Breaking News
Home / ಜಿಲ್ಲೆ / ರಾಯಚೂರು (page 9)

ರಾಯಚೂರು

ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಜಾಥಾಕ್ಕೆ ಡಿಸಿ ಚಾಲನೆ

  ರಾಯಚೂರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ನಗರದ ಚಂದ್ರಮೌಳೇಶ್ಚರ ವೃತ್ತದಲ್ಲಿ ಚಾಲನೆ‌ ನೀಡಿದರು. ನಗರದ ಚಂದ್ರಮೌಳೇಶ್ಚರ ವೃತ್ತದಿಂದ ಆರಂಭಗೊಂಡ ಜಾಥಾವು ನಗರದ ವಿವಿಧ ಪ್ರಮುಖ ವೃತ್ತಗಳಾದ ಬಸವನಬಾವಿ ವೃತ್ತ, ಕನಕದಾಸ ವೃತ್ತದ ಮೂಲಕ ಪುನಃ ಜಿಲ್ಲಾ ಪೊಲೀಸ್ ಕಚೇರಿಗೆ ತಲುಪಿತು.. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠರಾದ …

Read More »

ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ

ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …

Read More »

ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ.

ರಾಯಚೂರು: ಜಿಲ್ಲೆಯಲ್ಲಿ ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ. ಒಂದು ತಿಂಗಳಿನಿಂದ ಅತಿಯಾಗಿ ಸುರಿದ ಮಳೆ ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಜನರ ಬದುಕನ್ನ ಕಸಿದುಕೊಂಡಿದೆ. ಆಶ್ರಯ ಸಿಕ್ಕರೂ ಅನ್ನ ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ. ಸರ್ಕಾರಿ ಶಾಲೆ, ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಆಶ್ರಯ ನೀಡಿದೆ. ಆದ್ರೆ ಯಾವುದೇ ವ್ಯವಸ್ಥೆಗಳನ್ನ ಮಾಡಿಲ್ಲ. ಹೀಗಾಗಿ ಸುಮಾರು 56 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿವೆ. ಚಿಕ್ಕಮಕ್ಕಳು, ವೃದ್ದರು, …

Read More »

ರಸ್ತೆ ದಾಟಿ ಬಂದ ಮೇಲೆ ಮೈಕೈ ನೋವು ಗ್ಯಾರೆಂಟಿ. ವಾಹನಗಳು ಸುರಕ್ಷಿತವಾಗಿ ಇರುತ್ತವೆ ಅನ್ನೋ ನಂಬಿಕೆಯೂ ಇಲ್ಲಾ

ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು ಬಿದ್ದಿವೆ. ಇದರ ಜೊತೆ ಜೊತೆಗೆ ಜಿಲ್ಲೆಯ ರಸ್ತೆಗಳು ಸಹ ಹಾಳಾಗಿ ಹೋಗಿವೆ. ಜಿಲ್ಲೆಯಿಂದ ಆರಂಭವಾಗುವ ರಾಯಚೂರು- ಬಾಚಿ ರಾಜ್ಯ ಹೆದ್ದಾರಿ ಸಂಖ್ಯೆ 20 ಇದು ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ರಸ್ತೆ ತುಂಬಾ ಎಲ್ಲಿ ನೋಡಿದ್ರೂ ಆರಡಿ ಮೂರಡಿ ಗುಂಡಿಗಳೇ ಕಾಣಿಸುತ್ತವೆ. ರಾಯಚೂರು ಹೊರವಲಯದ ಸಾಥಮೈಲ್ ನಿಂದ ಕಲ್ಮಲವರೆಗೆ ಇರುವ ರಸ್ತೆ ಆ …

Read More »

ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರು: ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ. ಹನುಮಂತರಾಯ ಮನೆಗೆ ಕಳ್ಳತನಕ್ಕೆ ಬಂದಿದ್ದ ಮೂವರು ಕಿರಾತಕರು ಕಳ್ಳತನಕ್ಕೆ ಮಹಿಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಗ್ರಾಮದಲ್ಲಿ ಭಾರಿ ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಮೂವರು ಖದೀಮರು ಕಳ್ಳತನಕ್ಕೆ ಬಂದಿದ್ದರು. ಹನುಮಂತರಾಯನ ಮನೆಯಲ್ಲಿ ನಗದು, ಚಿನ್ನಾಭರಣ ಕದ್ದಿದ್ದಾರೆ. ಈ ವೇಳೆ ಅವರ ಕೃತ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಿಳೆಯ …

Read More »

ಸಾಲಿ ಇಲ್ವಾ.. ನಡೀ ಕೂಲಿ ಮಾಡೋಕೆ: ವಿದ್ಯಾಗಮ ಮಕ್ಕಳು ಆಗಿದ್ದಾರೆ ಬಾಲ ಕಾರ್ಮಿಕರು!

ರಾಯಚೂರು: ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದ ವಿದ್ಯಾಗಮ ಯೋಜನೆಯನ್ನು ಕೊರೊನಾ ಅಬ್ಬರದ ನಡುವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಅತ್ತ ಮಕ್ಕಳು ಮತ್ತು ಅವರಿಗೆ ಪಾಠ ಮಾಡ್ತಿದ್ದ ಶಿಕ್ಷಕರಿಗೆ ಕಂಟಕವಾಗಿದ್ದ ಯೋಜನೆಗೆ ಬ್ರೇಕ್​ ಹಾಕಲಾಯ್ತು ಎಂದು ಹಲವರು ಸಂತಸಪಡುತ್ತಿದ್ದರೇ ಇತ್ತ ಗ್ರಾಮೀಣ ಭಾಗದ ಮಕ್ಕಳಿಗೆ ಇದೀಗ ಮತ್ತೊಂದು ತಲೆನೋವು ಶುರುವಾಗಿದೆ.  ನಿತ್ಯ 250 ರೂಪಾಯಿ ಕೂಲಿ ಕಾಸಿನ ಆಸೆಗೆ ಹೌದು, ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತವಾದ ಬೆನ್ನಲ್ಲೇ ವಠಾರ ಶಾಲೆಗಳು ಬಂದ್​ ಆಗಿವೆ. ಈ …

Read More »

ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಅಟ್ಯಾಕ್..

