Breaking News

ಮೈಸೂರ್

ಪಂಚಲಿಂಗ ದರ್ಶನ ಮಹೋತ್ಸವಕ್ಕೆ ಸಚಿವ ಎಸ್ ಟಿ ಎಸ್ ಚಾಲನೆ

ಶುಭ ವೃಶ್ಚಿಕ ಲಗ್ನದಲ್ಲಿ ಪ್ರಾರಂಭವಾದ ಪೂಜಾ ಕೈಂಕರ್ಯ, ಸೋಮವಾರದ ಕುಹುಯೋಗ ಜ್ಯೇಷ್ಠ ನಕ್ಷತ್ರದಲ್ಲಿ ಮುಂಜಾನೆ 4.30ರ ವೇಳೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪಂಚಲಿಂಗ ದರ್ಶನ ಮಹೋತ್ಸವದ ಮಹಾಪೂಜೆ, ಮಾಹಾಭಿಷೇಕವು ನೆರವೇರಿತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಈ ಮೂಲಕ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ‌ ಈ ಹಿಂದೆ 2013ರಲ್ಲಿ ಪಂಚಲಿಂಗ್ ದರ್ಶನ ಮಹೋತ್ಸವ ನಡೆದಿತ್ತು. ಈಗ ಏಳು ವರ್ಷಕ್ಕೆ ಬಂದಿರುವುದು ನನ್ನ ಸೌಭಾಗ್ಯ …

Read More »

ತಂದೆಯನ್ನ ಕೊಂದವನನ್ನೇ ತಾಯಿ ಮದ್ವೆ ಆಗಿ ಮೆರವಣಿಗೆ ಹೊರಟಂತಿದೆ- ಹಳ್ಳಿಹಕ್ಕಿ ಹೀಗಂದಿದ್ಯಾಕೆ?

ಮೈಸೂರು: ಸರ್ಕಾರದ ಇಂದಿನ ಸ್ಥಿತಿಯ ಬಗ್ಗೆ ಎಂಎಲ್‍ಸಿ ಹೆಚ್. ವಿಶ್ವನಾಥ್ ಅವರು ಮಾರ್ಮಿಕವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯನ್ನ ಕೊಂದವನನ್ನೆ ತಾಯಿ ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ನಾವು ವಿರೋಧಿಸಿದವರೇ ಈಗ ಅವರ ಸ್ನೇಹಿತರಾಗಿದ್ದಾರೆ ಎಂದು ಅಸಮಾದಾನ ಹೊರಹಾಕಿದ್ದಾರೆ. ನಾವು ಯಾರನ್ನು ವಿರೋಧ ಮಾಡಿ ಬಂದ್ವಿ, ಅವರೇ ಈಗ ಬಿಎಸ್‍ವೈ ಸ್ನೇಹಿತರಾಗಿದ್ದಾರೆ. ಇದು ತಂದೆಯನ್ನ ಕೊಂದವನನ್ನ ತಾಯಿ ಮದುವೆಯಾದಂತೆ ಕಾಣುತ್ತಿದೆ. ಶೇಕ್ಸ್‍ಪಿಯರ್ ನಾಟಕದಲ್ಲಿ ಇದೆ ರೀತಿಯ ಪ್ರಸಂಗ …

Read More »

ಮಾಸ್ಕ್ ಹಾಕದವರಿಂದ ಪೊಲೀಸರು ಸುಮಾರು ಅರ್ಧ ಕೋಟಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ:ಡಿಸಿಪಿ ಗೀತಾ ಪ್ರಸನ್ನ

ಮೈಸೂರು: ಮಾಸ್ಕ್ ಹಾಕದವರಿಂದ ಪೊಲೀಸರು ಸುಮಾರು ಅರ್ಧ ಕೋಟಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ ಎಂದು ಮೈಸೂರು ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾಹಿತಿ ನೀಡಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆ ದಂಡದ ಜೊತೆ ಮಾಸ್ಕ್ ದಂಡ ಸೇರಿ ಇದೂವರೆಗೆ 56,77,950 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಈ ಮೂಲಕ ಮೈಸೂರು ಪೊಲೀಸರು ಮಾಸ್ಕ್ ದಂಡಾಸ್ತ್ರ ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಪೊಲೀಸರು ಮೊದಲು ರಸ್ತೆ ರಸ್ತೆಗಳಲ್ಲಿ ಜಾಗೃತಿ ಮೂಡಿಸುತ್ತಾರೆ. …

Read More »

ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ …

Read More »

ನಗರಕ್ಕೆ ಆಗಮಿಸಿದ ತಕ್ಷಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕೊರೊನಾ ಪಾಠ

ಮೈಸೂರು: ನಗರಕ್ಕೆ ಆಗಮಿಸಿದ ತಕ್ಷಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕೊರೊನಾ ಪಾಠ ಮಾಡಿದ್ದಾರೆ. ಇಂದು ಮೈಸೂರು ಪ್ರವಾಸಕ್ಕೆ ಆಗಮಿಸಿರುವ ಅವರು, ಎಲ್ಲರೂ ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ. ನನ್ನ ಅಕ್ಕ ಪಕ್ಕ ನಿಂತುಕೊಂಡರೂ ನಾನು ಬರುವುದಿಲ್ಲ ಎಂದು ತಮ್ಮ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತರನ್ನು ದೂರ ಸರಿಸಿದ್ದಾರೆ. ಯಾರೂ ಹತ್ತಿರ ಬಾರದಂತೆ ತಡೆದಿದ್ದಾರೆ. ಈ ಮೂಲಕ ತಮ್ಮ ಕಾರ್ಯಕರ್ತರಿಗೆ ಕೊರೊನಾ ಪಾಠ ಮಾಡಿದ್ದಾರೆ. ರಾಜಕಾರಣಿಗಳ …

