Breaking News

ರಾಯಚೂರು

ಲಾಕ್‍ಡೌನ್‍ನಲ್ಲೂ ಹೆಚ್ಚಾದ ಬೈಕ್ ಕಳ್ಳತನ: ಇಬ್ಬರ ಬಂಧನ, 8 ಬೈಕ್ ವಶ……

ರಾಯಚೂರು: ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್‍ಡೌನ್‍ನಲ್ಲಿದ್ದರೆ ಜಿಲ್ಲೆಯಲ್ಲಿ ಬೈಕ್ ಕಳ್ಳರ ಹಾವಳಿ ಜೋರಾಗಿದೆ. ಇತ್ತೀಚೆಗೆ ಬೈಕ್ ಕಳ್ಳತನಗಳು ಹೆಚ್ಚಾದ ಹಿನ್ನೆಲೆ ಮಾನ್ವಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ವಿವಿಧ ಠಾಣೆ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಕಳ್ಳರನ್ನ ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ಸೋಮನಾಥಪುರದಲ್ಲಿ ಮೇಷನ್ ಕೆಲಸ ಮಾಡುತ್ತಿದ್ದ ಉಮೇಶ್, ಮಾನವಿ ಕೋನಾಪುರಪೇಟೆಯ ಆಟೋ ಚಾಲಕ ಅಕ್ತರ್ ಬಂಧಿತ ಆರೋಪಿಗಳು. ಬಂಧಿತರಿಂದ 3.55 ಲಕ್ಷ ರೂ. ಮೌಲ್ಯದ …

Read More »

ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು……….

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು. ಶಾಸಕ …

Read More »

ಅನಾವಶ್ಯಕವಾಗಿ ಹೊರಬಂದ್ರೆ ಅಂಬುಲೆನ್ಸ್‌ನಲ್ಲಿ ಶಿಕ್ಷೆ: ಪೊಲೀಸರ ಹೊಸ ಪ್ರಯೋಗ

ರಾಯಚೂರು: ಕೊರೊನಾ ಸೋಂಕಿತ ರೋಗಿಯನ್ನು ಅಂಬುಲೆನ್ಸ್ ನಲ್ಲಿ ಇರಿಸಿ ಅದೇ ವ್ಯಾನಿನಲ್ಲಿ ಅನಗತ್ಯವಾಗಿ ತಿರುಗಾಡುವವರನ್ನು ಹಾಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೇ ಮಾದರಿಯಲ್ಲಿ ಇಂದು ರಾಯಚೂರು ಜಿಲ್ಲಾ ಪೊಲೀಸರು ಸಹ ಅನಗತ್ಯವಾಗಿ ತಿರುಗಾಡುವವರಿಗೆ ಶಿಕ್ಷೆ ನೀಡಿದ್ದಾರೆ. ಗ್ರೀನ್ ಜೋನಿನಲ್ಲಿರುವ ರಾಯಚೂರಿನಲ್ಲಿ ಲಾಕ್‍ಡೌನ್‍ನ್ನು ಒಂದಿಷ್ಟು ಸಡಿಲಿಕೆ ಮಾಡಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ತ್ರಿಬ್ಬಲ್ ರೈಡ್ ಹೋಗುತ್ತಿದ್ದಾರೆ. ಕೆಲವರು ಅನಾವಶ್ಯಕವಾಗಿ ಹೊರಗಡೆ ತಿರುಗಾಡುತ್ತಿದ್ದರು. ಇಂಥವರನ್ನು ನಗರದ ಚಂದ್ರಮೌಳೇಶ್ವರ ವೃತ್ತ ಹಾಗೂ …

Read More »

ರಸ್ತೆಯಲ್ಲಿ ನೋಟುಗಳು ಬಿದ್ದಿದ್ರೂ ಮುಟ್ಟದ ಜನ – ಪೊಲೀಸರಿಗೆ ಮಾಹಿತಿ

ರಾಯಚೂರು: ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೋಟುಗಳು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. 500 ರೂಪಾಯಿ ಮುಖಬೆಲೆಯ ನೋಟುಗಳು ಬೀದಿಯಲ್ಲಿ ಬಿದ್ದಿದ್ದಕ್ಕೆ ಜನ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಯಚೂರಿನ ನೇತಾಜಿ ನಗರದಲ್ಲಿ 500 ರೂಪಾಯಿ ಮುಖಬೆಲೆಯ 5 ನೋಟುಗಳು ರಸ್ತೆಯಲ್ಲಿ ಬಿದ್ದಿದ್ದವು. ಇದನ್ನು ನೋಡಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಹಣ ಬಿದ್ದಿದ್ದರು ಮುಟ್ಟದ ಸಾರ್ವಜನಿಕರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …

Read More »

ರಾಯಚೂರು: ಕೊರೊನಾ ಲಾಕ್‍ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ.

