Breaking News

ಶಿವಮೊಗ್ಗ

ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ.

ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ. ನಾಳೆಯಿಂದ 3 ದಿನಗಳ ಕಾಲ ಸಿಎಂ ತವರು ಕ್ಷೇತ್ರ ಶಿಕಾರಿಪುರಕ್ಕೆ ಪ್ರವಾಸ ಬೆಳೆಸಲಿದ್ದಾರೆ. ನಾಳೆ ಮಧ್ಯಾಹ್ನ ಬೆಂಗಳೂರಿಂದ ಶಿಕಾರಿಪುರದತ್ತ ಪ್ರಯಾಣ ಬೆಳೆಸಲಿದ್ದು ಅಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲಾಕ್‌ಡೌನ್‌ ನಂತರ ಇದೇ ಮೊದಲ ಬಾರಿಗೆ ಸಿಎಂ‌ ತವರು ಕ್ಷೇತ್ರಕ್ಕೆ ತೆರಳಿದ್ದಾರೆ. ಇನ್ನು ಸಿಎಂ ಪ್ರವಾಸ ಕೈಗೊಂಡಿರುವ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. …

Read More »

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ. ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »

ಕೋವಿಡ್ ವಾರ್ಡಿನಲ್ಲಿ ಗ್ರಂಥಾಲಯದ ಸೌಲಭ್ಯ

ಶಿವಮೊಗ್ಗ: ಕೊರೊನಾ ಸೋಂಕಿತರು ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಹೊರ ಬರುವ ಸಲುವಾಗಿ ಶಿವಮೊಗ್ಗ ಜಿಲ್ಲೆ ಸಾಗರದ ಕೋವಿಡ್ ವಾರ್ಡಿನಲ್ಲಿ ಆರೋಗ್ಯ ಸಿಬ್ಬಂದಿ ಸೋಂಕಿತರಿಗಾಗಿ ಗ್ರಂಥಾಲಯ ತೆರೆದಿದ್ದಾರೆ.ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಂದಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕೊರೊನಾ ತುತ್ತಾಗಿ ಚಿಕಿತ್ಸೆ ಪಡೆಯಬೇಕಾದರೆ ತಮ್ಮವರಿಂದ ದೂರವಿದ್ದು ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇದೆ. ಹೀಗಾಗಿ ಸೋಂಕಿತರಿಗೆ ಒಂಟಿತನ ಕಾಡುತ್ತಿದೆ. ಈ ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಸೋಂಕಿತರು ಹೊರ …

Read More »

ಖಾಸಗಿ ಬಸ್ ಗಳ ಆರ್ಥಿಕ ಸಂಕಷ್ಟ

ಶಿವಮೊಗ್ಗ: ಲಾಕ್‌ಡೌನ್ ತೆರವು ಬಳಿಕ ಸರ್ಕಾರಿ ಕಚೇರಿ ಆರಂಭಗೊಂಡಿರುವುದರ ಜೊತೆಗೆ ಎಲ್ಲ ರೀತಿಯ ವ್ಯಾಪಾರ-ವಹಿವಾಟುಗಳು ನಡೆಯುತ್ತಿವೆ. ಮಾರುಕಟ್ಟೆ, ಮದುವೆ ಸಮಾರಂಭಗಳಲ್ಲೂ ಜನಸಂದಣಿ ಕಾಣುತ್ತಿದ್ದೇವೆ. ಆದರೆ, ಬಸ್‌ಗಳು ಮಾತ್ರ ‘ಪ್ರಯಾಣಿಕರ ಬರ’ ಎದುರಿಸುತ್ತಿವೆ. ಅದರಲ್ಲೂ ಖಾಸಗಿ ಬಸ್‌ಗಳತ್ತ ಜನ ಸುಳಿಯುತ್ತಿಲ್ಲ. ನಗರ ಪ್ರದೇಶಗಳನ್ನು ಹೊರತುಪಡಿಸಿದರೆ ಜಿಲ್ಲೆಯ ಬಹುತೇಕ ಗ್ರಾಮೀಣ ಜನರ ಸಂಚಾರಕ್ಕೆ ಖಾಸಗಿ ಬಸ್‌ಗಳೇ ಆಧಾರ. ಕೊರೊನಾ ಲಾಕ್‌ಡೌನ್‌ನಿಂದ ಸಂಚಾರ ಸ್ಥಗಿತಗೊಳಿಸಿದ್ದ ಖಾಸಗಿ ಬಸ್‌ ಉದ್ಯಮ ಇಂದಿಗೂ ಚೇತರಿಕೆ ಕಂಡಿಲ್ಲ. ನಷ್ಟದಲ್ಲೇ ತೆವಳುತ್ತಿದೆ. …

Read More »

ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತ

ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ಕಲಾವತಿ (65), ಲೋಹಿತ್ (36) ಮತ್ತು ಶಶಾಂಕ್ (10) ಎಂದು ಗುರುತಿಸಲಾಗಿದೆ. ರಿಪ್ಪನ್ ಪೇಟೆ ನಿವಾಸಿಗಳಾದ ಇವರು ಎರಡು ದಿನದ ಹಿಂದೆ ರಿಪ್ಪನ್ ಪೇಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದರು. ಟಾಟಾ ಇಂಡಿಕಾ ಕಾರಿನಲ್ಲಿ …

Read More »

ಶಿಕ್ಷಕನಿಂದ : ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ

ಕೋಣಂದೂರು: ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಗೆ ‘ವಿದ್ಯಾಗಮ’ ಯೋಜನೆಯಡಿ ಪಾಠ ಮಾಡುವಾಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಉಮೇಶ್ ನಾಯಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಜೊತೆ ಶಿಕ್ಷಕ ಉಮೇಶ್ ನಾಯಕ್ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾರೆ.

Read More »

ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್

ಶಿವಮೊಗ್ಗ: ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಆಗುಂಬೆ ಬಳಿ ಸಹ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್.ಹೆಚ್ 169-ಎ …

Read More »

ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ

ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …

Read More »

ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ

ಶಿವಮೊಗ್ಗ: ಜಿಲ್ಲೆಯ ಹಲವೆಡೆ ಸೋಮವಾರ ಉತ್ತಮ ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿ 1.2 ಸೆಂ.ಮೀ, ಆಗುಂಬೆಯಲ್ಲಿ 3.8 ಮಿ.ಮೀ ಮಳೆಯಾಗಿದೆ. ಭಾನುವಾರ ತಡರಾತ್ರಿ ಜಿಲ್ಲೆಯ ಹಲವೆಡೆ ಜೋರು ಮಳೆಯಾಗಿದೆ. ಗಾಳಿ, ಮಳೆಗೆ ಸೊರಬದಲ್ಲಿ ಕೆಲ ಮನೆಗಳು ಹಾನಿಗೀಡಾಗಿವೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶಿಕಾರಿಪುರ, ಸಾಗರ, ಹೊಸನಗರದಲ್ಲಿ 4 ಸೆಂ.ಮೀಗೂ ಅಧಿಕ ಮಳೆಯಾಗಿದೆ. ಧಾರಾಕಾರ ಮಳೆ- ಸೇತುವೆ ಮುಳುಗಡೆ: ಭಾನುವಾರ ತಡ ರಾತ್ರಿ ಹಾಗೂ ಸೋಮವಾರ ಮುಂಜಾನೆ ಹುಬ್ಬಳ್ಳಿ, ವಿಜಯಪುರ, …

Read More »