ಹುಬ್ಬಳ್ಳಿ ನಗರದ ಶತಮಾನೋತ್ಸವದ ಸ್ಮರಣಾರ್ಥ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಅವರಿಗೆ ‘ಶತಮಾನೋತ್ಸವದ ನೆನಪಿನ ನೀಡಿ ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುನಿಲ್ ಜೋಶಿ ಅವರು ಭಾರತೀಯ ಕ್ರಿಕೆಟ್‌ಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಅವಿನಾಶ್ ವೈದ್ಯ, ವೀರಣ್ಣ ಸವಡಿ, ಅಲ್ತಾಫ್ ಕಿತ್ತೂರು, ದಯಾನಂದ ಶೆಟ್ಟಿ ಹಾಗೂ ವಸಂತ ಮುರ್ಡೇಶ್ವರ ಉಪಸ್ಥಿತರಿದ್ದು, ಜೋಶಿ ಅವರ ಸಾಧನೆಯನ್ನು ಶ್ಲಾಘಿಸಿದರು. ಸ್ಥಳೀಯ …
Read More »ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಕೇಸ್: ಹಂತಕ ಫಯಾಜ್ಗೆ ಮತ್ತೆ ಜೈಲೇ ಗತಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಸದ್ಯ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು 3ನೇ ಬಾರಿಗೆ ಧಾರವಾಡ ಹೈಕೋರ್ಟ್ ಪೀಠ ತಿರಸ್ಕರಿಸಿ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಫಯಾಕ್ಗೆ ಮತ್ತೆ ಜೈಲೇ ಗತಿ ಆಗಿದೆ. 2024 ಏಪ್ರಿಲ್ 18ರಂದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ …
Read More »ಶ್ರೀ ಸಿದ್ಧಾರೂಢಸ್ವಾಮಿ ರಥೋತ್ಸವ 16ರಂದು
ಹುಬ್ಬಳ್ಳಿ: ಶಿವನ ಅವತಾರಿಯಾದ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಗಳು ಪ್ರಾರಂಭಿಸಿದ ಶಿವರಾತ್ರಿ ಉತ್ಸವ 123 ವರ್ಷ ಪೂರೈಸಿದ್ದು, 124ನೇ ಶಿವರಾತ್ರಿ ಉತ್ಸವ ಫೆ. 10ರಿಂದ ಆರಂಭಗೊಂಡು ಫೆ. 18ರಂದು ಸಂಪನ್ನಗೊಳ್ಳಲಿದೆ ಎಂದು ಶ್ರೀ ಸಿದ್ಧಾರೂಢಮಠ ಟ್ರಸ್ಟ್ ಕಮಿಟಿ ಚೇರಮನ್ ಚನ್ನವೀರ ಮುಂಗುರವಾಡಿ ಹೇಳಿದರು. ಶ್ರೀ ಸಿದ್ಧಾರೂಢಮಠದ ಸಭಾಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆ. 15ರಂದು ಶ್ರೀಗಳವರ ಪಾಲಕಿ ನಗರದಲ್ಲಿ ಸಂಚರಿಸಿ ರಾತ್ರಿ ಶ್ರೀಮಠಕ್ಕೆ ಬಂದ ನಂತರ ಅಹೋರಾತ್ರಿ ಜಾಗರಣೆ ನಡೆಯಲಿದೆ. 16ರಂದು …
Read More »ಚಾಕೊಲೇಟ್ ಕೊಡುವ ನೆಪದಲ್ಲಿ ಹೇಯ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ
ಹುಬ್ಬಳ್ಳಿ: ಕ್ಯಾನ್ಸರ್ ಪೀಡಿತ 75 ವರ್ಷದ ವೃದ್ಧನಿಂದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಕೊಲೇಟ್ ಕೊಡುವುದಾಗಿ ಹೇಳಿ ಪಕ್ಕದ ಮನೆಯ ಬಾಲಕಿಯನ್ನ ಮನೆಗೆ ಕರೆಸಿಕೊಂಡು ವೃದ್ಧ ಕೃತ್ಯವೆಸಗಿದ್ದಾನೆ. ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಸದ್ಯ ಆರೋಪಿ ವೃದ್ಧನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಕೊಲೆಗೈದಿರುವಂತಹ …
Read More »ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ,
ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ, ಕೆಲವರಿಗೆ ಸಣ್ಣಪುಟ್ಟ ಗಾಯ..ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಕ್ರೂಸರ್ ವಾಹನ ಹಾಗೂ ಫಾರ್ಚ್ಯೂನರ್ ನಡುವೆ ಡಿಕ್ಕಿಯಾಗಿ ಎರಡು ವಾಹನಗಳಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ ಧಾರವಾಡ ಎನ್‌ಟಿಟಿಎಫ್ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಮಧ್ಯ ರಾತ್ರಿ ನಡೆದಿದೆ. – ಹುಬ್ಬಳ್ಳಿ ಧಾರವಾಡ ಮಾರ್ಗವಾಗಿ ಫಾರ್ಚ್ಯೂನರ್ ಕಾರ ನಗರದ ಒಳಗೆ ಪ್ರವೇಶ ಮಾಡುತ್ತಿದ್ದು ಎದುರು ರಸ್ತೆಯ ಮಾರ್ಗವಾಗಿ ಬಂದ್ …
Read More »ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ …
Read More »ಮೃತಪಟ್ಟ ಗರ್ಭಿಣಿ ಮತ್ತು ಆತ್ಮಹತ್ಯೆಗೆ ಯತ್ನಿಸಿದ ಪತಿ
ಹುಬ್ಬಳ್ಳಿ: ಗರ್ಭಿಣಿ ಪತ್ನಿ ಮೃತಪಟ್ಟ ವಿಷಯ ತಿಳಿದ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ರಾಧಿಕಾ(19) ಮೃತಪಟ್ಟಿರುವ ಗರ್ಭಿಣಿ. ಈಕೆಯ ಪತಿ ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದವರು. ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲೇ 8 ತಿಂಗಳ ಭ್ರೂಣ ಸಾವನ್ನಪ್ಪಿದ್ದ ಕಾರಣ ರಾಧಿಕಾ ಆರೋಗ್ಯದಲ್ಲಿ ತೀವ್ರವಾಗಿ …
Read More »ದೀಪಾವಳಿಗೆ ಆಕಾಶಬುಟ್ಟಿ ಹೊಳಪು
ಧಾರವಾಡ: ‘ಬೆಳಕಿನ ಹಬ್ಬ’ ದೀಪಾವಳಿಗೆ ಕಣ್ಣು ಕೋರೈಸುವ `ದೇಸಿ ಆಕಾಶಬುಟ್ಟಿ’ಗಳು ಮತ್ತು ತರಹೇವಾರಿ `ಮಣ್ಣಿನ ಹಣತೆ’ಗಳು ನಗರದ ಮಾರುಕಟ್ಟೆಗೆ ಬಂದಿದ್ದು, ಗ್ರಾಹಕರಿಗೆ ಹಬ್ಬದ ಸಂಭ್ರಮವನ್ನು ಹೆಚ್ಚಿಸಿವೆ. ಬಟ್ಟೆ, ಕಟ್ಟಿಗೆ, ಮಿಂಚಿನ ಹಾಳೆ, ಉಲನ್ ದಾರದಿಂದ ತಯಾರಿಸಿದ ವಿಭಿನ್ನ ಶೈಲಿಯ ಆಕಾಶಬುಟ್ಟಿಗಳನ್ನು ನೋಡುಗರ ಗಮನ ಸೆಳೆಯುತ್ತಿವೆ. ಸ್ಟಾರ್, ಗಣಪ, ಲಕ್ಷ್ಮೀ ಬಣ್ಣದ ಬಟ್ಟೆಗಳು ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಬಗೆಯ ಆಕಾಶಬುಟ್ಟಿಗಳು ಮಾರುಕಟ್ಟೆಯಲ್ಲಿ ಸಿಗುತ್ತಿವೆ. ಪ್ರತಿ ವರ್ಷ ಚೀನಾದ ಆಕಾಶಬುಟ್ಟಿಗಳು ಮಾರುಕಟ್ಟೆಗೆ …
Read More »ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್ ಶೋ
ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಹುಬ್ಬಳ್ಳಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಕುಂದಗೋಳದಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ನೇರವಾಗಿ ಹೆಲಿಪ್ಯಾಡ್ ಸುತ್ತುವರಿದಿದ್ದ ಜನರತ್ತ ಹೋಗಿ ಕೈ ಕುಲುಕಿದರು. ನಂತರ ಪ್ರಚಾರದ ವಾಹನ ಏರಿದ ಅವರು ಹುಬ್ಬಳ್ಳಿ – ಲಕ್ಷ್ಮೇಶ್ವರ ರಾಜ್ಯ …
Read More »ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ
ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …
Read More »
Laxmi News 24×7