Breaking News
Home / ಜಿಲ್ಲೆ / ರಾಯಚೂರು (page 19)

ರಾಯಚೂರು

ಜನರ ಓಡಾಟಕ್ಕೆ ಬ್ರೇಕ್ ಹಾಕಲು ಡ್ರೋಣ್ ಬಳಕೆ- ರಾಯಚೂರು ಪೊಲೀಸರ ಹೊಸ ಪ್ರಯತ್ನ

ರಾಯಚೂರು: ಎಷ್ಟು ಹೇಳಿದರೂ ಜನ ಹೊರಗಡೆ ಓಡಾಡುವುದನ್ನ ಕಡಿಮೆ ಮಾಡುತ್ತಿಲ್ಲ. ಹೀಗಾಗಿ ಜನರ ಓಡಾಟ ತಡೆಯಲು ರಾಯಚೂರಿನಲ್ಲಿ ಡ್ರೋಣ್ ಬಳಕೆ ಮಾಡಲಾಗುತ್ತಿದೆ. ರಾಯಚೂರು ಪೊಲೀಸರಿಂದ ವಿನೂತನ ಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಬಡಾವಣೆ, ಓಣಿಗಳಲ್ಲಿ ಜನ ಗುಂಪುಗುಂಪಾಗಿ ಸೇರುವುದನ್ನ ತಡೆಯಲು ಡ್ರೋಣ್ ಬಳಕೆ ಮಾಡಲಾಗುತ್ತಿದೆ. ಡ್ರೋಣ್ ಶಬ್ದಕ್ಕೆ ಹೆದರಿ ಜನ ಚದುರಿ ಹೋಗುತ್ತಿದ್ದಾರೆ. ಹೋಗದಿರುವವರನ್ನ ಪೊಲೀಸರು ಹಿಡಿದುಕೊಂಡು ಹೋಗುತ್ತಾರೆ. ಜಿಲ್ಲೆಯಲ್ಲಿ 50 ಚೆಕ್ ಪೋಸ್ಟ್ ಮಾಡಿದ್ದರೂ ಜನ ಸಂದಣಿ ನಿಯಂತ್ರಣವಾಗುತ್ತಿರಲಿಲ್ಲ. ಕೊರೊನಾ …

Read More »

ರಾಯರ ಸನ್ನಿಧಿ ಮಂತ್ರಾಲಯದಲ್ಲಿ ನವರಸನಾಯಕ ಜಗ್ಗೇಶ್ ಇಂದು ತಮ್ಮ 57ನೇ ಹುಟ್ಟುಹಬ್ಬ ಆಚರಿಸಿಕೊಂಡರು.

ರಾಯಚೂರು: ರಾಯರ ಸನ್ನಿಧಿ ಮಂತ್ರಾಲಯದಲ್ಲಿ ನವರಸನಾಯಕ ಜಗ್ಗೇಶ್ ಇಂದು ತಮ್ಮ 57ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಪ್ರತಿ ವರ್ಷದಂತೆ ಹುಟ್ಟುಹಬ್ಬದ ದಿನ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಜಗ್ಗೇಶ್ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಕೊರೊನಾ ಇದು ಮಾನವ ನಿರ್ಮಿತ ವೈರಾಣು. ಅಮೆರಿಕ, ರಷ್ಯಾ ಹಾಗೂ ಚೀನಾ ನಂಬರ್ ಒನ್ ಸ್ಥಾನಕ್ಕಾಗಿ ನಡೆದಿರುವ ಬಯೋಲಾಜಿಕಲ್ ವಾರ್ ಇದು. ಪ್ರಕೃತಿ ಆಗಾಗ ಇಂತಹ ರೋಗಗಳಿಂದ ಮಾನವನಿಗೆ …

Read More »

ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ.

