ಚನ್ನಮ್ಮನ ಕಿತ್ತೂರು: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಬಿಜೆಪಿ ಸದಸ್ಯ ನಾಗರಾಜ ಬಸವರಾಜ ಅಸುಂಡಿ (36) ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರು ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಮೇಟ್ಯಾಲ ಗ್ರಾಮದ ಅಶೋಕ ಚನ್ನಬಸಪ್ಪ ಮಾಳಗಿ, ಚನ್ನಾಪುರದ ಬಸವರಾಜ ಶೇಖಪ್ಪ ಸಂಗೊಳ್ಳಿ ಮತ್ತು ಕಿತ್ತೂರಿನ ಸೋಮವಾರ ಪೇಟೆಯ ಸುರೇಶ ಈರಪ್ಪ ಕಡೇಮನಿ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಗರಾಜ ತಂದೆ ಬಸವರಾಜ ಈ …
Read More »ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ನಮಗೆ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ’ ಎಂದು ಹೇಳಿದರು. ‘ಕಾಂಗ್ರೆಸ್ ಎಂದೆಂದಿಗೂ ಬಡವರ …
Read More »ಹಿಂಡಲಗಾ ಜೈಲು ಸೇರಿದ ದರ್ಶನ್ ಸಹಚರ ಪ್ರದೂಶ್
ಬೆಳಗಾವಿ: ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ, ನಟ ದರ್ಶನ್ ಸಹಚರ ಪ್ರದೂಶ್ ಅವರನ್ನು ಗುರುವಾರ ಮಧ್ಯಾಹ್ನ ಇಲ್ಲಿನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಯಿತು. ಪ್ರಕರಣ 14ನೇ ಆರೋಪಿ ಪ್ರದೂಶ್ ಬ್ಲ್ಯಾಂಕೆಟ್ ಹಾಗೂ ಬ್ಯಾಗ್ ಸಮೇತ ಬಂದು ಜೈಲು ಸೇರಿದರು. ಭದ್ರತಾ ಸಿಬ್ಬಂದಿ ಅರೋಪಿಯ ಬ್ಯಾಗನ್ನು ಸಂಪೂರ್ಣ ಜಾಲಾಡಿದರು. ಬ್ಲ್ಯಾಂಕೆಟ್ ಅನ್ನು ಒಳಗೆ ತೆಗೆದುಕೊಂಡು ಹೋಗಲು ನಿರಾಕರಿಸಿದರು. ಬ್ಯಾಗಿನಲ್ಲಿ ಔಷಧಿ ಬಾಟಲಿ ಇದ್ದು, ವೈದ್ಯರ ಸಲಹೆ ಮೇರೆಗೆ ಕೊಡುತ್ತೇವೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.
Read More »ದರ್ಶನ್ ನಿಗಾಕ್ಕೆ CCTV, ಬಾಡಿವೋರ್ನ್ ಕ್ಯಾಮೆರಾ: ಸೂಪರಿಂಟೆಂಡೆಂಟ್‌ಗೆ DIG ಸೂಚನೆ
ಬೆಳಗಾವಿ: ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಹೇಗೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಉತ್ತರವಲಯ ಡಿಐಜಿ ಟಿ.ಪಿ.ಶೇಷ ಅವರು ಜೈಲಿನ ಸೂಪರಿಂಟೆಂಡೆಂಟ್ ಜ್ಞಾಪನಾ ಪತ್ರ ಬರೆದಿದ್ದಾರೆ. ‘ದರ್ಶನ್ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಬೇಕು. ಆ ಕೊಠಡಿಗೆ 24×7 ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರಿಸಬೇಕು. ಪ್ರತಿನಿತ್ಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಶೇಖರಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ‘ದರ್ಶನ್ ಇರುವ ಸೆಲ್‌ನ ಕರ್ತವ್ಯಕ್ಕೆ ಪ್ರತ್ಯೇಕವಾಗಿ ಒಬ್ಬ ಮುಖ್ಯವೀಕ್ಷಕ ಅಧಿಕಾರಿ ನಿಯೋಜಿಸಬೇಕು. …
