Breaking News
Home / ಜಿಲ್ಲೆ / ಮೈಸೂರ್ (page 15)

ಮೈಸೂರ್

ಮೈಸೂರಿನಲ್ಲಿ 35 ಪ್ರಕರಣ ಪತ್ತೆಯಾದರೂ ಡೋಂಟ್ ಕೇರ್,ತಂಡೋಪತಂಡವಾಗಿ ಮಾರುಕಟ್ಟೆಗೆ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 35ಕ್ಕೆ ತಲುಪಿದರೂ ಜನ ಬುದ್ಧಿ ಕಲಿಯುತ್ತಿಲ್ಲ. ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ತಂಡೋಪತಂಡವಾಗಿ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಜನರ ನಿಯಂತ್ರಣ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ ಸದ್ಯ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 35ಕ್ಕೆ ಏರಿಯಾಗಿದೆ. ಈ ಸಂಖ್ಯೆ ಇನ್ನೂ ದುಪ್ಪಟ್ಟಾಗುವ ಆತಂಕವಿದೆ. ಹೀಗಾಗಿ, ಜನರು ಮನೆಯಿಂದ ಹೊರಗೆ ಬಾರದಂತೆ ನೋಡಿಕೊಳ್ಳಲು ಮೈಸೂರು ಜಿಲ್ಲಾಡಳಿತ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಇದರ ಭಾಗವಾಗಿ ಅವಶ್ಯಕ ಸಾಮಾಗ್ರಿಗಳನ್ನು ಅವರ ಮನೆ ಬಾಗಿಲಿಗೆ …

Read More »

ಮೈಸೂರಿನಲ್ಲಿ ಮತ್ತೆ 7 ಮಂದಿಗೆ ಕೊರೊನಾ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿದ್ದು, ಕಳೆದ 24 ಗಂಟೆಯಲ್ಲಿ 12 ಹೊಸ ಕೊರೊನಾ ಸೊಂಕಿತ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 12 ಕೊರೊನಾ ಸೋಂಕಿತ ಪ್ರಕರಣದಲ್ಲಿ 7 ಮಂದಿ ಮೈಸೂರು, ಇಬ್ಬರು ಬಾಗಲಕೋಟೆ, ಒಬ್ಬರು ಕೇರಳ, ಒಬ್ಬರು ಬೆಂಗಳೂರು, ಒಬ್ಬರು ಬೆಂಗಳೂರು ಗ್ರಾಮಂತರಕ್ಕೆ ಸೇರಿದವರಾಗಿದ್ದಾರೆ. ಈವರೆಗೆ ದಾಖಲಾದ 163 ಸೊಂಕಿತರಲ್ಲಿ 9 ಮಂದಿ …

Read More »

ಮೈಸೂರಿನ ಉದ್ಯಮಿ ಎಂ.ರಾಜೇಂದ್ರ, ಸ್ವಯಂ ಪ್ರೇರಿತರಾಗಿ ತಮ್ಮ ಥ್ರೀ ಸ್ಟಾರ್ ಹೋಟೆಲ್ ಅನ್ನು ಸರ್ಕಾರಿ ಕ್ವಾರಂಟೈನ್‍ಗೆ ಬಿಟ್ಟುಕೊಟ್ಟಿದ್ದಾರೆ

ಮೈಸೂರು: ಕೊರೊನಾ ವೈರಸ್ ಹರಡುವಿಕೆ ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಕೆಲವರನ್ನು ಹೋಂ ಕ್ವಾರಂಟೈನ್ ಮಾಡುವುದಕ್ಕಿಂತ ಸರ್ಕಾರಿ ಕ್ವಾರಂಟೈನ್ ಮಾಡಲು ಮುಂದಾಗಿದೆ. ಇದಕ್ಕೆ ರೂಂಗಳ ಕೊರತೆಯಿದ್ದು, ಲಾಡ್ಜ್ ಗಳ ಬಿಟ್ಟು ಕೊಡಲು ಮಾಲೀಕರು ಮುಂದೆ ಬರುತ್ತಿಲ್ಲ. ಆದರೆ ಮೈಸೂರಿನ ಉದ್ಯಮಿ ಎಂ.ರಾಜೇಂದ್ರ, ಸ್ವಯಂ ಪ್ರೇರಿತರಾಗಿ ತಮ್ಮ ಥ್ರೀ ಸ್ಟಾರ್ ಹೋಟೆಲ್ ಅನ್ನು ಸರ್ಕಾರಿ ಕ್ವಾರಂಟೈನ್‍ಗೆ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಸರ್ಕಾರದ ಕೆಲಸಕ್ಕೆ ಸಾಥ್ ನೀಡಿದ್ದಾರೆ. ಇದರ ಜೊತೆಗೆ ತಮ್ಮದೇ ಮಾಲೀಕತ್ವದ …

