Breaking News
Home / ಜಿಲ್ಲೆ / ಯಾದಗಿರಿ (page 5)

ಯಾದಗಿರಿ

ಕೊರೊನಾದಿಂದ ಕಂಗೆಟ್ಟಿರುವ ರೈತರಿಗೆ ಆಸರೆ- ವೈದ್ಯ, ಗುತ್ತಿಗೆದಾರನಿಂದ ನೂತನ ಪ್ರಯತ್

ಯಾದಗಿರಿ: ಕೊರೊನಾದಿಂದಾಗಿ ದೇಶವೇ ಲಾಕ್‍ಡೌನ್ ಆಗಿದ್ದು, ಬೆಳೆದ ಹಣ್ಣುಗಳನ್ನು ಕೊಳ್ಳುವವರೇ ಇಲ್ಲದಂತಾಗಿದೆ. ಅದೇ ರೀತಿ ಯಾದಗಿರಿ ಜಿಲ್ಲೆಯ ರೈತರಿಗೂ ಸಂಕಷ್ಟ ಎದುರಗಿದ್ದು,  ಜಿಲ್ಲೆಯ ಖಾಸಗಿ ವೈದ್ಯ ಮತ್ತು ಗುತ್ತಿಗೆದಾರ ಸ್ಪಂದಿಸುವ ಮೂಲಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ ಸಂಕಷ್ಟದಲ್ಲಿರುವ ಜಿಲ್ಲೆಯ ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ನೆರವಾಗಲು ರಾಜ್ಯದಲ್ಲಿಯೇ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಲಾಕ್‍ಡೌನ್ ಗೆ ಸಿಲುಕಿ, ಸಾರಿಗೆ ಮತ್ತು ಸರಿಯಾದ ಮಾರುಕಟ್ಟೆ ಇಲ್ಲದೆ ಬೆಳೆದ …

Read More »

ಅನಾರೋಗ್ಯದಿಂದ 6ರ ಬಾಲಕಿ ಸಾವು – ಕೊರೊನಾ ಪ್ರೋಟೋಕಾಲ್‍ನಂತೆ ಶವಸಂಸ್ಕಾರ

ಯಾದಗಿರಿ: ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದ ಜಿಲ್ಲೆಯ ಶಹಪುರ ತಾಲೂಕಿನ ಕೊಂಗಂಡಿ ಗ್ರಾಮದ ಆರು ವರ್ಷದ ಬಾಲಕಿಯ ಅಂತ್ಯಕ್ರಿಯೆಯನ್ನು ವಿಶ್ವ ಅರೋಗ್ಯ ಸಂಸ್ಥೆಯ ಪ್ರೋಟೋಕಾಲ್ ನಿಯಮದಂತೆ ಅಧಿಕಾರಿಗಳು ನೆರವೇರಿಸಿದ್ದಾರೆ. ಕಳೆದ ಮೂರು ದಿನಗಳಿಂದ ಬಾಲಕಿ ತೀವ್ರ ಕೆಮ್ಮು, ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದಳು. ಹೀಗಾಗಿ ಬಾಲಕಿ ಕುಟುಂಬಸ್ಥರು ಅವಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಬಾಲಕಿ ಗುಣಮುಖವಾಗದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ, ಶಹಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು …

Read More »

ಶಂಕಿತ ಕೊರೊನಾಗೆ ಮಗು ಹಂಸಲೇಖ ಬಲಿ

ಶಂಕಿತ ಕೊರೊನಾಗೆ ಮಗು ಹಂಸಲೇಖ ಬಲಿ ಯಾದಗಿರಿ, ಶಹಾಪುರಃ ಕೊರೊನಾ ವೈರಸ್ ಶಂಕಿತ ಕ್ವಾರಂಟೈನ್ ನಲ್ಲಿದ್ದ ಮಗುವೊಂದ ಕೆಮ್ಮು, ಜ್ವರದಿಂದ ಬಳಲಿ‌ ಅಸುನೀಗದ ಘಟನೆ ಜಿಲ್ಲೆಯ ಶಹಾಾಪುರ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ. ಹಂಸಲೇಖ ತಂದೆ ರಾಮಪ್ಪ ಹೊಸಮನಿ (4) ಎಂಬ ಮಗುವೇ ಶಂಕಿತ ಕೊರೊನಾದಿಂದ ಮೃತಪಟ್ಟಿದೆ ಎನ್ನಲಾಗಿದೆ. ಮಗುವಿನ ಪಾಲಕರು ಬೆಂಗಳೂರಿನಲ್ಲಿ‌ ಕೆಲಸ‌ ಮಾಡುತ್ತಿದ್ದು, ಕೊರೊನಾ ಹಾವಳಿಗೆ ಇಡಿ ದೇಶ ಲಾಕ್ ಡೌನ್ ಆದ ಹಿನ್ನೆಲೆ ಅವರು ಏಪ್ರೀಲ್ …

