Breaking News
Home / ಜಿಲ್ಲೆ / ರಾಯಚೂರು (page 17)

ರಾಯಚೂರು

ಗ್ರೀನ್ ಝೋನ್‍ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು…….

ರಾಯಚೂರು: ಗ್ರೀನ್ ಝೋನ್‍ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು ಆರಂಭವಾಗಲಿವೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬಹುದು ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ. ಜಿಲ್ಲೆ ಗ್ರೀನ್ ಝೋನ್ ಪಟ್ಟಿಯಲ್ಲಿ ಇರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆಯಾಗಿದ್ದು, ಬುಧವಾರದಿಂದ ಜಿಲ್ಲೆಯಾದ್ಯಂತ ವ್ಯಾಪಾರ- ವಹಿವಾಟು ಶುರುವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕಂಪನಿ, ಕೈಗಾರಿಕೆಗಳನ್ನ ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕಂಪನಿ ಆರಂಭಿಸಲು ಸೂಚಿಸಲಾಗಿದೆ. ಜೊತೆಗೆ ಬೇರೆ …

Read More »

ಜೀವ ಮತ್ತು ಜೀವನ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಲಕ್ಷ್ಮಣ್ ಸವದಿ

ರಾಯಚೂರು: ಜನಪ್ರತಿನಿಧಿಗಳು ಜಾತಿ, ರಾಜಕೀಯ ಬಿಟ್ಟು ನಿಜವಾಗಿ ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕಿದೆ. ಎಲ್ಲವೂ ಸರ್ಕಾರದಿಂದ ಸಾಧ್ಯವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜೀವ ಮತ್ತು ಜೀವನ ಉಳಿಸಲು ಹಾಗೂ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕರೆ ನೀಡಿದ್ದಾರೆ. ರಾಯಚೂರು ಜಲ್ಲೆಯಲ್ಲಿ ಡಿಸಿಎಂ ಅಕಾಲಿಕ ಮಳೆಯಿಂದಾಗಿ ಹಾನಿಯಾದ ಬೆಳೆ ವೀಕ್ಷಣೆ ಮಾಡಿದರೆ. ಬಳಿಕ ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಸಿರು …

Read More »

ಮೂಟೆ ಹೊತ್ತು ಸುಸ್ತಾಗುವ ನಮ್ಗೆ ಎಣ್ಣೆ ಇಲ್ಲದಿದ್ರೆ ಹೇಗೆ: ಹಮಾಲಿಗಳು ಆಕ್ರೋಶ………..

ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯಪ್ರಿಯರಿಗೆ ಬಹಿರಂಗವಾಗಿ ಹೇಳಿಕೊಳ್ಳಲು ಆಗದಿರುವಷ್ಟು ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೆಲವರು ದುಬಾರಿ ಬೆಲೆಗೆ ಅಕ್ರಮ ಮದ್ಯವನ್ನು ಕೊಂಡು ಕುಡಿಯುತ್ತಿದ್ದಾರೆ. ರಾಯಚೂರಿನ ಎಪಿಎಂಸಿ ಹಮಾಲಿಗಳು ಮಾತ್ರ ಮದ್ಯ ಬಂದ್ ಆಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮದ್ಯ ಸಿಗದಿರುವುದಕ್ಕೆ ಕೆಲವರು ಸಿಎಚ್ ಪೌಡರ್ ಕಲಬೆರಕೆ ಸೇಂದಿಗೆ ದಾಸರಾಗಿದ್ದಾರೆ. ಸೇಂದಿ ಬೆಲೆ ಸಹ ಲಾಕ್‍ಡೌನ್ ಹಿನ್ನೆಲೆ ಡಬಲ್ ಆಗಿದೆಯಂತೆ. ಲಾಕ್‍ಡೌನ್‍ನಿಂದ ಸಿಎಚ್ ಪೌಡರ್ ಸಹ ಸಿಗದಿರುವುದರಿಂದ ಅದರಲ್ಲೂ ನಕಲಿ ಸೇಂದಿ …

Read More »

ರಾಯಚೂರು ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ – ಗರಿಗೆದರಿದ ಕೃಷಿ ಚಟುವಟಿಕೆಗಳು

