Breaking News

ರಾಯಚೂರು

ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್

ರಾಯಚೂರು: ಮಾನ್ವಿ ಪಟ್ಟಣದ ಪಕ್ಷಿ ಪ್ರೇಮಿ ಪಬ್ಲಿಕ್ ಹೀರೋ ಸಲ್ಲಾವುದ್ದೀನ್ ಗಾಯಗೊಂಡಿದ್ದ ನವಿಲೊಂದನ್ನ ಮನೆಯಲ್ಲಿಟ್ಟುಕೊಂಡು ಆರೈಕೆ ಮಾಡಿ ಪುನಃ ಕಾಡಿಗೆ ಬಿಡುವ ಮೂಲಕ ಪಕ್ಷಿ ಪ್ರೇಮ ಮೆರೆದಿದ್ದಾರೆ. ಪಕ್ಷಿಗಳ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಸಲ್ಲಾವುದ್ದೀನ್ ಈಗ ನವಿಲೊಂದಕ್ಕೆ ಪುನರ್ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 26 ರಂದು ಮಾನ್ವಿ ತಾಲೂಕಿನ ಬಾಪೂರಿನ ಜಮೀನೊಂದರಲ್ಲಿ ಅನಾರೋಗ್ಯದಿಂದ ಬಿದ್ದಿದ್ದ ನವಿಲನ್ನು ಸ್ಥಳೀಯರಾದ ಫಯಾಜ್ ರುಮಾಲ್ ವಾಲೆ ಹಾಗೂ ಅವರ ಸ್ನೇಹಿತರು ಸಲ್ಲಾವುದ್ದೀನ್ ಅವರಿಗೆ ತಂದು ಒಪ್ಪಿಸಿದ್ದಾರೆ. ಬಳಿಕ …

Read More »

ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಾಯಚೂರು : ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಜನಾಶೀರ್ವಾದ ಸಮಾರಂಭವನ್ನು ನಡೆಸುತ್ತಿದ್ದು , ಇದಕ್ಕೂ ಪೂರ್ವದಲ್ಲಿ ಸಾರ್ವಜನಿಕರಿಗೆ ಏನನ್ನು ನೀಡಿ ಆಶೀರ್ವಾದ ಪಡೆಯಲು ಮುಂದಾಗಿರುವುದರ ಬಗ್ಗೆ ಬಿಜೆಪಿಗರು ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ . ಕೆ . ಶಿವಕುಮಾರ ಲೇವಡಿ ಮಾಡಿದ್ದಾರೆ . ಸ್ಥಳೀಯ ಖಾಸಗಿ ಹೋಟೆಲ್ ‌ ನಲ್ಲಿ ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ , ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು …

Read More »

ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ

ರಾಯಚೂರು: ಎಂ.ಟಿ.ಬಿ ನಾಗರಾಜ್, ನಿರಾಣಿ ಸೇರಿದಂತೆ ಬಿಜೆಪಿಯ ಅನೇಕ ಶಾಸಕರು ಕಾಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಟಿ.ಬಿ.ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹಾಗೆ ನಿರಾಣಿ ಕೂಡ ಭೇಟಿಯಾಗಿದ್ದಾರೆ. ಇನ್ನೂ ಅನೇಕರು ಪಕ್ಷದ ಸಂಪರ್ಕದಲ್ಲಿದ್ದಾರೆ. ಆದರೆ, ಎಷ್ಟು ಶಾಸಕರು ಎಂದು ಈಗಲೇ ಹೇಳಲಿಕ್ಕಾಗದು ಎಂದರು.   ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ …

Read More »

ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ.

ರಾಯಚೂರು: ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಯುನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿ, ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕವಾಗಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.   ಕೇಂದ್ರ ಸರ್ಕಾರ ನೂತನ ವಿದ್ಯುತ್‌ಶಕ್ತಿ ತಿದ್ದುಪಡಿ …

Read More »

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ರಾಯಚೂರು: ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಇದೂವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ನೀಡಿ, ಇ-ಕೆವೈಸಿ ಮಾಡಿಸಿಕೊಳ್ಳಲು ಪ್ರತಿ ತಿಂಗಳ 1 ರಿಂದ 10 ನೇ ದಿನಾಂಕದ ವರೆಗೆ ಅವಕಾಶ ಮಾಡಿಕೊಡಲಾಗಿದೆ. ಇದುವರೆಗೆ ಇ-ಕೆವೈಸಿ ಆಗದಿರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಜಿಲ್ಲೆಯ ಆಹಾರ, …

Read More »

ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ. ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ. ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. …

Read More »

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ನದಿಯಂತಾದ ಮಸ್ಕಿ ರಸ್ತೆಗಳು. ಮನೆಗಳಿಗೆ ನುಗ್ಗಿದ ನೀರು

ರಾಯಚೂರು: ರಾಯಚೂರು ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಸ್ಕಿ ಪಟ್ಟಣದ ಗಾಂಧಿನಗರ ಬಡಾವಣೆಯಲ್ಲಿ ಭಾರಿ ಮಳೆಯ ಕಾರಣ ಭಾರಿ ಪ್ರಮಾಣದ ನೀರು ರಸ್ತೆ ಮೇಲೆ ಹರಿದು ಮನೆಗಳಿಗೆ ನುಗ್ಗಿದ್ದು ನಿವಾಸಿಗಳಿಗೆ ತೊಂದರೆಯಾಗಿದೆ. ಮಸ್ಕಿಯ ಅನೇಕ ರಸ್ತೆ, ಬಡಾವಣೆಗಳು ನದಿಗಳಾಂಗಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ, ಅವಾಂತರ ಸೃಷ್ಟಿಸಿದ್ದು, ಮನೆಯಿಂದ ನೀರು ಹೊರಹಾಕಲು ಜನ ಹರಸಾಹಸ ನಡೆಸಿದ್ದಾರೆ. ಮಸ್ಕಿ ಪಟ್ಟಣ ಅನೇಕ ಭಾಗದಲ್ಲಿ …