Read More »19 ಕೋಟಿ ವೆಚ್ಚದಲ್ಲಿ ಕೆರೆ ಭರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಹಿರೇಬಾಗೇವಾಡಿ: ‘ಈ ವರ್ಷ ಉತ್ತಮ ಮಳೆಯಾದ ಕಾರಣ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ₹19 ಕೋಟಿ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ ಕೆರೆಗೆ ಬುಧವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಬಾವಿ ಕೆರೆ ತುಂಬಿಸುವ …
Read More »ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ:
ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯಲ್ಲಿರುವ ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ ಎಂದು ಮಂಜುನಾಥ ಅಮರಪ್ಪನವರ ಹೇಳಿದರು. ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಇವರು. ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆ ಮುಂದೆ ಅಷ್ಟೇ ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಓಡಾಡುವುದಿಲ್ಲ. ಪಟ್ಟಣದ ಕೋಟೆಯ ಮುಂದೆ ಇರುವ ಮದ್ಯದ ಅಂಗಡಿ ಸೇರಿದಂತೆ ಎಲ್ಲ ಮದ್ಯದ ಅಂಗಡಿಗಳ ಮುಂದೆ ಸಾರ್ವಜನಿಕರು ಓಡಾಡುತ್ತಾರೆ. …
Read More »ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ:ಹೆಬ್ಬಾಳಕರ
ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು. ಕಾಂಗ್ರೆಸ್ ಎಂದೆಂದಿಗೂ …
Read More »ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಬೆಳಗಾವಿಯಲ್ಲಿ ಪ್ರವಾಹದ ಆತಂಕ
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು ಇದರಿಂದ ಕೃಷ್ಣಾ ಘಟಪ್ರಭಾ ಮತ್ತು ದೂಧ್ ಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಒಂದು ಲಕ್ಷ ಕ್ಯೂಸೆಕ್ಸ್ ದಾಟಿದ್ದು ನದಿ ತೀರದ ಗ್ರಾಮಗಳಲ್ಲಿ ಇನ್ನೂ ಪ್ರವಾಹದ ಆತಂಕ ಮನೆ ಮಾಡಿದೆ. ಈಗ ಲಭ್ಯವಾದ ಮಾಹಿತಿಯಂತೆ ಮಹಾರಾಷ್ಟ್ರದ ರಾಜಾಪುರ ಬಳಿ ಕೃಷ್ಣಾ ನದಿಗೆ ಒಂದು ಲಕ್ಷ ಮತ್ತು ದೂಧ್ ಗಂಗಾ ನದಿಯಿಂದ …
Read More »ಕೊಯ್ನಾ ಜಲಾಶಯದಿಂದ ನೀರು ಬಿಡುವ ಸೂಚನೆ: ನದಿ ತೀರದಲ್ಲಿ ಎಚ್ಚರಿಕೆ
ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ …
Read More »‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ.
ಕಿತ್ತೂರು: ‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ. ಮಾನವರ ಸತತ ಮಲೀನತೆಯ ‘ದಾಳಿ’ಗೆ ಒಳಗಾಗಿರುವ ಇಲ್ಲಿನ ಗುರುವಾರ ಪೇಟೆಯ ಐತಿಹಾಸಿಕ ರಣಗಟ್ಟಿ ಕೆರೆ ತನ್ನ ರಕ್ಷಣೆಗೆ ಮೊರೆ ಇಡುವಂತೆ ಭಾಸವಾಗುತ್ತಿದೆ’ ಎನ್ನುತ್ತಾರೆ ಜನರು. ‘ಈ ಕೆರೆಗೂ ಒಂದು ಐತಿಹಾಸಿಕ ಹಿನ್ನೆಲೆಯಿದೆ. ಕ್ರಾಂತಿನೆಲದ ರಕ್ತಲೇಪಿತ ಖಡ್ಗವನ್ನು ಇದೇ ನೀರಿನಲ್ಲಿ ತೊಳೆಯುತ್ತಿದ್ದರು. ಹಾವು ಕಡಿದರೆ ಇಲ್ಲಿನ ನೀರು ಕುಡಿಯಲು ಕೊಡುತ್ತಿದ್ದರು. ಒಂದು ಕಾಲಕ್ಕೆ ಔಷಧಿಯ …
Read More »