ಬೆಳಗಾವಿ : ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿರುವ ಪ್ರಸ್ತುತ ಕಾಂಗ್ರೆಸ್ ಸರ್ಕಾರ ತಾವೇ ಘೋಷಿಸಿದ 6ನೇ ಗ್ಯಾರಂಟಿ ಏಕೆ ಜಾರಿಗೆ ತರುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಈ ಬಜೆಟ್ನಲ್ಲಿ ತಾವು ಕೊಟ್ಟ ಮಾತಿನಂತೆ ನಮ್ಮ ವೇತನ ಹೆಚ್ಚಿಸಲು ಆದೇಶ ಹೊರಡಿಸಬೇಕು ಎಂದು ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೌದು, ಕಡಿಮೆ ವೇತನದಲ್ಲಿ ನಾವೆಲ್ಲಾ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಪ್ರತಿ …
Read More »(ನರೇಗಾ) ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ
ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ …
Read More »ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರ ಬೆಟ್ಟದಷ್ಟು ನಿರೀಕ್ಷೆ
ಬೆಳಗಾವಿ: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ. ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ …
Read More »ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ: ಯುವ ಕಾಂಗ್ರೆಸ್ ಕಾರ್ಯಕರ್ತರು
ಬೆಳಗಾವಿ : ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಇಂದು ಧರಣಿ ನಡೆಸಿದರು. ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನ್ನಭಾಗ್ಯಕ್ಕೆ ಕನ್ನ ಹಾಕಿರುವ ಬಿಜೆಪಿಗೆ ಧಿಕ್ಕಾರ, ಮೋದಿ ಹಟಾವ್ ದೇಶ ಬಚಾವ್, ಬೇಕೆ ಬೇಕು ಅಕ್ಕಿ ಬೇಕು ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು ಕಾಡಾ ಕಚೇರಿ ಬಳಿಯ ಸಂಸದೆ …
Read More »ಖಾನಾಪುರ ಕ್ರಾಸ್ ಆಕ್ರಮ ಬಳಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ
ಧಾರವಾಡ: ಗರಗ ಪೊಲೀಸ್ ಠಾಣೆಗೆ ಒಳಪಡುವಂತಹ ಖಾನಾಪುರ ಕ್ರಾಸ್ ಬಳಿ ಆಕ್ರಮವಾಗಿ ಇಸ್ಪೀಟ್ ಅಡ್ಡೆ ನಡೆಸುತ್ತಿದ ವೇಳೆಯಲ್ಲಿ ಗರಗ ಠಾಣೆ ಪೊಲೀಸ್ ಕಚ್ಚಿತ ಮಾಹಿತಿ ಪ್ರಕಾರ ದಾಳಿಯನ್ನು ಮಾಡಿ 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ 8 ಆರೋಪಿಗಳಿಂದ ನಗದು, ಹಾಗೂ ಇಸ್ಪೀಟ್ ಆಡಲು ಬಳಸುತ್ತಿದ್ದ ಎಲೆಗಳನ್ನು ವಶಕ್ಕೆ ಪಡೆದುಕೊಂಡು, ಹಾಗೂ ಸದ್ಯ 8 ಜನರ ಆರೋಪಿಗಳ ಮೇಲೆ ಗರಗ ಪೊಲೀಸ ಠಾಣೆಯಲ್ಲಿ ಪ್ರಕರಣವನ್ನು ದಾಖಲೆ ಮಾಡಿ ಮುಂದಿನ ಕಾನೂನು …
Read More »ಶಿರಹಟ್ಟಿ ಕೆ ಡಿ ಗ್ರಾಮದ ವ್ಯಕ್ತಿ ಶವವಾಗಿ ಪತ್ತೆ
, ಚಿಕ್ಕೋಡಿ: ಅನುಮಾನಾಸ್ಪದ ಸಾವು.!ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಭೀಮಣ್ಣ ಕಲ್ಲಪ್ಪ ಮುನ್ನೋಳಿ ಎಂಬ ವ್ಯಕ್ತಿ ನಿನ್ನೆ ರಾತ್ರಿ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬಾಗೇವಾಡಿ ರಸ್ತೆ ಪಕ್ಕ ಅನುಮಾನಾಸ್ಪದ ಶವವಾಗಿ ಪತ್ತೆಯಾಗಿದ್ದಾನೆ, ಮೇಲ್ನೋಟಕ್ಕೆ ಹತ್ಯೆ ಶಂಕೆ ಇರಬಹುದೆಂದು ಊಹಿಸಬಹುದಾಗಿದೆ. ಮೂಲತಃ ಹುಕ್ಕೆರಿ ತಾಲೂಕಿನ ಶಿರಹಟ್ಟಿ ಕೆಡಿ ಗ್ರಾಮದ ಭಿಮಣ್ಣ ಮುನ್ನೋಳಿ ಚಿಕ್ಕೋಡಿ ತಾಲೂಕಿನ ಕಬ್ಬೂರ ಬಾಗೆವಾಡಿ ರಸ್ತೆ ಕಾಲುವೆ ಮೇಲೆ ಶವವಗಾಗಿ ಪತ್ತೆಯಾಗಿದ್ದು, ಸ್ಥಳಕ್ಕೆ …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರಿ ಕುಲಪತಿ ನೇಮಕ
ಬೆಳಗಾವಿ :ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯನ್ನಾಗಿ ಪ್ರೊ.ವಿಜಯ ಎಫ್. ನಾಗಣ್ಣವರನ್ನು ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಅವರು ಇದುವರೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಲಪತಿಯಾಗಿದ್ದ ಎಂ.ರಾಮಚಂದ್ರಗೌಡ ಅವರ ನಿವೃತ್ತಿಯಿಂದ ಇದೀಗ ನಾಗಣ್ಣವರನ್ನು ನೇಮಕ ಮಾಡಲಾಗಿದೆ.
