Breaking News

ಬೆಳಗಾವಿ

160ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಾಳಜಿ ಕೇಂದ್ರಗಳಲ್ಲಿ ಆಶ್ರಯ

ಗೋಕಾಕ: ಇಲ್ಲಿನ ಹಳೆ ದನಗಳ ಪೇಟೆ, ದಾಳಂಬ್ರಿ ತೋಟ, ಮಟನ್ ಮಾರ್ಕೆಟ್, ಉಪ್ಪಾರ ಓಣಿ, ಬೋಜಗರ ಓಣಿ, ಕುಂಬಾರ ಓಣಿ, ಡೋರ ಗಲ್ಲಿ ಮುಂತಾದ ಪ್ರದೇಶಗಳ ಪ್ರತಿ ವರ್ಷ ಘಟಪ್ರಭೆ ಪ್ರವಾಹದಲ್ಲಿ ಮುಳುಗುತ್ತವೆ. ಮಹರ್ಷಿ ಭಗಿರಥ ಸರ್ಕಲ್‌ ಅಂತೂ ಮೊದಲ ಮಳೆಗೇ ಜಲಾವೃತವಾಗುತ್ತದೆ. ಮೂರು ತಲೆಮಾರುಗಳಿಂದಲೂ ಜನ ಒಂದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ನೆರೆ ಬಂದಾಗ ಜನಜೀವನ ಮಾತ್ರ ಅಸ್ತವ್ಯಸ್ತ ಆಗುವುದಿಲ್ಲ. ಇಲ್ಲಿನ ಶಾಲೆ- ಕಾಲೇಜು ಮಕ್ಕಳ ಶಿಕ್ಷಣದ ಮೇಲೂ …

Read More »

ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …

Read More »

ಬಾಲಕಿಯರ ಮೆಟ್ರಿಕ್‌ ನಂತರದ ಹಾಸ್ಟೆಲ್‌ ಕಟ್ಟಡದ ಉದ್ಘಾಟನೆ ಯಾವಾಗ?

ಚಿಕ್ಕೋಡಿ: ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಗಿದು ಒಂದು ವರ್ಷ ಕಳೆದಿದೆ. ಆದರೆ, ಅದಕ್ಕೆ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. 1997ರಲ್ಲಿ ಚಿಕ್ಕೋಡಿಗೆ ಈ ವಸತಿ ನಿಲಯ ಮಂಜೂರಾಯಿತು. ಅಂದಿನಿಂದಲೂ ಪಟ್ಟಣದಲ್ಲಿ ಬೇರೆ ಬೇರೆ ಬಾಡಿಗೆ ಕಟ್ಟಡಗಳಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಅಲ್ಲಿ ದಾಖಲಾಗುವ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳಲು ಸರಿಯಾಗಿ ಬಸ್‌ …

Read More »

ಲಾರಿ ಡಿಕ್ಕಿ: ಆಟೊ ಚಾಲಕ ಸ್ಥಳದಲ್ಲೇ ಸಾವು

ಬೆಳಗಾವಿ: ಯಡಿಯೂರಪ್ಪ ಮಾರ್ಗಕ್ಕೆ ಹೊಂದಿಕೊಂಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಗೂಡ್ಸ್‌ ಆಟೊ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಆಟೊ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ಅಮಿನ್ ಯರಗಟ್ಟಿ (45) ಮೃತ ವ್ಯಕ್ತಿ.   ಆಟೊದಲ್ಲಿ ತರಕಾರಿ ತುಂಬಿಕೊಂಡು ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗಡೆ ಬಿದ್ದ ಆಟೊ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರು. ಲಾರಿ ಕೂಡ ರಸ್ತೆ ಪಕ್ಕಕ್ಕೆ …

Read More »

ಸಂಚಾರಿ ಕುರಿಗಾಹಿಗಳಿಗೆ ಬೇಕು ಸೌಕರ್ಯ

ರಾಯಬಾಗ: ರಾಜ್ಯದಲ್ಲಿ ಕುರುಬ ಸಮಾಜದ ಸಂಖ್ಯೆ 60 ಲಕ್ಷಕ್ಕೂ ಅಧಿಕವಿದೆ. ಸುಮಾರು 18 ಲಕ್ಷಕ್ಕೂ ಅಧಿಕ ಸಂಚಾರಿ ಕುರಿಗಾಹಿಗಳಿದ್ದಾರೆ. ಒಟ್ಟಾರೆ ಜನಸಂಖ್ಯೆಯ ಶೇ 30ರಷ್ಟು ಮಂದಿ ಸಂಚಾರಿ ಕುರಿಗಾಹಿಗಳೇ ಇದ್ದಾರೆ. ಆದರೆ, ಈ ಸಮಾಜಕ್ಕೆ ಸಲ್ಲಬೇಕಾದ ಕನಿಷ್ಠ ಸೌಕರ್ಯಗಳು ಇನ್ನೂ ಸಿಕ್ಕಿಲ್ಲ. ಆದಿವಾಸಿ ಬುಡಕಟ್ಟು ಸಂಸ್ಕತಿಯನ್ನೇ ಜೀವಾಳವಾಗಿಸಿಕೊಂಡು ಕುರಿ ಸಾಕಾಣಿಕೆ, ಕಂಬಳಿ ನೇಕಾರಿಕೆ ಮೂಲಕ ಜೀವನ ಸಾಗಿಸುತ್ತಿರುವ ಹಾಲುಮತ ಕುರುಬರು ಇನ್ನೂ ಸಂಕಷ್ಟದಲ್ಲಿದ್ದಾರೆ. ಸಂಚಾರಿ ಕುರುಬರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. …

