ರಾಯಚೂರು: ಉಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 110 ಕೋಟಿ ರೂಪಾಯಿಯ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ. ಮಸ್ಕಿ ನಾಲಾ ಯೋಜನೆಯ ಕಾಲುವೆ ಅಧುನೀಕರಣ, ನೀರಾವರಿ ಇಲಾಖೆಯ ರಸ್ತೆಗಳು, ಲೋಕೊಪಯೋಗಿ ಇಲಾಖೆ, ಬಿಆರ್ ಜಿಎಫ್ ಯೋಜನೆಯಲ್ಲಿ ಅನುದಾನ ನಿಡಲಾಗಿದೆ. ಅನುದಾನ ಬಿಡುಗಡೆಯ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ …
Read More »ಬೈಕಿನಲ್ಲಿ ಬಂದ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿಯಿದ್ದ ಹಣ ಎಗರಿಸಿ ಪರಾರಿ
ರಾಯಚೂರು: ಬೈಕಿನಲ್ಲಿ ಬಂದ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿಯಿದ್ದ ಹಣ ಎಗರಿಸಿ ಪರಾರಿಯಾಗಿರುವ ಘಟನೆ ರಾಯಚೂರಿನ ಗಂಜ್ ರಸ್ತೆಯ ರಿಲಾಯನ್ಸ್ ಮಾರ್ಟ್ ಮುಂಭಾಗದಲ್ಲಿ ನಡೆದಿದೆ. ಸಂಗಾ ನಾಯಕ ಬಡಾವಣೆಯ ಹೇಮಾವತಿ ಎಂಬುವವರಿಗೆ ಸೇರಿದ ಹಣವಾಗಿದೆ. ಖದೀಮರು ಹೇಮಾವತಿ ಕೈಯಲ್ಲಿದ್ದ ಬ್ಯಾಗ್ ಕಸಿದುಕೊಂಡು ಪರಾರಿಯಾಗುತ್ತಿರುವ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬ್ಯಾಗ್ ನಲ್ಲಿ ಒಂದೂವರೆ ಲಕ್ಷ ಹಣವಿತ್ತು. ಈ ಘಟನೆ ನಿನ್ನೆ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. …
Read More »ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಉದ್ಯೋಗವಿಲ್ಲದೇ ಕುರಿಗಾಯಿಯಾದ ಉಪನ್ಯಾಸಕ
ರಾಯಚೂರು: ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಜಿಲ್ಲೆಯ ಅತಿಥಿ ಉಪನ್ಯಾಸಕರೊಬ್ಬರು ದಿನಗೂಲಿ ಕುರಿಗಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ ಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ವೀರನಗೌಡ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿ ಕುರಿ ಮೇಯಿಸುತ್ತಿದ್ದಾರೆ. ಎಂಎ, ಬಿಎಡ್ ಪದವೀಧರ ವೀರನಗೌಡ ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ …
Read More »ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ
ರಾಯಚೂರು: ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಕ್ಷಾಂತರದಿಂದ ತೆರವಾಗಿರುವ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ರಾಜಕೀಯ ಚುರುಕುಗೊಂಡಿದೆ. ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ …
Read More »ಹುಳುಹತ್ತಿದ ಕಳಪೆ ಬೀಜ ಮಾರಾಟ- ವಿವಿಧ ತಾಲೂಕುಗಳ ರೈತರು ಮೋಸಹೋಗಿದ್ದಾರೆ.
