Breaking News
Home / ಜಿಲ್ಲೆ / ಬೆಳಗಾವಿ (page 84)

ಬೆಳಗಾವಿ

ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹುರಾಜ್ಯ ಸಹಕಾರಿ ಸಂಘಗಳ ಜಂಟಿ ಸಮಿತಿಯ ಸದಸ್ಯರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ

ಚಿಕ್ಕೋಡಿ: ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022ರ ಜಂಟಿ ಸಮಿತಿಯ ಸದಸ್ಯರಾಗಿ ಚಿಕ್ಕೋಡಿ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯಲ್ಲಿ ಬಹುರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ,-2022 ಕಾಯ್ದೆಯಲ್ಲಿ ಲೋಕಸಭಾ ಸದಸ್ಯರನ್ನುಳಗೊಂಡಿರುವ ಹಾಗೂ ರಾಜ್ಯ ಸಭಾ ಸದಸ್ಯರ ಜಂಟಿ ಸಮಿತಿಯ ರಚನೆಯಲ್ಲಿ ಚಿಕ್ಕೋಡಿಯ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಆಯ್ಕೆಯಾಗಿದ್ದಾರೆ. …

Read More »

7 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯ: ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಉತ್ತೇಜನ

ಬೆಳಗಾವಿ: ಕೃಷಿ ಭೂಮಿ ಕೃಷಿಯೇತರ ಬಳಕೆಗೆ ಪರಿವರ್ತನೆ 7 ದಿನಗಳಲ್ಲಿ ಕಡ್ಡಾಯವಾಗಿ ಮಾಡಿಕೊಡುವ ಉದ್ದೇಶದ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ಮಸೂದೆ ಹಾಗೂ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೈಗಾರಿಕೆ ಉತ್ತೇಜಿಸಿ ಹೆಚ್ಚಿನ ಹೂಡಿಕೆ ತರುವ ಉದ್ದೇಶದ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.   ಸಚಿವ ಮುರುಗೇಶ್‌ ನಿರಾಣಿ ಪರವಾಗಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ಕರ್ನಾಟಕ …

Read More »

ಹಳೆ ಪಿಂಚಣಿ ಪದ್ಧತಿಗೆ ಆಗ್ರಹ; ಹೊಸ ಪಿಂಚಣಿ ವ್ಯವಸ್ಥೆಗೆ ಕಾಂಗ್ರೆಸ್‌, ಜೆಡಿಎಸ್‌ ವಿರೋಧ

ಬೆಳಗಾವಿ: ನೂತನ ಪಿಂಚಣಿ ಯೋಜನೆ ರದ್ದತಿಗಾಗಿ ನಡೆಯುತ್ತಿರುವ ಹೋರಾಟ ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿ ಕೆಲಕಾಲ ವಾತಾವರಣವನ್ನು ಕಾವೇರಿಸಿತು. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಚರ್ಚೆಗೆ ಅವಕಾಶ ಕಲ್ಪಿಸಬೇಕು ಹಾಗೂ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪಟ್ಟು ಹಿಡಿದರು.   ಸಾವಿರಾರು ಮಂದಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಆಡಳಿತ ವ್ಯವಸ್ಥೆಯೂ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಯವರು ಧರಣಿ ನಿರತರ ಜತೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದರು. ಈ ವೇಳೆ …

Read More »

ವಿಕಲಚೇತನರ ಗೌರವ ಧನ, ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ರಾಜ್ಯದ‌ ಎಂಆರ್ ಡಬ್ಯೂ, ವಿಆರ್ ಡಬ್ಯೂ, ಯುಆರ್ ಡಬ್ಯೂ ವಿಕಲಚೇತನರ ಗೌರವ ಧನ, ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಮಂಗಳವಾರ ನವ ಕರ್ನಾಟಕ ವಿಕಲಚೇತನ ಕಾರ್ಯಕರ್ತರ ಸಂಘ ಸುವರ್ಣ ವಿಧಾನಸೌಧದ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿದರು. ಮಹಾರಾಷ್ಟ್ರದ ಮಾದರಿಯಲ್ಲಿ ವಿಕಲಚೇತನರಿಗಾಗಿ ವಿಶೇಷ ಸಚಿವಾಲಯ‌ ಘೋಷಣೆ ಮಾಡಬೇಕು. ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯದ ಹೊಸ ತಾಪಂ. ಗಳಿಗೆ‌ ಎಂಆರ್ ಡಬ್ಯೂಗಳನ್ನು ಹುದ್ದೆ ಗಳನ್ನು ನೇಮಕ ಮಾಡಿಕೊಂಡಿರುವುದಿಲ್ಲ. ಹೊಸ ನೇಮಕಾತಿ …

Read More »

ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.

ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ   ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …

Read More »

ರಾಯಣ್ಣನ ಮೂರ್ತಿಯನ್ನು ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯನವರು

ಅಥಣಿಯ ಹಿರಿಯ ಮುಖಂಡ ಎಸ್ ಕೆ ಬುಟಾಳಿ ಅವರು ಕೊಡುಗೆಯಾಗಿ ನೀಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಾರ್ಪಣೆಗೊಳಿಸಿದರು. ಪಟ್ಟಣದ ವಿಜಯಪೂರ ರಸ್ತೆಗೆ ಹೊಂದಿಕೊಂಡ ಮೂರ್ತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿದ್ದರಾಮಯ್ಯನವರು ರಾಯಣ್ಣನ ದೇಶಪ್ರೇಮ, ರಾಜನಿಷ್ಠೆಯನ್ನು ನಮ್ಮ ಯುವಜನತೆ ಮೈಗೂಡಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೊಡುಗೆಯನ್ನಾಗಿ ನೀಡಿದ ಬುಟಾಳಿ ಅವರ ಕೊಡುಗೆ ಈ‌ ನಾಡಿಗೆ ದೊಡ್ಡದು ಎಂದರು. ಅವರು ಮುಂದೆ ಮಾತನಾಡುತ್ತಾ, ಮಹಾಜನ ವರದಿ ಪ್ರಕಾರ ಬೆಳಗಾವಿ …

Read More »

ಸರಕಾರದ ವಿರುದ್ಧ ಗುಡುಗಿದ ಸಾರಿಗೆ ನೌಕರರು

ಉತ್ತರ ಕರ್ನಾಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿವೃತ್ತ ನೌಕರರ ಸಮಸ್ಯೆಯನ್ನು ಬಗೆ‌ ಹರಿಸಬೇಕೆಂದು ಒತ್ತಾಯಿಸಿ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಬಸ್ತವಾಡ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ನೌಕರರು ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳ ಪ್ರತಿಭಟನೆ ನಡೆಸಿ‌ ಸರಕಾರದ ವಿರುದ್ಧ ಪ್ರತಿಭಟನೆ ‌ನಡೆಸಿದರು‌. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ವೇಳೆಯಲ್ಲಿ ಮಾಸಿಕ 10 ಸಾವಿರ ರೂ. ಪೆನಶನ್ ಮಂಜೂರು ಮಾಡುವುದಾಗಿ ಹೇಳಿ ಇಲ್ಲಿಯವರಗೆ ಮಂಜೂರು ಮಾಡಿಲ್ಲ‌. ಕೂಡಲೇ ಅದನ್ನು ಮಂಜೂರು …

Read More »

ಬೆಳಗಾವಿ ಪ್ರವೇಶಕ್ಕೆ ಯತ್ನಿಸಿದ ಮಹಾರಾಷ್ಟ್ರದ ಕಾರ್ಯಕರ್ತರಿಗೆ ತಡೆ

ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು ಸೋಮವಾರ ತಡೆದಿದ್ದಾರೆ. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು. ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ‌. ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ

Read More »

ಸಾವರ್ಕರ್ ಭಾವಚಿತ್ರ ಅನಾವರಣಕ್ಕೆ ಆಹ್ವಾನ ಸಿಕ್ಕಿಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ..!

ಬೆಳಗಾವಿ: ‘ರಾಜ್ಯ ಬಿಜೆಪಿ ಸರ್ಕಾರ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನನಗೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಸಿಕ್ಕಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.‌ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಭಾನುವಾರ ರಾಜ್ಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಮಿತಿ ಸಭೆಗೂ ಮುನ್ನ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಸೇರಿದಂತೆ ಇನ್ನಿತರ ವ್ಯಕ್ತಿಗಳ ಭಾವಚಿತ್ರ ಅನಾವರಣಕ್ಕೆ ಎಲ್ಲರನ್ನೂ ಆಹ್ವಾನಿಸಲಾಗಿದೆ ಎಂದು ಸ್ಪೀಕರ್ ಹೇಳುತ್ತಿದ್ದಾರೆ. ನನಗಂತೂ …

Read More »

ನಮ್ಮದೆಂಬ ಭಾವ ಮೂಡಿಸುತ್ತಿದೆ ಕ್ಲಿನಿಕ್‌; 12 ಬಗೆಯ ಆರೋಗ್ಯ ಸೇವೆ

ಬೆಳಗಾವಿ: ನಗರ ಪ್ರದೇಶದ ಬಡ ವರ್ಗದ ಜನರಿಗೆ ವಿಶೇಷವಾಗಿ ಕಾರ್ಮಿಕ ವರ್ಗಕ್ಕೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ ಆರಂಭ ಮಾಡಿರುವ ನಮ್ಮ ಕ್ಲಿನಿಕ್‌ಗೆ ಆರಂಭದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರಲ್ಲಿ ಸಹ ಇದು ನಮ್ಮ ಕ್ಲಿನಿಕ್‌ ಎಂಬ ಭಾವನೆ ಬರುತ್ತಿದೆ.   ಈ ನಮ್ಮ ಕ್ಲಿನಿಕ್‌ನಲ್ಲಿ 12 ಬಗೆಯ ಆರೋಗ್ಯ ಸೇವೆಗಳು ದೊರೆಯಲಿವೆ. ಗರ್ಭಿಣಿ-ಶಿಶು ಆರೈಕೆ, ಮಕ್ಕಳ ಚಿಕಿತ್ಸೆ, ಕುಟುಂಬ ಕಲ್ಯಾಣ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, …

Read More »