Home / ಜಿಲ್ಲೆ / ರಾಯಚೂರು (page 10)

ರಾಯಚೂರು

ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ

ವಿಜಯಪುರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಖಾದರ್​ ಇನಾಮದಾರ್​, ಶಾಬಾಜ್ ಇನಾಮದಾರ್, ಅಲ್ತಾಫ್ ಇನಾಮದಾರ್​ ಬಂಧಿತರು. ಇನ್ನು ಬಂಧಿತರಿಂದ 5000 ನಗದು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು ರಾಯಚೂರಿನ ಸದರ್​​ ಬಜಾರ್​​ ಪೊಲೀಸರು ಅಶೋಕ್​​ ಡಿಪೋ ಬಳಿ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಜಿಲಾನಿ, …

Read More »

ಒಂದು ವಾರದಿಂದ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಹಳ್ಳದ ನೀರಿಗೆ ರೈತರ ಬೆಳೆ ಕೊಚ್ಚಿ ಹೋಗಿದೆ.

ರಾಯಚೂರು: ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಹಳ್ಳದ ನೀರಿಗೆ ರೈತರ ಬೆಳೆ ಕೊಚ್ಚಿ ಹೋಗಿದೆ. ಹೀಗಾಗಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ವಿರುದ್ಧ ಗಬ್ಬೂರಿನ ರೈತ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸಿರವಾರ-ಗಬ್ಬೂರು ಮಧ್ಯೆ ಹಳ್ಳಕ್ಕೆ ಸೇತುವೆ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿದಕ್ಕೆ ನಮ್ಮ ಬೆಳೆ ಕೊಚ್ಚಿ ಹೋಗಿದೆ ಎಂದು ಶಾಸಕರ ವಿರುದ್ಧ ರೈತ ಗರಂ ಆಗಿದ್ದಾನೆ. ಕೋಟಿಗಟ್ಟಲೆ ಅನುದಾನ ತಂದಿದ್ದೇನೆ ಎನ್ನುವ ಶಾಸಕರು ಇನ್ನೂ ಸೇತುವೆಯನ್ನು …

Read More »

ಮೋದಿ, ಬಿಎಸ್‍ವೈ ಸರ್ಕಾರ ರೈತರ ಪರ ಕೆಲಸ ಮಾಡ್ತಿದೆ: ಕಟೀಲ್

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಮನೆಗೆ ನಳಿನ್ ಕುಮಾರ್ ಕಟೀಲ್ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಳೀನ್‍ಗೆ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕಟೀಲ್, ಅಶೋಕ್ ಗಸ್ತಿ …

Read More »

ಮನೆಗಳಿಗೆ ಮಳೆ ನೀರು ನುಗ್ಗಿ ಊಟಕ್ಕೂ ಪರದಾಟ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನ ಊಟಕ್ಕೂ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಮನೆಗಳಿಗೆ ನೀರು ನುಗ್ಗಿರುವ ರಾಯಚೂರು ನಗರದ ಜಹಿರಾಬಾದ್, ಸಿಯತಲಾಬ್ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದು ಊಟದ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿನ ದವಸ ಧಾನ್ಯ ಹಾಗೂ ಎಲ್ಲಾ ವಸ್ತುಗಳು ನೀರುಪಾಲಾಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ನಿಧಾನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲಾ ಸತತವಾಗಿ ಸುರಿದ ಮಳೆಯಿಂದ …

Read More »

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ರಾಯಚೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಚೂರಿನ ಪೋತಗಲ್ ಬಳಿ ನಿಗದಿತ ಸ್ಥಳದಲ್ಲಿ ಕೋವಿಡ್ ನಿಯಮಾವಳಿ ಜೊತೆಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಅಂತಿಮ ಸಂಸ್ಕಾರವನ್ನ ಅಶೋಕ್ ಗಸ್ತಿಯವರ ಪುತ್ರಿ ನೇಹಾ ಗಸ್ತಿ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಸುಮಾರು 30 ಜನ ಭಾಗವಹಿಸಿದ್ದರು. ಅಗಲಿದ ನಾಯಕನಿಗೆ ಜಿಲ್ಲೆಯಾದ್ಯಂತ ಅಭಿಮಾನಿಗಳು, …

Read More »

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ :ಡಿಸಿಎಂ ಲಕ್ಷ್ಮಣ ಸವದಿ

ರಾಯಚೂರು : ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪುಟದ ಒಪ್ಪಿಗೆ ಪಡೆಯಲಾಗುವುದು. ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ …

Read More »

ರಾಯಚೂರು ಮಾರುಕಟ್ಟೆಗೆ ದಾಖಲೆ ಪ್ರಮಾಣದಲ್ಲಿ ಬಂದ ಈರುಳ್ಳಿ; ದರ ಕುಸಿತಕ್ಕೆ ಕಂಗಾಲಾದ ರೈತ

ರಾಯಚೂರು : ರೈತನಿಗೆ ಒಂದಿಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ, ಕಳೆದ ಬಾರಿ ದುಬಾರಿ ದರದಲ್ಲಿ ಮಾರಾಟವಾಗಿದ್ದ ಈರುಳ್ಳಿ ಈ ಬಾರಿ ಆರಂಭದಲ್ಲಿಯೇ ಪಾತಾಳಕ್ಕಿಳಿದಿದೆ. ಈರುಳ್ಳಿ ಬೆಳೆದ ರೈತ ಈಗ ದರ ಇಲ್ಲದೆ ಕಂಗಾಲಾಗಿದ್ದಾನೆ. ಒಂದು ಕಡೆ ಈರುಳ್ಳಿ ಇಟ್ಟುಕೊಳ್ಳಲು ಆಗದೆ ಮಾರಾಟ ಮಾಡಲು ಆಗದೆ ದಿಕ್ಕು ತೋಚದಂತಾಗಿದ್ದಾನೆ. ಒಂದು ಕೊರೋನಾದಿಂದ ಉದ್ಯೋಗವಿಲ್ಲದೇ ಕೃಷಿಯತ್ತ ಮುಖ ಮಾಡಿದ ರೈತರ, ಕಷ್ಟ ಪಟ್ಟು ಈರುಳ್ಳಿಯನ್ನು ಬೆಳೆದು ಮಾರುಕಟ್ಟೆಗೆ ತಂದರೆ ಈರುಳ್ಳಿ ದರ ಪಾತಾಳಕ್ಕಿಳಿದಿದೆ. …

