Breaking News

ರಾಯಚೂರು

ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ

ರಾಯಚೂರು: ನಿನ್ನೆ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೋರ್ವ ಕೊಚ್ಚಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಘಟನೆ ಜರುಗಿದೆ. ವೆಂಕಟೇಶ(36) ಕೊಚ್ಚಿ ಹೋದ ರೈತ ಎಂದು ಹೇಳಲಾಗುತ್ತಿದೆ. ಜಮೀನು ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳುವಾಗ ಘಟನೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಘಟನಾ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …

Read More »

ನಾಪತ್ತೆಯಾಗಿದ್ದ ರಾಯಚೂರು ವಿದ್ಯಾರ್ಥಿನಿಯರು ಹುಬ್ಬಳ್ಳಿಯಲ್ಲಿ ಪತ್ತೆ

ರಾಯಚೂರು: ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಶನಿವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ಎಂದು ಪಾಲಕರು ಭಾನುವಾರ ಮಹಿಳಾ ಪೊಲೀಸ್‌ ಠಾಣೆಗೆ ನೀಡಿದ್ದ ದೂರು, ಕೊನೆಗೂ ಸೋಮವಾರ ಸುಖಾಂತ್ಯ ಕಂಡಿದೆ. ಹುಬ್ಬಳ್ಳಿಯಲ್ಲಿ ನಾಲ್ವರು ವಿದ್ಯಾರ್ಥಿನಿಯರು ಗೆಳೆಯರೊಂದಿಗೆ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾಗಿದ್ದು, ಪೊಲೀಸರು ವಾಪಸ್‌ ಕರೆತರುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿ ಓಡಾಡುತ್ತಿದ್ದ ವಿದ್ಯಾರ್ಥಿಗಳನ್ನು ರೈಲ್ವೆ ಭದ್ರತಾ ಸಿಬ್ಬಂದಿ ವಿಚಾರಿಸಿ, ಹುಬ್ಬಳ್ಳಿ ಶಹರ ಠಾಣೆಗೆ ಒಪ್ಪಿಸಿದ್ದರು. ಇದೀಗ ಅಲ್ಲಿಂದ ರಾಯಚೂರಿಗೆ …

Read More »

ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ರಾಯಚೂರು: ಜಿಲ್ಲೆಯಲ್ಲಿ ಕಾಲೇಜಿಗೆ ತೆರಳಿದ್ದಂತ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೋಷಕರು ಮಕ್ಕಳು ನಾಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.   ರಾಯಚೂರು ಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದಂತ ನಾಲ್ವರು ವಿದ್ಯಾರ್ಥಿನಿಯರು, ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದರು. ಹೀಗೆ ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಿಲ್ಲ ಎಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.   ವಿದ್ಯಾರ್ಥಿನಿಯರ ಪೋಷಕರು ನೀಡಿದಂತ ದೂರನಿಂದಾಗಿ ಸದರಬಜಾರ್ ಠಾಣೆಯ ಪೊಲೀಸರು …

Read More »

ಆ.10ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.10ರಿಂದ 16ರವರೆಗೆ ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಾತ್ರೋತ್ಸವವು ಜರುಗಲಿದೆ. ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ಜರುಗಲಿವೆ. ಈ ವರ್ಷ ಮಂತ್ರಾಲಯದ ವಿದ್ವಾನ್‌ ಅರ್ಚಕ ಕೃಷ್ಣಾಚಾರ್‌, ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಆರ್‌.ಪ್ರಭಾಕರರಾವ್‌, ತಿರುವನಂತಪುರದ ವಿದ್ವಾನ್‌ ಆರ್‌.ಕೃಷ್ಣಮೂರ್ತಿ ಶಾಸ್ತ್ರಿ, ಬೆಂಗಳೂರಿನ ವಿದ್ವಾನ್‌ ಮಾಳಗಿ ರಾಮಾಚಾರ, ಮೈಸೂರಿನ ವಿದ್ವಾನ್‌ ಸಿ.ಎಚ್‌. ಶ್ರೀನಿವಾಸಮೂರ್ತಿ, ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಇಲಾಖೆ ನಿವೃತ್ತ ಜಂಟಿ …