ರಾಯಚೂರು: ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಉದಯನಗರದಲ್ಲಿ ನಡೆದಿದೆ. ಸುಮಾರು 8ಜನರ ಗುಂಪು ಏಕಾಏಕಿ ಮನೆಗೆ ನುಗ್ಗಿ ಕಾಂಗ್ರೆಸ್ ಪಕ್ಷದ ಮುಖಂಡ ಲಾಲಪ್ಪ ನಾಯಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಗಾಯಾಳು ಲಾಲಪ್ಪ ನಾಯಕ್‌ಗೆ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ರಾಯಚೂರು ನಗರದ ಪಶ್ಚಿಮ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ …

Read More »

ಮಸ್ಕಿ‌ ಹಳ್ಳ ದಂಡೆ ಸೇತುವೆ ಬಳಿ ಸಿಲುಕಿರುವ ವ್ಯಕ್ತಿಗಳು, ಪ್ರಾಣ ರಕ್ಷಣೆಗಾಗಿ ಪರದಾಟ

ರಾಯಚೂರು: ಮಸ್ಕಿ ಜಲಾಶಯಕ್ಕೆ 2,100 ಕ್ಯೂಸೆಕ್ ನೀರು ಒಳ ಹರಿವು ಹೆಚ್ಚಳವಾಗಿದೆ. ಮಸ್ಕಿ ಡ್ಯಾಂನಿಂದ 1,600 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಪೋತ್ನಾಳ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಹಳ್ಳದ ದಂಡೆಗೆ ತೆರಳದಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮಸ್ಕಿ ಹಳ್ಳದಲ್ಲಿ ಸಿಲುಕಿರುವ ವ್ಯಕ್ತಿ ಪರದಾಟ: ಇನ್ನು ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಹಳ್ಳದ ದಂಡೆ ಮುಳುಗಿ ಹೋಗಿದೆ. ದ್ವೀಪದಂತಾದ ಸೇತುವೆಯ ಕೆಳಗೆ ನಿಂತು ರಕ್ಷಣೆಗಾಗಿ …

Read More »

ಲಕ್ಷಾಂತರ ಮೀನುಗಳ ಮಾರಣಹೋಮ – 150 ಕುಟುಂಬಗಳ ಆದಾಯಕ್ಕೆ ಕೊಡಲಿಪೆಟ್ಟು

ರಾಯಚೂರು: ತಾಲೂಕಿನ ಕಟ್ಲಾಟಕೂರ ಕೆರೆಯ ನೀರು ರಾತ್ರೋ ರಾತ್ರಿ ವಿಷವಾಗಿದ್ದು ಲಕ್ಷಾಂತರ ಮೀನುಗಳು ಸಾವನ್ನಪ್ಪಿವೆ. ಇದರಿಂದ ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದ ಗ್ರಾಮದ 150 ಕುಟುಂಬಗಳ ಮುಖ್ಯ ಆದಾಯಕ್ಕೆ ಕತ್ತರಿ ಬಿದ್ದಿದೆ.ಕೆರೆಯಲ್ಲಿನ 5 ಲಕ್ಷಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿದ್ದು ಮೀನುಗಾರರು ಬೀದಿಗೆ ಬರುವಂತಾಗಿದೆ. ಕೆರೆಯ ನೀರಿಗೆ ವಿಷಪ್ರಾಶನವಾಗಿದ್ದು ಬಹುತೇಕ ಎಲ್ಲಾ ಮೀನುಗಳು ಸಾವನ್ನಪ್ಪಿವೆ ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 350 ಎಕರೆ ಪ್ರದೇಶದ ಕೆರೆ ಈ ವರ್ಷ ಸತತವಾಗಿ ಸುರಿದ ಮಳೆಯಿಂದ …

Read More »

ಡಿ.ಕೆ.ಶಿವಕುಮಾರ್ ತಪ್ಪು ಮಾಡಿಲ್ಲವೆಂದರೆ ಸೀತೆಯಷ್ಟು ಪವಿತ್ರವಾಗಿ ಕೇಸ್ ನಿಂದ ಹೊರಗೆ ಬರಲಿ:ಈಶ್ಚರಪ್

ರಾಯಚೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಈ ಹಿಂದೆ ದಾಳಿ ಮಾಡಿದಾಗ ಹವಾಲಾ ಹಣ ಸಿಕ್ಕಿದೆ. ಈಗ ಡಿ.ಕೆ.ಶಿವಕುಮಾರ್ ತಪ್ಪು ಮಾಡಿಲ್ಲವೆಂದರೆ ಸೀತೆಯಷ್ಟು ಪವಿತ್ರವಾಗಿ ಕೇಸ್ ನಿಂದ ಹೊರಗೆ ಬರಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ಚರಪ್ಪ ಹೇಳಿದ್ದಾರೆ. ರಾಯಚೂರಿನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶಶಿಲ್ ನಮೋಶಿ ಪರ ಪಕ್ಷದ ಮುಖಂಡರ ಪ್ರಚಾರ ಸಭೆ ಬಳಿಕ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಕುರಿತು …

Read More »