ರಾಯಚೂರು(ಏ.27): ಕೊರೋನಾ ಸೋಂಕಿನಿಂದ ದೂರವಿರುವ ರಾಯಚೂರು ಜಿಲ್ಲೆಯಲ್ಲಿ ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ಈ ಮಧ್ಯೆ ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇಲ್ಲಿ ಕೃಷಿಕರ ಫಸಲು ಮಾರಾಟಕ್ಕೆ ನೇರವಾಗಿ ಮಿಲ್ ಗಳಿಗೆ ಕಳುಹಿಸಲಾಗುತ್ತಿದೆ.  ಜಗತ್ತನ್ನು ಕಾಡುತ್ತಿರುವ ಮಹಾಮಾರಿ ಕೊರೋನಾ ರಾಯಚೂರು ಜಿಲ್ಲೆಯಲ್ಲಿ ಇಲ್ಲಿಯವರೆಗೂ ಮುಕ್ತವಾಗಿದೆ. ಕೊರೋನಾ ಇಲ್ಲದ ಕಾರಣ ಜಿಲ್ಲೆಯು ಈಗ ಗ್ರೀನ್ ಝೋನ್​  ನಲ್ಲಿದ್ದು, ಈಗ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಇಲ್ಲಿ ಕೃಷಿ ಚಟುವಟಿಕೆಗೆ …

Read More »

ಲಾಕ್‍ಡೌನ್‍ನಲ್ಲೂ ಹೆಚ್ಚಾದ ಬೈಕ್ ಕಳ್ಳತನ: ಇಬ್ಬರ ಬಂಧನ, 8 ಬೈಕ್ ವಶ……

ರಾಯಚೂರು: ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್‍ಡೌನ್‍ನಲ್ಲಿದ್ದರೆ ಜಿಲ್ಲೆಯಲ್ಲಿ ಬೈಕ್ ಕಳ್ಳರ ಹಾವಳಿ ಜೋರಾಗಿದೆ. ಇತ್ತೀಚೆಗೆ ಬೈಕ್ ಕಳ್ಳತನಗಳು ಹೆಚ್ಚಾದ ಹಿನ್ನೆಲೆ ಮಾನ್ವಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ವಿವಿಧ ಠಾಣೆ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಕಳ್ಳರನ್ನ ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ಸೋಮನಾಥಪುರದಲ್ಲಿ ಮೇಷನ್ ಕೆಲಸ ಮಾಡುತ್ತಿದ್ದ ಉಮೇಶ್, ಮಾನವಿ ಕೋನಾಪುರಪೇಟೆಯ ಆಟೋ ಚಾಲಕ ಅಕ್ತರ್ ಬಂಧಿತ ಆರೋಪಿಗಳು. ಬಂಧಿತರಿಂದ 3.55 ಲಕ್ಷ ರೂ. ಮೌಲ್ಯದ …

Read More »

ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು……….

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು. ಶಾಸಕ …

Read More »

ಅನಾವಶ್ಯಕವಾಗಿ ಹೊರಬಂದ್ರೆ ಅಂಬುಲೆನ್ಸ್‌ನಲ್ಲಿ ಶಿಕ್ಷೆ: ಪೊಲೀಸರ ಹೊಸ ಪ್ರಯೋಗ

ರಾಯಚೂರು: ಕೊರೊನಾ ಸೋಂಕಿತ ರೋಗಿಯನ್ನು ಅಂಬುಲೆನ್ಸ್ ನಲ್ಲಿ ಇರಿಸಿ ಅದೇ ವ್ಯಾನಿನಲ್ಲಿ ಅನಗತ್ಯವಾಗಿ ತಿರುಗಾಡುವವರನ್ನು ಹಾಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೇ ಮಾದರಿಯಲ್ಲಿ ಇಂದು ರಾಯಚೂರು ಜಿಲ್ಲಾ ಪೊಲೀಸರು ಸಹ ಅನಗತ್ಯವಾಗಿ ತಿರುಗಾಡುವವರಿಗೆ ಶಿಕ್ಷೆ ನೀಡಿದ್ದಾರೆ. ಗ್ರೀನ್ ಜೋನಿನಲ್ಲಿರುವ ರಾಯಚೂರಿನಲ್ಲಿ ಲಾಕ್‍ಡೌನ್‍ನ್ನು ಒಂದಿಷ್ಟು ಸಡಿಲಿಕೆ ಮಾಡಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ತ್ರಿಬ್ಬಲ್ ರೈಡ್ ಹೋಗುತ್ತಿದ್ದಾರೆ. ಕೆಲವರು ಅನಾವಶ್ಯಕವಾಗಿ ಹೊರಗಡೆ ತಿರುಗಾಡುತ್ತಿದ್ದರು. ಇಂಥವರನ್ನು ನಗರದ ಚಂದ್ರಮೌಳೇಶ್ವರ ವೃತ್ತ ಹಾಗೂ …

