Breaking News
Home / ಜಿಲ್ಲೆ / ರಾಮನಗರ (page 3)

ರಾಮನಗರ

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ರಾಮನಗರ:   ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದರು. ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ.   …

Read More »

ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪಾಠ

ರಾಮನಗರ: ಕೋವಿಡ್‌-19 ಲಾಕ್‌ಡೌನ್‌ ಕಾರಣಕ್ಕೆ ಕಲಿಕೆಯಿಂದ ವಿಮುಖರಾಗಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಆನ್‌ಲೈನ್‌ ಪಾಠ ಆರಂಭಿಸಿದೆ. ಈ ಮೂಲಕ ಮನೆಯಲ್ಲೇ ಕಲಿಕೆ ಮುಂದುವರಿಸುವ ಅವಕಾಶ ನೀಡಿದೆ.   ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ವಿಷಯಗಳ ನುರಿತ ಉಪನ್ಯಾಸಕರಿಂದ ಪಠ್ಯದ ವಿವಿಧ ಅಧ್ಯಾಯಗಳನ್ನು ವಿಡಿಯೊ ರೂಪದಲ್ಲಿ ಸಂಗ್ರಹಿಸಿ ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡಲಾಗುತ್ತಿದೆ. ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮಗಳೆಡರಲ್ಲೂ ಈ ಪಾಠಗಳು ಲಭ್ಯವಿದೆ. ಕಳೆದ ಜುಲೈನಿಂದಲೇ ಈ …

Read More »

ಅಗಸರು- ಕ್ಷೌರಿಕರಿಗೆ 5000ರೂ. ಕೋವಿಡ್ ಪರಿಹಾರಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ರಾಮನಗರ ಜೂ.30-ಅಗಸರು ಹಾಗೂ ಕ್ಷೌರಿಕರಿಗೆ ಕೋವಿಡ್-19ರ ಲಾಕ್‌ಡೌನ್ ಕಾರಣ 5000 ರೂ.ಗಳ ಪರಿಹಾರ ನೆರವು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಗಡುವನ್ನು ಜುಲೈ 10ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ, ಈ ಸಂಬಂಧ ರಾಮನಗರ ಜಿಲ್ಲೆಯ 04 ತಾಲ್ಲೂಕುಗಳಿಂದ ಇಲ್ಲಿಯವರೆಗೂ 1041 ಅರ್ಜಿಗಳು ಮಾತ್ರ ಆನ್‌ಲೈನ್ ಅಲ್ಲಿ ಸ್ವೀಕೃತಗೊಂಡಿವೆ.ಈ ವೃತ್ತಿಯಲ್ಲಿ ಯಾವುದೇ ಅಗಸ, ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕಾರ್ಮಿಕರು …

Read More »

ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್

ರಾಮನಗರ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್ ಆಗಿದೆ. ಜಿಲ್ಲೆಯಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಿಲ್ಲೆಯ ಮಾಗಡಿ ಪಟ್ಟಣ ಮತ್ತು ಕನಕಪುರ ಲಾಕ್‍ಡೌನ್ ಮಾಡಲಾಗಿದೆ. ಇಂದಿನಿಂದ ರಾಮನಗರ ಪಟ್ಟಣ ಕೂಡ ಲಾಕ್‍ಡೌನ್ ಆಗಿದೆ. ಕಳೆದ ದಿನವೇ ಅಂಗಡಿ, ಮುಂಗಟ್ಟುಗಳನ್ನು ವರ್ತಕರು ಬಂದ್ ಮಾಡುವ ಮೂಲಕ ಲಾಕ್‍ಡೌನ್‍ಗೆ ಸ್ವಯಂ ಪ್ರೇರಿತರಾಗಿ ಬೆಂಬಲ ಸೂಚಿಸಿದ್ದಾರೆ. ಸ್ವಯಂ …

Read More »

SSLC ಪರೀಕ್ಷೆಯನ್ನು ಬರೆಯುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಬಾಟಲ್ ಸ್ಯಾನಿಟೈಸರ್ ಉಚಿತ

ರಾಮನಗರ: ಜೂ- 25 ರಿಂದ ಆರಂಭವಾಗುವಂತಹ SSLC ಪರೀಕ್ಷೆಯನ್ನು ಬರೆಯುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಬಾಟಲ್ ಸ್ಯಾನಿಟೈಸರ್ ಉಚಿತವಾಗಿ ನೀಡುವ ಕಾರ್ಯಕ್ಕೆ ತಾಲ್ಲೂಕು ಪಂಚಾಯ್ತಿ ಮಾಜಿ ಆಧ್ಯಕ್ಷ ಗಾಣಕಲ್ ನಟರಾಜು ಮುಂದಾಗಿದ್ದಾರೆ. ತಾಲ್ಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಸ್ಯಾನಿಟೈಸರ್ ಹಸ್ತಾಂತರಿಸಿ ಮಾತನಾಡಿದ ಅವರು ಬಿಡದಿ ಹೋಬಳಿ ವ್ಯಾಪ್ತಿಯ ಬಿಡದಿ ಹೋಬಳಿಯ ಗಾಣಕಲ್ ಪ್ರೌಢಶಾಲೆ , ಚೊಕ್ಕಲಿಂಗ ವಿದ್ಯಾಲಯ, ಸರ್ಕಾರಿ ಪ್ರೌಢಶಾಲೆ ಶೇಷಗಿರಿಹಳ್ಳಿ , ಸರ್ಕಾರಿ ಪ್ರೌಢಶಾಲೆ …

Read More »

ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅವರ ಮಗ ನಿಖಿಲ್‌ಗೆ ಅನ್ವಯವಾಗಲ್ವ ಕಾನೂನು ?

