ಬೆಳಗಾವಿಯ ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಸೈನಿಕ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆ ಕೆಸರಿನಿಂದ ಕೂಡಿದೆ, ಪಾದಚಾರಿಗಳು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ವಹಿಸುವಂತೆ ಸಾಮಾಜಿಕ ಕಾರ್ಯಕರ್ತ ಸಂತೋಷ ದಾರೆಕರ್ ಮನವಿ ಮಾಡಿದ್ದಾರೆ. ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಮಿಲಿಟರಿ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆಯನ್ನು ಪ್ರಸ್ತುತ ಪೈಪ್ಲೈನ್ ಹಾಕಲು ರಸ್ತೆಯ ಉದ್ದಕ್ಕೂ ಅಗೆಯಲಾಗುತ್ತಿದೆ. ಹಾಗಾಗಿ ಈ ಸ್ಥಳದಲ್ಲಿ ಭಾರೀ ಯಂತ್ರೋಪಕರಣಗಳಿವೆ. ರಸ್ತೆ …
Read More »ದೂಧ್ ಸಾಗರ ನೋಡಲು ಹೋದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಗೋವಾ ಪೊಲೀಸ
ಬೆಳಗಾವಿ: ದೂಧ್ ಸಾಗರ ನೋಡಲು ಹೋದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಘಟನೆ ನಡೆದಿದ್ದು ಗೋವಾ ಪೊಲೀಸರ ವರ್ತನೆ ಖಂಡಿಸಿ ರೈಲ್ವೆ ಹಳಿಯ ಮೇಲೆ ಕುಳಿತು ಪ್ರವಾಸಿಗರ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ- ಗೋವಾ ಗಡಿಭಾಗದಲ್ಲಿರುವ ದೂಧ್ ಸಾಗರ ಜಲಪಾತ ಘಟನೆ ನಡೆದಿದ್ದು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ದೂದ್ ಸಾಗರ ನೋಡಲು ಜನಸಾಗರವೇ ಆಗಮಿಸಿದೆ. ಪ್ರವಾಸಿಗರು ಬರುತ್ತಿದ್ದಂತೆ ದೂಧ್ ಸಾಗರ ಪ್ರವೇಶಕ್ಕೆ ನಿಷೇಧವನ್ನು ಗೋವಾದ ಪೊಲೀಸರು ಹೇರಿದ್ದಾರೆ.ದೂದಸಾಗರದಲ್ಲಿ ಆಳವಾದ …
Read More »ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಅದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು: ಬೊಮ್ಮಾಯಿ
ಹಾವೇರಿ: ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲಾ ಎಂಬ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ ಎಂಬ ವದಂತಿ ಹಬ್ಬುತ್ತಿದೆ. ಈ ವಿಚಾರ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ವಾ? ಎಂದು ಪ್ರಶ್ನಿಸಿದ್ದಾರೆ. ನಾನು ಸರ್ಕಾರಕ್ಕೆ ಪ್ರಶ್ನೆ ಕೇಳ್ತಿನಿ, ಈ ಹಿಂದೆ ಎಲ್ಲರೂ ಬಳೆ ಹಾಕಿಕೊಂಡು ಕೆಲಸ ಮಾಡಿದಾರೆ. ಅಂದು ಯಾವ ತೊಂದರೆ ಆಗಿಲ್ಲಾ. ಸರ್ಕಾರಕ್ಕೆ ಮಾಡಲು ಬೇರೆ …
Read More »ಜೈನ ಮುನಿ ಮಹಾರಾಜರ ಕನಸುಗಳನ್ನು ಪೂರ್ಣ ಮಾಡುತ್ತೇವೆ: ಸಂಸದ ಅಣ್ಣಾಸಾಹೇಬ್ ಜೊಲ್ಲೆ
