Breaking News
Home / ಜಿಲ್ಲೆ / ಶಿವಮೊಗ್ಗ (page 11)

ಶಿವಮೊಗ್ಗ

ಅಧಿಕಾರಿಗಳ ದಾಳಿ – ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಜಾಲ ಪತ್ತೆ

ಶಿವಮೊಗ್ಗ: ಕೊರೊನಾ ಭೀತಿಯಿಂದ ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಸಾಯಬಾರದು ಎಂಬ ಕಾರಣದಿಂದ ರಾಜ್ಯ ಸರ್ಕಾರ ಕಳೆದ ಎರಡು ದಿನಗಳಿಂದ ಎರಡು ತಿಂಗಳಿನದ್ದು ಪಡಿತರ ಅಕ್ಕಿ, ಗೋಧಿ ವಿತರಿಸುತ್ತಿದೆ. ಆದರೆ ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡ ದಂಧೆಕೋರರು ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿ ಮೇರೆಗೆ ನಗರದ ಹೊರ ವಲಯದ ಕಲ್ಲೂರು ಬಳಿಯ ಫಾರಂ ಹೌಸ್‍ವೊಂದರ …

Read More »

ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡಿನಲ್ಲಿ ಬೆಂಕಿ ಅವಘಡ ಪ್ರಕರಣ – ತನಿಖೆಗೆ ಈಶ್ವರಪ್ಪ ಸೂಚನೆ

ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡಿನಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಸರ್ಜಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳು ಹಾಗೂ ತಾಯಂದಿರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಭಾನುವಾರ ಅನಾಮಿಕ ವ್ಯಕ್ತಿಯೊಬ್ಬರು ನನಗೆ ದೂರವಾಣಿ ಕರೆ ಮಾಡಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಹಿಂದೆಯೇ ಎಲೆಕ್ಟ್ರಿಕ್ ಸಮಸ್ಯೆ ಇದೆ ಸರಿಪಡಿಸಿ ಎಂದು …

Read More »

ಕೋಳಿ ಮತ್ತು ಮೊಟ್ಟೆ ತಿಂದು ಕೊರೊನಾ ಸೋಂಕಿನಿಂದ ದೂರವಿರಿ : ಸಚಿವ ಕೆ.ಎಸ್‍.ಈಶ್ವರಪ್ಪ

ಶಿವಮೊಗ್ಗ, ಮಾ.31- ಕೋಳಿ ಮತ್ತು ಮೊಟ್ಟೆ ತಿನ್ನುವುದರಿಂದ ಉಷ್ಣಾಂಶ ಹೆಚ್ಚಾಗುತ್ತದೆ, ಆ ಮೂಲಕ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಹಾಗಾಗಿ ಜನ ಸಾಮಾನ್ಯರು ಇನ್ನು ಮುಂದೆ ಕೋಳಿ ಮೊಟ್ಟೆ ಹೆಚ್ಚಾಗಿ ತಿನ್ನಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್‍.ಈಶ್ವರಪ್ಪ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈವರೆಗೂ ಒಂದೇ ಒಂದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಜನ ಸಾಮಾನ್ಯರು ವದ್ಧಂತಿಗಳಿಗೆ ಕಿವಿಗೊಟ್ಟು …

Read More »

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಯಲ್ಲಿಯೂ ಹಾಲು ಖರೀದಿ ಸ್ಥಗಿತಗೊಳಿಸಲಾಗುತ್ತಿದೆ.

ಶಿವಮೊಗ್ಗ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಇಂದು ಮತ್ತು ನಾಳೆ ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಹಾಲು ಒಕ್ಕೂಟ ರೈತರಿಂದ ಹಾಲು ಖರೀದಿಸದಿರಲು ನಿರ್ಧರಿಸಿದೆ. ಈಗಾಗಲೇ ಡೈರಿಯಲ್ಲಿಯೆ ಹೆಚ್ಚಿನ ಪ್ರಮಾಣದ ಹಾಲು ಶೇಖರಣೆ ಆಗಿದ್ದು, ಸರಬರಾಜು ಆಗುತ್ತಿಲ್ಲ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಯಲ್ಲಿಯೂ ಹಾಲು ಖರೀದಿ ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತು ಹಾಲು ಒಕ್ಕೂಟದ …

Read More »

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‍ಕಾಮ್ಸ್ ನೆರವಿನಿಂದ ಪ್ರತಿ ವಾರ್ಡಿನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ …

Read More »