Read More »

ರಾಯಚೂರಿನ ಮುದಗಲ್ ಮೊಹರಂ ಆಚರಣೆಯನ್ನ ರದ್ದು ಮಾಡಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದರ್ಗಾಕ್ಕೆ

ರಾಯಚೂರು: ಕೊರೊನಾ ಹಿನ್ನೆಲೆ ಐತಿಹಾಸಿಕ ಪ್ರಸಿದ್ಧ ರಾಯಚೂರಿನ ಮುದಗಲ್ ಮೊಹರಂ ಆಚರಣೆಯನ್ನ ರದ್ದು ಮಾಡಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದರ್ಗಾಕ್ಕೆ ಬರುತ್ತಲೇ ಇದ್ದಾರೆ. ಇಂದು ಮೊಹರಂ ಒಂಬತ್ತನೆಯ ದಿನವಾದ್ದರಿಂದ ಸಾವಿರಾರು ಭಕ್ತರು ಆಗಮಿಸುತ್ತಲೇ ಇದ್ದಾರೆ. ರಾಜ್ಯದ ವಿವಿಧೆಡೆಯಿಂದ ಬಂದ ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ ಹರಕೆ ಸಲ್ಲಿಸುತ್ತಿದ್ದಾರೆ. ಕೋವಿಡ್ ಭೀತಿಯನ್ನ ಮರೆತು ಭಕ್ತರು ತ್ಯಾಗಬಲಿದಾನದ ಸಂಕೇತವಾದ ಮೊಹರಂನ್ನ ಆಚರಿಸುತ್ತಿದ್ದಾರೆ. ಪ್ರತಿ ವರ್ಷ ಮುದಗಲ್ ಮೊಹರಂಗೆ ದಕ್ಷಿಣ ಭಾರತದ ಹಲವು ಕಡೆಯಿಂದ …

Read More »

ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ

ರಾಯಚೂರು: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕಕ್ಕೆ ಅವಕಾಶ ನೀಡದ ಹಿನ್ನೆಲೆ ಕೆಲ ಕಿಡಿಗೇಡಿಗಳು ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ ನಗರದ ಬಂಗೀಕುಂಟದಲ್ಲಿ 20 ಕ್ಕೂ ಹೆಚ್ಚು ಬೈಕ್ ಹಾಗೂ 10 ತಳ್ಳೋಬಂಡಿ ಹಾಗೂ ಟಂಟಂನ ಗಾಜು ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕೈದು ಬೈಕ್ ಗಳನ್ನ ರಾಜಕಾಲುವೆಗೆ ಎಸೆದಿದ್ದಾರೆ. ನಿಯಮ ಮೀರಿ ಹೆಚ್ಚು ಜನ ಸೇರಿ ಮೆರವಣಿಗೆ ಮಾಡಲಾಗಿದೆ.ಧ್ವನಿವರ್ಧಕ, ವಿದ್ಯುತ್ ದ್ವೀಪಗಳನ್ನ …

Read More »

ರಾಯಚೂರಿನ ಕೊರೊನಾ ಹಾಟ್‍ಸ್ಪಾಟ್ ಗ್ರಾಮ ಸಂಪೂರ್ಣ ಸೋಂಕು ಮುಕ್ತ

ರಾಯಚೂರು: ಜಿಲ್ಲೆಯ ತಲಮಾರಿ ಗ್ರಾಮದಲ್ಲಿ ಕಳೆದ ತಿಂಗಳು ಬರೋಬ್ಬರಿ 72 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಇದರಿಂದಾಗಿ ಗ್ರಾಮದಲ್ಲಿ ಆತಂಕ ಸೃಷ್ಠಿಯಾಗಿತ್ತು, ಆದರೆ ಗ್ರಾಮಸ್ಥರು, ಜಿಲ್ಲಾಡಳಿತದ ದಿಟ್ಟ ಕ್ರಮದಿಂದಾಗಿ ಈ ಗ್ರಾಮದಲ್ಲಿ ಈಗ ಕೊರೊನಾ ದೂರವಾಗಿದ್ದು ಸೋಂಕು ಮುಕ್ತ ಗ್ರಾಮವಾಗಿದೆ.ಕೊರೊನಾದಿಂದ ಆಸ್ಪತ್ರೆ ಸೇರಿದವರು ಈಗ ಗುಣಮುಖರಾಗಿ ತಮ್ಮ ನಿತ್ಯ ಕೆಲಸದಲ್ಲಿ ತೊಡಗಿದ್ದಾರೆ. ಇಡೀ ಜಿಲ್ಲೆಗೆ ಕೊರೊನಾ ಹಾಟ್‍ಸ್ಪಾಟ್ ಆಗಿದ್ದ ಗ್ರಾಮ ಈಗ ಮಾದರಿಯಾಗಿದೆ. ಗ್ರಾಮದಲ್ಲಿ ನಡೆದ ಐದು ಮದುವೆಗಳಿಂದ ಹದಿನೈದು …

Read More »