Breaking News
Home / ಜಿಲ್ಲೆ / ಮಂಡ್ಯ

ಮಂಡ್ಯ

ಶಿಕ್ಷಣ ಕೇಂದ್ರಗಳೇ ಈಗ ಕೊರೊನಾ ಹಬ್..? ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಪಾಸಿಟಿವ್..!

ಮಂಡ್ಯ: ಕೊರೊನಾದ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್​ಸ್ಪಾಟ್ ಕೇಂದ್ರವಾಗುತ್ತಿವೆಯಾ ಅನ್ನೋ ಅನುಮಾನ ಶುರುವಾಗಿದೆ. ಇದೀಗ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ. ಸೋಂಕಿತರಿಗೆ ನಾಗಮಂಗಲ ಪಟ್ಟಣದ …

Read More »

ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್‌ ಅವರನ್ನು ಕಣಕ್ಕಿಸಲು ಸುಮಲತಾ ಪ್ಲ್ಯಾನ್‌

ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತನ್ನು ಸಂಸದೆ ಸುಮಲತಾ ಅಂಬರೀಶ್‌ ಉಳಿಸಿಕೊಂಡಿದ್ದು, ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಗೆದ್ದ ವೇಳೆ ಸುಮಲತಾ ಅವರು ಮಂಡ್ಯ ಜಿಲ್ಲೆಯಲ್ಲಿಯೇ ಮನೆ ನಿರ್ಮಾಣ ಮಾಡಿ, ಇಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಅದರಂತೆ ಇದೀಗ ಇಲ್ಲಿಯೇ ಮನೆ ನಿರ್ಮಾಣ ಶುರು ಮಾಡಿದ್ದಾರೆ.   ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಿಸಲಿದ್ದು, ತಮ್ಮ ತನ್ನ ಆಪ್ತ …

Read More »

ಮಂಡ್ಯ: ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ಜಿಲ್ಲೆಯಾದ್ಯಂತ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ. ಭಾನುವಾರ, ಸೋಮವಾರ, ಗುರುವಾರ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಎಂದಿನಂತೆ ಅವಕಾಶ ಇರಲಿದೆ. ಉಳಿದಂತೆ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ. ಅಂದು ಹೋಟೆಲ್ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಿದ್ದಾರೆ.

Read More »

ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಹೋರಾಟ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ …

Read More »

ತಾನೇ ಸಾಕಿದ್ದ ಹಸುವಿನಿಂದ ಬಾಲಕ ಪ್ರಾಣಬಿಟ್ಟಿದ್ದಾನೆ

ಮಂಡ್ಯ: ತಾನೇ ಸಾಕಿದ್ದ ಹಸು ಮುಂದೊಂದ್ದು ದಿನ ತನ್ನನ್ನೇ ಕೊಲ್ಲಬಹುದು ಎಂದು ಆ ಬಾಲಕ ಕನಸ್ಸಿನಲ್ಲೂ ಯೋಚಿಸಿರಲಿಲ್ಲ. ಆದರೆ ವಿಧಿಲಿಖಿತ ಅದೇ ಆಗಿತ್ತು. ಆ ಹಸುವಿನಿಂದಲೇ ಬಾಲಕ ಪ್ರಾಣಬಿಟ್ಟಿದ್ದಾನೆ. ಇಂತಹದ್ದೊಂದು ಮನಕಲಕುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಯತ್ತಂಬಾಡಿ ಗ್ರಾಮದಲ್ಲಿ ಸಂಭವಿಸಿದ್ದು, 13 ವರ್ಷದ ಬಾಲಕ ಮಾದೇಶ್ (13) ಬಲಿಯಾಗಿದ್ದಾನೆ. ಸೋಮವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ಹೋಗಿದ್ದ ಮಾದೇಶ್​ಗೆ ಕೊಂಬಿನಿಂದ ತಿವಿದಿದೆ. ಮಾರಣಾಂತಿಕವಾಗಿ ಗಾಯಗೊಂಡ ಬಾಲಕ …

Read More »