ರಾಯಚೂರು: ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಹುಳು ಹತ್ತಿದ ಕಳಪೆ ಬೀಜ ವಿತರಣೆ ಮಾಡಿದ್ದರಿಂದ ವಿವಿಧ ತಾಲೂಕುಗಳ ರೈತರು ಮೋಸಹೋಗಿದ್ದಾರೆ. ಮಸ್ಕಿ ತಾಲೂಕಿನ ಕುಣಿಕಲ್ ಗ್ರಾಮದ ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಕಡಲೇಬೀಜ ಖರೀದಿ ಮಾಡಿ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ರೈತರ ಕಷ್ಟಕ್ಕೆ ಮಾತ್ರ ಕೊನೆಯಿಲ್ಲ. ಒಂದೆಡೆ ಭಾರೀ ಮಳೆಯಿಂದ ಜಿಲ್ಲೆಯ ರೈತರು ಹಲವು ತೊಂದರೆಗೆ ಒಳಗಾಗಿದ್ದಾರೆ. ಇನ್ನೊಂದೆಡೆ ರೈತರು ಮಳೆ ಚೆನ್ನಾಗಿ ಆಗಿದ್ದರಿಂದ ಖುಷಿಯಾಗಿ …
Read More »ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ: ಲಕ್ಷಣ ಸವದಿ
ರಾಯಚೂರು: ಸಿಎಂ ಬದಲಾವಣೆ ಹೇಳಿಕೆ ವಿಚಾರ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ .ನಗರದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಬಳಿಕ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಆ ಬಗ್ಗೆ ಸೂಕ್ತ ಸಂದರ್ಭದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದರು. ಕಳೆದ ವರ್ಷದ ಬೆಳೆ ವಿಮೆಯ ಹಣ ರೈತರಿಗೆ ಸಿಗದೆ ಹೋಗಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು. ಭತ್ತ, ತೊಗರಿ, ಉದ್ದು …
Read More »ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಜಾಥಾಕ್ಕೆ ಡಿಸಿ ಚಾಲನೆ
ರಾಯಚೂರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ನಗರದ ಚಂದ್ರಮೌಳೇಶ್ಚರ ವೃತ್ತದಲ್ಲಿ ಚಾಲನೆ ನೀಡಿದರು. ನಗರದ ಚಂದ್ರಮೌಳೇಶ್ಚರ ವೃತ್ತದಿಂದ ಆರಂಭಗೊಂಡ ಜಾಥಾವು ನಗರದ ವಿವಿಧ ಪ್ರಮುಖ ವೃತ್ತಗಳಾದ ಬಸವನಬಾವಿ ವೃತ್ತ, ಕನಕದಾಸ ವೃತ್ತದ ಮೂಲಕ ಪುನಃ ಜಿಲ್ಲಾ ಪೊಲೀಸ್ ಕಚೇರಿಗೆ ತಲುಪಿತು.. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠರಾದ …
Read More »ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ
ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …
Read More »ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ.
ರಾಯಚೂರು: ಜಿಲ್ಲೆಯಲ್ಲಿ ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ. ಒಂದು ತಿಂಗಳಿನಿಂದ ಅತಿಯಾಗಿ ಸುರಿದ ಮಳೆ ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಜನರ ಬದುಕನ್ನ ಕಸಿದುಕೊಂಡಿದೆ. ಆಶ್ರಯ ಸಿಕ್ಕರೂ ಅನ್ನ ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ. ಸರ್ಕಾರಿ ಶಾಲೆ, ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಆಶ್ರಯ ನೀಡಿದೆ. ಆದ್ರೆ ಯಾವುದೇ ವ್ಯವಸ್ಥೆಗಳನ್ನ ಮಾಡಿಲ್ಲ. ಹೀಗಾಗಿ ಸುಮಾರು 56 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿವೆ. ಚಿಕ್ಕಮಕ್ಕಳು, ವೃದ್ದರು, …
Read More »ರಸ್ತೆ ದಾಟಿ ಬಂದ ಮೇಲೆ ಮೈಕೈ ನೋವು ಗ್ಯಾರೆಂಟಿ. ವಾಹನಗಳು ಸುರಕ್ಷಿತವಾಗಿ ಇರುತ್ತವೆ ಅನ್ನೋ ನಂಬಿಕೆಯೂ ಇಲ್ಲಾ
ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು ಬಿದ್ದಿವೆ. ಇದರ ಜೊತೆ ಜೊತೆಗೆ ಜಿಲ್ಲೆಯ ರಸ್ತೆಗಳು ಸಹ ಹಾಳಾಗಿ ಹೋಗಿವೆ. ಜಿಲ್ಲೆಯಿಂದ ಆರಂಭವಾಗುವ ರಾಯಚೂರು- ಬಾಚಿ ರಾಜ್ಯ ಹೆದ್ದಾರಿ ಸಂಖ್ಯೆ 20 ಇದು ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ರಸ್ತೆ ತುಂಬಾ ಎಲ್ಲಿ ನೋಡಿದ್ರೂ ಆರಡಿ ಮೂರಡಿ ಗುಂಡಿಗಳೇ ಕಾಣಿಸುತ್ತವೆ. ರಾಯಚೂರು ಹೊರವಲಯದ ಸಾಥಮೈಲ್ ನಿಂದ ಕಲ್ಮಲವರೆಗೆ ಇರುವ ರಸ್ತೆ ಆ …
Read More »