Read More »

ಕೋಥಳಿ-ಕುಪ್ಪಾಣವಾಡಿ ಆಶ್ರಮದ ಸಾಕಾನೆ ‘ಉಷಾರಾಣಿ’ ಸಾವು

ಚಿಕ್ಕೋಡಿ: ತಾಲ್ಲೂಕಿನ ಕೋಥಳಿ-ಕುಪ್ಪಾನವಾಡಿಯ ಆಚಾರ್ಯ ದೇಶಭೂಷಣ ಜೈನ ಆಶ್ರಮದ ಸಾಕು ಆನೆ ಉಷಾರಾಣಿ (50) ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ದು, ಆಚಾರ್ಯ ದೇಶ ಭೂಷಣ ಆಶ್ರಮ ಟ್ರಸ್ಟ್ ಹಾಗೂ ಶಾಂತಿಗಿರಿ ಟ್ರಸ್ಟ್ ವತಿಯಿಂದ ಅಂತಿಮ ನಮನಗಳನ್ನು ಸಲ್ಲಿಸಲಾಯಿತು. ಆಶ್ರಮದ ಆವರಣದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಜೈನ ಮುನಿಗಳು ಹಾಗೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿಸಲಾಗಿದೆ. 1977ರಲ್ಲಿ 3 ವರ್ಷದ ಮರಿ ಇದ್ದಾಗ ಶಿವಮೊಗ್ಗದ ಅರಣ್ಯ ಪ್ರದೇಶದಿಂದ ತರಲಾಗಿದ್ದ …

Read More »

ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸರ ದಿಢೀರ್ ದಾಳಿ

ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸರ ದಿಢೀರ್ ದಾಳಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ನೇತೃತ್ವದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿದಂತೆ 260ಕ್ಕೂ ಅಧಿಕ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ದಾಳಿಯ ವೇಳೆ ತಂಬಾಕು ಪಾಕೇಟ್, ಸಿಗರೇಟ್, ಮೂರು ಚಾಕುಗಳು, ಸ್ಮಾಲ್ ಹಿಟರ್ ವೈಯರ್ ಬಂಡಲ್, ಮತ್ತು ಎಲೆಕ್ಟ್ರಿಕಲ್ ಒಲೆಗಳನ್ನು ಜಪ್ತಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಅಸುoಡಿ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.     ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ …

Read More »

ಕಾರ್ಖಾನೆ ಆಡಳಿತ ಮಂಡಳಿಯಿಂದ ಮೃತ ಕಾರ್ಮಿಕ ಕುಟುಂಬಕ್ಕೆ 18 ಲಕ್ಷ ರೂ ಪರಿಹಾರ

ಬೆಳಗಾವಿ, ಆಗಸ್ಟ್​​ 09: ಕಾರ್ಖಾನೆಯಲ್ಲಿ ಅಗ್ನಿ ದುರಂತದಲ್ಲಿ (Fire Tragedy) ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಕುಟುಂಬಕ್ಕೆ ಕಾರ್ಖಾನೆ ಆಡಳಿತ ಮಂಡಳಿಯಿಂದ ಒಟ್ಟು 18 ಲಕ್ಷ ರೂ. ಪರಿಹಾರ ನೀಡಲಾಗಿದೆ. ಆ.6ರಂದು ಜಿಲ್ಲೆಯ ನಾವಗೆ ಬಳಿಯ ಸ್ನೇಹಂ ಟೇಪಿಂಗ್ ಕಾರ್ಖಾನೆಯಲ್ಲಿ ನಡೆದಿದ್ದ ದುರ್ಘಟಯಲ್ಲಿ ಲಿಫ್ಟ್‌ನಲ್ಲಿ ಕಾರ್ಮಿಕ ಯಲ್ಲಪ್ಪ‌ ಗುಂಡ್ಯಾಗೋಳ ಸಜೀವದಹನವಾಗಿದ್ದ. ಸರ್ಕಾರ‌ ಹಾಗೂ ಜಿಲ್ಲಾಡಳಿತಕ್ಕೂ ಮೊದಲು ಕಾರ್ಖಾನೆ ಆಡಳಿತ ಮಂಡಳಿ 18 ಲಕ್ಷ ರೂ. ಪರಿಹಾರ ನೀಡಿದೆ. ಮುಂಚೆ 10 ಲಕ್ಷ ರೂ. ಪರಿಹಾರ ಬೇಡ …

Read More »

ಸ್ವಾತಂತ್ರ್ಯ ದಿನ: ಪ್ರಧಾನಿಯೊಂದಿಗೆ ಭಾಗವಹಿಸಲು ವಿದ್ಯಾರ್ಥಿ ಸಾಗರ ಆಯ್ಕೆ

ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ 77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳ ಪೈಕಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ …

Read More »