Breaking News

ರಾಯಚೂರು

ರಾಯಚೂರು: ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಆಗ್ರಹ

ರಾಯಚೂರು: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆ ಕಟ್ಟಡಗಳನ್ನು ತಕ್ಷಣ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಲಿಂಗಸುಗೂರು ತಾಲ್ಲೂಕಿನ ಅನ್ವರಿ ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ವಿದ್ಯಾರ್ಥಿ ತಲೆಗೆ ಪೆಟ್ಟಾಗಿದೆ. ರಾಯಚೂರಿನ ಅರಸಿಗೇರ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು …

Read More »

ಏಳು ತಿಂಗಳ ಬಾಕಿ ಸಂಬಳ ಕೊಡಿ’

ರಾಯಚೂರು: ‘ಜಿಲ್ಲೆಯಲ್ಲಿ ವಿವಿಧ ವೃಂದ ಹೊರ ಗುತ್ತಿಗೆ ನೌಕರರಿಗೆ ಬಾಕಿ ಉಳಿದಿರುವ ಏಳು ತಿಂಗಳ ವೇತನವನ್ನು ತಕ್ಷಣ ವೇತನ ಪಾವತಿ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರ ಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ. ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಕ್ಷಯಗೌಡ, ‘ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಗುತ್ತಿಗೆ ಏಜೆನ್ಸಿಗಳು ತಮ್ಮ ಹೊಣೆಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. …

Read More »

ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್

ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ ಬಸ್ ನಿಲ್ದಾಣದಿಂದ ರಾಯಚೂರಿಗೆ ಬರುತ್ತಿದ್ದ ಪ್ರಯಾಣಿಕ ಸೋಮಶೇಖರ ಪಾಟೀಲ ಅವರು 2.50 ಲಕ್ಷ ರೂ. ಇದ್ದ ಬ್ಯಾಗ್ ಅನ್ನು ಬಸ್ ನಲ್ಲಿ ಬಿಟ್ಟು ರಾಯಚೂರಿನಲ್ಲಿ ಇಳಿದು ಹೋಗಿದ್ದಾರೆ. ಹೈದರಾಬಾದ್ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ನಂತರ ಕಂಡಕ್ಟರ್ …

Read More »

ರಾಯಚೂರು: ಅಂಗವೈಕಲ್ಯವನ್ನು ಮೆಟ್ಟಿ ಬದುಕು ಕಟ್ಟಿಕೊಂಡ ಮಾದರಿ ಮಹಿಳೆ!

ರಾಯಚೂರು ಡಿಸೆಂಬರ್ 3: ಈಕೆಗೆ ಒಂದು ಕಾಲಿನಲ್ಲಿ ಸ್ವಾಧೀನ ಇಲ್ಲ. ಎಲ್ಲರಂತೆ ನಡೆಯಲು ಓಡಾಡಲು ಸಾಧ್ಯವಾಗುವುದಿಲ್ಲ. ಹಾಗಂತ ಈಕೆ ಎಂದೂ ಕೂಡ ಮನೆಯಲ್ಲಿ ಖಾಲಿಯಾಗಿ ಕುಳಿತವಳಲ್ಲ. ಜೀವನದಲ್ಲಿ ತಾನೂ ಕೂಡ ಎಲ್ಲರಂತೆ ಬದುಕು ನಡೆಸಬೇಕು ಅನ್ನೋ ಛಲ ಈಕೆಯದ್ದು. ಹೀಗಾಗಿ ಸ್ವಾವಲಂಬಿ ಜೀವನ ನಡೆಸುವ ಮೂಲಕ ಈ ಮಹಿಳೆ ಎಲ್ಲಾ ಮಹಿಳೆಯರಿಗೂ ಮಾದರಿಯಾಗಿದ್ದಾಳೆ. ಅಷ್ಟಕ್ಕೂ ಆ ಮಹಿಳೆ ಯಾರು? ಎಲ್ಲಿಯವರು? ಈ ಎಲ್ಲಾ ಮಾಹಿತಿಗಾಗಿ ಮುಂದೆ ಓದಿ… ನಿತ್ಯ ನೂರಾರು …

Read More »