ಏಳು ದಿನಗಳೊಳಗೆ ಜನನ ಮರಣ ಪ್ರಮಾಣ ಪತ್ರ ಲಭ್ಯ: ಜಿಲ್ಲಾಧಿಕಾರಿ

ಮಂಡ್ಯ (ಕರ್ನಾಟಕ ವಾರ್ತೆ):- ಜನನ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣಪತ್ರವನ್ನು ಸಕಾಲ ಸೇವೆಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಸಾರ್ವಜನಿಕರು ಇ-ಜನ್ಮ ವೆಬ್‍ಸೈಟ್‍ಗೆ ಲಾಗ್‍ಇನ್ ಆಗಿ 07 ದಿನಗಳೊಳಗೆ ಮಕ್ಕಳ ಜನನ ಪ್ರಮಾಣ ಪತ್ರ ಅಥವಾ ತಮ್ಮ ಸಂಬಂಧಿಕರ ಮರಣ ಪ್ರಮಾಣಪತ್ರವನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ವಿ ವೆಂಕಟೇಶ್ ರವರು ತಿಳಿಸಿದರು. ಮಂಡ್ಯ ಜಿಲ್ಲೆಯ ಸಕಾಲ ಸಪ್ತಾಹ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಮತ್ತು ಸಾಂಖ್ಯಿಕ ಇಲಾಖೆÀಯ ವತಿಯಿಂದ …

Read More »

ಅಗಾಧ ನೆನಪಿನ ಶಕ್ತಿಯ ಭಂಡಾರ ಈ ಪುಟಾಣಿ

ಮಂಡ್ಯ (ಡಿ. 17): ಆ ಬಾಲಕಿಗಿನ್ನು ಬರೀ 2 ವರ್ಷ 8 ತಿಂಗಳು. ಮುದ್ದು ಮುದ್ದಾಗಿ ತೊದಲು‌ ಮಾತನಾಡುವ ವಯಸ್ಸಿನ ಈ ಪೋರಿಯ ಸಾಧನೆ ಮಾತ್ರ ಅಗಾಧ.  ಈ ಪೋರಿಯ  ಅಸಾಧಾರಣ ನೆನಪಿನ ಶಕ್ತಿ ಎಲ್ಲರನ್ನು ಬೆರಗು ಮೂಡಿಸುತ್ತದೆ.  ಇದರಿಂದಾಗಿಯೇ ಈಗ ಈಕೆ  ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿಕೊಂಡಿದ್ದಾಳೆ. ಅಲ್ಲದೇ ತನ್ನ ಅಸಾಧಾರಣ ಪ್ರತಿಭೆಯಿಂದ ಇದೀಗ ಗಿನ್ನಿಸ್ ದಾಖಲೆ ಬರೆಯಲು ಹೊರಟಿದ್ದಾಳೆ. ಈ ಬಾಲಕಿ …

Read More »

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ

ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ …

Read More »

ಹಬ್ಬಕ್ಕೆ ಸಾಮಗ್ರಿ ತರಲು ಹೋದ ಮಹಿಳೆ – ವಾಪಸ್ ಬರುವಾಗ ಲಾರಿ ಡಿಕ್ಕಿ

ಮಂಡ್ಯ: ಹಬ್ಬಕ್ಕೆಂದು ಸಾಮಗ್ರಿಗಳನ್ನು ತರಲು ಹೋಗಿದ್ದ ಮಹಿಳೆಗೆ ಗಣಿಗಾರಿಕೆಯ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ನಡೆದಿದೆ. ಚೋಕನಹಳ್ಳಿ ಗ್ರಾಮದ ಜ್ಯೋತಿ ಮೃತ ಮಹಿಳೆ. ಜ್ಯೋತಿ ಇಂದು ಮಧ್ಯಾಹ್ನ ಹಬ್ಬದ ಸಾಮಗ್ರಿಗಳನ್ನು ಖರೀದಿ ಮಾಡಲು ಚೋಕನಹಳ್ಳಿಯಿಂದ ಬೂಕನಕೆರೆಗೆ ಬಂದಿದ್ದರು. ನಂತರ ಹಬ್ಬದ ಸಾಮಗ್ರಿಗಳನ್ನು ಖರೀದಿ ಮಾಡಿ ಮನೆಗೆ ವಾಪಸ್ಸು ಹೋಗುವ ವೇಳೆ ಗಣಿಗಾರಿಕೆಯ ಲಾರಿಯೊಂದು ಜ್ಯೋತಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ …

Read More »