Read More »

ಸೆಖೆಯಾಗ್ತಿದೆ ಎಂದು ಮನೆಯ ಹೊರಗೆ ಹೋದವ ಶವವಾಗಿ ಪತ್ತೆ! ಬೆಚ್ಚಿಬೀಳಿಸುತ್ತೆ ನಿನ್ನೆ ರಾತ್ರಿಯ ಘಟನೆ

ರಾಯಚೂರು: ಮದುವೆ ಮಾಡಿಕೊಳ್ಳಲೆಂದು ಆತ ಹೆಣ್ಣು ಹುಡುಕುತಿದ್ದ. ಎರಡು ದಿನದ ಹಿಂದೆ ಮಾರಮ್ಮ ದೇವಿಗೆ ಪೂಜೆಯನ್ನೂ ಮಾಡಿಸಿದ್ದ. ಯಾವುದೇ ಅಡ್ಡಿ-ಆತಂಕವಿಲ್ಲದೆ ಮಗನಿಗೆ ಒಳ್ಳೆಯ ಜೀವನ ಸಿಗಲೆಂದು ಆತನ ತಾಯಿಯೂ ದೇವರಲ್ಲಿ ಬೇಡಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಆ ಯುವಕ ದುರಂತ ಅಂತ್ಯಕಂಡಿದ್ದಾನೆ. ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದ ತಾಯಪ್ಪ(26) ಮೃತ ದುರ್ದೈವಿ. ನಿನ್ನೆ ರಾತ್ರಿ ವಿದ್ಯುತ್ ಇಲ್ಲದ ಕಾರಣಕ್ಕೆ ಸೆಖೆಯೆಂದು ಮನೆಯ ಹೊರಗೆ ಮಲಗುವುದಾಗಿ ಹೋಗಿದ್ದ. ದೇವಸ್ಥಾನದ ಬಳಿ ಕೆಲ …

Read More »

ರಾಯಚೂರು ವಿದ್ಯುದಾಗಾರದಲ್ಲಿ ಕೊರೊನಾಘಾತ: 5 ಮಂದಿ ಕೊರೊನಾಗೆ ಬಲಿ; ಆಡಳಿತ ಮಂಡಳಿ ನಿರ್ಲಕ್ಷ್ಯ, ಆತಂಕ ಇನ್ನೂ ಅಧಿಕ

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಮೇಲೆ ‌ಕೊರೊನಾ ಕರಿ ನೆರಳು ಬೀರಿದೆ. ಕೊರೊನಾ ಆತಂಕದಲ್ಲೇ ಕೆಲಸ ಮಾಡುತ್ತಿರುವ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ನೌಕರರು ಕೊರೊನಾ 2ನೇ ಅಲೆಯಿಂದಾಗಿ ಬೆಚ್ಚಿಬಿದ್ದಿದ್ದಾರೆ. ಆಡಳಿತ ಮಂಡಳಿ ನಿರ್ಲಕ್ಷ್ಯ ಧೋರಣೆಯಿಂದಾಗಿ ನೌಕರರಲ್ಲಿ ಕೊರೊನಾ ಆತಂಕ ಇನ್ನೂ ಅಧಿಕವಾಗಿದೆ. ಕೊರೊನಾ ಪಾಸಿಟಿವ್ ಆದ ಆರ್‌ಟಿಪಿಎಸ್‌ನ ನಾಲ್ವರು ಉದ್ಯೋಗಿಗಳು ಕೊವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಒಂದು ತಿಂಗಳ ಅಂತರದಲ್ಲಿ ಐದು ಮಂದಿ ನೌಕರರು ಕೊವಿಡ್ ಗೆ ಬಲಿಯಾಗಿದ್ದಾರೆ. …

Read More »

ಸಕಾಲಕ್ಕೆ ಆಕ್ಸಿಜನ್ ಒದಗಿಸಿ 50 ರೋಗಿಗಳ ಜೀವ ಉಳಿಸಿದ ಕಾಂಗ್ರೆಸ್ ಯುವ ನಾಯಕ

ರಾಯಚೂರು: ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಏಕಾಏಕಿ ಆಕ್ಸಿಜನ್ ಕೊರತೆ ಎದುರಾದ ಘಟನೆ ನಡೆದಿದ್ದು ಸಕಾಲಕ್ಕೆ ಕಾಂಗ್ರೆಸ್ ಯುವ ನಾಯಕ ಬಸನಗೌಡ ಬಾದರ್ಲಿ ಆಕ್ಸಿಜನ್ ಪೂರೈಸುವ ಮೂಲಕ 50 ಜನರ ಪ್ರಾಣ ಉಳಿಸಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗುತ್ತಿದ್ದಂತೆಯೇ ಸ್ವತಃ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಬಸನಗೌಡ ಬಾದರ್ಲಿ ಅವರಿಗೆ ಕರೆ ಮಾಡಿ ಆಕ್ಸಿಜನ್ ಒದಗಿಸುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಕೆಲವೇ ಹೊತ್ತಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ 15 ಜಂಬೋ …

Read More »