ಚಿಕ್ಕೋಡಿ (ಬೆಳಗಾವಿ) : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆಘಾತ ಉಂಟು ಮಾಡಿದೆ. ಹಿರೇಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಉತ್ತಮ ಆಶ್ರಮ ಕಟ್ಟಿ, ಶಿಕ್ಷಣ ಸಂಸ್ಥೆ ಮಾಡಿದರು. ಮುಂದೆ ಅವರು ಬಿಟ್ಟು ಹೋದ ಕನಸುಗಳನ್ನು ಪೂರ್ಣ ಮಾಡುತ್ತೇವೆ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು. ಇಂದು ಜೈನಮುನಿ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಕುಮಾರ ನಂದಿ ಮಹಾರಾಜರು ಬಿಇ ಪದವೀಧರ ಆಗಿದ್ದು, 14 ಭಾಷೆಗಳಲ್ಲಿ ಪರಿಣಿತರಾಗಿದ್ದರು. …
Read More »ಜೈನಮುನಿ ಕಾಮಕುಮಾರ ನಂದಿ ಮಹಾರಾಜರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಜಯಮೃತ್ಯುಂಜಯ ಶ್ರೀ
ಚಿಕ್ಕೋಡಿ: ಹಿರೇಕೊಡಿ ನಂದಿ ಪರ್ವತ ಮಹಾರಾಜರ ಹತ್ಯೆಯಿಂದ ಭಾರತದ ಅಧ್ಯಾತ್ಮ ಪರಂಪರೆಗೆ ಧಕ್ಕೆ ಆಗಿದೆ. ಒಕ್ಕೊರಲಾಗಿ ಖಂಡಿಸಿ ನ್ಯಾಯ ಕೊಡಿಸುವ ಕೆಲಸ ಎಲ್ಲರೂ ಕೂಡಿ ಮಾಡಬೇಕು. ನೊಂದ ಮನಸ್ಸುಗಳಿಗೆ ಧೈರ್ಯ ಹೇಳಿ ಮುಂದೆ ಈ ರೀತಿ ಘಟನೆ ಆಗದಂತೆ ಎಲ್ಲರೂ ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮಗಳ …
Read More »ಸ್ನೇಹಿತನನ್ನು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಇಲ್ಲಿನ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೀರನವಾಡಿ ಗ್ರಾಮದ ಪ್ರಸಾದ ನಾಗೇಶ ವಡ್ಡರ, ಪ್ರಶಾಂತ ಕರ್ಲೇಕರ್ ಬಂಧಿತ ಆರೋಪಿಗಳು. ಇನ್ನು ಕೊಲೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ. ಆರೋಪಿಗಳಾದ ಪ್ರಸಾದ ವಡ್ಡರ, ಪ್ರಶಾಂತ ಕರ್ಲೇಕರ್ ಮತ್ತು ಕೊಲೆಯಾದ ಅರ್ಬಾಜ್ ಮುಲ್ಲಾ ಮೂವರು ಸ್ನೇಹಿತರು. ಮೂರು ವರ್ಷಗಳ ಹಿಂದೆ ಪೀರನವಾಡಿಯ ಜನ್ನತ್ …
Read More »ಕಪರಟ್ಟಿಯ ಬಸವರಾಜ ಹಿರೇಮಠ ಅವರನ್ನ ಪ್ರಶಂಶಿಸಿದ ಸರ್ವೊತ್ತಮ ಜಾರಕಿಹೊಳಿ
ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ ಸ್ವಾಗತಿಸಿದರು
Read More »ಚಂದ್ರಯಾನ – 3 ಮಿಷನ್ನಲ್ಲಿ ಬೆಳಗಾವಿ ಯುವ ವಿಜ್ಞಾನಿ
ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಶುಭ ಹಾರೈಸಿದ ಸ್ವಾಮೀಜಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಚಂದ್ರಯಾನ – 3 ಉಡಾವಣೆ ಬಗ್ಗೆ ಮಾತನಾಡಿರುವ ಬೆಳಗಾವಿಯ ನಾಗನೂರು ರುದ್ರಾಕ್ಷಿ …
Read More »