Read More »

ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಜೊತೆ ನಾವಿದ್ದೇವೆ ಎಂದು ಕೂಗಿ ಹೂಮಳೆಯ ಸ್ವಾಗತ

ಯಾದಗಿರಿ: ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾದಗಿರಿಯ ಜನ ಹೂಮಳೆಯ ಸ್ವಾಗತ ಮಾಡಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ಆರೋಗ್ಯ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿ ಕೆಲವರು ವಿಕೃತಿ ಮೆರೆದಿದ್ದರು. ಆದರೆ ಯಾದಗಿರಿ ಜಿಲ್ಲೆಯ ಬೆಳೆಗೇರಾ ಗ್ರಾಮದಲ್ಲಿ ಕೊರೊನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆರಿಗೆ ಗ್ರಾಮದ ಎಲ್ಲಾ ಓಣಿಗಳಲ್ಲಿ ಕೈಯಲ್ಲಿ ಹೂ ಹಿಡಿದು ನಿಂತು ಅವರ ಮೇಲೆ …

Read More »

ದೇವಸ್ಥಾನ ನಿರ್ಮಾಣಕ್ಕಾಗಿ ಸರ್ಕಾರಿ ಶಾಲಾ ಕಟ್ಟಡ ಧ್ವಂಸ

ಯಾದಗಿರಿ: ದೇವಸ್ಥಾನ ನಿರ್ಮಾಣಕ್ಕಾಗಿ ಸರ್ಕಾರಿ ಶಾಲಾ ಕಟ್ಟಡ ಧ್ವಂಸ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರಾಮನಾಯಕನ ತಾಂಡದಲ್ಲಿ ನಡೆದಿದೆ. ರಾಮನಾಯಕ ತಾಂಡದಲ್ಲಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡವನ್ನು ದೇವಸ್ಥಾನ ಕಟ್ಟುವ ಸಲುವಾಗಿ ಕೆಡವಿ ಹಾಕಲಾಗಿದೆ. ಆದರೆ ಸರ್ಕಾರದ ಕಟ್ಟಡ ಕೆಡವಲು ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ ಈ ಕೃತ್ಯ ನಡೆಸಲಾಗಿದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಹೊಸ ಕಟ್ಟಡಕ್ಕೆ ಶಾಲೆಯನ್ನು ವರ್ಗಾಯಿಸದ ಮೇಲೆ …

Read More »

 ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೋಳಿ ಫೈಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ

ಯಾದಗಿರಿ: ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೋಳಿ ಫೈಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಮನೂರಿನಲ್ಲಿ ನಡೆದಿದೆ. ಪೊಲೀಸರ ದಾಳಿ ವೇಳೆ 13 ಮಂದಿ ಜೂಜುಕೋರರು ಮತ್ತು ಪಂದ್ಯಕ್ಕಿಟ್ಟಿದ್ದ 4 ಹುಂಜ, 4 ಕತ್ತಿ, 12 ಬೈಕ್ ಸೇರಿದಂತೆ 1.13ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಯಂಕೂಬ್ ಬಿರಾದಾರ್ ಎಂಬಾತ ಈ ಜೂಜಾಟವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಜೂಜು ನೋಡಲು ಮತ್ತು ಆಡಲು …

Read More »

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ……

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ ಎಂದು ಯಾದಗಿರಿ ಜಯ ಕರ್ನಾಟಕ ಸಂಘಟನೆಯು ದೇವರಲ್ಲಿ ಪ್ರಾಥನೆ ….. ಯಾದಗಿರಿ ಜಿಲ್ಲೆಯ ಲಕ್ಷ್ಮಿ ದೇವಸ್ಥಾನದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಬಿ ಎನ್ ವಿಶ್ವನಾಥ್ ನಾಯಕ್ ಇವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉರುಳು ಸೇವೆ ಮಾಡಿದರು ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ ಶ್ರೀ ಮುತ್ತಪ್ಪ ರೈ ಅವರ ಆರೋಗ್ಯ …

Read More »