Breaking News
Home / ಜಿಲ್ಲೆ / ಬೆಳಗಾವಿ (page 87)

ಬೆಳಗಾವಿ

ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಅಧಿಕಾರಿಗಳ ಜತೆ ಕಾಗೇರಿ ಸಭೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನ ಮಂಡಲ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.   ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಸತಿ, ಊಟ, …

Read More »

ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ

ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ …

Read More »

ಜಾತ್ರೆ: ವಸ್ತುಪ್ರದರ್ಶನಕ್ಕೆ ಚಾಲನೆ

ರಾಮದುರ್ಗ: ‘ಜಾತ್ರೆಗಳಲ್ಲಿ ಆಯೋಜಿಸುವ ವಸ್ತುಪ್ರದರ್ಶನ ರೈತರಿಗೆ ಮತ್ತು ಯಾತ್ರಿಕರಿಗೆ ಉಪಯುಕ್ತವಾಗುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ಕಾಟಾಚಾರದ ವಸ್ತುಪ್ರದರ್ಶನ ಮಾಡಬಾರದು’ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.   ತಾಲ್ಲೂಕಿನ ಗೊಡಚಿ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ಗುರುವಾರ ಗ್ರಾಮ ಪಂಚಾಯ್ತಿ ಏರ್ಪಡಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿ, ‘ಕೃಷಿಗೆ ಉತ್ತೇಜನ ನೀಡುವಂಥ ಮಳಿಗೆಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಕೃಷಿ , ತೋಟಗಾರಿಕೆ, ಅರಣ್ಯ ಇಲಾಖೆಗಳು ರೈತರಿಗೆ ನೂತನ ತಾಂತ್ರಿಕತೆಯ ಪರಿಚಯ ಮಾಡಿಕೊಡಬೇಕು’ ಎಂದರು. ತಹಶೀಲ್ದಾರ್‌ …

Read More »

ಗುರ್ಲಾಪುರ: ಯೋಧನ ಅಂತ್ಯಕ್ರಿಯೆ

ಮೂಡಲಗಿ: ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯಲ್ಲಿ ಮಂಗಳವಾರ ನಿಧನರಾದ ಭಾರತೀಯ ಸೇನೆಯ ಹವಾಲ್ದಾರ್ ಪ್ರಕಾಶ ಉದ್ದಪ್ಪ ಇವ್ವಕ್ಕಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.   ದೆಹಲಿಯಿಂದ ಬೆಳಗಾವಿಯ ವಿಮಾನನಿಲ್ದಾಣಕ್ಕೆ ಬಂದ ಯೋಧನ ಪಾರ್ಥಿವಶರೀರವನ್ನು ಭಾರತೀಯ ಸೇನಾ ವಾಹನದ ಮೂಲಕ ಮಧ್ಯಾಹ್ನ 12ಕ್ಕೆ ಮೂಡಲಗಿಗೆ ತರಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಗುರ್ಲಾಪುರ ಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ‘ಭಾರತ ಮಾತಾಕೀ ಜೈ, ಅಮರ್‌ …

Read More »

ಶಿಕ್ಷಣಕ್ಕೆ ಮಠಗಳ ಕೊಡುಗೆ ಅಪಾರ: ಡಾ.ಎಸ್‌.ವಿದ್ಯಾಶಂಕರ

ಬೆಳಗಾವಿ: ‘ಶಿಕ್ಷಣ ರಂಗದಲ್ಲಿ ರಾಜ್ಯ ಸರ್ಕಾರ ಮಾಡದ ಕೆಲಸವನ್ನು ಮಠ-ಮಾನ್ಯಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಿವೆ. ಗ್ರಾಮೀಣ ಭಾಗದ ಬಡ ಮಕ್ಕಳ ಬದುಕು ರೂಪಿಸಿವೆ’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್‌.ವಿದ್ಯಾಶಂಕರ ಶ್ಲಾಘಿಸಿದರು.   ಇಲ್ಲಿನ ಆರ್‌.ಎನ್‌.ಶೆಟ್ಟಿ ಪಾಲಿಟೆಕ್ನಿಕ್‌ ನಲ್ಲಿ ಲಿಂ. ಡಾ.ಶಿವಬಸವ ಸ್ವಾಮೀಜಿ 133ನೇ ಜಯಂತಿ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಡಾ.ಶಿವಬಸವ ಸ್ವಾಮೀಜಿ ಅವರ ವಸ್ತು ಸಂಗ್ರಹಾಲಯ ಉದ್ಘಾಟನೆ ಮತ್ತು ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ …

Read More »

ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ

ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಅದು ಎಲ್ಲಿ ಅಂತೀರಾ ಖಾನಾಪುರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ 2023 ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವ್ಯಕ್ತಿಗಳಿಗೆ ಬಹಿಷ್ಕಾರ ಹಾಕಲಾಗಿದೆ. ಇದರ ಕುರಿತು ಗ್ರಾಮಸ್ಥರು ಸೂಚನಾ ಫಲಕ ಅಳವಡಿಸುವ ಮೂಲಕ ಯಾವುದೇ ಪಕ್ಷ ಅಥವಾ ಸ್ವತಂತ್ರ ವ್ಯಕ್ತಿಗಳು ಚುನಾವಣಾ ಪ್ರಚಾರಕ್ಕಾಗಿ ಗ್ರಾಮದಲ್ಲಿ ಪ್ರಚಾರ ಅಥವಾ ಸಭೆ ನಡೆಸಬಾರದು, ಖಾನಾಪುರ ತಾಲೂಕಿನ ಶಾಸಕರು ಹಾಗೂ ಇತರೆ ಪಕ್ಷಗಳ …

Read More »

ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ ಡಾ. ಸಂಜೀವ ಪಾಟೀಲ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಎರಡನೇ ಹಾಗೂ ಕೊನೆಯ ಶನಿವಾರದಂದು ನಡೆಸುತ್ತಿರುವ ಫೋನ್ ಇನ್ ಮೂರನೇ ಕಾರ್ಯಕ್ರಮದಲ್ಲಿಯೂ ಜನರು ಸಮಸ್ಯೆ ಹೇಳಿಕೊಂಡರು. ಇದಕ್ಕೆ ಎಸ್ಪಿ ಸ್ಪಂದನೆ ಮಾಡಿದ್ದಕ್ಕೆ ಜನರು ಕೃತಜ್ಞತೆ ತಿಳಿಸಿದರು. ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮ ದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ …

Read More »

ಬೆಳಗಾವಿಯಲ್ಲಿ ದೇಶದ ಮೊದಲ ಸೆನ್ಸಾರ್‌ ಕಸದ ತೊಟ್ಟಿ! ವಿಶೇಷತೆ ಏನು?

ಬೆಳಗಾವಿ: ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಪರಿಸರ ಹಾಳಾಗುತ್ತಿರುವುದನ್ನು ತಡೆಯಲು ಶಾಸಕ ಅಭಯ ಪಾಟೀಲ್‌ ಅವರು ದೇಶದಲ್ಲೇ ಮೊದಲ ಸೆನ್ಸಾರ್‌ ತಂತ್ರಜ್ಞಾನ ಆಧಾರಿತ ಭೂಗತ ಕಸದ ತೊಟ್ಟಿಗಳನ್ನು ಬೆಳಗಾವಿಯ ತಮ್ಮ ಕ್ಷೇತ್ರದಲ್ಲಿ ಅಳವಡಿಸಿದ್ದಾರೆ.   ಬೆಳಗಾವಿ ಮಹಾನಗರ ಪಾಲಿಕೆಯ ದಕ್ಷಿಣ ಮತ ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲಿ ಅಂಡರ್‌ ಗ್ರೌಂಡ್‌ ಡಸ್ಟ್‌ಬಿನ್‌ (ಭೂಗತ ಕಸದ ತೊಟ್ಟಿ)ಯನ್ನು ಅಳವಡಿಸಿದ್ದಾರೆ. ಒಟ್ಟು 24 ಕಸದ ತೊಟ್ಟಿಗಳಿಗೆ ಆರ್ಡರ್‌ ಮಾಡಲಾಗಿದ್ದು, 18 ತೊಟ್ಟಿ ಗಳು ಕಾರ್ಯ ನಿರ್ವಹಿಸುತ್ತಿವೆ. ಸಂಪೂರ್ಣ …

Read More »

ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.   ಬಸ್ ಗಳಿಲ್ಲದೇ …

Read More »