Read More »

ದೀಪ ಹಚ್ಚಿದ್ರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತೆ: ರಾಮ್‍ದಾಸ್

ಮೈಸೂರು: ದೀಪ ಹಚ್ಚಿದ್ರೆ ವೈರಸ್ ದೀಪದ ಬಳಿ ಬರುತ್ತೆ. ಈ ವೇಳೆ ದೀಪದ ಶಾಖಕ್ಕೆ ವೈರಸ್ ಸಾಯುತ್ತೆ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಹೇಳಿದ್ದಾರೆ. ಮೈಸೂರಿನಲ್ಲಿ ದೀಪದ ಕುರಿತು ವಿಶೇಷ ವ್ಯಾಖ್ಯಾನ ನೀಡಿದ ಅವರು, ಮೋದಿಯವರ ದೀಪ ಬೆಳಗುವ ಕರೆಯ ಹಿಂದೆ ವೈಜ್ಞಾನಿಕ ಕಾರಣ ಇದೆ. ಅದಕ್ಕಾಗಿಯೇ ದೀಪ ಹಚ್ಚಲು ದೇಶಾದ್ಯಾಂತ ಕರೆ ನೀಡಿದ್ದಾರೆ ಎಂದರು. ಕತ್ತಲಿನಲ್ಲಿ ದೀಪ ಹಚ್ಚಿದರೆ ಎಲ್ಲೆ ಇದ್ದರೂ ವೈರಸ್ ದೀಪದ ಬಳಿ ಬರುತ್ತೆ. …

Read More »

ಓರ್ವನಿಂದ 9 ಮಂದಿಗೆ ಕೊರೊನಾ – ನಂಜನಗೂಡು ಸ್ತಬ್ಧ, ಮನೆಗಳಿಗೆ ಆಹಾರ ವಿತರಣೆ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12ಕ್ಕೆ ಏರಿದ್ದು, ಒಂದೇ ದಿನದಲ್ಲಿ 5 ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದ ಹಿನ್ನೆಲೆ ನಂಜನಗೂಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎರಡನೇ ದಿನವೂ ನಾಕಾಬಂದಿ ಮುಂದುವರೆದಿದೆ. ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್ ಆಗಿವೆ. ಮೈಸೂರು-ಊಟಿ, ಕೇರಳ ಮತ್ತು ತಮಿಳುನಾಡು ಸಂಪರ್ಕ ಕಲ್ಪಿಸುವ ಹೆದ್ದಾರಿ ಸೇರಿದಂತೆ ಪಟ್ಟಣಕ್ಕೆ ನಾಲ್ಕು ಕಡೆಯಿಂದ ಸಂಪರ್ಕಿಸೋ ಎಲ್ಲಾ ಮುಖ್ಯ ರಸ್ತೆಗಳನ್ನು ಸಹ ಬಂದ್ ಮಾಡಲಾಗಿದೆ. ಪಾಸ್ ಹೊಂದಿರುವ …

Read More »

ಕೊರೋನಾ ಭೀತಿ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ, ಮಾರ್ಚ್​ 31ರವರೆಗೆ ಜಿಲ್ಲೆ ಲಾಕ್​ಡೌನ್​

ಸರ್ಕಾರಿ ಕಚೇರಿಗಳು, ಜಿಲ್ಲಾ ಪಂಚಾಯತಿ. ಅಂಚೆ ಕಚೇರಿ, ವಿದ್ಯುತ್ ಇಲಾಖೆ ಮಹಾನಗರ ಪಾಲಿಕೆ, ನೀರು ಸರಬರಾಜು ಕೇಂದ್ರ, ಬ್ಯಾಂಕ್​ಗಳು, ಎಟಿಎಂ, ಔಷಧಿ, ವೈದ್ಯಕೀಯ ಸಲಕರಣೆ, ಕೃಷಿಗೆ ಸಂಬಂಧಿಸಿದ ಚಟುವಟಿಕೆ, ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದಂತೆ ವ್ಯಾಪಾರ ಹಾಗೂ ಮಾರುಕಟ್ಟೆಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ.     ಮೈಸೂರು(ಮಾ.23): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪಾಸಿಟಿವ್​ ಪ್ರಕರಣ ಪತ್ತೆಯಾದ ಹಿನ್ನೆಲೆ, ಇಂದಿನಿಂದ ಜಿಲ್ಲೆ ಲಾಕ್​ಡೌನ್​ ಆಗಲಿದೆ.  ಇಂದಿನಿಂದ ಮಾರ್ಚ್‌ 31ರವೆಗೆ ಜಿಲ್ಲೆಯಲ್ಲಿ …

Read More »