ರಾಮನಗರ (ಜೂನ್‌ 03); ಕೊರೋನಾ ಪಿಡುಗು ಇಡೀ ರಾಷ್ಟ್ರವನ್ನೇ  ಭಯದ ವಾತಾವರಣಕ್ಕೆ ದೂಡಿದೆ. ಲಾಕ್‌ಡೌನ್‌ ಘೋಷಿಸಿಯೂ ಈ ಪೆಡಂಭೂತವನ್ನು ನಿಯಂತ್ರಿಸುವುದು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸರ್ಕಾರ ಜನರಲ್ಲಿ ಸಾಮಾಜಿಕ ಅಂತರದ ಕುರಿತು ಅರಿವು ಮೂಡಿಸುತ್ತಿದೆ. ಅಲ್ಲದೆ, ನಿಯಮವನ್ನೂ ರೂಪಿಸಲಾಗಿದೆ. ಆದರೆ, ಈ ನಿಯಮ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅವರ ಮಗ ನಿಖಿಲ್‌ಗೆ ಅನ್ವಯವಾಗಲ್ವ? ಎಂಬ ಪ್ರಶ್ನೆ ಇದೀಗ ಮೂಡಿದೆ. ಚನ್ನಪಟ್ಟಣದಲ್ಲಿ ನಿನ್ನೆ ಮಾಜಿ ಸಿಎಂ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮಗಳಲ್ಲಿ …

Read More »

ಪ್ರತಿಪಕ್ಷಗಳು ಹಗಲುಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ

ರಾಮನಗರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಮೂಡಿದೆ ಎಂಬ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ಬತ್ಥನಾರಾಯಣ (Dr CN Ashwathnarayan) ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಸರ್ಕಾರ ಉರುಳುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಮೊದಲು ಬಿಡಲಿ. 2023ರವರೆಗೆ ಮಾತ್ರವಲ್ಲ, 2023ರ ನಂತರವೂ ನಮ್ಮದೇ ಸರ್ಕಾರ  ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಮನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ …

Read More »

ಗ್ರೀನ್‍ಝೋನ್‍ನಲ್ಲಿದ್ದ ರಾಮನಗರಕ್ಕೂ ಆವರಿಸಿದ ಕೊರೊನಾ- ಇಬ್ಬರಲ್ಲಿ ಸೋಂಕು ಪತ್ತೆ?

ರಾಮನಗರ: ಗ್ರೀನ್ ಝೋನ್ ನಲ್ಲಿದ್ದ ರಾಮನಗರಕ್ಕೂ ಕೊರೊನಾ ಮಹಾಮಾರಿ ಎಂಟ್ರಿ ಕೊಟ್ಟಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಇಬ್ಬರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಕೆಎಸ್‍ಆರ್ ಟಿಸಿ ಡ್ರೈವರ್ ಸೇರಿದಂತೆ ಮಗುವಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ತುಮಕೂರಿನ ಬೆಳ್ಳಾವಿ ಮೂಲದ ಮಾಗಡಿ ಕೆಎಸ್‍ಆರ್‍ಟಿಸಿ ಡಿಪೋದ ಡ್ರೈವರ್ ಗೆ ಕೊರೊನಾ ಧೃಢವಾಗಿದ್ದು, ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಚಾಲಕ ಕಳೆದ ಐದು ದಿನಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿದ್ದ. …

Read More »

BIG-BREAKINGಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶ

ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2.10ಕ್ಕೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬಿಡದಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಜನವರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದರು. ನನ್ನ ಆರೋಗ್ಯದ ಕುರಿತು ಹರಿದಾಡುತ್ತಿರುವ …

Read More »

3 ವರ್ಷದ ಮಗುವನ್ನ ಹೊತ್ತೊಯ್ದು ತಿಂದಿದ್ದ ನರಭಕ್ಷಕ ಚಿರತೆ ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಬೋನಿನಲ್ಲಿ ಸೆರೆ

ರಾಮನಗರ: ಪೋಷಕರ ಬಳಿ ಮಲಗಿದ್ದ 3 ವರ್ಷದ ಮಗುವನ್ನ ಹೊತ್ತೊಯ್ದು ತಿಂದಿದ್ದ ನರಭಕ್ಷಕ ಚಿರತೆ ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಬೋನಿನಲ್ಲಿ ಸೆರೆ ಸಿಕ್ಕಿದೆ. ಕದಿರಯ್ಯನ ಪಾಳ್ಯದಲ್ಲಿ ಮೇ 9ರಂದು ನಸುಕಿನ ಜಾವ ಚಿರತೆ ಬಾಲಕ ಹೇಮಂತ್‍ನನ್ನು ಕೊಂದು ಹಾಕಿತ್ತು. ಇದರಿಂದಾಗಿ ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿರತೆಯ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆಯು ಕದಿರಯ್ಯನ ಪಾಳ್ಯದಲ್ಲಿ ಬೋನು ಇಟ್ಟಿತ್ತು. ಚಿರತೆಯು ಇಂದು ಬೋನಿಗೆ ಬಿದ್ದಿದ್ದು, …

Read More »