Read More »

ರಸ್ತೆಯಲ್ಲಿ ನೋಟುಗಳು ಬಿದ್ದಿದ್ರೂ ಮುಟ್ಟದ ಜನ – ಪೊಲೀಸರಿಗೆ ಮಾಹಿತಿ

ರಾಯಚೂರು: ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೋಟುಗಳು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. 500 ರೂಪಾಯಿ ಮುಖಬೆಲೆಯ ನೋಟುಗಳು ಬೀದಿಯಲ್ಲಿ ಬಿದ್ದಿದ್ದಕ್ಕೆ ಜನ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಯಚೂರಿನ ನೇತಾಜಿ ನಗರದಲ್ಲಿ 500 ರೂಪಾಯಿ ಮುಖಬೆಲೆಯ 5 ನೋಟುಗಳು ರಸ್ತೆಯಲ್ಲಿ ಬಿದ್ದಿದ್ದವು. ಇದನ್ನು ನೋಡಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಹಣ ಬಿದ್ದಿದ್ದರು ಮುಟ್ಟದ ಸಾರ್ವಜನಿಕರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …

Read More »

ರಾಯಚೂರು: ಕೊರೊನಾ ಲಾಕ್‍ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ.

ರಾಯಚೂರು: ಕೊರೊನಾ ಲಾಕ್‍ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗಿದೆ. ರಾಯಚೂರು ತಾಲೂಕಿನ ಎಲೆಬಿಚ್ಚಾಲಿಯಲ್ಲಿ ಸಂಪ್ರಾದಾಯಿಕ ಬೆಳೆಯಾಗಿ ವಿಳ್ಯದೆಲೆ ಬೆಳೆಯುತ್ತಿದ್ದ ರೈತರು ಮಾರುಕಟ್ಟೆಯಿಲ್ಲದೆ ನಷ್ಟದಲ್ಲಿದ್ದಾರೆ. ಜಿಲ್ಲೆಯ ತುಂಗಭದ್ರಾ ನದಿಯ ಪಕ್ಕದಲ್ಲಿರುವ ಎಲೆಬಿಚ್ಚಾಲಿ ಗ್ರಾಮ ಈ ಹಿಂದೆ ವಿಳ್ಯೆದೆಲೆಯನ್ನು ಬೆಳೆಯುವುದರಲ್ಲಿ ತುಂಬಾ ಪ್ರಸಿದ್ಧಿ ಹೊಂದಿತ್ತು. ಎಲೆ ಬೆಳೆಯುವ ಹಿನ್ನೆಲೆ ಈ ಗ್ರಾಮಕ್ಕೆ ಎಲೆಬಿಚ್ಚಾಲಿ ಎನ್ನುವ ಹೆಸರು ಬಂದಿದೆ. ಆದರೆ …

Read More »

ಪೊಲೀಸ್ ಪಥಸಂಚಲನ – ಆರತಿ ಬೆಳಗಿ ಶುಭಕೋರಿದ ಜನ

ರಾಯಚೂರು: ಕೊರೊನಾ ಸೋಂಕು ತಡೆಗಾಗಿ ಜಾಗೃತಿ ಮೂಡಿಸಲು ನಗರದಲ್ಲಿ ಜಿಲ್ಲಾ ಪೊಲೀಸರು ಪಥ ಸಂಚಲನ ನಡೆಸಿದರು. ನಗರದ ಪಟೇಲ್ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಪಥಸಂಚಲನಕ್ಕೆ ಚಾಲನೆ ನೀಡಿದರು. ಈ ವೇಳೆ ಕೊರೊನಾ ತಡೆಗಾಗಿ ಮುತುವರ್ಜಿ ವಹಿಸುತ್ತಿರುವ ಪೊಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರತಿ ಬೆಳಗಿ ಹೂವಿನ ಹಾರ ಹಾಕುವ ಮೂಲಕ ಇಲಾಖೆಗೆ ಶುಭ …

Read More »