14 ಮಾರ್ಗಗಳಲ್ಲಿ ರೈಲು ಸಂಚಾರವಿಲ್ಲ

ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರೈಲು ಸೇವೆಗಳನ್ನು ಸ್ಥಗಿತ ಮಾಡಲಾಗಿದೆ. ರದ್ದಾದ ರೈಲುಗಳು? 1. ಮೈಸೂರು-ಯಲಹಂಕ-ಮೈಸೂರು, ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು 2. ಮೈಸೂರು-ಕೆ.ಎಸ್.ಆರ್, ಬೆಂಗಳೂರು- ಮೈಸೂರು, ರಾಜ್ಯರಾಣಿ ಎಕ್ಸ್‌ಪ್ರೆಸ್ ರೈಲು 3. ಬೆಳಗಾವಿಯಿಂದ ಮೈಸೂರು ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು 4. ಮೈಸೂರಿನಿಂದ ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು 5. ಮೈಸೂರಿನಿಂದ ರೇಣಿಗುಂಟ …

Read More »

ಜರ್ಮನಿಯಿಂದ ಬಂದ ಯುವತಿಗೆ ಜ್ವರ- ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಇದೀಗ ಕೊರೊನಾ ಭೀತಿ ಶುರುವಾಗಿದ್ದು, ಜರ್ಮನಿಯಿಂದ ವಾಪಸ್ ಬಂದ ಯುವತಿ ಆಸ್ಪತ್ರೆಗೆ ದಾಖಲಾಗಿರುವುದು ಸಾರ್ವಜನಿಕರ ಆತಂಕವನ್ನುಂಟು ಮಾಡಿದೆ. ಚನ್ನಪಟ್ಟಣ ನಗರದ ಯುವತಿ ಕಳೆದ ಒಂದು ವರ್ಷದಿಂದ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಯಲ್ಲಿದ್ದಳು. ವ್ಯಾಸಂಗ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಪಟ್ಟಣಕ್ಕೆ ಆಗಮಿಸಿದ್ದಳು. ಭಾನುವಾರ ಸಂಜೆ ಯುವತಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಯುವತಿಯ ತಂದೆಯೇ ಸ್ವತಃ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …

Read More »

ಮೈಸೂರು ಜಿಲ್ಲೆಯಾಧ್ಯಂತ 2ವಾರಗಳ ಕಾಲ 144 ಸೆಕ್ಷನ್ ಜಾರಿ

ಮೈಸೂರು, ಮಾ.17- ನಗರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೋಳಿಗಳ ಮಾರಾಟ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ. ನಗರದಲ್ಲಿ ಇತ್ತೀಚೆಗೆ ಪಕ್ಷಿಗಳು ಸಾವನ್ನಪ್ಪಿದ್ದವು. ಪರೀಕ್ಷೆಗಾಗಿ ಇವುಗಳ ಮೃತದೇಹ ಕಳುಹಿಸಲಾಗಿತ್ತು. ಈ ಹಕ್ಕಿಗಳು ಹಕ್ಕಿ ಜ್ವರದಿಂದಲೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಇದೀಗ ಮೈಸೂರಿನಲ್ಲಿ ಕೊಳಿ ಮಾಂಸ ಮಾರಾಟಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ. ಕುಂಬಾರಕೊಪ್ಪಲಿನ ಸುತ್ತಮುತ್ತಲಿನ 10ಕಿ.ಮೀ. ವ್ಯಾಪ್ತಿಯಲ್ಲಿ ಇಂದಿನಿಂದ ಕೋಳಿ ಮಾಂಸ ಹಾಗೂ ಕೋಳಿ ಮಾರಾಟ ಬಂದ್‍ಗೆ …

Read More »

ವೈರಮುಡಿ ಮಹೋತ್ಸವಕ್ಕೂ ತಟ್ಟುತ್ತಾ ಕೊರೊನಾ ಬಿಸಿ – ಭಕ್ತರಲ್ಲಿ ಆತಂಕ

ಮಂಡ್ಯ: ಮೇಲುಕೋಟೆಯ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವಕ್ಕೂ ಕೊರೊನಾ ವೈರಸ್ ಭೀತಿ ತಟ್ಟುತ್ತಾ ಎಂಬ ಆತಂಕ ಭಕ್ತರಲ್ಲಿ ಕಾಡುತ್ತಿದೆ. ಏಪ್ರಿಲ್ 2ರಂದು ಮೇಲುಕೋಟೆಯ ವಿಶ್ವ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವ ನಡೆಸಲು ಈಗಾಗಲೇ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಇತ್ತ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ವೈರಸ್‍ನ ಭೀತಿ ಎದುರಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಸರ್ಕಾರ 1 ವಾರಗಳ ಕಾಲ ಸೀಮಿತ ವಲಯಗಳಿಗೆ ಬಂದ್‍ನ್ನು ಸಹ ಘೋಷಣೆ …

Read More »