ರಾಯಚೂರು: ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಸಾರ್ವಜನಿಕ ಸಂಪರ್ಕ ಇರುವ ಜಿಲ್ಲಾಧಿಕಾರಿ ಕಚೇರಿಯ ಆವಾಕ, ಜಾವಕ ವಿಭಾಗಗಳನ್ನ ಕಚೇರಿಯಿಂದ ಹೊರಕ್ಕೆ ಇಡಲಾಗಿದೆ. ವಾಹನ ಪಾರ್ಕಿಂಗ್ ಬಳಿ ಟೇಬಲ್ ಹಾಕಿಕೊಂಡು ಸಿಬ್ಬಂದಿ ಕುಳಿತಿದ್ದಾರೆ. ರಸ್ತೆಯಲ್ಲೆ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ ಸಿಬ್ಬಂದಿ ಮರದ ಕೆಳಗೆ ಫೈಲ್ ಗಳನ್ನ ಹಿಡಿದು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಆದೇಶದ ಮೇರೆಗೆ ಎರಡು ವಿಭಾಗ ಕಚೇರಿಯಿಂದ ಹೊರಗೆ …

Read More »

ಕರೊನಾ ವೈರಸ್ ಭೀತಿ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯ ಮಠದಲ್ಲಿ ಪಂಚಾಮೃತ ವಿತರಣೆ ನಿಷೇಧಿಸಲಾಗಿದೆ.

ರಾಯಚೂರು: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯ ಮಠದಲ್ಲಿ ಪಂಚಾಮೃತ ವಿತರಣೆ ನಿಷೇಧಿಸಲಾಗಿದೆ. ಸ್ವಚ್ಛತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಭಕ್ತರಿಗೆ ವಿತರಿಸುವ ಪಂಚಾಮೃತ ನಿಲ್ಲಿಸಲಾಗಿದೆ. ಎಲ್ಲ ವೃಂದಾವನಗಳಿಗೂ ಎಂದಿನಂತೆ ಪಂಚಾಮೃತಾಭೀಷೆಕ ನಡೆಯುತ್ತದೆ. ಆದರೆ ಶನಿವಾರದಿಂದ ಭಕ್ತರಿಗೆ ವಿತರಿಸುವುದನ್ನು ಮಾತ್ರ ನಿಲ್ಲಿಸಲಾಗಿದೆ. ಬೆಳಗ್ಗೆ ಹಾಗೂ ಸಂಜೆಯ ಪ್ರಸಾದ ಹಾಗೂ ದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ. ಜನತೆ ಮಠಕ್ಕೆ ಬರಬಾರದು ಎನ್ನುವ ವದಂತಿಗಳು ಹಬ್ಬುತ್ತಿವೆ. ಇದಾವುದಕ್ಕೂ ಕಿವಿಗೊಡದೆ, ಭಕ್ತರು ರಾಯರ ದರ್ಶನಕ್ಕೆ …

Read More »

ರಾಯಚೂರಿನಲ್ಲಿ ಇಂದಿರಾ ಕ್ಯಾಂಟೀನ್‍ಗೂ ತಟ್ಟಿದ ಕೊರೊನಾ ಬಿಸಿ

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಭೀತಿ ಇಂದಿರಾ ಕ್ಯಾಂಟೀನಿಗೂ ತಟ್ಟಿದ್ದು, ಪ್ರತಿ ದಿನ ನೂರಾರು ಜನರಿಂದ ತುಂಬಿರುತ್ತಿದ್ದ ಕ್ಯಾಂಟೀನ್ ಗಳು ಇಂದು ಜನರಿಲ್ಲದೆ ಬಣಗುಡುತ್ತಿವೆ. ಕೂಲಿ ಕಾರ್ಮಿಕರು, ಪ್ರಯಾಣಿಕರು, ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವುದರಿಂದ ಕ್ಯಾಂಟೀನಿಗೆ ಬರುವವರ ಸಂಖ್ಯೆ ಕೂಡ ಕಡಿಮೆಯಾಗಿದೆ. ರಾಜ್ಯಾದ್ಯಂತ ಬಂದ್ ಇರುವುದರಿಂದ ಜನ ಹೋಟೆಲ್ ಗಳಿಗೆ ಬರುವುದನ್ನು ಕಡಿಮೆ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ 9 ಗಂಟೆಗೆ 500 ಟೋಕನ್ ಗಳು ಖಾಲಿಯಾಗುತ್ತಿದ್ದವು ಆದರೆ ಇದೀಗ 50 …

Read More »

ತೋಳ ಗ್ರಾಮದ ನುಗ್ಗಿ ಸುಮಾರು 14 ಜನರಿಗೆ ಕಚ್ಚಿ ಗಂಭೀರ ಗಾಯ.