ಶಿವಮೊಗ್: ಹೇಳದೆ ಕೇಳದೇ ಆಸ್ಪತ್ರೆಯಿಂದ ಓಡಿ ಹೋದ ಮಹಿಳೆ

ಶಿವಮೊಗ್ಗ: ಮಂಗನಕಾಯಿಲೆ ಸೋಂಕು ತಗುಲಿದ್ದ ಮಹಿಳೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮದ ಸುಮಿತ್ರಮ್ಮ ಮೆಗ್ಗಾನ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ನಂತರ ಮಹಿಳೆಗೆ ಕೆಎಫ್‍ಡಿ ಪಾಸಿಟಿವ್ ಇರುವ ಅಂಶ ದೃಢಪಟ್ಟಿತ್ತು. ಹೀಗಾಗಿ ಮಹಿಳೆಯ ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳೆದ ನಾಲ್ಕು ದಿನದ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ರಮ್ಮ ಅವರಿಗೆ ಖಾಯಿಲೆ ಸ್ವಲ್ಪ ವಾಸಿಯಾಗಿತ್ತು. …

Read More »

ಅಕಾಲಿಕ ಮಳೆ – ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರದ ಕೊಂಬೆ

ಕಾರವಾರ/ಶಿವಮೊಗ್ಗ: ಇಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆಯಾಗಿದ್ದು, ಭೂಮಿಗೆ ಮಳೆರಾಯ ತಂಪೆರೆದಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಾಗಿದ್ದು, ಸುಮಾರು ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು ಸಹಿತ ಭಾರೀ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಭೂಮಿ ತಂಪಾಗಿದ್ದು, ಬಿಸಿಲಿನಿಂದ ಬಳಲಿದ್ದ ಜನರು ಒಮ್ಮಿಂದೊಮ್ಮೆಲೆ ಸುರಿದ ಮನೆಯಿಂದ ಸಂತಸಗೊಂಡಿದ್ದಾರೆ. ಇತ್ತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಕಾಲಿಕ ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ …

Read More »

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌ ಶಿವಮೊಗ್ಗ: ನನಗೆ ಒಂದು ಆಸೆಯಿದೆ. ಆ ಆಸೆಯನ್ನು ನಾನು ಗುರಿ ಎಂದು ಕರೆಯುವುದಿಲ್ಲ. ಇನ್ನು ಮೂರು ವರ್ಷದಲ್ಲಿ ಪಾಲಕರು ಸರಕಾರಿ ಶಾಲೆಯ ಎದುರು ಸರದಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ಹೇಳಿದರು. ಶಿವಮೊಗ್ಗ ಜಿಲ್ಲೆ ಸಾಗರ …

Read More »

ಬಿಎಸ್‍ವೈ ಅವರ 78ನೇ ಹುಟ್ಟು ಹಬ್ಬ 1 ಲಕ್ಷ ಮಂದಿಗೆ ಆಯುಷ್ಮಾನ್ ಕಾರ್ಡ್ ವಿತರಣೆ

ಶಿವಮೊಗ್ಗ: ಪ್ರೇರಣಾ ಎಜುಕೇಶನಲ್ ಮತ್ತು ಸೋಷಿಯಲ್ ಟ್ರಸ್ಟ್ ಹಾಗೂ ಬಿ.ಎಸ್ ಯಡಿಯೂರಪ್ಪನವರ ಅಭಿಮಾನಿ ಬಳಗದವರ ವತಿಯಿಂದ ಬಿಎಸ್‍ವೈ ಅವರ 78ನೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಫೆ. 27ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಇಂದು ಸುದ್ದಿಗೊಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಈ …

Read More »

 ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ: ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ತಾಲೂಕಿನ ಕಾರ್ಗಲ್‍ನ ಶಮಿ ಅಲಿಯಾಸ್ ಮೊಹಮ್ಮದ್ ಬಂಧಿತ ಆರೋಪಿ. ಈತ 2001 ರಲ್ಲಿ ಕುಂಸಿಯ 19 ವರ್ಷದ ಯುವತಿಯನ್ನು ಅಪಹರಿಸಿ ಕೆಲ ದಿನಗಳ ಕಾಲ ಯಾರಿಗೂ ತಿಳಿಯದಂತೆ ಅಜ್ಞಾತ ಸ್ಥಳದಲ್ಲಿ ಇರಿಸಿದ್ದ. ನಂತರ ಪ್ರಕರಣ ಪತ್ತೆ ಹಚ್ಚಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಆರೋಪಿಯು …

Read More »