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಮೊಸಳೆ ಸಂತತಿ: ಜನರಲ್ಲಿ ಆತಂಕ

ರಾಯಚೂರು: ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ವಿಶಾಲ ಪ್ರದೇಶದಲ್ಲಿ ಹರಿಯುತ್ತಿವೆ. ನದಿಗಳ ಎರಡೂ ತೀರಗಳ ಸಮೀಪದಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈ ನದಿಗಳಲ್ಲಿ ಮೊಸಳೆಗಳ ಸಂತತಿ ಹೆಚ್ಚಾಗುತ್ತಿದೆ. ಜನರನ್ನು ಮೊಸಳೆ ಕಾಟದ ಭಯ ಆವರಿಸಿದೆ. ಜಿಲ್ಲೆಯ ಬಲಭಾಗದಲ್ಲಿ ಕೃಷ್ಣಾ ಹಾಗೂ ಎಡ ಭಾಗದಲ್ಲಿ ತುಂಗಭದ್ರಾ ನದಿಗಳು ಹರಿಯುತ್ತವೆ. ಕೃಷ್ಣಾ ನೂರಕ್ಕೂ ಹೆಚ್ಚು ಕಿಲೋ‌ ಮೀಟರ್ ಮತ್ತು ತುಂಗಭದ್ರಾ 80 ಕಿಲೋ ಮೀಟರ್​ಗಳವರೆಗೆ ಜಿಲ್ಲೆಯಲ್ಲಿ ಹರಿಯುತ್ತದೆ. ಈಗ ನದಿಯಲ್ಲಿ ನೀರಿನ ಪ್ರಮಾಣ …

Read More »

ಫಸಲ್ ಬಿಮಾ ಯೋಜನೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಶಂಕೆ .. ರೈತರ ಲಕ್ಷಾಂತರ ರೂ.ದುರ್ಬಳಕೆ ಆರೋಪ

ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೇ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಬೇರೆಯವರ ಖಾತೆಗೆ ಜಮಾ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …

Read More »

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಗೋರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯರಗುಂಟಿ ಗ್ರಾಮ ಬರುತ್ತದೆ. ಇತ್ತೀಚೆಗೆ ಕಲುಷಿತ ನೀರಿನಿಂದ ಗೋರೆಬಾಳ ಗ್ರಾಮದಲ್ಲಿ ಹಲವು ಜನರು ವಾಂತಿ – ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಗ್ರಾಮದಲ್ಲಿ ಆರೋಗ್ಯ ಅಧಿಕಾರಿಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗೋರೆಬಾಳ ಗ್ರಾಮದಲ್ಲಿ ವಾಂತಿ – ಭೇದಿ ಪ್ರಕರಣ ನಿಯಂತ್ರಣಕ್ಕೆ ಬರುವ ಮುನ್ನವೇ ಪಕ್ಕದ …

Read More »

ರಾಜಕೀಯ ವ್ಯವಸಾಯ ಇದ್ದಂತೆ, ಉತ್ತಮ ಬೆಳೆಗೆ ಕಾಯಬೇಕು ಅಷ್ಟೇ: ಡಿ.ಕೆ.ಶಿವಕುಮಾರ್​

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸೋಮವಾರ ಕನಕಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಕೇರಮ್ಮ ದೇವಸ್ಥಾನದಲ್ಲಿ ಕುಟುಂಬಸ್ಥರು ಹಾಗೂ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್​ ನಂತರ ಬೃಹತ್​ ಬೈಕ್​ ರ್‍ಯಾಲಿ ಹಾಗೂ ರೋಡ್​ಶೋ ನಡೆಸಿದರು. ಈ ವೇಳೆ ಅಪಾರ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಡಿಕೆಶಿ ರಾಜಕಾರಣ ಅನ್ನೋದು ವ್ಯವಸಾಯ ಇದ್ದಂತೆ ವ್ಯವಸಾಯದಲ್ಲಿ ಹೇಗೆ ಬಿತ್ತನೆ ಹಾಕಿ, …

Read More »

ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯ

ರಾಯಚೂರು : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ನೇತಾಜಿ ನಗರದ ಮನೆಯೊಂದರಲ್ಲಿ ನಡೆದಿದೆ. ಶಂಕುದ್ದೀನ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ಮನೆಯಲ್ಲಿದ್ದ ಅಂಜುಮ್, ನಪೀಜಾ ಬಾನು ಹಾಗೂ ಪದ್ಮಾವತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂದರ್ಭಿಕ ಚಿತ್ರ ದಲಿತ ಕುಟುಂಬದ ಮೇಲೆ ಹಲ್ಲೆ : ಪೊಲೀಸರ ನಡೆ ಖಂಡಿಸಿ ಇಂದು …

Read More »

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ಪ್ರಾಚಾರ್ಯ

ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು …

Read More »