಿ ಸುಲೋಚನಮ್ಮ ಮೃತರು. ಆಕೆಯ ಮಗ ಸಂತೋಷ್​ ಕೊಲೆ ಆರೋಪಿ. ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿ ಸಂತೋಷ್​ ತನ್ನ ತಾಯಿಯನ್ನು ಬಡಿಗೆಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ತೋಟದಲ್ಲಿ ಮಲಗಿ …

Read More »

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …

Read More »