  ತೋಳ ಗ್ರಾಮದ ನುಗ್ಗಿ ಸುಮಾರು 14 ಜನರಿಗೆ ಕಚ್ಚಿ ಗಂಭೀರ ಗಾಯ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯತ ವ್ಯಾಪ್ತಿಯ ಚಿಲಕರಾಗಿ ಮತ್ತು ಇರಕಲ್ ಗ್ರಾಮಗಳು. ಅಡವಿಯಲ್ಲಿ ಇರಬೇಕಾದ ತೋಳ ಗ್ರಾಮಕ್ಕೆ ನುಗ್ಗಿ ಸುಮಾರು14 ಜನರಿಗೆ ಕಚ್ಚಿದ್ದು ಲಿಂಗಸೂಗೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಸ್ಕಿ ತಾಲೂಕಿನ ಪಾಮನಕಲ್ಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಚಿಲಕರಾಗಿ ಹಾಗೂ ಇರಕಲ್ ಗ್ರಾಮದ ಒಟ್ಟು 14 ಜನರಿಗೆ ತೋಳ ಕಚ್ಚಿದ್ದು, …

Read More »

: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್

ರಾಯಚೂರು: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಐದು ಬೆಡ್‍ಗಳ ಪ್ರತ್ಯೇಕ ವಾರ್ಡ ಆರಂಭಿಸಲಾಗಿದೆ. ಐಸಿಯು ಮಾದರಿಯಲ್ಲಿ ಕೊರೊನಾ ವಾರ್ಡ್ ಸಿದ್ಧವಾಗಿದ್ದು, ಮುನ್ನೆಚ್ಚರಿಕೆಯಾಗಿ ಅಗತ್ಯ ವೈದ್ಯರು ಹಾಗು ಸಿಬ್ಬಂದಿ ನಿಯೋಜನೆ ಮಾಡಲಾಗಿ ಚಿಕಿತ್ಸೆಗೆ ಅಗತ್ಯ ಔಷಧಿ, ಆಕ್ಸಿಜನ್, ಮಾಸ್ಕ್, ಗೌನ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ರೋಗಿಗಳು ದಾಖಲಾದರೆ ಅವರಿಗೆ ವೆಂಟಿಲೇಟರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಯಚೂರಿನಲ್ಲಿ ಇಲ್ಲಿಯವರೆಗೂ ಯಾವ …

Read More »

ಮಣ್ಣು,ಮರಳು ವಷ೯ದಿಂದ ಲೂಟಿ-

ಗುಂಡುಮುಣುಗು ಕರೆ: ಮಣ್ಣು,ಮರಳು ವಷ೯ದಿಂದ ಲೂಟಿ-ಪೊಲೀಸರ ದಾಳಿ ಜೆಸಿಬಿ ವಶಕ್ಕೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಗುಂಡುಮುಣುಗು. ಕುರಿಹಟ್ಟಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಬಗೆಯುತ್ತಿದ್ದ ಜೆಸಿಬಿಯನ್ನು ಹಾಗು ಓವ೯ ಆರೋಪಿಯನ್ನು ಬಂಧಿಸಿ. ಹೊಸಹಳ್ಳಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆಂದು ಖಾನಾಹೊಸಹಳ್ಳಿಯ ಪ್ರತ್ಯಕ್ಷದಶಿ೯ಗಳು ತಿಳಿಸಿದ್ದರೆ.ಕೆರಗಳಲ್ಲಿ ಅಕ್ರಮವಾಗಿ ಹಗಲಿನಲ್ಲಿ ಮಣ್ಣು ರಾತ್ರಿ ಮರಳು ಅಗೆಯಲು ಈ ಜೆಸಿಬಿ ಬಳಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ .ಕಳೆದ ವಷ೯ದಿಂದ ಗುಂಡುಮುಣುಗು.ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುತ್ತ …

Read More »