Read More »ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ
ಬೆಳಗಾವಿ :ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ. ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದವರು. ಕೊಲೆಗೈದ ವ್ಯಕ್ತಿ ಯಲ್ಲಪ್ಪ ಮಾಳಗಿ(45) ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧ ಶಂಕಿಸಿ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ …
Read More »ಹಾವೇರಿ: ಶಿಲ್ಪಕಲೆಗಳಿಂದ ಕಂಗೊಳಿಸುತ್ತಿರುವ ಪುರಸಿದ್ದೇಶ್ವರ ದೇವಸ್ಥಾನಕ್ಕೆ ಹಸಿರಿನ ಮೆರುಗು
ಹಾವೇರಿ: ಏಲಕ್ಕಿನಗರಿ ಹಾವೇರಿಗೆ ಕಳಸಪ್ರಾಯವಾಗಿರುವದು ಪುರಸಿದ್ದೇಶ್ವರ ದೇವಸ್ಥಾನ. ಈ ದೇವಸ್ಥಾನ ಪುರಾತತ್ವ ಇಲಾಖೆಯ ಸುಪರ್ದಿಗೆ ಬಂದ ಮೇಲೆ ದೇವಸ್ಥಾನದ ಚಿತ್ರಣವೇ ಬದಲಾಗಿದೆ. 25 ವರ್ಷದ ಹಿಂದೆ ಜೀರ್ಣೋದ್ದಾರಗೊಂಡ ದೇವಸ್ಥಾನದ ಆವರಣದಲ್ಲಿ ಇದೀಗ ಹಸಿರು ಕಂಗೊಳಿಸುತ್ತಿದೆ. ಬಣ್ಣ ಬಣ್ಣದ ಪುಷ್ಪಗಳು ಉದ್ಯಾನದ ಸೌಂದರ್ಯವನ್ನ ಇಮ್ಮಡಿಗೊಳಿಸಿವೆ. ರಾಜ್ಯದ ವಿವಿಧ ರಾಜಮನೆತನಗಳ ಆಡಳಿತ ಕಂಡ ಪ್ರಾಂತ್ಯ ಹಾವೇರಿ. ರಾಜ್ಯದ ಪ್ರಥಮ ರಾಜಮನೆತನ ಕದಂಬರಿಂದ ಹಿಡಿದು ಇತ್ತೀಚಿನ ಮೈಸೂರು ಒಡೆಯರ ಕಾಲದವರೆಗೆ ವಿವಿಧ ರಾಜಮನೆತನಗಳು ಇಲ್ಲಿ ಆಳ್ವಿಕೆ …
Read More »ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ
ಬೆಳಗಾವಿಯ ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ ನೀಡಲಾಯಿತು. ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ಕಸದ ಗಾಡಿಗಳು ಕಡಿಮೆ ಇದ್ದವು. ಮನೆಯ ತ್ಯಾಜ್ಯವನ್ನು ವಾರಕ್ಕೆ 3 ಬಾರಿ ಮಾತ್ರ ಸಂಗ್ರಹಿಸಲಾಗುತ್ತದೆ. ಇದನ್ನು ಗಮನಿಸಿದ ಕಾರ್ಪೊರೇಟರ್ ನಿತಿನ್ ಜಾಧವ್ ಅವರು ಅಭಯ ಪಾಟೀಲ ಅವರೊಂದಿಗೆ ಚರ್ಚಿಸಿ ನೂತನ ಕಸದ ವಾಹನಕ್ಕೆ ಅನುಮೋದನೆ ಪಡೆದು. ಸೋಮವಾರ ಕಸದ ವಾಹನ …
Read More »