Breaking News

ಬೆಳಗಾವಿ

ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಶ್ರೀ ಶಿವಯೋಗಿಶ್ವರ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ಬೆಳಗಾವಿಯಲ್ಲಿ ಆಗಸ್ಟ್​ 29 ಅಥವಾ 30ರಂದು ಗೃಹಲಕ್ಷ್ಮಿಗೆ ಚಾಲನೆ :ಸಿಎಂ ಸಿದ್ದರಾಮಯ್ಯ

ಬೆಳಗಾವಿ: ”ಬೆಳಗಾವಿಯಲ್ಲಿ ಆಗಸ್ಟ್​ 29 ಅಥವಾ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿ, ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಕಾರ್ಯಕ್ರಮಕ್ಕಾಗಿ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರೂ ಆಗಮಿಸುತ್ತಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದರು. ”ಒಂದು ವಿಭಾಗದಲ್ಲಿ ಒಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, …

Read More »

‘ಸರ್ಕಾರವು ನೇಕಾರರ ಬದುಕು ಕಸಿದುಕೊಳ್ಳಬಾರದು” ಎಂದು ಉತ್ತರ ಕರ್ನಾಟಕ ವೃತ್ತಿಪರ ನೇಕಾರ ಹೋರಾಟ ಸಮಿತಿ ಸಂಚಾಲಕ ಗಜಾನನ ಗುಂಜೇರಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ: ”ನೇಕಾರರ ಬದುಕನ್ನು ಕಸಿದುಕೊಳ್ಳುವ ಕೆಲಸಕ್ಕೆ ಸರಕಾರ ಮುಂದಾಗಬಾರದು” ಎಂದು ಉತ್ತರ ಕರ್ನಾಟಕ ವೃತ್ತಿಪರ ನೇಕಾರ ಹೋರಾಟ ಸಮಿತಿ ಸಂಚಾಲಕ ಗಜಾನನ ಗುಂಜೇರಿ ಆಗ್ರಹಿಸಿದರು. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಜಗತ್ತಿನ ಮಾನ ಮುಚ್ಚುವ ನೇಕಾರರ ಬದುಕು ಚಿಂತಾಜನಕವಾಗಿದೆ. ಕಳೆದ ಮೂರು ವರ್ಷಗಳಿಂದ ಮಳೆಯಿಂದಾಗಿ ನೆರೆ ಹಾವಳಿ, ಕೊರೊನಾ ಪರಿಣಾಮ ಹಾಗೂ ಕಚ್ಚಾ ನೂಲಿನ ಬೆಲೆ ಏರಿಕೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದೇವೆ. ನೇಕಾರರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ …

Read More »

ಸಿಎಂ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಚಿಕ್ಕೋಡಿ : ನಾಳೆ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವರು ಆಗಮಿಸಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು.   ಬೆಳಗಾವಿ ಜಿಲ್ಲೆಯ ಕೋಕಟನೂರ ಗ್ರಾಮದಲ್ಲಿಂದು ಕಾರ್ಯಕ್ರಮದ ರೂಪುರೇಷೆ ಹಾಗೂ ವೇದಿಕೆ ನಿರ್ಮಾಣ ಕಾರ್ಯ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್ 11ರಂದು 10:30ಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ …

Read More »

ಹಾಳಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಪಿಡಬ್ಲ್ಯೂಡಿ ಅಧಿಕಾರಿಗಳು

ಚಿಕ್ಕೋಡಿ (ಬೆಳಗಾವಿ): ಆಗಸ್ಟ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಆಗಮಿಸುತ್ತಿದ್ದು ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.   ಅಥಣಿಯಿಂದ ಕೋಕಟನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 20 ಕಿಮೀ ರಸ್ತೆ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಹಿಂದೆ ರಸ್ತೆ ದುರಸ್ತಿಗೆ ಅಥಣಿ ಲೋಕೋಪಯೋಗಿ ಅಧಿಕಾರಿಗಳಿಗೆ ಹಲವು ಬಾರಿ ಜನರು ಮನವಿ ಸಲ್ಲಿಸಿದರೂ ಕ್ಯಾರೆನ್ನದ ಅಧಿಕಾರಿಗಳು ಸದ್ಯ …

Read More »

ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್​ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ರೈತ ದಂಪತಿ ಮೃತಪಟ್ಟಿದ್ದಾರೆ.

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಇಂದು ನಡೆದಿದೆ. ನಿಸ್ಸಾರ್ ಅಹಮ್ಮದ್ ಮಕ್ಬೂಲ್ ಸಾಬ್ ಸನದಿ(32), ಪತ್ನಿ ಲತಾ ನಿಸ್ಸಾರ್ ಅಹಮ್ಮದ್ ಸನದಿ(26) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಕೆಳಗೆ ಬಿದ್ದಿದ್ದ ವಿದ್ಯುತ್​ ತಂತಿ ಸ್ಪರ್ಶಿಸಿ ಘಟನೆ ನಡೆದಿದೆ. “ಜಮೀನಿನಲ್ಲಿ ಹಾದು ಹೋಗಿರುವ 11 ಕೆವಿ ವಿದ್ಯುತ್ ತಂತಿಗಳು ಹಳೆಯದಾಗಿದ್ದು, ತುಕ್ಕು ಹಿಡಿದಿದ್ದವು. ಇವುಗಳನ್ನು ಬದಲಾಯಿಸುವಂತೆ ಅನೇಕ ಬಾರಿ ಗ್ರಾಮಸ್ಥರು ಒತ್ತಾಯಿಸಿದ್ದರು. ಆದರೆ …

Read More »

ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲ

ಚಿಕ್ಕೋಡಿ (ಬೆಳಗಾವಿ) : ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲಾಗಿದ್ದು, ರಾಜ್ಯ ಸರ್ಕಾರ ತುರ್ತಾಗಿ ಬೆಳೆ ಖರೀದಿ ಮಾಡಿ ತಮ್ಮ ನೆರವಿಗೆ ಬರುವಂತೆ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿಜಯಪುರ ಜಿಲ್ಲೆಯನ್ನು ಬಿಟ್ಟರೆ ಬೆಳಗಾವಿ ಜಿಲ್ಲೆಯ ರಾಯಬಾಗ, ಕಾಗವಾಡ, ಅಥಣಿ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ಅತಿ ಹೆಚ್ಚು ದ್ರಾಕ್ಷಿ ಬೆಳೆಗಾರರನ್ನು ಹೊಂದಿರುವ ಪ್ರದೇಶ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ, ಈ ಬಾರಿ ಬೆಲೆ ಕುಸಿತದಿಂದ ಸಾವಿರಾರು ಟನ್ …

Read More »

ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ಪಿಎಲ್‍ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ

ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಈ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು …

Read More »

ಟೊಮೆಟೊ ಕಳ್ಳನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ ರೈತ

ಚಿಕ್ಕೋಡಿ (ಬೆಳಗಾವಿ) : ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ ಶ್ರೀ ವಿಠ್ಠಲದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »