ಚನ್ನಮ್ಮನ ಕಿತ್ತೂರು: ‘ನಿಷ್ಟುರವಾಗಿ ಸತ್ಯ ಹೇಳುವುದು ಮತ್ತು ಸತ್ಯವನ್ನು ನಿಷ್ಟುರವಾಗಿ ಹೇಳುವುದು’ ಇದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ವ್ಯಕ್ತಿತ್ವ. ಸತ್ಯ ಪ್ರತಿಪಾದಕ ಸ್ವಾಮೀಜಿಗೆ ಈಗ 60ರ ಸಂಭ್ರಮ. ಹೆಸರಿಗೆ ತಕ್ಕಂತೆಯೇ ಅವರದು ‘ನಿಜ-ಗುಣ’. ಮೂರು ದಶಕದ ಹಿಂದೆ ಚನ್ನಮ್ಮನ ಕಿತ್ತೂರು ನಾಡಿಗೆ ಬಂದ ನಂತರ ಅವರು ಸಾಮಾಜಿಕ ಪರಿವರ್ತನೆಗೆ ಹೆಜ್ಜೆ ಇಟ್ಟರು. ಸಾಂಪ್ರದಾಯಿಕ, ಮೌಢ್ಯ ಆಚರಣೆಗಳಿಂದ ಸಮಾಜವನ್ನು ಹೊರತರಲು ಮುಂದಾದರು. ‘ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ’ …
Read More »ಮೂಡಲಗಿ: ಮಲ್ಲಿಕಾರ್ಜುನ ದೇವಾಲಯ ಉದ್ಘಾಟನೆ
ಮೂಡಲಗಿ: ನೂರಾರು ವರ್ಷಗಳ ಪೂರ್ವ ಇತಿಹಾಸ ಹೊಂದಿರುವ ತಾಲ್ಲೂಕಿನ ಅವರಾದಿ ಗ್ರಾಮದ ಮಲ್ಲಿಕಾರ್ಜುನ ದೇವರು ಈ ಭಾಗದ ಆರಾಧ್ಯ ದೈವ. ಶತಮಾನಗಳಿಂದಲೂ ಚಿಕ್ಕ ದೇವಾಲಯದಲ್ಲಿಯೇ ಮಲ್ಲಿಕಾರ್ಜುನನ ಪೂಜೆ ಮಾಡಿಕೊಂಡು ಬಂದಿದ್ದ ಭಕ್ತರು ಈದೀಗ ದೇವಾಲಯವನ್ನು ನಿರ್ಮಿಸಿದ್ದಾರೆ. ಗ್ರಾಮದ ಭಕ್ತರೆಲ್ಲ ಸೇರಿ ₹48 ಲಕ್ಷ ವೆಚ್ಚದಲ್ಲಿ ಹೊಸ ದೇವಸ್ಥಾನ ನಿರ್ಮಿಸಿದ್ದು, ಫೆ.25ರಿಂದ 29ರವರೆಗೆ ದೇವಸ್ಥಾನದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ. ದೇವಾಲಯದಲ್ಲಿ ದೊಡ್ಡಬಳ್ಳಾಪುರ ಶಿಲೆಯಲ್ಲಿ ಲಿಂಗ ಮತ್ತು …
Read More »ವಿಮಾನವೇರಿ ಹಿರಿ ಹಿರಿ ಹಿಗ್ಗಿದ ಹಿರಿಜೀವಗಳು.
ಬೆಳಗಾವಿ: ಆಕಾಶದೆತ್ತರಕ್ಕೆ ತಲೆ ಎತ್ತಿ ವಿಮಾನವನ್ನು ನೋಡುತ್ತಿದ್ದ ವೃದ್ಧಾಶ್ರಮದ ಈ ಅಜ್ಜ, ಅಜ್ಜಿಯರು ಜೀವನದಲ್ಲಿಯೇ ಮೊದಲ ಬಾರಿಗೆ ವಿಮಾನವನ್ನೇ ಹತ್ತಿ ಮುಂಬೆ„ಗೆ ಪ್ರಯಾಣಿಸಿದಾಗ ಇವರ ಸಂತಸಕ್ಕೆ ಪಾರವೇ ಇರಲಿಲ್ಲ. ವಿಮಾನ ಹತ್ತಿದ ಕೂಡಲೇ ಹಿರಿ ಹಿರಿ ಹಿಗ್ಗಿ ಸಂಭ್ರಮಿಸಿದರು. ಬೆಳಗಾವಿ ಸಮೀಪದ ಕಿಣಯೇ ಬಳಿಯ ಶಾಂತಾಯಿ ವೃದ್ಧಾಶ್ರಮದ ಈ ಅಜ್ಜ-ಅಜ್ಜಿಯರು ಇಳಿವಯಸ್ಸಿನಲ್ಲಿ ಗುರುವಾರ ಮಧ್ಯಾಹ್ನ 1:30ಕ್ಕೆ ಸ್ಟಾರ್ ಏರ್ ಜೆಟ್ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಜೀವನದಲ್ಲಿಯೇ ಎಂದೂ ವಿಮಾನ ನೋಡಿರದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡಾ ಗ್ರಾಮದ ಶ್ರೀ ಕರೇಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …
Read More »ಅಥಣಿ ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಸಂತಸದ ಸಂಗತಿ: ಡಾ ಮಹಾಂತೇಶ ಉಕ್ಕಲಿ
ಅಥಣಿ: ‘ತಾಲ್ಲೂಕಿನ ಪ್ರತಿಯೊಂದು ಶಾಲೆಗಳಿಗೆ ತೆರಳಿ ಚುಟುಕುಗೋಷ್ಠಿ ಆಯೋಜಿಸುವ ಮೂಲಕ ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಮಾಡುತ್ತಿರುವುದು ಸಂತಸದ ಸಂಗತಿ’ ಎಂದು ಸಾಹಿತಿ ಡಾ ಮಹಾಂತೇಶ ಉಕ್ಕಲಿ ಹೇಳಿದರು. ತಾಲ್ಲೂಕಿನ ಕಿರಣಗಿ ಗ್ರಾಮದಲ್ಲಿ ಚುಟುಕು ಸಾಹಿತ್ಯ ಪರಿಷತ್ ಹಾಗೂ ಅಥಣಿ ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಜರುಗಿದ ‘ಶಾಲೆಗೊಂದು ಚುಟುಕುಗೋಷ್ಠಿ’ ಕಾರ್ಯಕ್ರಮದಲ್ಲಿ ಮಾತನಾಡಿ, ನೂತನ ಕವಿಗಳನ್ನು ಹುಟ್ಟುಹಾಕುವ ಪ್ರಯತ್ನ ಮಾಡಿ ಚುಟುಕು ಸಾಹಿತ್ಯವನ್ನು ಶ್ರೀಮಂತಗೊಳಿಸುವ ಆಯೋಜಕರ ಪ್ರಯತ್ನ ಅಭಿನಂದನಾರ್ಹ ಎಂದರು. ಯೋಗ …
Read More »ರಾಜ್ಯ ಕಾನೂನು ವಿವಿ: 2 ವರ್ಷಗಳಿಂದ ನಡೆದಿಲ್ಲ ಘಟಿಕೋತ್ಸವ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ (ಅಕಾಡೆಮಿಕ್ ಕೌನ್ಸಿಲ್) ರಚನೆ ವಿಳಂಬ ಆಗಿರುವ ಕಾರಣ ಎರಡು ವರ್ಷಗಳಿಂದ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆದಿಲ್ಲ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯದ 108 ಕಾನೂನು ಕಾಲೇಜುಗಳಿವೆ. 2021-22 ಮತ್ತು 2022-23ನೇ ಸಾಲಿನ ಘಟಿಕೋತ್ಸವ ಈವರೆಗೆ ನಡೆದಿಲ್ಲ. ಕಾನೂನು ಪದವಿ ಹಾಗೂ ಸ್ನಾತಕೋತ್ತರ ಪದವಿಯ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಮಾಣ ಪತ್ರದ ನಿರೀಕ್ಷೆಯಲ್ಲಿದ್ದಾರೆ. ರಚನೆಯಾಗದ ಮಂಡಳಿ: ‘ಒಂದು ವರ್ಷಕ್ಕಿಂತ ಹೆಚ್ಚು ಸಮಯದಿಂದ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ …
Read More »ಗಡಿ ಸಮಸ್ಯೆಗೆ ಪ್ರತ್ಯೇಕ ಪೀಠ ಸ್ಥಾಪಿಸಲಿ: ಸಚಿವ ಶಂಭುರಾಜ್ ದೇಸಾಯಿ
ಬೆಳಗಾವಿ: ‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬೇಗ ಬಗೆಹರಿಸಲು ಸುಪ್ರೀಂಕೋರ್ಟ್ನಲ್ಲಿ ಪ್ರತ್ಯೇಕ ಪೀಠ ಸ್ಥಾಪಿಸಲು ಬೇಡಿಕೆ ಸಲ್ಲಿಸಲಾಗುವುದು’ ಎಂದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಶಂಭುರಾಜ್ ದೇಸಾಯಿ ಹೇಳಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿ ಬುಧವಾರ ಕಾನೂನು ತಜ್ಞರು, ಎಂಇಎಸ್ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳ ಜತೆ ಮಾತಾಡಿದರು. ‘ಈ ಗಡಿ ಸಮಸ್ಯೆ ಇನ್ನೂ ಪರಿಹಾರ ಆಗದಿರುವುದು ಸರಿಯಲ್ಲ. ಈಗಾಗಲೇ ಮೂರು ಬಾರಿ ವಿಚಾರಣೆಗೆ ಪಟ್ಟಿಯಲ್ಲಿ ಬಂದು ಮತ್ತೆ ಕೈಬಿಡಲಾಗಿದೆ. …
Read More »ಅಂಕಲಗಿ | ‘ನಗೆ ಹಬ್ಬ’ ಕಾರ್ಯಕ್ರಮ 26ರಂದು
ಅಂಕಲಗಿ: ಇಲ್ಲಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಫೆ.26ರಂದು ಸಂಜೆ 5 ಗಂಟೆಗೆ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದವರು ‘ನಗೆ ಹಬ್ಬ’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ‘ಪ್ರಾಣೇಶ ತಂಡದಲ್ಲಿ ಬಸವರಾಜ ಮಹಾಮನಿ, ನರಸಿಂಹ ಜೋಶಿ, ಅಜೇಯ ಸಂಕೇಶ್ವರ, ತುಕಾರಾಮ ಬೀದರ್ ಅವರಿದ್ದಾರೆ. ಅಂಕಲಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು’ ಎಂದು ಪ್ರಾಯೋಜಕ ಸುರೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.
Read More »ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾ ಸ್ಪರ್ಧಿಸಲ್ಲ: ಸತೀಶ ಜಾರಕಿಹೊಳಿ
ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾಗೆ ಟಿಕೆಟ್ ನೀಡುವ ವಿಷಯ ಚರ್ಚೆಯಾಗಿದೆ. ಆದರೆ, ಟಿಕೆಟ್ ಕೊಡಲು ನಾವು ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಿಲ್ಲ. ಅವರು ಚುನಾವಣೆಗೆ ಸ್ಪರ್ಧಿಸಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ‘ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗೆ ಲಕ್ಷ್ಮಣರಾವ್ ಚಿಂಗಳೆ, ಗಜಾನನ ಬುಟಾಳಿ ಸೇರಿ ಹಲವು ಆಕಾಂಕ್ಷಿಗಳಿದ್ದಾರೆ. ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತೇವೆ ಹೊರತು ನಮ್ಮ …
Read More »ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ
ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ. ಯರಗಟ್ಟಿ : ಕೋಟೂರು ಶಿವಾಪೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಸೋಮವಾರ ದಿನಾಂಕ 19-02-2024 ರಂದು ಜರುಗಿದ ಕಾರ್ಯಕ್ರಮದಲ್ಲಿ ಯುವ ನಾಯಕ ಹಾಗೂ ಸೌಭಾಗ್ಯ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »
Laxmi News 24×7