Read More »

ಕಾಲಾವಕಾಶ ತೆಗೆದುಕೊಂಡು ಶಾಲೆ ತೆರೆಯುವುದು ಸೂಕ್ತ: ಪ್ರತಾಪ್ ಸಿಂಹ

ಮಡಿಕೇರಿ: ಕಾಲಾವಕಾಶ ತೆಗೆದುಕೊಂಡು ಪೋಷಕರು ಹಾಗೂ ಶಿಕ್ಷಕ ಸಮುದಾಯವನ್ನು ಕೊರೊನಾ ಟೆಸ್ಟ್ ತಪಾಸಣೆ ಬಳಿಕ ಶಾಲೆ ತೆರೆಯುವ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಶಾಲೆಗಳನ್ನು ಆದಷ್ಟು ಬೇಗ ತೆರೆಯಬೇಕು. ಹಾಗೆಯೇ ಬೇಡ ಎನ್ನುವ ಭಾವನೆ ಇದೆ. ಈಗಾಗಲೇ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಎಲ್ಲರೊಂದಿಗೆ ಶಾಲೆ ತೆರೆಯುವ ಬಗ್ಗೆ ಸಮಾಲೋಚನೆ ಮಾಡಿದ್ದಾರೆ. ದೆಹಲಿಯ ಎನ್‍ಸಿಆರ್ ಭಾಗದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಶಾಲೆಗಳನ್ನು …

Read More »

ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳ:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು: ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ದಸರಾಗೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾವನ್ನು ನಾವು ಎದುರಿಸಲೇಬೇಕು. ಆದ್ದರಿಂದ ಇದಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 …

Read More »

ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ.

ಮೈಸೂರು, ನ.1- ಕೊರೊನಾ ಹಿನ್ನೆಲೆಯಲ್ಲಿ ನಡೆದ ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ. ಸರ್ಕಾರ ದಸರಾ ಆಚರಣೆಗಾಗಿ 10 ಕೋಟಿ ರೂ.ವನ್ನು ಬಿಡುಗಡೆ ಮಾಡಿತ್ತು. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿತ್ತಾದರೂ ಸಂಪ್ರದಾಯವನ್ನು ಕೈ ಬಿಡದಂತೆ ವಿಶ್ವ ವಿಖ್ಯಾತ ದಸರಾವನ್ನು ಸರಳವಾಗಿ ಆಚರಿಸಿ ವೆಚ್ಚ ಮಾಡಿದ್ದು ಕೇವಲ 2 ಕೋಟಿ ರೂ. ಮಾತ್ರ. 25 ವರ್ಷಗಳ ಇತಿಹಾಸದಲ್ಲಿ ಒಂದು ವಾರದೊಳಗೆ ದಸರಾ ವೆಚ್ಚವನ್ನು ನೀಡಿರುವುದು ಇದೇ ಮೊದಲ …

Read More »

ಬೆಳಗಾವಿ, ವಿಜಯಪುರ ಮೈಸೂರಿನ ಪಬ್ಲಿಕ್ ಟಿವಿ ವರದಿಗಾರರಿಗೆ ರಾಜ್ಯೋತ್ಸವ ಪ್ರಶಸ್ತಿ

ಮೈಸೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬೆಳಗಾವಿಯ ದಿಲೀಪ್ ಕುರಂದವಾಡೆ, ವಿಜಯಪುರದ ಪುರುಷೋತ್ತಮ ಮತ್ತು ಮೈಸೂರಿನ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿಯ ವರದಿಗಾರರು ಆಯ್ಕೆಯಾಗಿದ್ದಾರೆ. ಮೂವರು ವರದಿಗಾರರಿಗೆ ನಾಳೆ ನಡೆಯುವ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮೈಸೂರು ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಮಂದಿಗೆ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಬಾರಿ ಮಾಧ್ಯಮ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರು ಜಿಲ್ಲಾಡಳಿತ ಕೆ.ಪಿ.ನಾಗರಾಜ್ …

Read More »

ಸಿದ್ದರಾಮಯ್ಯ ಮನೆಯಿಂದ ಹಣ ತಂದು ಕೊಟ್ಟಿಲ್ಲ: ಎಸ್.ಟಿ ಸೋಮಶೇಖರ್

ಮೈಸೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಶೇ.100 ರಷ್ಟು ಮುನಿರತ್ನ ಗೆಲ್ಲುತ್ತಾರೆ. ಆರ್‍ಆರ್ ನಗರ ಕ್ಷೇತ್ರವನ್ನು ಮುನಿರತ್ನ ಅಭಿವೃದ್ಧಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಮನೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಕಿಡಿಕಾರಿದರು. ನಗರದ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆದಾಯ ಹೆಚ್ಚಿದೆ. ಹೀಗಾಗಿ ಅಭಿವೃದ್ಧಿ ಹಣ ಬಿಡುಗಡೆಯಾಗಿದೆ. ಬಜೆಟ್ ನಲ್ಲಿ ಕೊಟ್ಟ ಹಣವನ್ನು ಮುನಿರತ್ನ ಸರಿಯಾಗಿ ಅವರ ಕ್ಷೇತ್ರಕ್ಕೆ ಬಳಸಿದ್ದಾರೆ. ಕ್ಷೇತ್ರದ …

Read More »