ರಾಯಚೂರು: ಕೊರೊನಾ ಲಾಕ್‍ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗಿದೆ. ರಾಯಚೂರು ತಾಲೂಕಿನ ಎಲೆಬಿಚ್ಚಾಲಿಯಲ್ಲಿ ಸಂಪ್ರಾದಾಯಿಕ ಬೆಳೆಯಾಗಿ ವಿಳ್ಯದೆಲೆ ಬೆಳೆಯುತ್ತಿದ್ದ ರೈತರು ಮಾರುಕಟ್ಟೆಯಿಲ್ಲದೆ ನಷ್ಟದಲ್ಲಿದ್ದಾರೆ. ಜಿಲ್ಲೆಯ ತುಂಗಭದ್ರಾ ನದಿಯ ಪಕ್ಕದಲ್ಲಿರುವ ಎಲೆಬಿಚ್ಚಾಲಿ ಗ್ರಾಮ ಈ ಹಿಂದೆ ವಿಳ್ಯೆದೆಲೆಯನ್ನು ಬೆಳೆಯುವುದರಲ್ಲಿ ತುಂಬಾ ಪ್ರಸಿದ್ಧಿ ಹೊಂದಿತ್ತು. ಎಲೆ ಬೆಳೆಯುವ ಹಿನ್ನೆಲೆ ಈ ಗ್ರಾಮಕ್ಕೆ ಎಲೆಬಿಚ್ಚಾಲಿ ಎನ್ನುವ ಹೆಸರು ಬಂದಿದೆ. ಆದರೆ …

Read More »

ಪೊಲೀಸ್ ಪಥಸಂಚಲನ – ಆರತಿ ಬೆಳಗಿ ಶುಭಕೋರಿದ ಜನ

ರಾಯಚೂರು: ಕೊರೊನಾ ಸೋಂಕು ತಡೆಗಾಗಿ ಜಾಗೃತಿ ಮೂಡಿಸಲು ನಗರದಲ್ಲಿ ಜಿಲ್ಲಾ ಪೊಲೀಸರು ಪಥ ಸಂಚಲನ ನಡೆಸಿದರು. ನಗರದ ಪಟೇಲ್ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಪಥಸಂಚಲನಕ್ಕೆ ಚಾಲನೆ ನೀಡಿದರು. ಈ ವೇಳೆ ಕೊರೊನಾ ತಡೆಗಾಗಿ ಮುತುವರ್ಜಿ ವಹಿಸುತ್ತಿರುವ ಪೊಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರತಿ ಬೆಳಗಿ ಹೂವಿನ ಹಾರ ಹಾಕುವ ಮೂಲಕ ಇಲಾಖೆಗೆ ಶುಭ …

Read More »

ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.

ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …

Read More »

ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್

ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು …

Read More »

ಲಾಕ್‍ಡೌನ್ ಎಫೆಕ್ಟ್- ನುಗ್ಗೆಕಾಯಿ ಬೆಳೆದ ರೈತರು ಕಂಗಾಲು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನುಗ್ಗೆಕಾಯಿ ಬೆಳೆದ ರೈತರು ಕೊರೊನಾ ಲಾಕ್‍ಡೌನ್ ಎಫೆಕ್ಟ್ ನಿಂದ ಈ ವರ್ಷ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ಎಲ್ಲ ರೈತರಿಗೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ. ಅಲ್ಲದೆ ನುಗ್ಗೆಕಾಯಿ ಬೆಲೆ ಕೂಡ ಇಳಿಕೆಯಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಒಬ್ಬೊಬ್ಬ ರೈತರು ಎರಡು ಮೂರು ಎಕರೆ ಪ್ರದೇಶದಲ್ಲಿ ಸಾವಿರಾರು ರೂಪಾಯಿಗಳನ್ನು ಖರ್ಚುಮಾಡಿ ನುಗ್ಗೆಕಾಯಿ ಬೆಳೆದಿದ್ದಾರೆ. ಈ ಬಾರಿ ನುಗ್ಗೆಕಾಯಿ ಬೆಳೆಕೂಡ ಉತ್ತಮವಾಗೇ ಬಂದಿದೆ. ಆದರೆ ಕೊಳ್ಳುವವರೇ ಇಲ್ಲವಾಗಿದೆ. ಹೀಗಾಗಿ ರೈತನ …

Read More »

ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ

ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್​ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …

Read More »