Read More »

ಅವೈಜ್ಞಾನಿಕ ಕಾಮಗಾರಿ : ರಸ್ತೆ ಮೇಲೆ ನಿಲ್ಲುತ್ತಿದೆ ಕೊಳಚೆ ನೀರು,

ಕುಷ್ಟಗಿ : ಅವೈಜ್ಞಾನಿಕ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ ಸಿಸಿ ರಸ್ತೆಯ ಮೇಲೆ ನೀರು ನಿಲ್ಲುತ್ತಿರುವುದು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ದಿನ ಬೆಳಗಾದರೆ ಈ ಗಲೀಜು ದಾಟಿಕೊಂಡು ಮನೆ ಸೇರಬೇಕಿದೆ. ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು.   ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಈ …

Read More »

ಭ್ರಷ್ಟಾಚಾರ ಸಾಭೀತಾದ ಹಿನ್ನೆಲೆ: ಗ್ರಾ. ಪಂ ಸೇವೆಯಿಂದ ಪಿಡಿಓ ವಜಾ

ರಾಯಚೂರು: ಭ್ರಷ್ಟಾಚಾರ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮ‌ ಪಂಚಾಯಿತಿ ಪಿಡಿಓ ಶರಣಪ್ಪ ಸರ್ಕಾರಿ ಸೇವೆಯಿಂದ ವಜಾಗೊಂಡಿದ್ದಾರೆ. 2010-11 ರ ಅವಧಿಯಲ್ಲಿ ಮಾನ್ವಿ ತಾಲೂಕಿನ ಕಪಗಲ್ ಗ್ರಾಪಂ‌ ಪಿಡಿಓ ಆಗಿದ್ದಾಗ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಇದೀಗ ಕ್ರಮ ಕೈಗೊಂಡಿದ್ದು ಪಿಡಿಓ ಶರಣಪ್ಪ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಸರ್ಕಾರಕ್ಕೆ 34,77,999 ರೂ. ನಷ್ಟ ಉಂಟು ಮಾಡಿದ ಆರೋಪ ಪ್ರಕರಣದಲ್ಲಿ ಭ್ರಷ್ಟಾಚಾರ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆ …

Read More »

ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್

ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ‌ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …

Read More »

ರಾಯಚೂರು, ಮಂಡ್ಯ ಸೇರಿ 14 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಲವು ದಿನಗಳಿಂದ ಸ್ಥಿರವಾಗಿ ಬೆಲೆ ಕಾಯ್ದುಕೊಂಡು ಬಂದಿದ್ದ ಬೆಂಗಳೂರಿನಲ್ಲಿ (Bengaluru) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ (Petrol Diesel Price) ಕೆಲ ಪೈಸೆಗಳಷ್ಟು ಏರಿಕೆಯಾಗಿದೆ. ಅತ್ತ ಅಂತಾರಾಷ್ಟ್ರೀಯ …

Read More »

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ

ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ …

Read More »

ರಾಯಚೂರಿನಲ್ಲಿ ಭಾರೀ ಮಳೆ; ಜನ-ಜಾನುವಾರುಗಳ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ಆಗಮನ

ರಾಯಚೂರು, ಜೂ. 18: ಶುಕ್ರವಾರ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಸುಕಿನ ಜಾವದವರೆಗೆ ಗುಡುಗು-ಸಿಡಿಲು, ಮಿಂಚು ಸಹಿತ ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಸಂಭವಿಸಿದೆ. ದೇವಸೂಗೂರು ಹೋಬಳಿ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕಾಡ್ಲೂರು, ಜೇಗರಕಲ್, ದೇವಸೂಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ …

Read More »